Cervical Cancer: ಪೂನಂ ಪಾಂಡೆ ಸಾವಿಗೆ ಕಾರಣವಾದ ಗರ್ಭಕಂಠದ ಕ್ಯಾನ್ಸರ್ ಲಕ್ಷಣಗಳೇನು?

Poonam Pandey Death: ಗರ್ಭಕಂಠದ ಕ್ಯಾನ್ಸರ್ ಮಹಿಳೆಯರನ್ನು ಕಾಡುತ್ತಿರುವ ಅಪಾಯಕಾರಿ ಕ್ಯಾನ್ಸರ್ ಆಗಿದೆ. ಬಾಲಿವುಡ್ ನಟಿ ಪೂನಂ ಪಾಂಡೆ ಕೂಡ ಗರ್ಭಕಂಠದ ಕ್ಯಾನ್ಸರ್​ನಿಂದ ಬಳಲುತ್ತಿದ್ದರು. ಇಂದು ಬೆಳಗ್ಗೆ ಅವರು ಕ್ಯಾನ್ಸರ್​ಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಹಾಗಾದರೆ, ಈ ಗರ್ಭಕಂಠದ ಕ್ಯಾನ್ಸರ್​ ಎಂದರೇನು? ಈ ಕ್ಯಾನ್ಸರ್​ನ ಲಕ್ಷಣಗಳೇನು? ಈ ಕ್ಯಾನ್ಸರ್​ನ ಅಪಾಯ ಯಾರಿಗೆ ಹೆಚ್ಚಾಗಿರುತ್ತದೆ? ಎಂಬ ಮಾಹಿತಿ ಇಲ್ಲಿದೆ.

Cervical Cancer: ಪೂನಂ ಪಾಂಡೆ ಸಾವಿಗೆ ಕಾರಣವಾದ ಗರ್ಭಕಂಠದ ಕ್ಯಾನ್ಸರ್ ಲಕ್ಷಣಗಳೇನು?
ಕ್ಯಾನ್ಸರ್​ನಿಂದ ಮೃತಪಟ್ಟ ಪೂನಂ ಪಾಂಡೆImage Credit source: facebook
Follow us
ಸುಷ್ಮಾ ಚಕ್ರೆ
|

Updated on:Feb 02, 2024 | 12:50 PM

ಬಾಲಿವುಡ್ ನಟಿ ಮತ್ತು ರೂಪದರ್ಶಿ ಪೂನಂ ಪಾಂಡೆ (Poonam Pandey) ಇಂದು ಬೆಳಗ್ಗೆ ಗರ್ಭಕಂಠದ ಕ್ಯಾನ್ಸರ್‌ನಿಂದ ಮೃತಪಟ್ಟಿದ್ದಾರೆ. ಈ ವಿಷಯ ಅವರ ಅಭಿಮಾನಿಗಳಿಗೆ ಬಹಳ ಆಘಾತ ಉಂಟಾಗಿದೆ. ಕೇವಲ 32 ವಯಸ್ಸಿನಲ್ಲಿ ಪೂನಂ ಪಾಂಡೆ ಕ್ಯಾನ್ಸರ್​ಗೆ ಬಲಿಯಾಗಿದ್ದಾರೆ. ಪೂನಂ ಪಾಂಡೆಗೆ ಗರ್ಭಕಂಠದ ಕ್ಯಾನ್ಸರ್ (Cervical Cancer) ಇರುವ ವಿಚಾರ ಇತ್ತೀಚೆಗಷ್ಟೇ ಗೊತ್ತಾಗಿತ್ತು. ಆದರೆ, ಅಷ್ಟರಲ್ಲಾಗಲೇ ಬಹಳ ತಡವಾಗಿತ್ತು. ಆಕೆಗೆ ಗೊತ್ತಾಗುವ ವೇಳೆಗಾಗಲೇ ಕ್ಯಾನ್ಸರ್  (Cancer) ಕೊನೆಯ ಹಂತದಲ್ಲಿತ್ತು. ಹೀಗಾಗಿ, ಗರ್ಭಕಂಠದ ಕ್ಯಾನ್ಸರ್ ಅನ್ನು ಗುಣಪಡಿಸಲು ಸಾಧ್ಯವಾಗಲಿಲ್ಲ. ಹಾಗಿದ್ದರೆ ಈ ಗರ್ಭಕಂಠದ ಕ್ಯಾನ್ಸರ್ ಹೇಗೆ ಬರುತ್ತದೆ? ಇದರ ಲಕ್ಷಣಗಳೇನು?

ಗರ್ಭಕಂಠದ ಕ್ಯಾನ್ಸರ್ (cervical cancer) ಎಂಬುದು ಗರ್ಭಕಂಠದಲ್ಲಿ ಪ್ರಾರಂಭವಾಗುವ ಜೀವಕೋಶಗಳ ಬೆಳವಣಿಗೆಯಾಗಿದೆ. ಗರ್ಭಕಂಠವು ಗರ್ಭಾಶಯದ ಕೆಳಗಿನ ಭಾಗವಾಗಿದ್ದು ಅದು ಯೋನಿಯೊಂದಿಗೆ ಸಂಪರ್ಕಿಸುತ್ತದೆ. HPV ಎಂದು ಕರೆಯಲ್ಪಡುವ ಮಾನವ ಪ್ಯಾಪಿಲೋಮವೈರಸ್‌ನ ವಿವಿಧ ತಳಿಗಳು ಈ ಗರ್ಭಕಂಠದ ಕ್ಯಾನ್ಸರ್‌ ಉಂಟುಮಾಡುವಲ್ಲಿ ಮುಖ್ಯವಾದ ಪಾತ್ರ ವಹಿಸುತ್ತವೆ. HPV ಲೈಂಗಿಕ ಸಂಪರ್ಕದ ಮೂಲಕ ಹಾದುಹೋಗುವ ಸಾಮಾನ್ಯ ಸೋಂಕು. HPVಗೆ ಒಡ್ಡಿಕೊಂಡಾಗ ನಮ್ಮ ದೇಹದ ರೋಗನಿರೋಧಕ ಶಕ್ತಿಯು ಸಾಮಾನ್ಯವಾಗಿ ಈ ವೈರಸ್ ದೇಹದ ಅಂಗಗಳಿಗೆ ಹಾನಿ ಮಾಡದಂತೆ ತಡೆಯುತ್ತದೆ. ಆದರೆ, ಕೆಲವು ಪ್ರಕರಣಗಳಲ್ಲಿ ಈ ವೈರಸ್ ಹಲವು ವರ್ಷಗಳವರೆಗೆ ಬದುಕುತ್ತದೆ. ಇದು ಗರ್ಭಕಂಠದ ಕೋಶಗಳನ್ನು ಕ್ಯಾನ್ಸರ್ ಕೋಶಗಳಾಗಿ ಪರಿವರ್ತಿಸುತ್ತದೆ.

ಇದನ್ನೂ ಓದಿ: ಸ್ತನ ಕ್ಯಾನ್ಸರ್ ಬಗ್ಗೆ ಇರುವ 15 ತಪ್ಪು ಕಲ್ಪನೆಗಳಿವು

ನಿಯಮಿತವಾಗಿ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಮತ್ತು HPV ಸೋಂಕಿನಿಂದ ರಕ್ಷಿಸುವ ಲಸಿಕೆಯನ್ನು ಪಡೆಯುವ ಮೂಲಕ ನೀವು ಗರ್ಭಕಂಠದ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡಬಹುದು. ಗರ್ಭಕಂಠದ ಕ್ಯಾನ್ಸರ್ ಉಂಟಾದಾಗ ಕ್ಯಾನ್ಸರ್ ಅನ್ನು ತೆಗೆದುಹಾಕಲು ಶಸ್ತ್ರಚಿಕಿತ್ಸೆಗಿಂತ ಮೊದಲು ಚಿಕಿತ್ಸೆ ನೀಡಲಾಗುತ್ತದೆ. ಇತರ ಚಿಕಿತ್ಸೆಗಳು ಕ್ಯಾನ್ಸರ್ ಕೋಶಗಳನ್ನು ಕೊಲ್ಲಲು ಔಷಧಿಗಳನ್ನು ನೀಡುತ್ತದೆ. ಈ ವೇಳೆ ಕೀಮೋಥೆರಪಿ ಕೂಡ ಮಾಡಲಾಗುತ್ತದೆ. ಗರ್ಭಕಂಠದ ಕ್ಯಾನ್ಸರ್ ಆರಂಭದಲ್ಲಿ ಯಾವುದೇ ರೋಗಲಕ್ಷಣಗಳನ್ನು ಹೊಂದಿರುವುದಿಲ್ಲ. ಇದು ಬೆಳೆದಂತೆ ಗರ್ಭಕಂಠದ ಕ್ಯಾನ್ಸರ್ ಲಕ್ಷಣಗಳು ಹೆಚ್ಚಾಗುತ್ತಾ ಹೋಗುತ್ತದೆ.

ಗರ್ಭಕಂಠದ ಕ್ಯಾನ್ಸರ್​ನ ಲಕ್ಷಣಗಳೇನು?:

– ಸಂಭೋಗದ ನಂತರ, ಪಿರಿಯಡ್ಸ್​ ಮುಗಿದ ನಂತರ ಅಥವಾ ಋತುಬಂಧದ ನಂತರ ಯೋನಿಯಲ್ಲಿ ರಕ್ತಸ್ರಾವ ಉಂಟಾಗುವುದು.

– ಮುಟ್ಟಿನ ಸಮಯದಲ್ಲಿ ವಿಪರೀತ ರಕ್ತಸ್ರಾವ ಆಗುವುದು. ದೀರ್ಘಕಾಲದವರೆಗೆ ರಕ್ತಸ್ರಾವ ಇರುವುದು.

– ನೀರಿನಂಶವಿರುವ, ರಕ್ತಸಿಕ್ತ ಯೋನಿ ಸ್ರವಿಸುವಿಕೆ. ಇದು ಕೊಳಕು ವಾಸನೆಯನ್ನು ಕೂಡ ಹೊಂದಿರುತ್ತದೆ.

– ಶ್ರೋಣಿಯ ನೋವು ಅಥವಾ ಸಂಭೋಗದ ಸಮಯದಲ್ಲಿ ನೋವು.

ಇದನ್ನೂ ಓದಿ: Poonam Pandey: 3 ದಿನದ ಹಿಂದೆ ಆರಾಮಾಗಿದ್ದ ಪೂನಂ ಪಾಂಡೆ ಕ್ಯಾನ್ಸರ್​ನಿಂದ ನಿಧನ ಎಂದರೆ ನಂಬೋದು ಹೇಗೆ?

ಹೆಚ್ಚಿನ ಗರ್ಭಕಂಠದ ಕ್ಯಾನ್ಸರ್​ಗಳು HPVಯಿಂದ ಉಂಟಾಗುತ್ತವೆ. HPV ಲೈಂಗಿಕ ಸಂಪರ್ಕದ ಮೂಲಕ ಹರಡುವ ಸಾಮಾನ್ಯ ವೈರಸ್. ಹೆಚ್ಚಿನ ಜನರಿಗೆ ಈ ವೈರಸ್ ಎಂದಿಗೂ ಸಮಸ್ಯೆಗಳನ್ನು ಉಂಟುಮಾಡುವುದಿಲ್ಲ. ಇದು ಸಾಮಾನ್ಯವಾಗಿ ತನ್ನಷ್ಟಕ್ಕೆ ತಾನೇ ದೇಹದಿಂದ ಹೊರಹೋಗುತ್ತದೆ. ಆದರೆ, ಕೆಲವರಿಗೆ, ಈ ವೈರಸ್ ಜೀವಕೋಶಗಳಲ್ಲಿ ಬದಲಾವಣೆಗಳನ್ನು ಉಂಟುಮಾಡಬಹುದು. ಅದು ಕ್ಯಾನ್ಸರ್​ಗೆ ಕಾರಣವಾಗಬಹುದು.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:48 pm, Fri, 2 February 24

ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್