World Heart Day 2023:: ಹೃದಯವನ್ನು ಆರೋಗ್ಯಕರವಾಗಿಡಲು ಪ್ರತಿನಿತ್ಯ ಈ ಅಭ್ಯಾಸಗಳನ್ನು ರೂಢಿಸಿಕೊಳ್ಳಿ

Heart Health: ಇತ್ತೀಚಿನ ದಿನಗಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಿರುವಾಗ ಹೃದಯದ ಆರೋಗ್ಯವನ್ನು ಉತ್ತಮ ರೀತಿಯಲ್ಲಿ ಕಾಪಾಡಿಕೊಳ್ಳುವುದು ಬಹಳನೇ ಮುಖ್ಯವಾಗಿದೆ.  ನಿಮ್ಮ ದೈನಂದಿನ ಜೀವನದಲ್ಲಿ ಈ ಕೆಲವೊಂದು ಅಭ್ಯಾಸಗಳನ್ನು ರೂಢಿಸಿಕೊಳ್ಳುವ ಮೂಲಕ  ಹೃದಯವನ್ನು ಆರೋಗ್ಯಕರವಾಗಿಡಬಹುದು.

World Heart Day 2023:: ಹೃದಯವನ್ನು ಆರೋಗ್ಯಕರವಾಗಿಡಲು ಪ್ರತಿನಿತ್ಯ ಈ ಅಭ್ಯಾಸಗಳನ್ನು ರೂಢಿಸಿಕೊಳ್ಳಿ
ಸಾಂದರ್ಭಿಕ ಚಿತ್ರ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Sep 28, 2023 | 5:33 PM

ಹೃದ್ರೋಗವು ವಿಶ್ವದಾದ್ಯಂತ ವೇಗವಾಗಿ ಹೆಚ್ಚುತ್ತಿರುವ ಗಂಭೀರ ಕಾಯಿಲೆಗಳಲ್ಲಿ ಒಂದಾಗಿದೆ.  ಅನಾರೋಗ್ಯಕರ ಜೀವನಶೈಲಿ ಮತ್ತು ಆಹಾರ ಪದ್ಧತಿ, ದೈಹಿಕ ಚಟುವಟಿಕೆಗಳ ಕೊರತೆ, ಅತಿಯಾದ ಮದ್ಯಪಾನ ಮತ್ತು ಧೂಮಪಾನ ಇತ್ಯಾದಿಗಳು ಹೃದಯ ಸಂಬಂಧಿ ಕಾಯಿಲೆಯ ಅಪಾಯವು ಹೆಚ್ಚಾಗಲು ಪ್ರಮುಖ ಕಾರಣವಾಗಿದೆ. ವರ್ಲ್ಡ್ ಹಾರ್ಟ್ ಫೆಡರೇಷನ್ ಪ್ರಕಾರ, 80% ಅಕಾಲಿಕ ಮರಣಗಳು ಹೃದಯ ರಕ್ತನಾಳಗಳ ಕಾಯಿಲೆಯಿಂದಾಗಿ ಸಂಭವಿಸುತ್ತಿವೆ. ಈ ನಿಟ್ಟಿನಲ್ಲಿ ಹೃದಯರಕ್ತನಾಳಗಳ ಕಾಯಿಲೆಗಳು ಮತ್ತು ಅದರ ಅಪಾಯಗಳ  ಬಗ್ಗೆ ಜನರಿಗೆ  ಅರಿವು ಮೂಡಿಸಲು ಪ್ರತಿ ವರ್ಷ ಸೆಪ್ಟೆಂಬರ್ 29 ರಂದು ವಿಶ್ವ ಹೃದಯ ದಿನವನ್ನು  ಆಚರಿಸಲಾಗುತ್ತದೆ. ಈ ವಿಶೇಷ ದಿನದಂದು ನೀವು ನಿಮ್ಮ ದೈನಂದಿನ ಜೀವನದಲ್ಲಿ ಈ ಕೆಲವೊಂದು ಅಭ್ಯಾಸಗಳನ್ನು ರೂಢಿಸಿಕೊಳ್ಳುವ ಮೂಲಕ  ಹೃದಯದ ಆರೋಗ್ಯವನ್ನು ಉತ್ತಮ ರೀತಿಯಲ್ಲಿ ಕಾಪಾಡಿಕೊಳ್ಳಬಹುದು. ಮತ್ತು ಹೃದಯ ಸಂಬಂಧಿ ಕಾಯಿಲೆಗಳು ಬಾರದಂತೆ ನೋಡಿಕೊಳ್ಳಬಹುದು.

ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳಲು ಈ ಅಭ್ಯಾಸಗಳನ್ನು ರೂಢಿಸಿಕೊಳ್ಳಿ:

ಒಟ್ಟಾರೆ ಆರೋಗ್ಯವನ್ನು ಕಾಪಾಡಿಕೊಳ್ಳಲು ಮತ್ತು ಹೃದ್ರೋಗಗಳ ಅಪಾಯವನ್ನು ಕಡಿಮೆ ಮಾಡಲು ನಿಮ್ಮ ಹೃದಯದಆರೋಗ್ಯವನ್ನು ಉತ್ತಮ ರೀತಿಯಲ್ಲಿ ಕಾಪಾಡಿಕೊಳ್ಳುವುದು   ಬಹಳ ಮುಖ್ಯ. ಹಾಗಾಗಿ ಹೃದಯದ ಆರೋಗ್ಯವನ್ನು ಉತ್ತೆಜಿಸಲು ನೀವು ನಿಮ್ಮ ದೈನಂದಿ ಜೀವನದಲ್ಲಿ ಈ ಕೆಲವು ಅಭ್ಯಾಸಗಳನ್ನು ತಪ್ಪದೆ ಪಾಲಿಸಿ.

 ಆರೋಗ್ಯಕ ಆಹಾರಗಳ ಸೇವನೆ:

ಹೃದಯದ ಆರೋಗ್ಯವನ್ನು ಬೆಂಬಲಿಸುವ ಹಣ್ಣುಗಳು, ತರಕಾರಿಗಳು, ಧಾನ್ಯಗಳು, ಪ್ರೋಟೀನ್, ಆರೋಗ್ಯಕರ ಕೊಬ್ಬುಗಳಿಂದ ಸಮೃದ್ಧವಾಗಿರುವ ಆಹಾರಗಳನ್ನು ಸೇವನೆ ಮಾಡಿ. ಮತ್ತು ಎಣ್ಣೆಯಲ್ಲಿ ಕರಿದ ಆಹಾರಗಳು, ಸಂಸ್ಕರಿಸಿದ ತಿಂಡಿಗಳು, ಸ್ಯಾಚುರೇಟೆಡ್ ಕೊಬ್ಬು ಟ್ರಾನ್ಸ್ ಕೊಬ್ಬುಗಳಲ್ಲಿ ಸಮೃದ್ಧವಾಗಿರುವ ಆಹಾರ ಸೇವನೆಯನ್ನು ಮಿತಿಗೊಳಿಸಿ.

ಪ್ರತಿನಿತ್ಯ  ವ್ಯಾಯಾಮ ಮಾಡಿ:

ನಿಯಮಿತ ದೈಹಿಕ ಚಟುವಟಿಕೆಗಳ ಅಭ್ಯಾಸದ ಮೂಲಕ ಹೃದಯದ ಆರೋಗ್ಯವನ್ನು ಉತ್ತಮ ರೀತಿಯಲ್ಲಿ ಕಾಪಾಡಿಕೊಳ್ಳಬಹುದು.  ಹಾಗಾಗಿ ವಾರಕ್ಕೆ ಕನಿಷ್ಠ 150 ನಿಮಿಷಗಳ ಕಾಲ ನಿಯಮಿತ ದೈಹಿಕ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಿ. ಚುರುಕಾದ ನಡಿಗೆ, ಜಾಗಿಂಗ್, ಈಜು, ಸೈಕ್ಲಿಂಗ್ ಮತ್ತು ನೃತ್ಯದಂತಹ ಚಟುವಟಿಕೆಗಳು ಹೃದಯರಕ್ತನಾಳದ ಆರೋಗ್ಯವನ್ನು ಸುಧಾರಿಸಲು ಮತ್ತು ಆರೋಗ್ಯಕರ ತೂಕವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: ವಿಶ್ವ ಹೃದಯ ದಿನವನ್ನು ಏಕೆ ಆಚರಿಸಲಾಗುತ್ತದೆ? ಅದರ ಇತಿಹಾಸ, ಪ್ರಾಮುಖ್ಯತೆ ಇಲ್ಲಿದೆ

ಆರೋಗ್ಯಕರ ತೂಕವನ್ನು ಕಾಪಾಡಿಕೊಳ್ಳಿ:

ಅಧಿಕ ತೂಕ ಅಥವಾ ಬೊಜ್ಜು ಹೃದಯಾಘಾತದ ಅಪಾಯವನ್ನು ಹೆಚ್ಚಿಸುತ್ತದೆ. ಹಾಗಾಗಿ ಆರೋಗ್ಯಕ ತೂಕವನ್ನು ಕಾಪಾಡಿಕೊಳ್ಳಲು ನಿಮ್ಮ ಆಹಾರ ಕ್ರಮಕ್ಕೆ ಗಮನಕೊಡಿ ಮತ್ತು ದೈಹಿಕ ಚಟುವಟಿಕೆಯನ್ನು ಜೀವನಶೈಲಿಯ ಭಾಗವನ್ನಾಗಿಸಿ.

ಧೂಮಪಾನ ಮತ್ತು ಆಲ್ಕೋಹಾಲ್ ಸೇವನೆಯನ್ನು ಮಿತಿಗೊಳಿಸಿ:

ಧೂಮಪಾನವು ಹೃದಯ ಸಂಬಂಧಿ ಕಾಯಿಲೆಗಳನ್ನು ಹೆಚ್ಚಿಸುವ ಪ್ರಮುಖ ಅಂಶವಾಗಿದೆ. ಹಾಗಾಗಿ ಧೂಮಪಾನವನ್ನು ತ್ಯಜಿಸುವುದು ಅತ್ಯಗತ್ಯ. ಅಲ್ಲದೆ ಆಲ್ಕೋಹಾಲ್ ಸೇವನೆಯನ್ನು ಮಿತಿಗೊಳಿಸುವುದು ಕೂಡ ಬಹಳ ಮುಖ್ಯ.

ಒತ್ತಡವನ್ನು ನಿರ್ವಹಿಸಿ ಮತ್ತು ಮಾನಸಿಕ ಆರೋಗ್ಯಕ್ಕೆ ಆದ್ಯತೆ ನೀಡಿ:

ದೀರ್ಘಕಾಲದ ಒತ್ತಡವು ಹೃದಯ ರಕ್ತನಾಳದ ಸಮಸ್ಯೆಗಳಿಗೆ ಕಾರಣವಾಗಬಹುದು. ಆದ್ದರಿಂದ ಧ್ಯಾನ, ಆಳವಾದ ಉಸಿರಾಟದ ವ್ಯಾಯಾಮಗಳು, ಯೋಗ ಮುಂತಾದ ಒತ್ತಡ ನಿಯಂತ್ರಣ ತಂತ್ರಗಳನ್ನು ಅಭ್ಯಾಸ ಮಾಡಿ. ಮತ್ತು ಮಾನಸಿಕ ಆರೋಗ್ಯಕ್ಕೆ ಆದ್ಯತೆ ನೀಡಿ.

ನಿಯಮಿತ ಆರೋಗ್ಯ ತಪಾಸಣೆ:

ಒಂದು ನಿರ್ಧಿಷ್ಟ ವಯಸ್ಸಿನ ನಂತರ ಅಂದರೆ 30 ವರ್ಷಗಳ ಬಳಿಕ ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದು ಅಗತ್ಯವಾಗುತ್ತದೆ. ಇದು ಹೃದಯಾಘಾತ, ಪಾರ್ಶ್ವವಾಯು, ಅಧಿಕ ರಕ್ತದೊತ್ತಡ, ಕೊಲೆಸ್ಟ್ರಾಲ್ ಮತ್ತು ಅನೇಕ ಗಂಭೀರ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್