ನೀವು ಖಿನ್ನತೆಯಿಂದ ಬಳಲುತ್ತಿದ್ದರೆ ದಾಳಿಂಬೆ ಹಣ್ಣನ್ನು ಹೆಚ್ಚು ಸೇವಿಸಿ

|

Updated on: Oct 12, 2023 | 3:53 PM

ಇಂದಿನ ಬಿಡುವಿಲ್ಲದ ಜೀವನದಲ್ಲಿ ಒತ್ತಡ ಮತ್ತು ಆತಂಕ ಸಾಮಾನ್ಯವಾಗಿದೆ. ಅವುಗಳಿಂದ ದೂರಾಗಲು ಅನೇಕ ಜನರು ಔಷಧಿಗಳನ್ನು ತೆಗೆದುಕೊಳ್ಳುತ್ತಾರೆ. ಆದರೆ ಸರಿಯಾಗಿ ತಿನ್ನುವ ಮೂಲಕ ನಾವು ನಮ್ಮ ಒತ್ತಡವನ್ನು  ಕಡಿಮೆ ಮಾಡಬಹುದು ಎಂದು ನಿಮಗೆ ತಿಳಿದಿದೆಯೇ? ತಪ್ಪು ಆಹಾರ ಪದ್ಧತಿ ಒತ್ತಡಕ್ಕೆ ಪ್ರಮುಖ ಕಾರಣವಾಗಿದೆ. ಸಮತೋಲಿತ ಆಹಾರ ಮತ್ತು ಸರಿಯಾದ ಆಹಾರದ ಆಯ್ಕೆಗಳು ನಮ್ಮ ಮನಸ್ಸನ್ನು ಶಾಂತವಾಗಿಡಲು ಸಹಾಯ ಮಾಡುತ್ತದೆ. ಕೆಲವು ಹಣ್ಣುಗಳಲ್ಲಿ ಒತ್ತಡ ಮತ್ತು ಆತಂಕವನ್ನು ಕಡಿಮೆ ಮಾಡುವ ಗುಣಗಳಿವೆ. ಈ ಹಣ್ಣುಗಳನ್ನು ಸೇವಿಸುವ ಮೂಲಕ ನಿಮ್ಮ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು.

ನೀವು ಖಿನ್ನತೆಯಿಂದ ಬಳಲುತ್ತಿದ್ದರೆ ದಾಳಿಂಬೆ ಹಣ್ಣನ್ನು ಹೆಚ್ಚು ಸೇವಿಸಿ
ದಾಳಿಂಬೆ
Follow us on

ಇಂದಿನ ಬಿಡುವಿಲ್ಲದ ಜೀವನದಲ್ಲಿ ಒತ್ತಡ ಮತ್ತು ಆತಂಕ ಸಾಮಾನ್ಯವಾಗಿದೆ. ಅವುಗಳಿಂದ ದೂರಾಗಲು ಅನೇಕ ಜನರು ಔಷಧಿಗಳನ್ನು ತೆಗೆದುಕೊಳ್ಳುತ್ತಾರೆ. ಆದರೆ ಸರಿಯಾಗಿ ತಿನ್ನುವ ಮೂಲಕ ನಾವು ನಮ್ಮ ಒತ್ತಡವನ್ನು  ಕಡಿಮೆ ಮಾಡಬಹುದು ಎಂದು ನಿಮಗೆ ತಿಳಿದಿದೆಯೇ? ತಪ್ಪು ಆಹಾರ ಪದ್ಧತಿ ಒತ್ತಡಕ್ಕೆ ಪ್ರಮುಖ ಕಾರಣವಾಗಿದೆ. ಸಮತೋಲಿತ ಆಹಾರ ಮತ್ತು ಸರಿಯಾದ ಆಹಾರದ ಆಯ್ಕೆಗಳು ನಮ್ಮ ಮನಸ್ಸನ್ನು ಶಾಂತವಾಗಿಡಲು ಸಹಾಯ ಮಾಡುತ್ತದೆ. ಕೆಲವು ಹಣ್ಣುಗಳಲ್ಲಿ ಒತ್ತಡ ಮತ್ತು ಆತಂಕವನ್ನು ಕಡಿಮೆ ಮಾಡುವ ಗುಣಗಳಿವೆ. ಈ ಹಣ್ಣುಗಳನ್ನು ಸೇವಿಸುವ ಮೂಲಕ ನಿಮ್ಮ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು.

ದಾಳಿಂಬೆಯು ಒತ್ತಡ ಮತ್ತು ಆತಂಕವನ್ನು ಕಡಿಮೆ ಮಾಡುವ ಪರಿಣಾಮಕಾರಿ ಗುಣಗಳನ್ನು ಹೊಂದಿದೆ. ದಾಳಿಂಬೆಯಲ್ಲಿ ನೈಸರ್ಗಿಕವಾಗಿ ಇರುವ ಜೀವಸತ್ವಗಳು, ಖನಿಜಗಳು ಮತ್ತು ಉತ್ಕರ್ಷಣ ನಿರೋಧಕಗಳು ದೈಹಿಕ ಒತ್ತಡವನ್ನು ಕಡಿಮೆ ಮಾಡುವುದಲ್ಲದೆ ಮಾನಸಿಕ ಒತ್ತಡವನ್ನು ಕಡಿಮೆ ಮಾಡುತ್ತದೆ. ದಾಳಿಂಬೆಯ ಸೇವನೆಯು ಮೆದುಳಿನ ಒತ್ತಡದ ಹಾರ್ಮೋನ್ ಕಾರ್ಟಿಸೋಲ್ ಮಟ್ಟವನ್ನು ಕಡಿಮೆ ಮಾಡುತ್ತದೆ, ಇದು ಮನಸ್ಸನ್ನು ಶಾಂತವಾಗಿ ಮತ್ತು ಧನಾತ್ಮಕವಾಗಿರಿಸುತ್ತದೆ. ಆದ್ದರಿಂದ, ನೀವು ಒತ್ತಡ ಮತ್ತು ಆತಂಕದಿಂದ ತೊಂದರೆಗೊಳಗಾಗಿದ್ದರೆ, ಖಂಡಿತವಾಗಿಯೂ ದಾಳಿಂಬೆಯನ್ನು ನಿಮ್ಮ ಆಹಾರದಲ್ಲಿ ಸೇರಿಸಿ.

ಸಂಶೋಧನೆ ಏನು ಹೇಳುತ್ತೆ?
ಕ್ವೀನ್ ಮಾರ್ಗರೇಟ್ ವಿಶ್ವವಿದ್ಯಾಲಯದ ಸಂಶೋಧನೆಯು ದಾಳಿಂಬೆ ಜ್ಯೂಸ್ ಅನ್ನು ಪ್ರತಿನಿತ್ಯ ಕುಡಿಯುವವರಲ್ಲಿ ಒತ್ತಡದ ಹಾರ್ಮೋನ್ ಕಾರ್ಟಿಸೋಲ್ ಕಡಿಮೆ ಇರುತ್ತದೆ ಎಂದು ಹೇಳಿದೆ. ದಾಳಿಂಬೆ ಜ್ಯೂಸ್​ ಕುಡಿಯುವುದರಿಂದ ಮಾನಸಿಕ ಒತ್ತಡ ಕಡಿಮೆಯಾಗುತ್ತದೆ. ಇದು ನಿಮಗೆ ಶಾಂತ ಮತ್ತು ಸಕಾರಾತ್ಮಕ ಭಾವನೆಯನ್ನು ನೀಡುತ್ತದೆ. ನಿಮ್ಮ ದೈನಂದಿನ ಆಹಾರದಲ್ಲಿ ದಾಳಿಂಬೆಯನ್ನು ಸೇರಿಸಿ. ಇದು ನಿಮ್ಮ ಮನಸ್ಥಿತಿಯನ್ನು ಸುಧಾರಿಸುತ್ತದೆ ಮತ್ತು ಒತ್ತಡದಿಂದ ಪರಿಹಾರವನ್ನು ನೀಡುತ್ತದೆ.

ಮತ್ತಷ್ಟು ಓದಿ: Stress: ನೀವು ಒತ್ತಡ ಮತ್ತು ಆತಂಕದಿಂದ ಬಳಲುತ್ತಿದ್ದೀರಾ? ಮಾನಸಿಕವಾಗಿ ಸದೃಢವಾಗಿರಲು ಹೀಗೆ ಮಾಡಿ

ದಾಳಿಂಬೆಯ ಹೆಚ್ಚಿನ ಪ್ರಯೋಜನಗಳು
ವಿಟಮಿನ್ ಸಿ, ವಿಟಮಿನ್ ಬಿ6, ಪೊಟ್ಯಾಸಿಯಮ್ ಮತ್ತು ಮೆಗ್ನೀಸಿಯಮ್ ನಂತಹ ಅನೇಕ ಪೋಷಕಾಂಶಗಳು ದಾಳಿಂಬೆಯಲ್ಲಿ ಕಂಡುಬರುತ್ತವೆ, ಇದು ದೇಹಕ್ಕೆ ಪ್ರಯೋಜನಕಾರಿಯಾಗಿದೆ. ದಾಳಿಂಬೆಯು ಉತ್ಕರ್ಷಣ ನಿರೋಧಕಗಳನ್ನು ಹೊಂದಿರುತ್ತದೆ, ಇದು ಜೀವಕೋಶಗಳನ್ನು ಹಾನಿಯಿಂದ ರಕ್ಷಿಸುತ್ತದೆ ಮತ್ತು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

ದಾಳಿಂಬೆ ತಿನ್ನುವುದರಿಂದ ಹಸಿವು ಕಡಿಮೆಯಾಗುತ್ತದೆ ಮತ್ತು ತೂಕವನ್ನು ನಿಯಂತ್ರಣದಲ್ಲಿಡುತ್ತದೆ. ಇದು ತೂಕ ಇಳಿಕೆಗೆ ಸಹಕಾರಿ.
ದಾಳಿಂಬೆ ಫೈಬರ್ ಅನ್ನು ಹೊಂದಿರುತ್ತದೆ ಇದು ಜೀರ್ಣಾಂಗ ವ್ಯವಸ್ಥೆಗೆ ಪ್ರಯೋಜನಕಾರಿಯಾಗಿದೆ.

ದಾಳಿಂಬೆ ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ