AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವ ತಂಬಾಕು ರಹಿತ ದಿನ ಆಚರಣೆ ಮಾಡುವುದು ಇದೆ ಉದ್ದೇಶಕ್ಕಾಗಿ

ನಿಮಗೆ ತಂಬಾಕು ಸೇವನೆಯಿಂದ ಉಂಟಾಗುವ ಹಾನಿಯ ಬಗ್ಗೆ ತಿಳಿದಿರಬಹುದು. ಆದರೂ ಕೂಡ ತಂಬಾಕಿನ ವ್ಯಸನ ಪ್ರಪಂಚದಾದ್ಯಂತ ಅನೇಕರನ್ನು ಆವರಿಸಿದೆ. ಎಷ್ಟೇ ಪ್ರಯತ್ನಪಟ್ಟರೂ ಆ ಚಟದಿಂದ ಹೊರಗೆ ತರಲು ಸಾಧ್ಯವಾಗುತ್ತಿಲ್ಲ. ತಂಬಾಕು ಸೇವನೆ ಮಾಡುವುದು ನಮ್ಮ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂಬುದು ತಿಳಿದಿದ್ದರೂ ಕೂಡ ಇದರ ಸೇವನೆ ಮಾಡುವವರ ಸಂಖ್ಯೆ ಎಳ್ಳಷ್ಟು ಕಡಿಮೆಯಾಗಿಲ್ಲ. ಅದಕ್ಕಾಗಿಯೇ ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಪ್ರತಿ ವರ್ಷ ವಿಶ್ವ ತಂಬಾಕು ನಿಷೇಧ ದಿನ ಅಥವಾ ವಿಶ್ವ ತಂಬಾಕು ರಹಿತ ದಿನವನ್ನು ಆಚರಿಸಲಾಗುತ್ತದೆ.

ವಿಶ್ವ ತಂಬಾಕು ರಹಿತ ದಿನ ಆಚರಣೆ ಮಾಡುವುದು ಇದೆ ಉದ್ದೇಶಕ್ಕಾಗಿ
ವಿಶ್ವ ತಂಬಾಕು ರಹಿತ ದಿನ
ಪ್ರೀತಿ ಭಟ್​, ಗುಣವಂತೆ
|

Updated on: May 31, 2025 | 8:23 AM

Share

ತಂಬಾಕು (Tobacco) ಸೇವನೆ ಮಾಡುವುದು ನಮ್ಮ ಆರೋಗ್ಯಕ್ಕೆ (health) ಒಳ್ಳೆಯದಲ್ಲ ಎಂಬುದು ತಿಳಿದಿರುವ ವಿಚಾರ. ಆದರೂ ತಂಬಾಕು ಉತ್ಪನ್ನಗಳ ಬಳಕೆಯಲ್ಲಿ ಚೀನಾ (China) ಮೊದಲ ಸ್ಥಾನದಲ್ಲಿದ್ದರೆ ಭಾರತ ಎರಡನೇ ಸ್ಥಾನದಲ್ಲಿದೆ. ಅದಲ್ಲದೆ ಬೀಡಿ, ಸಿಗರೇಟು ಸೇರಿದಂತೆ ತಂಬಾಕನ್ನು ಬೇರೆ ಬೇರೆ ರೂಪಗಳಲ್ಲಿ ಸೇವಿಸುವುದು ಆರೋಗ್ಯಕ್ಕೆ ಹಾನಿಕರ, ತಂಬಾಕು ಸೇವೆನೆಯಿಂದ ಕೇವಲ ಗಂಟಲು, ಶ್ವಾಸಕೋಶ ಮಾತ್ರವಲ್ಲದೆ ಅಡಿಯಿಂದ ಮುಡಿವರೆಗೆ ನಮ್ಮ ದೇಹದ ಪ್ರತಿಯೊಂದು ಜೀವ ಕೋಶದ ಮೇಲೆ ಅದು ಮಾರಕ ಪರಿಣಾಮವನ್ನುಂಟು ಮಾಡುತ್ತದೆ. ಅದಕ್ಕಾಗಿಯೇ ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಪ್ರತಿ ವರ್ಷ ವಿಶ್ವ ತಂಬಾಕು ನಿಷೇಧ ದಿನ ಅಥವಾ ವಿಶ್ವ ತಂಬಾಕು ರಹಿತ ದಿನವನ್ನು ಆಚರಿಸಲಾಗುತ್ತದೆ.

ವಿಶ್ವ ಆರೋಗ್ಯ ಸಂಸ್ಥೆ (WHO) ಪ್ರಕಾರ, ತಂಬಾಕು ವರ್ಷಕ್ಕೆ 8 ದಶಲಕ್ಷಕ್ಕೂ ಹೆಚ್ಚು ಜನರನ್ನು ಕೊಲ್ಲುತ್ತದೆ. ಅವುಗಳಲ್ಲಿ 7 ಮಿಲಿಯನ್‌ಗಿಂತಲೂ ಹೆಚ್ಚು ಸಾವುಗಳು ನೇರ ತಂಬಾಕು ಸೇವನೆಯಿಂದ ಉಂಟಾಗುತ್ತವೆ. ಅದೇ ಸಮಯದಲ್ಲಿ, ಸುಮಾರು 1.2 ಮಿಲಿಯನ್ ಧೂಮಪಾನಿಗಳಲ್ಲದವರು ಸೆಕೆಂಡ್ ಹ್ಯಾಂಡ್ ಹೊಗೆಗೆ (ನಿಷ್ಕ್ರಿಯ ಧೂಮಪಾನ) ಒಡ್ಡಿಕೊಳ್ಳುವುದರ ಪರಿಣಾಮವಾಗಿದೆ.

ಈ ದಿನದ ಮುಖ್ಯ ಉದ್ದೇಶವೇನು?

ಧೂಮಪಾನ ಮತ್ತು ಹೊಗೆ ರಹಿತ ತಂಬಾಕು ಉತ್ಪನ್ನಗಳು ಸೇರಿದಂತೆ ತಂಬಾಕು ಸೇವೆನೆಯಿಂದ ಉಂಟಾಗುವ ಆರೋಗ್ಯದ ಅಪಾಯಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಮತ್ತು ಶಿಕ್ಷಣ ನೀಡುವುದು ವಿಶ್ವ ತಂಬಾಕು ವಿರೋಧಿ ದಿನದ ಉದ್ದೇಶವಾಗಿದೆ. ಜೊತೆಗೆ ತಂಬಾಕು ಸೇವನೆಯ ಹಾನಿಕಾರಕ ಪರಿಣಾಮಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿ ತಂಬಾಕು ಸೇವೆನೆಯನ್ನು ಕಡಿಮೆ ಮಾಡಲು ವಿಶ್ವ ಆರೋಗ್ಯ ಸಂಸ್ಥೆಯ ನೇತೃತ್ವದಲ್ಲಿ ಈ ದಿನವನ್ನು ಜಾಗತಿಕ ಮಟ್ಟದಲ್ಲಿ ಆಚರಣೆ ಮಾಡಲಾಗುತ್ತದೆ.

ಇದನ್ನೂ ಓದಿ
Image
ಕುತ್ತಿಗೆ ತೂಗು ಹಾಕಿ ವ್ಯಾಯಾಮ ಮಾಡಿದ್ರೆ ನಿದ್ರಾಹೀನತೆ ಸಮಸ್ಯೆಗೆ ಪರಿಹಾರ
Image
ಡೆಂಘಿ, ಚಿಕುನ್ ಗುನ್ಯಾ ತಡೆಯಲು ಈ ಆಹಾರಗಳ ಸೇವನೆ ಮಾಡಿ
Image
ಇಂದಿನಿಂದಲೇ ಮೀನಿನ ಎಣ್ಣೆ ಸೇವನೆ ಮಾಡಲು ಪ್ರಾರಂಭಿಸಿ! ಏಕೆ ಗೊತ್ತಾ?
Image
ಸ್ನಾನ ಮಾಡಿ ಬಂದ ನಂತರ ಸುಸ್ತಾಗುತ್ತಿದೆಯೇ? ಇದು ದೇಹ ನೀಡುವ ಮುನ್ನೆಚ್ಚರಿಕೆ

ಇದನ್ನೂ ಓದಿ: No Tobacco Day: ಜನ ತಂಬಾಕು ಬಿಡಲು ಕಷ್ಟವಾಗುತ್ತೆ ಎನ್ನಲು ಕಾರಣವೇನು?

ವಿಶ್ವ ತಂಬಾಕು ನಿಷೇಧ ದಿನದ ಇತಿಹಾಸ

ವಿಶ್ವ ಆರೋಗ್ಯ ಅಸೆಂಬ್ಲಿಯು1987 ರಲ್ಲಿ WHA 40.38 ರೆಸಲ್ಯೂಶನ್ ಅನ್ನು ಅಂಗೀಕರಿಸಿತು. ಅಲ್ಲದೇ 1988 ಏಪ್ರಿಲ್ 7 ಅನ್ನು ವಿಶ್ವ ಧೂಮಪಾನ ನಿಷೇಧ ದಿನ ಎಂದು ಕರೆ ನೀಡಿತು. 1988 ರಲ್ಲಿ, WHA 42.19 ನಿರ್ಣಯವನ್ನು ಅಂಗೀಕರಿಸಲಾಯಿತು. ಪ್ರತಿ ವರ್ಷ ಮೇ 31 ರಂದು ವಿಶ್ವ ತಂಬಾಕು ರಹಿತ ದಿನವನ್ನು ಆಚರಣೆ ಮಾಡುವಂತೆ ಕರೆ ನೀಡಲಾಯಿತು. ಈ ರೀತಿಯಾಗಿ ಪ್ರತಿವರ್ಷ ವಿಶ್ವ ತಂಬಾಕು ನಿಷೇಧ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ.

ಸೂಚನೆ: ಸಲಹೆ ಸೇರಿದಂತೆ ಈ ವಿಷಯವು ಸಾಮಾನ್ಯ ಮಾಹಿತಿಯನ್ನು ಮಾತ್ರ ಒದಗಿಸುತ್ತದೆ. ಇದು ಯಾವುದೇ ರೀತಿಯಲ್ಲಿ ಅರ್ಹ ವೈದ್ಯಕೀಯ ಸಲಹೆಗೆ ಪರ್ಯಾಯವಲ್ಲ. ಹೆಚ್ಚಿನ ಮಾಹಿತಿಗಾಗಿ ಯಾವಾಗಲೂ ತಜ್ಞರನ್ನು ಅಥವಾ ನಿಮ್ಮ ವೈದ್ಯರನ್ನು ಸಂಪರ್ಕಿಸುವುದನ್ನು ಮರೆಯಬೇಡಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ