ಗರ್ಭಿಣಿಯರೇ… ನೀವು ಚಳಿಗಾಲದಲ್ಲಿ ಮಾಡುವ ಈ ಒಂದು ತಪ್ಪು ಮಗುವಿನ ತೂಕದ ಮೇಲೆ ಪರಿಣಾಮ ಬೀರುತ್ತೆ
ಚಳಿಗಾಲದಲ್ಲಿ ಗರ್ಭಿಣಿಯರು ತಮ್ಮ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸುವುದು ಅನಿವಾರ್ಯ. ಅದರಲ್ಲಿಯೂ ಇತ್ತೀಚಿನ ಸಂಶೋಧನೆಯೊಂದು ಕಡಿಮೆ ತಾಪಮಾನವು ನವಜಾತ ಶಿಶುಗಳ ಜನನ ತೂಕದ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಿಕೊಂಡಿದೆ. ಹೌದು, ಗರ್ಭಾವಸ್ಥೆಯಲ್ಲಿ ಪರಿಸರದ ಉಷ್ಣತೆಯು ಮಗುವಿನ ದೈಹಿಕ ಬೆಳವಣಿಗೆಗೆ ಸಂಬಂಧಿಸಿದ ಪ್ರಮುಖ ಅಂಶವಾಗಬಹುದು ಎಂದು ಸಂಶೋಧಕರು ಹೇಳುತ್ತಿದ್ದು ಈ ಬಗೆಗಿನ ಸಂಪೂರ್ಣ ಮಾಹಿತಿ ಸ್ಟೋರಿಯಲ್ಲಿದೆ.

ಚಳಿ (Cold) ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇಂತಹ ವಾತಾವರಣದಲ್ಲಿ, ಗರ್ಭಿಣಿಯರು (Pregnancy) ತಮ್ಮ ಆರೋಗ್ಯದ ಬಗ್ಗೆ ಹೆಚ್ಚು ಜಾಗರೂಕರಾಗಿರಬೇಕು. ಇತ್ತೀಚೆಗೆ ಪ್ರಕಟವಾದ ಅಂತರಾಷ್ಟ್ರೀಯ ಸಂಶೋಧನೆಯೊಂದು ಗರ್ಭಾವಸ್ಥೆಯಲ್ಲಿ ಶೀತಕ್ಕೆ ಅತಿಯಾಗಿ ಒಡ್ಡಿಕೊಳ್ಳುವುದರಿಂದ ಶಿಶುವಿನ ತೂಕದ ಮೇಲೆ ಪರಿಣಾಮ ಬೀರುತ್ತದೆ ಎಂದು ಬಹಿರಂಗಪಡಿಸಿದೆ. ಈ ಸಂಶೋಧನೆಯು ಪಬ್‌ಮೆಡ್‌ನಲ್ಲಿ ಪ್ರಕಟವಾದ ವೈಜ್ಞಾನಿಕ ಅಧ್ಯಯನ ಮತ್ತು ಇತರ ಜಾಗತಿಕ ಆರೋಗ್ಯ ಸಂಸ್ಥೆಗಳ ಡೇಟಾವನ್ನು ಆಧರಿಸಿದ್ದು ಗರ್ಭಿಣಿಯರು ಈ ಕುರಿತು ತಿಳಿಯುವುದು ಅನಿವಾರ್ಯವಾಗಿದೆ. ಹೌದು, ಗರ್ಭಾವಸ್ಥೆಯಲ್ಲಿ ಪರಿಸರದ ಉಷ್ಣತೆಯು ಮಗುವಿನ ದೈಹಿಕ ಬೆಳವಣಿಗೆಗೆ ಸಂಬಂಧಿಸಿದ ಪ್ರಮುಖ ಅಂಶವಾಗಬಹುದು ಎಂದು ಸಂಶೋಧಕರು ಹೇಳುತ್ತಿದ್ದು ಈ ಬಗೆಗಿನ ಸಂಪೂರ್ಣ ಮಾಹಿತಿ ಇಲ್ಲಿದೆ.
ಚಳಿಯ ವಾತಾವರಣ ಮಗುವಿನ ತೂಕದ ಮೇಲೆ ಹೇಗೆ ಪರಿಣಾಮ ಬೀರುತ್ತದೆ?
ಸಂಶೋಧನೆಯ ಪ್ರಕಾರ, ಗರ್ಭಾವಸ್ಥೆಯಲ್ಲಿ ತುಂಬಾ ಚಳಿಯಿದ್ದರೆ, ಕೆಲವು ಸಂದರ್ಭಗಳಲ್ಲಿ, ಜನನದ ಸಮಯದಲ್ಲಿ ಮಗುವಿನ ತೂಕವು ಸಾಮಾನ್ಯಕ್ಕಿಂತ ಕಡಿಮೆಯಿರಬಹುದು. ತಾಪಮಾನದಲ್ಲಿನ ನಿರಂತರ ಕುಸಿತ ಗರ್ಭದಲ್ಲಿರುವ ಮಗುವಿನ ಬೆಳವಣಿಗೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ಅಧ್ಯಯನಗಳಿಂದ ತಿಳಿದುಬಂದಿದೆ. ಅದರಲ್ಲಿಯೂ ಎರಡನೇ ಮತ್ತು ಮೂರನೇ ತ್ರೈಮಾಸಿಕಗಳಲ್ಲಿ ಹವಾಮಾನದ ಪಾತ್ರ ಬಹಳ ಮುಖ್ಯವಾಗಿರುತ್ತದೆ. ಇದು ಎಲ್ಲರಿಗೂ ಒಂದೇ ರೀತಿಯಾಗಿರಬೇಕೆಂದಿಲ್ಲ. ಆದರೆ ಪರಿಸರ, ಆರೋಗ್ಯ ಸ್ಥಿತಿಗಳಂತಹ ಅಂಶಗಳನ್ನು ಅವಲಂಬಿಸಿರುತ್ತದೆ ಎಂದು ಸಂಶೋಧಕರು ಸ್ಪಷ್ಟಪಡಿಸಿದ್ದಾರೆ. ದತ್ತಾಂಶದ ಆಧಾರದ ಮೇಲೆ, ಚಳಿ ಹೆಚ್ಚಾಗಿರುವ ಪ್ರದೇಶಗಳಲ್ಲಿ ಜನಿಸಿದ ಕೆಲವು ಶಿಶುಗಳು ಸಾಮಾನ್ಯಕ್ಕಿಂತ ಕಡಿಮೆ ತೂಕವನ್ನು ಹೊಂದಿರುವುದು ಕಂಡುಬಂದಿದೆ.
ಮಗುವಿನಲ್ಲಿ ಯಾವ ರೀತಿಯ ಸಮಸ್ಯೆಗಳು ಕಂಡುಬರಬಹುದು?
ಆರ್‌ಎಂಎಲ್ ಆಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀರೋಗ ವಿಭಾಗದ ಡಾ. ಸಲೋನಿ ಚಡ್ಡಾ ಅವರ ಪ್ರಕಾರ, ಕಡಿಮೆ ಜನನ ತೂಕದೊಂದಿಗೆ ಜನಿಸಿದ ಶಿಶುಗಳು ಆರಂಭದಲ್ಲಿ ಕೆಲವು ಆರೋಗ್ಯ ಸಂಬಂಧಿತ ಸಮಸ್ಯೆಗಳನ್ನು ಎದುರಿಸಬಹುದು. ಸಂಶೋಧನೆಯ ಪ್ರಕಾರ, ಅಂತಹ ಮಕ್ಕಳು ಸೋಂಕುಗಳಿಗೆ ಹೆಚ್ಚು ಒಳಗಾಗುತ್ತಾರೆ ಮತ್ತು ಅವುಗಳಿಗೆ ವಿಶೇಷ ಆರೈಕೆಯ ಅಗತ್ಯವಿರುತ್ತದೆ. ಅಷ್ಟೇ ಅಲ್ಲ, ಕೆಲವರಲ್ಲಿ ಉಸಿರಾಟದ ತೊಂದರೆ, ದೌರ್ಬಲ್ಯ ಅಥವಾ ದೇಹದ ಉಷ್ಣತೆಯನ್ನು ನಿಯಂತ್ರಿಸುವಲ್ಲಿ ತೊಂದರೆ ಉಂಟಾಗಬಹುದು. ಕೆಲವು ಸಂದರ್ಭಗಳಲ್ಲಿ, ನಂತರದ ದಿನಗಳಲ್ಲಿ ಬೆಳವಣಿಗೆಯ ಸಮಸ್ಯೆ ಕೂಡ ಕಂಡುಬರಬಹುದು. ಆದರೆ ಸಮಯೋಚಿತ ಆರೈಕೆ ಇಂತಹ ಅಪಾಯಗಳನ್ನು ಕಡಿಮೆ ಮಾಡಬಹುದು ಎಂದು ಹೇಳಿದ್ದಾರೆ.
ಇದನ್ನೂ ಓದಿ: ನೀವು ಗರ್ಭಿಣಿಯಾಗಿದ್ದು ವಾಯುಮಾಲಿನ್ಯದಿಂದಾಗುವ ಸಮಸ್ಯೆಗಳಿಂದ ಮಗುವನ್ನು ಕಾಪಾಡಲು ಈ ಸಲಹೆಗಳನ್ನು ಪಾಲಿಸಿ
ಯಾವ ರೀತಿ ಕಾಳಜಿ ವಹಿಸಬೇಕು?
- ಚಳಿಗಾಲದಲ್ಲಿ ನಿಮ್ಮ ದೇಹವನ್ನು ಯಾವಾಗಲೂ ಬೆಚ್ಚಗಿಟ್ಟುಕೊಳ್ಳಿ.
- ಸಮತೋಲಿತ ಮತ್ತು ಪೌಷ್ಟಿಕ ಆಹಾರವನ್ನು ಸೇವಿಸಿ.
- ನಿಯಮಿತವಾಗಿ ವೈದ್ಯರಿಂದ ತಪಾಸಣೆ ಮಾಡಿಸಿಕೊಳ್ಳಿ.
- ಸಾಕಷ್ಟು ವಿಶ್ರಾಂತಿ ಮತ್ತು ನಿದ್ರೆ ಮಾಡುವುದನ್ನು ಮರೆಯಬೇಡಿ.
- ಶೀತ, ಜ್ವರ ಅಥವಾ ಯಾವುದೇ ಇತರ ಅಸ್ವಸ್ಥತೆಯನ್ನು ನಿರ್ಲಕ್ಷಿಸಬೇಡಿ.
ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




