AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶುಗರ್ ಇದ್ಯಾ? ಹಾಗಿದ್ರೆ ಈ ಸೊಪ್ಪನ್ನು ತಪ್ಪದೇ ಸೇವಿಸಿ

ಜನರು ತಮ್ಮ ಆರೋಗ್ಯ ಕಾಪಾಡಿಕೊಳ್ಳಲು ನಿಯಮಿತವಾಗಿ ಸೊಪ್ಪು, ತರಕಾರಿಗಳ ಸೇವನೆ ಮಾಡುತ್ತಾರೆ. ಈ ರೀತಿಯ ಆಹಾರಕ್ರಮ ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿ. ಅದರಲ್ಲಿಯೂ ಸೊಪ್ಪುಗಳಲ್ಲಿ ಪೋಷಕಾಂಶಗಳು ಹೇರಳವಾಗಿರುತ್ತದೆ. ಈ ರೀತಿ ಆರೋಗ್ಯಕ್ಕೆ ಪೂರಕವಾಗಿರುವ ಸೊಪ್ಪು, ತರಕಾರಿಗಳಲ್ಲಿ ಕೆಂಪು ಹರಿವೆಯೂ ಒಂದು. ಅನೇಕರಿಗೆ ಈ ಸೊಪ್ಪಿನ ಪ್ರಯೋಜನಗಳ ಬಗ್ಗೆ ತಿಳಿದಿಲ್ಲ. ಆದರೆ ಈ ಸ್ಟೋರಿ ಕೆಂಪು ಹರಿವೆಯ ಸೇವನೆಯಿಂದ ಸಿಗುವ ಪ್ರಯೋಜನಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಒದಗಿಸುತ್ತದೆ.

ಶುಗರ್ ಇದ್ಯಾ? ಹಾಗಿದ್ರೆ ಈ ಸೊಪ್ಪನ್ನು ತಪ್ಪದೇ ಸೇವಿಸಿ
ಕೆಂಪು ಹರಿವೆ
ಪ್ರೀತಿ ಭಟ್​, ಗುಣವಂತೆ
|

Updated on: Jun 11, 2025 | 4:27 PM

Share

ಸೊಪ್ಪು, ತರಕಾರಿಗಳ ಸೇವನೆ ಆರೋಗ್ಯಕ್ಕೆ ಬಹಳ ಒಳ್ಳೆಯದು ಎಂಬುದು ನಿಮಗೆ ತಿಳಿದಿರುತ್ತೆ. ಆದರೆ ಸೊಪ್ಪು ಅಥವಾ ತರಕಾರಿ (Greens, vegetables) ಯಾವ ರೀತಿಯ ಆರೋಗ್ಯ (Health) ಸಮಸ್ಯೆಗೆ ಒಳ್ಳೆಯದು? ಯಾವ ಸೊಪ್ಪನ್ನು ಯಾರು ತಿಂದರೆ ಒಳ್ಳೆಯದು? ಅದರಿಂದ ನಮ್ಮ ದೇಹಕ್ಕೆ ಸಿಗುವ ಪ್ರಯೋಜನ ಎಂತದ್ದು ಎಂಬುದರ ಬಗ್ಗೆ ತಿಳಿದಿರಬೇಕಾಗುತ್ತದೆ. ಈ ರೀತಿ ಆರೋಗ್ಯಕ್ಕೆ ಪೂರಕವಾಗಿರುವ ಸೊಪ್ಪು, ತರಕಾರಿಗಳಲ್ಲಿ ಕೆಂಪು ಹರಿವೆಯೂ (Red Amaranth) ಒಂದು. ಆದರೆ ಇದರ ಬಗ್ಗೆ ಹೆಚ್ಚಿನವರಿಗೆ ತಿಳಿದಿಲ್ಲ ಎಂಬುದೇ ಬೇಸರದ ಸಂಗತಿ. ಇನ್ನು ಮುಂದೆ, ನೀವು ಇದನ್ನು ಎಲ್ಲೇ ನೋಡಿದರೂ ಮನೆಗೆ ತರುವುದನ್ನು ಮರೆಯಬೇಡಿ. ಏಕೆಂದರೆ ಇದನ್ನು ಸೇವನೆ ಮಾಡುವುದರಿಂದ ಸಾಕಷ್ಟು ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಹಾಗಾದರೆ ಈ ಸೊಪ್ಪಿನ ಉಪಯೋಗವೇನು? ಯಾಕಾಗಿ ಸೇವನೆ ಮಾಡಬೇಕು ಎಂಬುದನ್ನು ತಿಳಿದುಕೊಳ್ಳಿ.

ನಾವು ಪ್ರತಿನಿತ್ಯ ಸೇವನೆ ಮಾಡುವ ಸೊಪ್ಪು, ತರಕಾರಿಗಳಲ್ಲಿಯೇ ಹಲವಾರು ವಿವಿಧಗಳಿದ್ದು ನಮ್ಮ ದೇಹಕ್ಕೆ ಅಗತ್ಯವಿರುವ ಪೋಷಕಾಂಶಗಳನ್ನು ಒದಗಿಸುವ ತರಕಾರಿಗಳನ್ನು ಸೇವನೆ ಮಾಡಬೇಕಾಗುತ್ತದೆ. ಈ ಕೆಂಪು ಹರಿವೆ ಸೊಪ್ಪಿನ ಬಗ್ಗೆ ಹೆಚ್ಚಿನವರಿಗೆ ತಿಳಿದಿಲ್ಲವಾದರೂ ಕೂಡ ಇವುಗಳನ್ನು ತಿನ್ನದೆ ಇರಬಾರದು. ಈ ಹರಿವೆಯನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ದೀರ್ಘಕಾಲದ ಕಾಯಿಲೆಗಳು ಬರುವುದನ್ನು ತಡೆಯಬಹುದು. ಜೊತೆಗೆ ಇದರ ಸೇವನೆಯಿಂದ ಒತ್ತಡ ಕಡಿಮೆಯಾಗಿ ಮನಸ್ಸು ಹಗುರವಾಗುತ್ತದೆ.

ಕೆಂಪು ಹರಿವೆಯಲ್ಲಿದೆ ಸಾಕಷ್ಟು ಆರೋಗ್ಯ ಪ್ರಯೋಜನ:

  • ಕೆಂಪು ಹರಿವೆ ಅಥವಾ ಕೆಂಪು ಪಾಲಕ್ ಸೊಪ್ಪಿನಲ್ಲಿ ಪೊಟ್ಯಾಸಿಯಮ್ ಅಂಶ ಹೇರಳವಾಗಿದೆ. ಇದು ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಹೆಚ್ಚುವರಿಯಾಗಿ, ರಕ್ತ ಪರಿಚಲನೆಯನ್ನು ಸುಧಾರಿಸುತ್ತದೆ. ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಕಡಿಮೆಯಾಗುತ್ತದೆ ಮತ್ತು ಹೃದಯದ ಆರೋಗ್ಯವು ಸುಧಾರಿಸುತ್ತದೆ.
  • ತೂಕ ಇಳಿಸಲು ಪ್ರಯತ್ನಿಸುವವರು ಈ ಕೆಂಪು ಹರಿವೆ ಸೊಪ್ಪನ್ನು ಆಯ್ಕೆ ಮಾಡಬಹುದು. ಇದು ಫೈಬರ್ ನಿಂದ ಸಮೃದ್ಧವಾಗಿದ್ದು, ನಿಮಗೆ ಶಕ್ತಿಯನ್ನು ತುಂಬಲು ಸಹಾಯಕವಾಗಿದೆ. ಹೆಚ್ಚು ಹೊತ್ತು ಹೊಟ್ಟೆ ತುಂಬಿದ ಅನುಭವ ನೀಡುತ್ತದೆ. ಹಾಗಾಗಿ ಪದೇ ಪದೇ ತಿನ್ನುವ ಕೆಟ್ಟ ಅಭ್ಯಾಸದಿಂದ ಮುಕ್ತಿ ಸಿಗುತ್ತದೆ.
  • ಮಧುಮೇಹ ಇರುವವರು ಈ ಕೆಂಪು ಹರಿವೆಯನ್ನು ಸೇವನೆ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು. ಇದು ಕಣ್ಣಿನ ಸಮಸ್ಯೆಗಳನ್ನು ಕಡಿಮೆ ಮಾಡುವ ಮೂಲಕ ನಮ್ಮ ಕಣ್ಣಿನ ಆರೋಗ್ಯವನ್ನು ಸುಧಾರಿಸುತ್ತದೆ. ಇದರಲ್ಲಿ ಕ್ಯಾಲ್ಸಿಯಂ ಕೂಡ ಸಮೃದ್ಧವಾಗಿರುವುದರಿಂದ ಮೂಳೆಗಳ ಆರೋಗ್ಯವೂ ಕೂಡ ಉತ್ತಮವಾಗಿರುತ್ತದೆ.
  • ಅದೇ ರೀತಿ, ಕೆಂಪು ಹರಿವೆಯಲ್ಲಿ ಹೇರಳವಾಗಿ ಕಬ್ಬಿಣಾಂಶ ಕಂಡುಬರುತ್ತದೆ. ಆದ್ದರಿಂದ, ಇದನ್ನು ಸೇವಿಸುವುದರಿಂದ ರಕ್ತಹೀನತೆಯ ಸಮಸ್ಯೆಗಳು ಬರುವುದಿಲ್ಲ. ಇದು ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ತಕ್ಷಣದ ಶಕ್ತಿಯನ್ನು ನೀಡುತ್ತದೆ. ಇದು ವಿವಿಧ ರೋಗಗಳಿಂದ ನಮ್ಮನ್ನು ರಕ್ಷಿಸಲು ಸಹಾಯ ಮಾಡುತ್ತದೆ.
  • ಕೆಂಪು ಹರಿವೆ ಸೊಪ್ಪಿನಲ್ಲಿ ಹೇರಳ ಪೌಷ್ಠಿಕಾಂಶವಿದೆ. ವಿಟಮಿನ್ ಇ, ಸಿ ಮತ್ತು ಕೆ, ಕಬ್ಬಿಣ ಮತ್ತು ಕ್ಯಾಲ್ಸಿಯಂನಂತಹ ಪ್ರಮುಖ ಖನಿಜಗಳಿಂದ ತುಂಬಿದೆ. ಇದು ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿದ್ದು, ಸ್ವತಂತ್ರ ರಾಡಿಕಲ್‍ಗಳ ವಿರುದ್ಧ ಹೋರಾಡಲು ಮತ್ತು ಒಟ್ಟಾರೆ ಆರೋಗ್ಯವನ್ನು ಹೆಚ್ಚಿಸಲು ಸಹಕಾರಿಯಾಗಿದೆ.

ಸೂಚನೆ: ಸಲಹೆ ಸೇರಿದಂತೆ ಈ ವಿಷಯವು ಸಾಮಾನ್ಯ ಮಾಹಿತಿಯನ್ನು ಮಾತ್ರ ಒದಗಿಸುತ್ತದೆ. ಇದು ಯಾವುದೇ ರೀತಿಯಲ್ಲಿ ಅರ್ಹ ವೈದ್ಯಕೀಯ ಸಲಹೆಗೆ ಪರ್ಯಾಯವಲ್ಲ. ಹೆಚ್ಚಿನ ಮಾಹಿತಿಗಾಗಿ ಯಾವಾಗಲೂ ತಜ್ಞರನ್ನು ಅಥವಾ ನಿಮ್ಮ ವೈದ್ಯರನ್ನು ಸಂಪರ್ಕಿಸುವುದನ್ನು ಮರೆಯಬೇಡಿ.

ಇದನ್ನೂ ಓದಿ
Image
ಮಲಬದ್ಧತೆಯಿಂದ ಮುಕ್ತಿ ಪಡೆಯಲು ಈ ಎಲೆಯ ರಸ ಸೇವನೆ ಮಾಡಿ ಸಾಕು!
Image
ಇದಕ್ಕೆ ಹೇಳೋದು ವಾರದಲ್ಲಿ ಒಮ್ಮೆಯಾದರೂ ಮಶ್ರೂಮ್ ತಿನ್ನಿ ಅಂತ
Image
ಪಾಪ್‌ಕಾರ್ನ್ vs ಬಾಳೆಹಣ್ಣಿನ ಚಿಪ್ಸ್ ಯಾವುದು ಆರೋಗ್ಯಕರ?
Image
ಮಧುಮೇಹದಿಂದ ಮಲಬದ್ಧತೆವರೆಗೆ ಎಲ್ಲಾ ಸಮಸ್ಯೆಗೂ ಈ ಬಳ್ಳಿಯೇ ಅಮೃತ

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!