Raisin Health Benefits: ಒಂದು ತಿಂಗಳು ನೆನೆಸಿದ ಒಣದ್ರಾಕ್ಷಿ ತಿನ್ನಿ, ಆರೋಗ್ಯದಲ್ಲಿ ಈ ಬದಲಾವಣೆ ಖಂಡಿತ

ಒಣದ್ರಾಕ್ಷಿಯಲ್ಲಿ ವಿಟಮಿನ್ ಬಿ, ಕಬ್ಬಿಣದ ಅಂಶ, ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿವೆ. ಇದು ನೈಸರ್ಗಿಕವಾಗಿ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ತಜ್ಞರ ಪ್ರಕಾರ, ನೆನೆಸಿದ ಒಣದ್ರಾಕ್ಷಿಯನ್ನು ಒಂದು ತಿಂಗಳ ಕಾಲ ತಿನ್ನುವುದರಿಂದ ಅನೇಕ ಪ್ರಯೋಜನಗಳನ್ನು ಪಡೆಯಬಹುದು. ಹಾಗಾದರೆ ಇದರಿಂದ ಸಿಗುವ ಪ್ರಯೋಜನಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ.

Raisin Health Benefits: ಒಂದು ತಿಂಗಳು ನೆನೆಸಿದ ಒಣದ್ರಾಕ್ಷಿ ತಿನ್ನಿ, ಆರೋಗ್ಯದಲ್ಲಿ ಈ ಬದಲಾವಣೆ ಖಂಡಿತ
ನೆನೆಸಿದ ಒಣದ್ರಾಕ್ಷಿ
Edited By:

Updated on: Jun 20, 2024 | 9:07 AM

ಸುಡುವ ಬೇಸಿಗೆಯಾಗಲಿ ಅಥವಾ ಕೊರೆಯುವ ಚಳಿಯಾಗಿರಲಿ, ಹೀಗೆ ಯಾವುದೇ ರೀತಿಯ ಹವಾಮಾನ ಇದ್ದರೂ ಕೂಡ ದೇಹವನ್ನು ಆರೋಗ್ಯಕರವಾಗಿ ಮತ್ತು ಸದೃಢವಾಗಿಡುವುದು ಒಣ ಹಣ್ಣು ಅಥವಾ ಡ್ರೈ ಫ್ರೂಟ್ಸ್ ಗಳು. ಇದು ಆರೋಗ್ಯಕ್ಕೆ ಉತ್ತಮ ಆಯ್ಕೆ ಎಂದರೆ ತಪ್ಪಾಗಲಾರದು. ಒಣ ಹಣ್ಣುಗಳಲ್ಲಿ ಒಣದ್ರಾಕ್ಷಿ ವಿಶೇಷವಾಗಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅದಕ್ಕಾಗಿಯೇ ತಜ್ಞರು ಕೂಡ ಪ್ರತಿದಿನ ಒಣದ್ರಾಕ್ಷಿ ಸೇವನೆ ಮಾಡಲು ಹೇಳುತ್ತಾರೆ. ಅದರಲ್ಲಿಯೂ ನೆನೆಸಿದ ಒಣದ್ರಾಕ್ಷಿಯನ್ನು ತಿನ್ನುವುದು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ.

ಒಣದ್ರಾಕ್ಷಿಯಲ್ಲಿ ವಿಟಮಿನ್ ಬಿ, ಕಬ್ಬಿಣದ ಅಂಶ, ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿವೆ. ಇದು ನೈಸರ್ಗಿಕವಾಗಿ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ತಜ್ಞರ ಪ್ರಕಾರ, ನೆನೆಸಿದ ಒಣದ್ರಾಕ್ಷಿಯನ್ನು ಒಂದು ತಿಂಗಳ ಕಾಲ ತಿನ್ನುವುದರಿಂದ ಅನೇಕ ಪ್ರಯೋಜನಗಳನ್ನು ಪಡೆಯಬಹುದು. ಹಾಗಾದರೆ ಇದರಿಂದ ಸಿಗುವ ಪ್ರಯೋಜನಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ.

ರಕ್ತಹೀನತೆ ಅನೇಕ ಮಹಿಳೆಯರಿಗೆ ಸಾಮಾನ್ಯ ಸಮಸ್ಯೆಯಾಗಿದೆ. ಪ್ರತಿದಿನ ಬೆಳಿಗ್ಗೆ ನೀರಿನಲ್ಲಿ ನೆನೆಸಿದ ಒಣದ್ರಾಕ್ಷಿಯನ್ನು ತಿನ್ನುವುದರಿಂದ ಈ ಸಮಸ್ಯೆಯಿಂದ ಪರಿಹಾರ ಕಂಡುಕೊಳ್ಳಬಹುದು. ಒಣದ್ರಾಕ್ಷಿ ಹಿಮೋಗ್ಲೋಬಿನ್ ಹೆಚ್ಚಾಗಲು ಸಹಾಯ ಮಾಡುತ್ತದೆ. ಇದರಲ್ಲಿ ಫೈಬರ್ ಸಮೃದ್ಧವಾಗಿದ್ದು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ಆ ಮೂಲಕ ಮಲಬದ್ಧತೆಯ ಸಮಸ್ಯೆಯನ್ನು ನಿವಾರಿಸುತ್ತದೆ.

ಒಣದ್ರಾಕ್ಷಿಯಲ್ಲಿ ಕ್ಯಾಲ್ಸಿಯಂ ಸಮೃದ್ಧವಾಗಿದೆ. ಇದು ಮೂಳೆಗಳನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಮೂಳೆ ಸಮಸ್ಯೆ ಇದ್ದಲ್ಲಿ ನೀವು ಪ್ರತಿದಿನ ನೆನೆಸಿದ ಒಣದ್ರಾಕ್ಷಿಯನ್ನು ತಿನ್ನಬೇಕು.

ಇದನ್ನೂ ಓದಿ: ಮಕ್ಕಳ ಕೆಮ್ಮು ಕಡಿಮೆ ಆಗ್ತಿಲ್ವಾ? ಈ ಮನೆಮದ್ದು ಟ್ರೈ ಮಾಡಿ

ಒಣದ್ರಾಕ್ಷಿಯಲ್ಲಿ ಉತ್ಕರ್ಷಣ ನಿರೋಧಕ ಗುಣಗಳಿವೆ. ಇದರಲ್ಲಿ ಪೊಟ್ಯಾಸಿಯಮ್ ಕೂಡ ಸಮೃದ್ಧವಾಗಿದೆ. ರಕ್ತದೊತ್ತಡವನ್ನು ನಿಯಂತ್ರಿಸುವುದರಿಂದ ಹಿಡಿದು ದೇಹದಲ್ಲಿನ ವಿವಿಧ ಸಮಸ್ಯೆಗಳ ವಿರುದ್ಧ ಹೋರಾಡುವವರೆಗೆ ಇದು ತುಂಬಾ ಪ್ರಯೋಜನಕಾರಿಯಾಗಿದೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
Follow Us