Vitamin E: ಸ್ನಾಯು ಆರೋಗ್ಯ ಕಾಪಾಡಿಕೊಳ್ಳಲು ವಿಟಮಿನ್ ಇ ಇರುವ ಆಹಾರಗಳನ್ನು ಸೇವಿಸಿ
Vitamin E:ಒತ್ತಡದ ಜೀವನಶೈಲಿ ನಡುವೆ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಸವಾಲೇ ಸರಿ. ನಿಮ್ಮ ಮಾನಸಿಕ ಸ್ಥಿತಿ ಮತ್ತು ದೈಹಿಕ ಆರೋಗ್ಯ ಸುಧಾರಣೆಗೆ ನೀವು ಪೌಷ್ಟಿಕಾಂಶಯುಕ್ತ ಆಹಾರ ಸೇವನೆಯ ಜೊತೆಗೆ ಜೀವನ ಶೈಲಿಯಲ್ಲಿನ ಕೆಲವು ಬದಲಾವಣೆಗಳು ಅಗತ್ಯ
ಒತ್ತಡದ ಜೀವನಶೈಲಿ ನಡುವೆ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಸವಾಲೇ ಸರಿ. ನಿಮ್ಮ ಮಾನಸಿಕ ಸ್ಥಿತಿ ಮತ್ತು ದೈಹಿಕ ಆರೋಗ್ಯ ಸುಧಾರಣೆಗೆ ನೀವು ಪೌಷ್ಟಿಕಾಂಶಯುಕ್ತ ಆಹಾರ ಸೇವನೆಯ ಜೊತೆಗೆ ಜೀವನ ಶೈಲಿಯಲ್ಲಿನ ಕೆಲವು ಬದಲಾವಣೆಗಳು ಅಗತ್ಯ.ಹಾಗೆಯೇ ವಿಟಮಿನ್ ಇ ಇರುವ ಆಹಾರವನ್ನು ಸೇವಿಸಿದರೆ ಸ್ನಾಯು ಹಾಗೂ ಮೂಳೆಗಳ ಆರೋಗ್ಯವನ್ನು ಕಾಪಾಡಿಕೊಳ್ಳಬಹುದಾಗಿದೆ.
ದೇಹದ ಫಿಟ್ನೆಸ್ಗಾಗಿ ಜೀವಸತ್ವಗಳು ಮತ್ತು ಖನಿಜಗಳು ಅವಶ್ಯಕ. ಹಾಗಿರುವಾಗ ನಿಮ್ಮ ಆರೋಗ್ಯ ಸುಧಾರಣೆಗೆ ವಿಟಮಿನ್ ಇ ಬಹಳ ಮುಖ್ಯ. ವಿಟಮಿನ್ ಇ ಚರ್ಮದ ಆರೋಗ್ಯ ಮತ್ತು ಕೂದಲಿನ ಆರೋಗ್ಯಕ್ಕೆ ಸಹಾಯಕವಾಗಿದೆ.
ನಿಮ್ಮ ಆಹಾರದಲ್ಲಿ ಈ ಕೆಲವು ಆಹಾರ ಪದಾರ್ಥಗಳನ್ನು ಸೇರಿಸುವ ಮೂಲಕ ಅರೋಗ್ಯ ಸುಧಾರಣೆ ಮಾಡಿಕೊಳ್ಳಬಹುದಾಗಿದೆ. ವಿಟಮಿನ್ ಇ ಕೊರತೆಯು ದೇಹದ ಸ್ನಾಯುಗಳಲ್ಲಿ ನೋವು ಮತ್ತು ದೌರ್ಬಲ್ಯವನ್ನು ಉಂಟು ಮಾಡುತ್ತದೆ.
ವಿಟಮಿನ್ ಇ ಸಮೃದ್ಧ ಆಹಾರ ಪದಾರ್ಥಗಳು ಯಾವುವು: ಆಲಿವ್ ಎಣ್ಣೆ ಆಲಿವ್ ಎಣ್ಣೆಯಲ್ಲಿ ವಿಟಮಿನ್ ಇ ಸಮೃದ್ಧವಾಗಿರುತ್ತದೆ. ನಿಮ್ಮ ಆಹಾರದಲ್ಲಿ ಆಲಿವ್ ಎಣ್ಣೆ ಸೇರಿಸುವ ಮೂಲಕ ನೀವು ವಿಟಮಿನ್ ಇ ಕೊರತೆ ನಿವಾರಣೆ ಮಾಡಿಕೊಳ್ಳಬಹುದಾಗಿದೆ.
ಪಪ್ಪಾಯಿ ತೂಕ ನಷ್ಟಕ್ಕೆ ಪಪ್ಪಾಯಿ ಒಳ್ಳೆಯದು. ಪಪ್ಪಾಯಿಯು ವಿಟಮಿನ್ ಇ ಅಂಶವನ್ನು ಹೊಂದಿದೆ. ಇದು ಚರ್ಮದ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ.
ಕಡಲೆಕಾಯಿ ಕಡಲೆಕಾಯಿಯು ವಿಟಮಿನ್ ಇ ಅಂಶದ ಉತ್ತಮ ಮೂಲವಾಗಿದೆ. ನಿಮ್ಮ ಆಹಾರದಲ್ಲಿ ಕಡಲೆಕಾಯಿಯನ್ನು ಸೇವಿಸುವುದರಿಂದ ನೀವು ಆರೋಗ್ಯಕರ ಮತ್ತು ಫಿಟ್ ಆಗಿರಲು ಸಹಾಯವಾಗುತ್ತದೆ. ನಿಮ್ಮ ಆಹಾರ ವ್ಯವಸ್ಥೆಯಲ್ಲಿ ಈ ಕೆಲವು ಆಹಾರ ಪದಾರ್ಥಗಳನ್ನು ಸೇರಿಸುವ ಮೂಲಕ ನೀವು ಆರೋಗ್ಯಕರವಾಗಿರಲು ಸಹಾಯಕ.
ಅವಕಾಡೊ ಆವಕಾಡೊಗಳು ಪೋಷಕಾಂಶ ಸಮೃದ್ಧ ಮೂಲವಾಗಿದೆ. ಇದರಲ್ಲಿ ವಿಟಮಿನ್ ಇ ಸಮೃದ್ಧವಾಗಿರುತ್ತದೆ. ಆವಕಾಡೊವನ್ನು ಆಹಾರದಲ್ಲಿ ಸೇರಿಸಿಕೊಳ್ಳುವುದು ಆರೋಗ್ಯಕ್ಕೆ ಒಳ್ಳೆಯದು. ನಿಮ್ಮ ಚರ್ಮ ಮತ್ತು ದೇಹವು ಆರೋಗ್ಯಕರವಾಗಿರಲು ಇದು ಸಹಾಯ ಮಾಡುತ್ತದೆ.
-ತ್ವಚೆ ಸಂರಕ್ಷಣೆ: ವಿಟಮಿನ್ ಇ ಇರುವ ಆಹಾರಗಳಲ್ಲಿ anti oxidant ಪ್ರಮಾಣ ಹೆಚ್ಚಾಗಿ ಇರುವುದರಿಂದ ತ್ವಚೆ ಸಂಬಂಧಿ ಕಾಯಿಲೆಗಳು ಬರದಂತೆ ತಡೆಯುತ್ತದೆ. ಅಲ್ಲದೆ ತ್ವಚೆ ಹೊಳಪನ್ನು ಹೆಚ್ಚಿಸುವುದು.
-ಕೆಂಪು ರಕ್ತ ಕಣಗಳನ್ನು ಹೆಚ್ಚು ಮಾಡುತ್ತದೆ: ಇದು ದೇಹದಲ್ಲಿ ರಕ್ತ ಸಂಚಲನ ಸರಿಯಾಗಿ ಪ್ರಕ್ರಿಯೆ ಸರಿಯಾಗಿ ನಡೆಯಲು ಸಹಾಯ ಮಾಡುತ್ತದೆ. ವಿಟಮಿನ್ ಇ ಕೊರತೆ ಉಂಟಾದರೆ ಕೂಡಲೆ ಚಿಕಿತ್ಸೆಯನ್ನು ಪಡೆಯಬೇಕು. ಇಲ್ಲದಿದ್ದರೆ ಪ್ರಾಣಕ್ಕೆ ಅಪಾಯ ಉಂಟಾಗಬಹುದು.
-ರಕ್ತ ಹೆಪ್ಪುಗಟ್ಟುವ ಸಮಸ್ಯೆಯನ್ನು ತಡೆಯುತ್ತದೆ: ವಿಟಮಿನ್ ಇ ದೇಹದಲ್ಲಿ ರಕ್ತ ಹೆಪ್ಪುಗಟ್ಟುವುದನ್ನು ತಡೆಯುತ್ತದೆ ಮತ್ತು ತ್ವಚೆ ಸಮಸ್ಯೆಯನ್ನು ನಿವಾರಿಸುತ್ತದೆ, ಮುಖದಲ್ಲಿ ಬೇಗನೆ ನೆರಿಗೆ ಉಂಟಾಗುವುದಿಲ್ಲ. ಅಲ್ಲದೆ ಇದು ಕ್ಯಾನ್ಸರ್ ವಿರುದ್ಧ ಪರಿಣಾಮಕಾರಿಯಾಗಿ ಹೋರಾಡುತ್ತದೆ. ಮಳೆಗಾಲದಲ್ಲಿ ಆರೋಗ್ಯ ಕಾಪಾಡಲು ಪಾಲಿಸಿ ಈ ಸರಳ ಆಯುರ್ವೇದ ಟಿಪ್ಸ್
-ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ: ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವುದರ ಜೊತೆಗೆ ಸ್ನಾಯುಗಳನ್ನು ಬಲಪಡಿಸುತ್ತದೆ ಮತ್ತು ರೆಟಿನಾದ ಸಾಮರ್ಥ್ಯ ಹೆಚ್ಚಿಸುತ್ತದೆ.
-ಇತರ ಆರೋಗ್ಯ ಸಮಸ್ಯೆಗಳನ್ನು ನಿವಾರಿಸುತ್ತದೆ: ಮುಟ್ಟುವಿನಲ್ಲಿ ಅಧಿಕ ನೋವು ಕಾಣಿಸಿಕೊಳ್ಳುವುದು, ಪುರುಷರಲ್ಲಿ ವೀರ್ಯಾಣುಗಳ ಸಂಖ್ಯೆ ಕಡಿಮೆಯಾಗುವುದು, ಕಣ್ಣಿನಲ್ಲಿ ಉರಿ, ಅಲ್ಜೈಮರ್ಸ್, ಅಸ್ತಮಾ ಈ ಎಲ್ಲಾ ಸಮಸ್ಯೆಗಳನ್ನು ಹೋಗಲಾಡಿಸಲು ವಿಟಮಿನ್ ಇ ಅಂಶ ದೇಹದಲ್ಲಿ ಅವಶ್ಯಕ.
ಇದು ಟಿವಿ9ನ ಅಧಿಕೃತ ಮಾಹಿತಿಯಾಗಿರುವುದಿಲ್ಲ, ಸಾಮಾನ್ಯ ಮಾಹಿತಿಯನ್ನು ಆಧರಿಸಿದ ಸುದ್ದಿಯಾಗಿರುತ್ತದೆ.
ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 5:27 pm, Thu, 19 May 22