Preventing stroke: 2050ರ ವೇಳೆಗೆ ಪಾರ್ಶ್ವವಾಯು ಪ್ರಕರಣಗಳು 10 ಮಿಲಿಯನ್ ಗೆ ಏರುವ ನಿರೀಕ್ಷೆ

ಪಾರ್ಶ್ವವಾಯು ಪ್ರಕರಣಗಳು 2020 ರಲ್ಲಿ 6.6 ಮಿಲಿಯನ್ ನಿಂದ 2050 ರ ವೇಳೆಗೆ 9.7 ಮಿಲಿಯನ್ ಗೆ ಏರುವ ನಿರೀಕ್ಷೆಯಿದೆ ಎಂದು ವರದಿ ಹೇಳಿದೆ. ಹಾಗಾಗಿ ಈ ಬಗ್ಗೆ ಜಾಗೃತಿ ವಹಿಸುವುದು ಅನಿವಾರ್ಯ. ಅದಲ್ಲದೆ ಅಧಿಕ ರಕ್ತದೊತ್ತಡ, ಮಧುಮೇಹ, ಧೂಮಪಾನ ಮತ್ತು ಜಡ ಜೀವನಶೈಲಿಯಂತಹ ಕೆಲವು ಅಪಾಯಕಾರಿ ಅಂಶಗಳು ಪಾರ್ಶ್ವವಾಯುವಿಗೆ ಕಾರಣವಾಗಬಹುದು ಎಂಬುದು ಗಮನದಲ್ಲಿರಬೇಕು. ಹಾಗಾದರೆ ಇದನ್ನು ತಡೆಗಟ್ಟಲು ಏನು ಮಾಡಬಹುದು? ಈ ಪ್ರಕರಣಗಳನ್ನು ಕಡಿಮೆ ಮಾಡಲು ಯಾವ ರೀತಿಯ ಕ್ರಮಗಳನ್ನು ಅನುಸರಿಸಬೇಕು ಎಂಬುದನ್ನು ತಿಳಿದುಕೊಳ್ಳಿ.

Preventing stroke: 2050ರ ವೇಳೆಗೆ ಪಾರ್ಶ್ವವಾಯು ಪ್ರಕರಣಗಳು 10 ಮಿಲಿಯನ್ ಗೆ ಏರುವ ನಿರೀಕ್ಷೆ
ಸಾಂದರ್ಭಿಕ ಚಿತ್ರ
Follow us
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​

Updated on:Nov 30, 2024 | 4:52 PM

ಇತ್ತೀಚಿನ ದಿನಗಳಲ್ಲಿ ಭಾರತ ಸೇರಿದಂತೆ ಅನೇಕ ದೇಶಗಳಲ್ಲಿ ಪಾರ್ಶ್ವವಾಯು ಪ್ರಕರಣಗಳು ದಿನದಿಂದ ದಿನಕ್ಕೆ ಎರಿಕೆಯಾಗುತ್ತಿದೆ. ಆಘಾತಕಾರಿ ವಿಷಯವೆಂದರೆ, ನಮ್ಮ ದೇಶದಲ್ಲಿ 2050 ರ ವೇಳೆಗೆ ಇದು 10 ಮಿಲಿಯನ್ ಸಾವುನೋವುಗಳಿಗೆ ಕಾರಣವಾಗಬಹುದು ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಸಹಯೋಗದೊಂದಿಗೆ ನಡೆಸಿದ ಲ್ಯಾನ್ಸೆಟ್ ವೈದ್ಯಕೀಯ ಜರ್ನಲ್ ಅಧ್ಯಯನ ಎಚ್ಚರಿಸಿದೆ. 2020 ರಲ್ಲಿ 6.6 ಮಿಲಿಯನ್ ನಿಂದ 2050 ರ ವೇಳೆಗೆ 9.7 ಮಿಲಿಯನ್ ಗೆ ಏರುವ ನಿರೀಕ್ಷೆಯಿದೆ ಎಂದು ವರದಿ ಹೇಳಿದೆ. ಹಾಗಾಗಿ ಈ ಬಗ್ಗೆ ಜಾಗೃತಿ ವಹಿಸುವುದು ಅನಿವಾರ್ಯ. ಅದಲ್ಲದೆ ಅಧಿಕ ರಕ್ತದೊತ್ತಡ, ಮಧುಮೇಹ, ಧೂಮಪಾನ ಮತ್ತು ಜಡ ಜೀವನಶೈಲಿಯಂತಹ ಕೆಲವು ಅಪಾಯಕಾರಿ ಅಂಶಗಳು ಪಾರ್ಶ್ವವಾಯುವಿಗೆ ಕಾರಣವಾಗಬಹುದು ಎಂಬುದು ಗಮನದಲ್ಲಿರಬೇಕು. ಹಾಗಾದರೆ ಇದನ್ನು ತಡೆಗಟ್ಟಲು ಏನು ಮಾಡಬಹುದು? ಈ ಪ್ರಕರಣಗಳನ್ನು ಕಡಿಮೆ ಮಾಡಲು ಯಾವ ರೀತಿಯ ಕ್ರಮಗಳನ್ನು ಅನುಸರಿಸಬೇಕು ಎಂಬುದನ್ನು ತಿಳಿದುಕೊಳ್ಳಿ.

ಡಾ. ನಿರ್ಮಲ್ ಸೂರ್ಯ ಅವರು ಹೇಳುವ ಪ್ರಕಾರ, “ಪಾರ್ಶ್ವವಾಯು ಎಂಬುದು ತುರ್ತು ಪರಿಸ್ಥಿತಿಯಾಗಿದ್ದು, ಇದು ಆರೋಗ್ಯದ ಮೇಲೆ ದೀರ್ಘಕಾಲೀನ ಪರಿಣಾಮಗಳನ್ನು ಬೀರುತ್ತದೆ. ಮೆದುಳಿನ ಭಾಗಗಳಿಗೆ ರಕ್ತದ ಹರಿವು ಅಡ್ಡಿಯಾದಾಗ ಅಥವಾ ನಿಂತಾಗ ಪಾರ್ಶ್ವವಾಯು ಸಾಮಾನ್ಯವಾಗಿ ಸಂಭವಿಸುತ್ತದೆ. ಇದು ಯಾವುದೇ ಸಮಯದಲ್ಲಿ ಯಾರಿಗಾದರೂ ಸಂಭವಿಸಬಹುದು. ಅಲ್ಲದೆ ಇದು ಪ್ರಮುಖ ಆರೋಗ್ಯ ಸಮಸ್ಯೆಗಳ ಜೊತೆಗೆ ತೀವ್ರ ಮೆದುಳಿನ ಹಾನಿಗೂ ಕಾರಣವಾಗಬಹುದು ಎಂದು ಅವರು ಹೇಳುತ್ತಾರೆ.

ಅದಲ್ಲದೆ, ಅಧಿಕ ರಕ್ತದೊತ್ತಡ, ಮಧುಮೇಹ, ಬೊಜ್ಜು, ಮದ್ಯಪಾನ, ಹೆಚ್ಚಿನ ಕೊಲೆಸ್ಟ್ರಾಲ್ ಮತ್ತು ಧೂಮಪಾನ ಅಥವಾ ತಂಬಾಕು ಜಗಿಯುವುದು ಸೇರಿದಂತೆ ಅನೇಕ ರೂಪದಲ್ಲಿ ನಿಕೋಟಿನ್ ಸೇವನೆ ಮಾಡುವವರು ಈ ಸಮಸ್ಯೆಗೆ ಹೆಚ್ಚಿನ ಅಪಾಯದಲ್ಲಿದ್ದಾರೆ. ಈ ಕಾರಣಕ್ಕಾಗಿಯೇ ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಹೆಚ್ಚಿನ ಕಾಳಜಿ ವಹಿಸುವುದು ಅಗತ್ಯ. ಜೊತೆಗೆ ಅನೇಕ ರೀತಿಯಲ್ಲಿ ಮುನ್ನೆಚ್ಚರಿಕೆಗಳನ್ನು ಅನುಸರಿಸುವುದು ಒಳ್ಳೆಯದು. ಈ ಸಮಸ್ಯೆಗೆ ಅಪಾಯಕಾರಿಯಾಗಬಹುದಾದ ಅಂಶಗಳ ಬಗ್ಗೆ ತಿಳಿದುಕೊಂಡು ಅದನ್ನು ಸರಿಯಾಗಿ ಅರ್ಥಮಾಡಿಕೊಂಡಾಗ, ಜೀವನಶೈಲಿಯಲ್ಲಿ ಬದಲಾವಣೆಗಳಾಗುತ್ತದೆ. ಇದರಿಂದ ಪಾರ್ಶ್ವವಾಯು ಅಪಾಯ ಕಡಿಮೆಯಾಗುತ್ತದೆ ಎಂದು ಡಾ. ನಿರ್ಮಲ್ ಸೂರ್ಯ ಹೇಳುತ್ತಾರೆ.

ಡಾ. ನಿರ್ಮಲ್ ಸೂರ್ಯ ಅವರು ಪಾರ್ಶ್ವವಾಯು ಅಪಾಯವನ್ನು ಕಡಿಮೆ ಮಾಡಲು ಜೀವನಶೈಲಿಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಿಕೊಳ್ಳಲು ಸಲಹೆ ನೀಡಿದ್ದಾರೆ. ಈ ಸರಳ ಕ್ರಮಗಳನ್ನು ಅನುಸರಿಸುವುದರಿಂದ ಆರೋಗ್ಯ ಚೆನ್ನಾಗಿರುತ್ತದೆ.

1. ರಕ್ತದೊತ್ತಡವನ್ನು ನಿಯಂತ್ರಿಸಿ

ಅಧಿಕ ರಕ್ತದೊತ್ತಡದಂತಹ ಸಮಸ್ಯೆ ಇರುವವರು ಜಾಗರೂಕರಾಗಿರಬೇಕು. ಏಕೆಂದರೆ ಇದು ಪಾರ್ಶ್ವವಾಯುವಿಗೆ ಕಾರಣವಾಗುವ ಅಪಾಯಕಾರಿ ಅಂಶಗಳಲ್ಲಿ ಒಂದಾಗಿದೆ. ಹಾಗಾಗಿ ನಿಯಮಿತವಾಗಿ ಮೇಲ್ವಿಚಾರಣೆ ಮಾಡುವ ಮೂಲಕ ನಿಮ್ಮ ರಕ್ತದೊತ್ತಡದ ಮಟ್ಟವನ್ನು ನಿಯಂತ್ರಣದಲ್ಲಿರಿಸಿಕೊಳ್ಳಿ. ಪ್ಯಾಕೇಜ್ ಮಾಡಿದ ಅಥವಾ ಜಂಕ್ ಫುಡ್ ಗಳಂತಹ ಸೋಡಿಯಂ ಅಧಿಕವಾಗಿರುವ ಆಹಾರಗಳನ್ನು ಕಟ್ಟುನಿಟ್ಟಾಗಿ ತಪ್ಪಿಸಿ.

2. ನಿಕೋಟಿನ್ ಸೇವನೆ ಮಾಡುವುದನ್ನು ತಪ್ಪಿಸಿ

ಧೂಮಪಾನದಂತಹ ಅನಾರೋಗ್ಯಕರ ಅಭ್ಯಾಸಗಳು ಪಾರ್ಶ್ವವಾಯುವಿನಂತಹ ಸಮಸ್ಯೆ ಮೇಲೆ ಗಮನಾರ್ಹವಾಗಿ ಪ್ರಭಾವ ಬೀರುತ್ತವೆ. ಇದು ನಿಮ್ಮ ರಕ್ತನಾಳಗಳನ್ನು ಹಾನಿಗೊಳಿಸುತ್ತದೆ, ಇದರ ಪರಿಣಾಮವಾಗಿ ಅಪಧಮನಿಗಳಲ್ಲಿ ಪ್ಲೇಕ್ ಅತಿಯಾಗಿ ಸಂಗ್ರಹವಾಗುತ್ತದೆ. ಹಾಗಾಗಿ ಧೂಮಪಾನವನ್ನು ತ್ಯಜಿಸುವುದರಿಂದ ಪಾರ್ಶ್ವವಾಯು ಅಪಾಯವನ್ನು ಕಡಿಮೆ ಮಾಡಬಹುದು.

3. ಮಧುಮೇಹವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಿ

ಮಧುಮೇಹದಂತಹ ಆರೋಗ್ಯ ಪರಿಸ್ಥಿತಿಗಳು ಪಾರ್ಶ್ವವಾಯು ಸೇರಿದಂತೆ ಹಲವಾರು ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ನೀವು ಮಧುಮೇಹದಿಂದ ಬಳಲುತ್ತಿದ್ದರೆ, ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡುವುದು ಅತ್ಯಗತ್ಯ. ಅದಲ್ಲದೆ ವೈದ್ಯರು ಸೂಚಿಸಿದ ಔಷಧಿಗಳನ್ನು ನೀವು ತಪ್ಪದೆ ತೆಗೆದುಕೊಳ್ಳಬೇಕು. ಇದೆಲ್ಲದರ ಜೊತೆಗೆ ಸಮತೋಲಿತ ಆಹಾರವನ್ನು ಸೇವಿಸುವುದು ದೈಹಿಕವಾಗಿ ಮತ್ತು ಮಾನಸಿಕವಾಗಿ ನಿಮ್ಮನ್ನು ಸಕ್ರಿಯವಾಗಿಡುತ್ತದೆ. ಈ ರೀತಿಯಲ್ಲಿ ಜೀವನಶೈಲಿಯಲ್ಲಿ ಮಾಡಿಕೊಂಡಂತಹ ಮಾರ್ಪಾಡುಗಳಿಂದ ಮಧುಮೇಹವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬಹುದು.

ಇದನ್ನೂ ಓದಿ: ಚಳಿಗಾಲದಲ್ಲಿ ಹೃದಯಾಘಾತ ಹೆಚ್ಚಾಗಿ ಸಂಭವಿಸಲು ಕಾರಣವೇನು?

4. ಆರೋಗ್ಯಕರ ಆಹಾರವನ್ನು ಸೇವಿಸಿ

ಸಾಕಷ್ಟು ಪೋಷಕಾಂಶಗಳನ್ನು ಹೊಂದಿರುವ ಆರೋಗ್ಯಕರ ಮತ್ತು ಸಮತೋಲಿತ ಆಹಾರವನ್ನು ಸೇವನೆ ಮಾಡುವುದರಿಂದ ಪಾರ್ಶ್ವವಾಯುವಿನ ಅಪಾಯವನ್ನು ತಡೆಗಟ್ಟಬಹುದು. ಹಾಗಾಗಿ ಆಹಾರದಲ್ಲಿ ಸಾಕಷ್ಟು ಪ್ರಮಾಣದ ಹಣ್ಣು, ತರಕಾರಿ, ಧಾನ್ಯ, ಬೇಳೆಕಾಳುಗಳು, ದ್ವಿದಳ ಧಾನ್ಯಗಳು, ಬೀಜ ಮತ್ತು ತೆಳ್ಳಗಿನ ಪ್ರೋಟೀನ್ ಗಳನ್ನು ಸೇವನೆ ಮಾಡುವುದನ್ನು ಮರೆಯಬೇಡಿ. ಹೆಚ್ಚಿನ ಪ್ರಮಾಣದ ಸ್ಯಾಚುರೇಟೆಡ್ ಕೊಬ್ಬುಗಳು, ಟ್ರಾನ್ಸ್ ಕೊಬ್ಬುಗಳು ಮತ್ತು ಕೊಲೆಸ್ಟ್ರಾಲ್ ಹೊಂದಿರುವ ಆಹಾರವನ್ನು ಸೇವಿಸುವುದನ್ನು ತಪ್ಪಿಸಿ. ಇಲ್ಲವಾದಲ್ಲಿ ಈ ಎಲ್ಲಾ ಪದಾರ್ಥಗಳು ಒಟ್ಟಾಗಿ ಹೃದಯರಕ್ತನಾಳದ ಕಾಯಿಲೆಗಳು ಮತ್ತು ಪಾರ್ಶ್ವವಾಯುವಿನ ಅಪಾಯವನ್ನು ಹೆಚ್ಚಿಸುತ್ತವೆ.

5. ನಿಯಮಿತವಾಗಿ ವ್ಯಾಯಾಮ ಮಾಡಿ

ಪಾರ್ಶ್ವವಾಯುವಿನ ಅಪಾಯವನ್ನು ಕಡಿಮೆ ಮಾಡುವುದರ ಜೊತೆಗೆ ನಿಮ್ಮ ಒಟ್ಟಾರೆ ಆರೋಗ್ಯವನ್ನು ಕಾಪಾಡಿಕೊಳ್ಳಲು ದೈಹಿಕವಾಗಿ ಸಕ್ರಿಯವಾಗಿರುವುದು ಅತ್ಯಗತ್ಯ. ಒಬ್ಬ ವ್ಯಕ್ತಿ ಪ್ರತಿದಿನ ಕನಿಷ್ಠ 45 ನಿಮಿಷಗಳ ಕಾಲ ವ್ಯಾಯಾಮ ಮಾಡಬೇಕು. ಇದರಲ್ಲಿ ವಾಕಿಂಗ್, ಜಿಮ್, ಕಾರ್ಡಿಯೋ, ಯೋಗ, ಧ್ಯಾನ, ಸೈಕ್ಲಿಂಗ್, ಜಾಗಿಂಗ್ ಮತ್ತು ಈಜು ಹೀಗೆ ಯಾವುದಾದರೂ ಒಂದು ಚಟುವಟಿಕೆಯಲ್ಲಿ ಭಾಗಿಯಾಗಿ. ಈ ರೀತಿ ಆರೋಗ್ಯಕರ ಸಲಹೆಗಳನ್ನು ಅನುಸರಿಸುವ ಮೂಲಕ ಆರೋಗ್ಯವಾಗಿರಿ.

ಸೂಚನೆ: ಈ ಲೇಖನವು ಮಾಹಿತಿಗಾಗಿ ಮಾತ್ರ. ಹೆಚ್ಚಿನ ವೈದ್ಯಕೀಯ ಸಲಹೆಗೆ ವೈದ್ಯರ ಸಲಹೆಯನ್ನು ಪಡೆಯಿರಿ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 4:49 pm, Sat, 30 November 24

ಈ ರಾಶಿಯವರ ಜೀವನದಲ್ಲಿ ಸಂಪತ್ತು ಮತ್ತು ಖ್ಯಾತಿ ಹೆಚ್ಚಾಗುತ್ತದೆ
ಈ ರಾಶಿಯವರ ಜೀವನದಲ್ಲಿ ಸಂಪತ್ತು ಮತ್ತು ಖ್ಯಾತಿ ಹೆಚ್ಚಾಗುತ್ತದೆ
ಯುಐ, ಮ್ಯಾಕ್ಸ್ ಒಟ್ಟಿಗೆ ರಿಲೀಸ್ ಆಗುತ್ತಿರುವ ಬಗ್ಗೆ ಉಪೇಂದ್ರ ಪ್ರತಿಕ್ರಿಯೆ
ಯುಐ, ಮ್ಯಾಕ್ಸ್ ಒಟ್ಟಿಗೆ ರಿಲೀಸ್ ಆಗುತ್ತಿರುವ ಬಗ್ಗೆ ಉಪೇಂದ್ರ ಪ್ರತಿಕ್ರಿಯೆ
ಏಕದಿನ ಸರಣಿಗಾಗಿ ಕಾಂಗರೂಗಳ ನಾಡಿಗೆ ಕಾಲಿಟ್ಟ ಟೀಂ ಇಂಡಿಯಾ
ಏಕದಿನ ಸರಣಿಗಾಗಿ ಕಾಂಗರೂಗಳ ನಾಡಿಗೆ ಕಾಲಿಟ್ಟ ಟೀಂ ಇಂಡಿಯಾ
ಅಣ್ಣ 10 ವರ್ಷಗಳಿಂದ ಕಾಯುತ್ತಿದ್ದೇನೆ ಎಂದ ಫ್ಯಾನ್​ಗೆ ನಿರಾಸೆ ಮಾಡದ ರೋಹಿತ್
ಅಣ್ಣ 10 ವರ್ಷಗಳಿಂದ ಕಾಯುತ್ತಿದ್ದೇನೆ ಎಂದ ಫ್ಯಾನ್​ಗೆ ನಿರಾಸೆ ಮಾಡದ ರೋಹಿತ್
ಡಿಪೋದಲ್ಲಿ ಯುವಕನಿಗೆ ಬಸ್ ಡಿಕ್ಕಿ; ಕೂದಲೆಳೆ ಅಂತರದಲ್ಲಿ ಬಚಾವ್
ಡಿಪೋದಲ್ಲಿ ಯುವಕನಿಗೆ ಬಸ್ ಡಿಕ್ಕಿ; ಕೂದಲೆಳೆ ಅಂತರದಲ್ಲಿ ಬಚಾವ್
ರಾಜಕಾರಣಿಗಳ ನಡುವೆ ಇದ್ದರೊಬ್ಬ ರೀಯಲ್ ಕ್ರಿಕೆಟರ್-ಪ್ರಕಾಶ್ ರಾಠೋಡ್!
ರಾಜಕಾರಣಿಗಳ ನಡುವೆ ಇದ್ದರೊಬ್ಬ ರೀಯಲ್ ಕ್ರಿಕೆಟರ್-ಪ್ರಕಾಶ್ ರಾಠೋಡ್!
ಅಧಿಕಾರಿಗಳಿಗೂ ತಟ್ಟಿದ ಫೆಂಗಲ್ ಚಂಡಮಾರುತ ಎಫೆಕ್ಟ್: ಒಳ ನುಗ್ಗಿದ ಮಳೆ ನೀರು
ಅಧಿಕಾರಿಗಳಿಗೂ ತಟ್ಟಿದ ಫೆಂಗಲ್ ಚಂಡಮಾರುತ ಎಫೆಕ್ಟ್: ಒಳ ನುಗ್ಗಿದ ಮಳೆ ನೀರು
ಹೃದ್ರೋಗಿ ಪತಿ, ಮಕ್ಕಳೊಂದಿಗೆ 40 ವರ್ಷಗಳಿಂದ ಬಾಡಿಗೆ ಮನೆಯಲ್ಲಿರುವ ಮಹಿಳೆ
ಹೃದ್ರೋಗಿ ಪತಿ, ಮಕ್ಕಳೊಂದಿಗೆ 40 ವರ್ಷಗಳಿಂದ ಬಾಡಿಗೆ ಮನೆಯಲ್ಲಿರುವ ಮಹಿಳೆ
ನೀರು ಸೇದುವಾಗ ಏಕಾಏಕಿ ಬಾವಿಗೆ ಬಿದ್ದ 94ರ ವೃದ್ಧೆ: ಮುಂದೇನಾಯ್ತು?
ನೀರು ಸೇದುವಾಗ ಏಕಾಏಕಿ ಬಾವಿಗೆ ಬಿದ್ದ 94ರ ವೃದ್ಧೆ: ಮುಂದೇನಾಯ್ತು?
ಒಂದು ವಾರದೊಳಗೆ ಎಲ್ಲವೂ ಸುಖಾಂತ್ಯವಾಗುತ್ತದೆ ಅಂತ ಅಶೋಕ ಹೇಳಿದ್ಯಾಕೆ?
ಒಂದು ವಾರದೊಳಗೆ ಎಲ್ಲವೂ ಸುಖಾಂತ್ಯವಾಗುತ್ತದೆ ಅಂತ ಅಶೋಕ ಹೇಳಿದ್ಯಾಕೆ?