Pig Kidney Transplant: ಮನುಷ್ಯನಿಗೆ ಹಂದಿಯ ಕಿಡ್ನಿ ಕಸಿ ಮಾಡಿದ ವೈದ್ಯರು; ವೈದ್ಯಕೀಯ ಇತಿಹಾಸದಲ್ಲೇ ಪ್ರಥಮ ಪ್ರಯತ್ನ

ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿರುವ 62 ವರ್ಷದ ರೋಗಿಗೆ 4 ಗಂಟೆಗಳ ಕಾರ್ಯಾಚರಣೆಯ ನಂತರ ಹಂದಿಯ ಮೂತ್ರಪಿಂಡದೊಂದಿಗೆ ಕಸಿ ಮಾಡಲಾಗಿದೆ. ವೈದ್ಯಕೀಯ ಇತಿಹಾಸದಲ್ಲಿ ಇದೊಂದು ಹೊಸ ದಾಖಲೆ ಎಂದು ಮ್ಯಾಸಚೂಸೆಟ್ಸ್ ಜನರಲ್ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

Pig Kidney Transplant: ಮನುಷ್ಯನಿಗೆ ಹಂದಿಯ ಕಿಡ್ನಿ ಕಸಿ ಮಾಡಿದ ವೈದ್ಯರು; ವೈದ್ಯಕೀಯ ಇತಿಹಾಸದಲ್ಲೇ ಪ್ರಥಮ ಪ್ರಯತ್ನ
ಮನುಷ್ಯನಿಗೆ ಹಂದಿಯ ಕಿಡ್ನಿ ಕಸಿImage Credit source: Pinterest
Follow us
|

Updated on: Mar 22, 2024 | 10:47 AM

ವಿಶ್ವದಲ್ಲೇ ಪ್ರಥಮ ಬಾರಿಗೆ ರೋಗಿಗೆ ಹಂದಿಯ ಮೂತ್ರಪಿಂಡವನ್ನು ಯಶಸ್ವಿಯಾಗಿ ಕಸಿ ಮಾಡಲಾಗಿದೆ. ಇದರೊಂದಿಗೆ, ಪ್ರಾಣಿಗಳ ಅಂಗಗಳನ್ನು ಬಳಸಿ ಮಾನವ ಜೀವ ಉಳಿಸುವ ಪ್ರಯತ್ನದ ಭಾಗವಾಗಿ ಮತ್ತೊಂದು ಮಹತ್ವದ ಹೆಜ್ಜೆ ಇಡಲಾಗಿದೆ. ಗುರುವಾರ (ಮಾರ್ಚ್ 21) ವ್ಯಕ್ತಿಯೊಬ್ಬನಿಗೆ ಹಂದಿಯ ಮೂತ್ರಪಿಂಡವನ್ನು ಅಳವಡಿಸಲಾಗಿದೆ ಎಂದು ಅಮೆರಿಕದ ವೈದ್ಯಕೀಯ ತಜ್ಞರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಕೊನೆಯ ಹಂತದ ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿರುವ 62 ವರ್ಷದ ರೋಗಿಗೆ 4 ಗಂಟೆಗಳ ಕಾರ್ಯಾಚರಣೆಯ ನಂತರ ಹಂದಿಯ ಮೂತ್ರಪಿಂಡದೊಂದಿಗೆ ಕಸಿ ಮಾಡಲಾಗಿದೆ ಎಂದು ಮ್ಯಾಸಚೂಸೆಟ್ಸ್ ಜನರಲ್ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಈ ರೀತಿಯ ಅಂಗಾಂಗ ಕಸಿ ಪ್ರಕ್ರಿಯೆಯು ವಿಶ್ವಾದ್ಯಂತ ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಲಕ್ಷಾಂತರ ರೋಗಿಗಳಿಗೆ ಜೀವ ನೀಡಬಲ್ಲದು ಎಂದು ವೈದ್ಯರ ತಂಡದ ಸದಸ್ಯ ಡಾ.ಟಾಟ್ಸುವೋ ಕವಾಯ್ ಹೇಳಿದ್ದಾರೆ.

ವೈದ್ಯಕೀಯ ಇತಿಹಾಸದಲ್ಲಿ ಇದೊಂದು ಹೊಸ ದಾಖಲೆಯಾಗಿದ್ದು, ರೋಗಿಯು ಚೇತರಿಸಿಕೊಳ್ಳುತ್ತಿದ್ದಾರೆ ಮತ್ತು ಶೀಘ್ರದಲ್ಲೇ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ವೈದ್ಯರು ತಿಳಿಸಿರುವುದು ವರದಿಯಾಗಿದೆ.

ಇದನ್ನೂ ಓದಿ: ಶಾಲೆಯ ಊಟದ ಸಾಂಬಾರ್‌ನಲ್ಲಿ ಹಲ್ಲಿ ಪತ್ತೆ; 30 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು

ಒಂದು ಜಾತಿಯಿಂದ ಇನ್ನೊಂದಕ್ಕೆ ಅಂಗಗಳನ್ನು ಕಸಿ ಮಾಡುವ ವಿಧಾನವನ್ನು ಕ್ಸೆನೋಟ್ರಾನ್ಸ್ಪ್ಲಾಂಟೇಶನ್(xenotransplantation) ಎಂದು ಕರೆಯಲಾಗುತ್ತದೆ. ಈ ಹಿಂದೆ, ಹಂದಿಯ ಹೃದಯವನ್ನು ವ್ಯಕ್ತಿಯೊಬ್ಬರಿಗೆ ತಾತ್ಕಾಲಿಕವಾಗಿ ಕಸಿ ಮಾಡಲಾಗಿತ್ತು. ಆದರೆ ಒಂದು ತಿಂಗಳೊಳಗೆ ವ್ಯಕ್ತಿ ಸಾವನ್ನಪ್ಪಿದ್ದರು. 2018 ರಲ್ಲಿ ಟೈಪ್ 2 ಮಧುಮೇಹ ಮತ್ತು ಅಧಿಕ ರಕ್ತದೊತ್ತಡದಿಂದ ಬಳಲುತ್ತಿರುವ ಸ್ಲೇಮನ್ ಎಂಬ ವ್ಯಕ್ತಿಗೆ ಹಂದಿಯ ಮೂತ್ರಪಿಂಡವನ್ನು ಕಸಿ ಮಾಡಲಾಯಿತು. ಆದರೆ ಐದು ವರ್ಷಗಳ ನಂತರ ಅದು ವಿಫಲವಾಯಿತು. ಸದ್ಯ ಡಯಾಲಿಸಿಸ್ ಮಾಡಿಸಿಕೊಂಡು ಬದುಕುಳಿದಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ