Pregnancy Care: ಗರ್ಭಿಣಿಯರು ತಮ್ಮ ಆರೋಗ್ಯ ಕಾಪಾಡಿಕೊಳ್ಳಲು ಈ ವಿಷಯಗಳನ್ನು ಪಾಲನೆ ಮಾಡಿ

ಸ್ತ್ರೀರೋಗ ತಜ್ಞೆ ಡಾ. ಸಲೋನಿ ಚಡ್ಡಾ ಹೇಳುವ ಪ್ರಕಾರ, ಬೇಸಿಗೆ ಕಾಲದಲ್ಲಿ ಗರ್ಭಿಣಿಯರು ಸಾಕಷ್ಟು ನೀರು ಕುಡಿಯಬೇಕು ಎಂದು ಹೇಳುತ್ತಾರೆ. ಅದರ ಜೊತೆಗೆ ತಾಜಾ ಹಣ್ಣಿನ ರಸವನ್ನು ಸಹ ಕುಡಿಯುವುದು ದೇಹಕ್ಕೆ ಪ್ರಯೋಜನಕಾರಿಯಾಗಿದೆ. ಮಹಿಳೆಯರು ಮೊಸರು ಮತ್ತು ಮಜ್ಜಿಗೆಯನ್ನು ಸಹ ಸೇವಿಸಬಹುದು. ಇದು ದೇಹವನ್ನು ತಂಪಾಗಿಡಲು ಸಹಾಯ ಮಾಡುತ್ತದೆ. ಗರ್ಭಿಣಿಯರು ಆದಷ್ಟು ಮಧ್ಯಾಹ್ನ ಹೊರಗೆ ಹೋಗುವುದನ್ನು ತಪ್ಪಿಸಬೇಕು. ಇದೆಲ್ಲದರ ಜೊತೆಗೆ ಗರ್ಭಿಣಿಯರು ನೆನಪಿನಲ್ಲಿಡಬೇಕಾದ ಕೆಲವು ವಿಷಯಗಳು ಇಲ್ಲಿವೆ.

Pregnancy Care: ಗರ್ಭಿಣಿಯರು ತಮ್ಮ ಆರೋಗ್ಯ ಕಾಪಾಡಿಕೊಳ್ಳಲು ಈ ವಿಷಯಗಳನ್ನು ಪಾಲನೆ ಮಾಡಿ
ಗರ್ಭಿಣಿImage Credit source: Healthline
Follow us
ಪ್ರೀತಿ ಭಟ್​, ಗುಣವಂತೆ
| Updated By: ನಯನಾ ರಾಜೀವ್

Updated on: May 13, 2024 | 10:57 AM

ದೇಶದ ಅನೇಕ ರಾಜ್ಯಗಳಲ್ಲಿ ಶಾಖದ ಪ್ರಮಾಣ ಏರಿಕೆಯಾಗುತ್ತಿದ್ದು ಜನರು ಇದರಿಂದ ಸಂಕಷ್ಟ ಅನುಭವಿಸುತ್ತಿದ್ದಾರೆ. ವಿಪರೀತ ಶಾಖದಿಂದಾಗಿ ಅನೇಕ ರೋಗಗಳ ಅಪಾಯವೂ ಹೆಚ್ಚಾಗುತ್ತಿದೆ. ಅಲ್ಲದೆ ಈ ಋತುವಿನಲ್ಲಿ ಶಾಖದ ಆಘಾತ ಮತ್ತು ನಿರ್ಜಲೀಕರಣದ ಪ್ರಕರಣಗಳು ಹೆಚ್ಚಾಗಿ ಬೆಳಕಿಗೆ ಬರುತ್ತಿದೆ. ಹಾಗಾಗಿ ಗರ್ಭಿಣಿ(Pregnant)ಯರು ಬೇಸಿಗೆಯಲ್ಲಿ ತಮ್ಮ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಏಕೆಂದರೆ ಹೆಚ್ಚಿನವರು ಆರಂಭಿಕ ತಿಂಗಳುಗಳಲ್ಲಿ ವಾಂತಿ, ತಲೆತಿರುಗುವುದು ಮುಂತಾದ ಸಮಸ್ಯೆಗಳಿಂದ ಬಳಲುತ್ತಿರುತ್ತಾರೆ. ಇದರಿಂದ ಸಹಜವಾಗಿ ದೇಹದಲ್ಲಿ ನೀರಿನ ಕೊರತೆ ಉಂಟಾಗುತ್ತದೆ. ಇದು ಅನೇಕ ಸಮಸ್ಯೆಗಳನ್ನು ಉಂಟುಮಾಡಬಹುದು. ಇವೆಲ್ಲದರ ಪರಿಣಾಮ ಮಹಿಳೆಯರ ಆರೋಗ್ಯ ಹದಗೆಡುವ ಅಪಾಯವಿದೆ. ಇದು ಮಗುವಿನ ಆರೋಗ್ಯದ ಮೇಲೆ ನೇರ ಪರಿಣಾಮ ಬೀರುತ್ತದೆ. ಹಾಗಾಗಿ ಈ ಋತುವಿನಲ್ಲಿ ಗರ್ಭಿಣಿಯರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕಾಗುತ್ತದೆ.

ಸ್ತ್ರೀರೋಗ ತಜ್ಞೆ ಡಾ. ಸಲೋನಿ ಚಡ್ಡಾ ಹೇಳುವ ಪ್ರಕಾರ, ಬೇಸಿಗೆ ಕಾಲದಲ್ಲಿ ಗರ್ಭಿಣಿಯರು ಸಾಕಷ್ಟು ನೀರು ಕುಡಿಯಬೇಕು ಎಂದು ಹೇಳುತ್ತಾರೆ. ಅದರ ಜೊತೆಗೆ ತಾಜಾ ಹಣ್ಣಿನ ರಸವನ್ನು ಸಹ ಕುಡಿಯುವುದು ದೇಹಕ್ಕೆ ಪ್ರಯೋಜನಕಾರಿಯಾಗಿದೆ. ಮಹಿಳೆಯರು ಮೊಸರು ಮತ್ತು ಮಜ್ಜಿಗೆಯನ್ನು ಸಹ ಸೇವಿಸಬಹುದು. ಇದು ದೇಹವನ್ನು ತಂಪಾಗಿಡಲು ಸಹಾಯ ಮಾಡುತ್ತದೆ. ಗರ್ಭಿಣಿಯರು ಆದಷ್ಟು ಮಧ್ಯಾಹ್ನ ಹೊರಗೆ ಹೋಗುವುದನ್ನು ತಪ್ಪಿಸಬೇಕು. ಇದೆಲ್ಲದರ ಜೊತೆಗೆ ಗರ್ಭಿಣಿಯರು ನೆನಪಿನಲ್ಲಿಡಬೇಕಾದ ಕೆಲವು ವಿಷಯಗಳು ಇಲ್ಲಿವೆ.

ಬಟ್ಟೆ ಬಗ್ಗೆ ಕಾಳಜಿ ವಹಿಸಿ ಗರ್ಭಾವಸ್ಥೆಯಲ್ಲಿ ಬಟ್ಟೆಗಳ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಆರಾಮದಾಯಕವಾದ ಬಟ್ಟೆಗಳನ್ನು ಧರಿಸಿ. ಈ ಋತುವಿನಲ್ಲಿ ಹತ್ತಿ ಮತ್ತು ಲಿನಿನ್ ಬಟ್ಟೆಗಳು ಉತ್ತಮವಾಗಿವೆ. ಬಿಳಿ, ಕಿತ್ತಳೆ, ನಿಂಬೆ, ನೀಲಿ ಅಥವಾ ತಿಳಿ ಬಣ್ಣದ ಬಟ್ಟೆಗಳನ್ನು ಧರಿಸಿ. ಇದರೊಂದಿಗೆ ಮಹಿಳೆಯರು ತಮ್ಮ ಆಹಾರದ ಬಗ್ಗೆಯೂ ಕಾಳಜಿ ವಹಿಸಬೇಕು.

ಮತ್ತಷ್ಟು ಓದಿ: Women Health: ಮುಟ್ಟಿನ ಸಮಯದಲ್ಲಿ ಮಹಿಳೆಯರು ಮಾಡುವ ತಪ್ಪುಗಳಿವು! 

ಈ ಆಹಾರಗಳನ್ನು ಸೇವನೆ ಮಾಡಿ ಓಟ್ ಮೀಲ್: ಇದು ಆರೋಗ್ಯಕರ ಮತ್ತು ಪೌಷ್ಟಿಕ ಆಹಾರವಾಗಿದ್ದು, ಗರ್ಭಿಣಿಯರಿಗೆ ತುಂಬಾ ಪ್ರಯೋಜನಕಾರಿಯಾಗಿದೆ. ಇದರಲ್ಲಿ ಉತ್ತಮ ಪ್ರಮಾಣದ ಫೈಬರ್, ಪ್ರೋಟೀನ್, ಖನಿಜಗಳಿದ್ದು ದೇಹಕ್ಕೆ ಶಕ್ತಿಯನ್ನು ನೀಡುವುದರ ಜೊತೆಗೆ ಆರೋಗ್ಯವನ್ನು ಸುಧಾರಿಸುತ್ತದೆ.

ಸಿಹಿ ಆಲೂಗಡ್ಡೆ: ಗರ್ಭಿಣಿಯರಿಗೆ ಆರೋಗ್ಯ ಕಾಪಾಡಿಕೊಳ್ಳಲು ಸಿಹಿ ಆಲೂಗಡ್ಡೆ ಸೇವನೆಯು ಅತ್ಯುತ್ತಮ ಆಯ್ಕೆಯಾಗಿದೆ. ಇದು ವಿಟಮಿನ್ ಎ, ಸಿ, ಮತ್ತು ಪೊಟ್ಯಾಸಿಯಮ್ ನಿಂದ ಸಮೃದ್ಧವಾಗಿದೆ.

ಹಸಿರು ತರಕಾರಿಗಳು: ಹಸಿರು ತರಕಾರಿಗಳು ಗರ್ಭಿಣಿಯರ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಅವು ಉತ್ತಮ ಪ್ರಮಾಣದ ಜೀವಸತ್ವಗಳು, ಖನಿಜಗಳು ಮತ್ತು ಫೈಬರ್ ಅನ್ನು ಒಳಗೊಂಡಿರುವುದರಿಂದ ತಾಯಿ ಮತ್ತು ಮಗುವಿನ ಆರೋಗ್ಯಕ್ಕೆ ಉತ್ತಮವಾಗಿದೆ.

ಈ ವಿಷಯಗಳನ್ನು ಮರೆಯಬೇಡಿ -ಗರ್ಭಾವಸ್ಥೆಯಲ್ಲಿ ಹೆಚ್ಚು ಸಮಯಗಳ ಕಾಲ ನಿಂತ ಜಾಗದಲ್ಲಿಯೇ ನಿಲ್ಲಬೇಡಿ. -ಆರಾಮದಾಯಕವಾಗಿರುವ ಚಪ್ಪಲಿಗಳನ್ನು ಧರಿಸಿ. -ವೈದ್ಯರ ಸಲಹೆಯಂತೆ ಪ್ರತಿದಿನ ನಡೆಯಿರಿ. ಇದು ನಿಮ್ಮ ದೇಹವನ್ನು ಆರೋಗ್ಯವಾಗಿರಿಸುತ್ತದೆ. -ಹೆಚ್ಚು ಶಾಖ ಇರುವಾಗ ಹೊರಗೆ ಹೋಗುವುದನ್ನು ತಪ್ಪಿಸಿ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ