AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pomegranates Benefits: ದಿನಕ್ಕೆ 3 ದಾಳಿಂಬೆ ನಿಮ್ಮ ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ

ನೀವು ಅಧಿಕ ರಕ್ತದೊತ್ತಡ ಹೊಂದಿದ್ದರೆ, ಕನಿಷ್ಠ ಮೂರು ತಿಂಗಳ ಕಾಲ ದಿನಕ್ಕೆ ಮೂರು ದಾಳಿಂಬೆಗಳನ್ನು ಸೇವಿಸಿ ಎಂದು ಪೌಷ್ಟಿಕತಜ್ಞರು ಸಲಹೆ ನೀಡುತ್ತಾರೆ.

Pomegranates Benefits: ದಿನಕ್ಕೆ 3 ದಾಳಿಂಬೆ ನಿಮ್ಮ ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ
ದಾಳಿಂಬೆಯ ಆರೋಗ್ಯ ಪ್ರಯೋಜನ
ಅಕ್ಷತಾ ವರ್ಕಾಡಿ
|

Updated on:Mar 02, 2023 | 6:11 PM

Share

ದಾಳಿಂಬೆಯು ಅತ್ಯಂತ ಶಕ್ತಿಯುತವಾದ ಆಂಟಿಆಕ್ಸಿಡೆಂಟ್, ಉತ್ಕರ್ಷಣ ನಿರೋಧಕವನ್ನು ಹೊಂದಿದ್ದು, ಇದು ನಿಮ್ಮ ದೇಹದಲ್ಲಿ ಅಪಧಮನಿಗಳನ್ನು ಸ್ವಚ್ಛಗೊಳಿಸುತ್ತದೆ. ಜೊತೆಗೆ ರಕ್ತದೊತ್ತಡವನ್ನು ಕಡಿಮೆ ಮಾಡಿ, ಹೃದಯವನ್ನು ರಕ್ಷಿಸುವುದರ ಜೊತೆಗೆ ರಕ್ತನಾಳಗಳ ಅಡಚಣೆಯನ್ನು ತಡೆದು ರಕ್ತ ಪರಿಚಲನೆಯನ್ನು ಸರಾಗಗೊಳಿಸುತ್ತದೆ ಎಂದು ಪೌಷ್ಟಿಕತಜ್ಞ ಅಂಜಲಿ ಮುಖರ್ಜಿ ಹೇಳಿದ್ದಾರೆ. ದಾಳಿಂಬೆ ಅತ್ಯಂತ ಸಾಮಾನ್ಯವಾದ ಹಣ್ಣುಗಳಲ್ಲಿ ಒಂದಾಗಿದೆ. ಜೊತೆಗೆ ಸಾಕಷ್ಟು ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಆದ್ದರಿಂದ ನೀವು ಪ್ರತಿ ದಿನ ದಾಳಿಂಬೆಯನ್ನು ಸೇವಿಸುವುದರಿಂದ ಸಾಕಷ್ಟು ಆರೋಗ್ಯ ಪ್ರಯೋಜನಗಳನ್ನು ಕಾಣಬಹುದು ಎಂದು ಅವರು ತಮ್ಮ ಪೋಸ್ಟ್‌ನಲ್ಲಿ ಬರೆದಿದ್ದಾರೆ.

ಅಧಿಕ ರಕ್ತದೊತ್ತಡ ಇರುವವರು ಕನಿಷ್ಠ ಮೂರು ತಿಂಗಳ ಕಾಲ ದಿನಕ್ಕೆ ಮೂರು ದಾಳಿಂಬೆಯನ್ನು ಸೇವಿಸುವುದು ಒಳ್ಳೆಯದು. “ಇದು ಅವರ ಹೃದಯರಕ್ತನಾಳದ ಆರೋಗ್ಯಕ್ಕೆ ಪ್ರಯೋಜನವನ್ನು ನೀಡುತ್ತದೆ ಮತ್ತು ಶಕ್ತಿಯುತವಾದ ಉತ್ಕರ್ಷಣ ನಿರೋಧಕ ಬೆಂಬಲವನ್ನು ಒದಗಿಸುವುದರ ಜೊತೆಗೆ ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ” ಎಂದು ತಜ್ಞರು ಹೇಳುತ್ತಾರೆ. ಆದರೆ ಆರೋಗ್ಯಕರ ಹೃದಯವನ್ನು ಹೊಂದಲು ಕೇವಲ ಮೂರು ದಾಳಿಂಬೆಗಳನ್ನು ಸೇವಿಸುವುದು ಸಾಕಾಗುವುದಿಲ್ಲ. ರಕ್ತದೊತ್ತಡವನ್ನು ಕಡಿಮೆ ಮಾಡಲು ಮತ್ತು ಅಪಧಮನಿಗಳನ್ನು ಆರೋಗ್ಯಕರವಾಗಿಡಲು, ಅದರ ಸಂಪೂರ್ಣ ಪ್ರಯೋಜನಗಳನ್ನು ಆನಂದಿಸಲು ಕೆಲವು ಜೀವನಶೈಲಿಯ ಬದಲಾವಣೆಗಳನ್ನು ಮಾಡುವುದು ಮುಖ್ಯ ಎಂದು ಅವರು ಹೇಳುತ್ತಾರೆ.

ಇದನ್ನೂ ಓದಿ: ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವವರು ಹೆಚ್ಚಿನ ಜಾಗ್ರತೆ ವಹಿಸುವುದು ಅಗತ್ಯ: ಕೇಂದ್ರ ಆರೋಗ್ಯ ಇಲಾಖೆ

ಹೃದಯ-ಆರೋಗ್ಯಕರ ಆಹಾರವು ಕೊಲೆಸ್ಟ್ರಾಲ್ ಮತ್ತು ರಕ್ತದೊತ್ತಡವನ್ನು ಕಡಿಮೆ ಮಾಡಲು ಮತ್ತು ಮಧುಮೇಹದ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ, ಜೊತೆಗೆ ಆರೋಗ್ಯಕರ ತೂಕವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ” ಎಂದು ಅವರು ನಿಮ್ಮ ಜೀವನಶೈಲಿಯಲ್ಲಿ ಕೆಲವು ಮಾರ್ಪಾಡುಗಳನ್ನು ಮಾಡುವ ವಿಧಾನಗಳನ್ನು ಪಟ್ಟಿಮಾಡಿದ್ದಾರೆ.

  • ಹೆಚ್ಚು ನಾರಿನಂಶವನ್ನು ಸೇವಿಸಿ: ಬಿಳಿ ಬ್ರೆಡ್ ಮತ್ತು ಪಾಸ್ಟಾದ ಬದಲಿಗೆ ಧಾನ್ಯಗಳನ್ನು ಸೇವಿಸಿ.
  • ಸಾಕಷ್ಟು ಹಣ್ಣುಗಳು ಮತ್ತು ತರಕಾರಿಗಳನ್ನು ಸೇವಿಸಿ.
  • ಆಹಾರದ ಕೊಲೆಸ್ಟ್ರಾಲ್ ಮಿತಿಗೊಳಿಸಿ – ಸಂಪೂರ್ಣ ಹಾಲು, ಚೀಸ್ ಇತ್ಯಾದಿಗಳ ಬಳಕೆಯನ್ನು ಕಡಿಮೆ ಮಾಡಿ.
  • ಆರೋಗ್ಯಕರ ಕೊಬ್ಬನ್ನು ಸೇವಿಸಿ: ಬೀಜಗಳು, ಆಲಿವ್ ಎಣ್ಣೆ ಮತ್ತು ಆವಕಾಡೊ.
  • ಸಂಸ್ಕರಿಸಿದ ಆಹಾರಗಳಲ್ಲಿ ಕಂಡುಬರುವ ಟ್ರಾನ್ಸ್ ಕೊಬ್ಬುಗಳು ಮತ್ತು ಸ್ಯಾಚುರೇಟೆಡ್ ಕೊಬ್ಬುಗಳನ್ನು ತಪ್ಪಿಸಿ.
  • ಉಪ್ಪು ಸೇವನೆಯನ್ನು ಮಿತಿಗೊಳಿಸಿ – ಉಪ್ಪಿನಲ್ಲಿ ಹೆಚ್ಚಿನ ಸೋಡಿಯಂ ಅಧಿಕ ರಕ್ತದೊತ್ತಡಕ್ಕೆ ಕೊಡುಗೆ ನೀಡುತ್ತದೆ.
  • ಆಲ್ಕೋಹಾಲ್ ಸೇವನೆಯನ್ನು ಮಿತಿಗೊಳಿಸಿ ಏಕೆಂದರೆ ಆಲ್ಕೋಹಾಲ್ ಹೆಚ್ಚಿನ ಕ್ಯಾಲೋರಿಗಳನ್ನು ಹೊಂದಿರುವುದರಿಂದ ತೂಕ ಹೆಚ್ಚಾಗಲು ಕಾರಣವಾಗುತ್ತದೆ.
  • ಧೂಮಪಾನ ತ್ಯಜಿಸು.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 6:10 pm, Thu, 2 March 23

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ