AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳ ಆರೋಗ್ಯ ಚೆನ್ನಾಗಿರಬೇಕಾ? ಹಾಗಿದ್ರೆ ಈ ಬ್ಲಡ್ ಟೆಸ್ಟ್‌ಗಳನ್ನು ಮಾಡಿಸಲೇಬೇಕು!

ಇಂದಿನ ಜೀವನಶೈಲಿ ಮತ್ತು ಆಹಾರ ಪದ್ಧತಿಗಳಿಂದ ಮಕ್ಕಳಲ್ಲಿಯೂ ಹಲವು ರೋಗಗಳ ಅಪಾಯ ಹೆಚ್ಚುತ್ತಿದೆ. ಆದ್ದರಿಂದ ಸಮಯಕ್ಕೆ ಸರಿಯಾಗಿ ಆರೋಗ್ಯ ಪರೀಕ್ಷೆಗಳನ್ನು ಮಾಡಿಸುವುದು ಬಹಳ ಮುಖ್ಯ ಎಂದು ತಜ್ಞರು ಸಲಹೆ ನೀಡುತ್ತಾರೆ. ಹಾಗಾದರೆ ಮಗುವಿನ ವಯಸ್ಸು ಮತ್ತು ಅಗತ್ಯಗಳಿಗೆ ಅನುಗುಣವಾಗಿ ಯಾವ ರಕ್ತ ಪರೀಕ್ಷೆಗಳನ್ನು ಮಾಡಬೇಕು ಮತ್ತು ಈ ಪರೀಕ್ಷೆಗಳನ್ನು ಯಾವಾಗ ನಡೆಸಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಮಕ್ಕಳ ಆರೋಗ್ಯ ಚೆನ್ನಾಗಿರಬೇಕಾ? ಹಾಗಿದ್ರೆ ಈ ಬ್ಲಡ್ ಟೆಸ್ಟ್‌ಗಳನ್ನು ಮಾಡಿಸಲೇಬೇಕು!
Keep Your Kids Healthy: Must-Do Health TestsImage Credit source: Getty Images
ಪ್ರೀತಿ ಭಟ್​, ಗುಣವಂತೆ
|

Updated on: Apr 10, 2026 | 5:28 PM

Share

ಇತ್ತೀಚಿನ ದಿನಗಳಲ್ಲಿ ಮಕ್ಕಳಿಗೆ ಹಲವಾರು ರೀತಿಯ ಆರೋಗ್ಯ ಸಮಸ್ಯೆಗಳು ಬರುತ್ತಿದ್ದು, ಈ ಸಮಯದಲ್ಲಿ ಅವರ ಆರೋಗ್ಯ ಕಾಪಾಡಿಕೊಳ್ಳುವುದೇ ಒಂದು ದೊಡ್ಡ ಸವಾಲಾಗಿದೆ. ಈ ರೀತಿಯ ಸಂದರ್ಭಗಳಲ್ಲಿ, ಯಾವುದೇ ರೋಗವನ್ನು ಮೊದಲೇ ಪತ್ತೆಹಚ್ಚಲು ಕಾಲಕಾಲಕ್ಕೆ ಅಗತ್ಯವಾದ ಆರೋಗ್ಯ ಪರೀಕ್ಷೆಗಳನ್ನು ಮಾಡಿಸಿಕೊಳ್ಳುವುದು ಬಹಳ ಮುಖ್ಯ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹಾಗಾದರೆ ಮಗುವಿನ ವಯಸ್ಸು ಮತ್ತು ಅಗತ್ಯಗಳಿಗೆ ಅನುಗುಣವಾಗಿ ಯಾವ ರಕ್ತ ಪರೀಕ್ಷೆಗಳನ್ನು (Health Tests) ಮಾಡಬೇಕು ಮತ್ತು ಈ ಪರೀಕ್ಷೆಗಳನ್ನು ಯಾವಾಗ ನಡೆಸಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಯಾವ ಬ್ಲಡ್ ಟೆಸ್ಟ್‌ಗಳನ್ನು ಮಾಡಿಸಬೇಕು?

ಎಐಐಎಂಎಸ್‌ನ ವೈದ್ಯರಾದ ಡಾ. ಅಶೋಕ್ ಕುಮಾರ್ ಅವರ ಪ್ರಕಾರ, ಮಕ್ಕಳಿಗೆ ಅತ್ಯಂತ ಮೂಲಭೂತ ಪರೀಕ್ಷೆಯಾದ ಸಿಬಿಸಿ (CBC) ಪರೀಕ್ಷೆ ಅಗತ್ಯವಾಗಿದೆ. ಇದರಿಂದ ರಕ್ತದಲ್ಲಿನ ಹೀಮೋಗ್ಲೋಬಿನ್, ಇನ್ಫೆಕ್ಷನ್ ಮತ್ತು ಇತರ ಅಂಶಗಳ ಬಗ್ಗೆ ಮಾಹಿತಿ ಸಿಗುತ್ತದೆ. ಇದರ ಜೊತೆಗೆ ವಿಟಮಿನ್ D ಮತ್ತು B12 ಪರೀಕ್ಷೆಗಳು ಕೂಡ ಮುಖ್ಯವಾಗಿವೆ, ಏಕೆಂದರೆ ಇವುಗಳ ಕೊರತೆ ಮಕ್ಕಳಲ್ಲಿ ಹೆಚ್ಚಾಗುತ್ತಿದೆ. ಕ್ಯಾಲ್ಸಿಯಂ ಮತ್ತು ಥೈರಾಯ್ಡ್ ಫಂಕ್ಷನ್ ಟೆಸ್ಟ್‌ಗಳು ಕೂಡ ಕೆಲವು ಸಂದರ್ಭಗಳಲ್ಲಿ ಅಗತ್ಯವಾಗಬಹುದು, ವಿಶೇಷವಾಗಿ ಮಕ್ಕಳ ಬೆಳವಣಿಗೆ ನಿಧಾನವಾಗಿದ್ದರೆ ಅಥವಾ ತೂಕದಲ್ಲಿ ಅಸಮತೋಲನ ಕಂಡುಬಂದರೆ ಅದನ್ನು ಮಾಡಿಸಬೇಕು. ಇನ್ನು, ಮಕ್ಕಳ ಎತ್ತರ ಮತ್ತು ತೂಕ ಇತರ ಮಕ್ಕಳಿಗಿಂತ ಕಡಿಮೆ ಅಥವಾ ಹೆಚ್ಚು ಇದ್ದರೆ, ಗ್ರೋತ್ ಹಾರ್ಮೋನ್ ಪರೀಕ್ಷೆ ಮಾಡಿಸುವುದು ಅಗತ್ಯ. ಇದು ಮಕ್ಕಳ ದೇಹವು ಅವರ ವಯಸ್ಸಿಗೆ ತಕ್ಕಂತೆ ಅಭಿವೃದ್ಧಿಯಾಗುತ್ತಿದೆಯೇ ಎಂಬುದನ್ನು ತಿಳಿಯಲು ಸಹಾಯ ಮಾಡುತ್ತದೆ. ಈ ಪರೀಕ್ಷೆಗಳನ್ನು ವೈದ್ಯರ ಸಲಹೆಯ ಮೇರೆಗೆ ಮಾತ್ರ ಮಾಡಿಸಬೇಕು.

ಇದನ್ನೂ ಓದಿ: ಚಿಕ್ಕ ಮಕ್ಕಳಲ್ಲಿ ಕೂದಲು ಬಿಳಿಯಾಗುವುದಕ್ಕೆ ಕಾರಣವೇನು? ವಿಟಮಿನ್ ಕೊರತೆಯೇ ಅಥವಾ ರೋಗದ ಲಕ್ಷಣವೇ?

ಯಾವಾಗ ಪರೀಕ್ಷೆ ಮಾಡಿಸಬೇಕು?

ಮಕ್ಕಳಲ್ಲಿ ದುರ್ಬಲತೆ, ತೂಕ ಕಡಿಮೆ ಆಗುತ್ತಿದ್ದರೆ, ಪದೇಪದೇ ಜ್ವರ, ಓದು ಅಥವಾ ವರ್ತನೆಯಲ್ಲಿ ಬದಲಾವಣೆ ಕಂಡುಬಂದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಬೇಕು. ಯಾವುದೇ ಲಕ್ಷಣಗಳಿಲ್ಲದಿದ್ದರೂ ವರ್ಷಕ್ಕೆ ಒಮ್ಮೆ ಅಥವಾ ಎರಡು ವರ್ಷಕ್ಕೊಮ್ಮೆ ಆರೋಗ್ಯ ತಪಾಸಣೆ ಮಾಡಿಸುವುದು ಉತ್ತಮ. ಪರೀಕ್ಷೆಗಳನ್ನು ಸದಾ ಮಾನ್ಯತೆ ಪಡೆದ ಉತ್ತಮ ಲ್ಯಾಬ್‌ಗಳಲ್ಲಿ ಮಾಡಿಸಬೇಕು. ಗುಣಮಟ್ಟವಿಲ್ಲದ ಲ್ಯಾಬ್‌ಗಳಲ್ಲಿ ಪರೀಕ್ಷೆ ಮಾಡಿದರೆ ವರದಿಯಲ್ಲಿ ಹೆಚ್ಚು ಕಡಿಮೆ ಆಗುವ ಸಾಧ್ಯತೆ ಇರುತ್ತದೆ. ಇನ್ನು, ಸರ್ಕಾರಿ ಆಸ್ಪತ್ರೆಗಳಲ್ಲಿಯೂ ವೈದ್ಯರ ಸಲಹೆಯ ಮೇರೆಗೆ ಮಾತ್ರ ಪರೀಕ್ಷೆ ಮಾಡಿಸಬಹುದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us