AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rheumatoid arthritis: ಧೂಮಪಾನ ರುಮಟಾಯ್ಡ್ ಸಂಧಿವಾತಕ್ಕೆ ಕಾರಣವಾಗಬಹುದೇ? ವೈದ್ಯರು ಹೇಳುವುದೇನು?

ರುಮಟಾಯ್ಡ್‌ ಆರ್ಥ್ರೈಟಿಸ್ ನನ್ನು ಸಮಯಕ್ಕೆ ಸರಿಯಾಗಿ ನಿಯಂತ್ರಿಸದಿದ್ದರೆ, ಅದು ಹೆಚ್ಚಾಗುತ್ತಲೇ ಇರುತ್ತದೆ. ಜೊತೆಗೆ ದೇಹದ ಇತರ ಭಾಗಗಳ ಮೇಲೂ ಪರಿಣಾಮ ಬೀರಬಹುದು. ಹೃದಯ, ಚರ್ಮ ಮತ್ತು ಶ್ವಾಸಕೋಶದ ಕಾಯಿಲೆಗಳ ಅಪಾಯವೂ ಇದೆ. ಇನ್ನು ಧೂಮಪಾನ ರುಮಟಾಯ್ಡ್ ಸಂಧಿವಾತಕ್ಕೆ ಕಾರಣವಾಗುತ್ತದೆಯೇ? ವೈದ್ಯರು ಏನನ್ನುತ್ತಾರೆ? ಸಂಪೂರ್ಣ ಮಾಹಿತಿ ಇಲ್ಲಿದೆ.

Rheumatoid arthritis: ಧೂಮಪಾನ ರುಮಟಾಯ್ಡ್ ಸಂಧಿವಾತಕ್ಕೆ ಕಾರಣವಾಗಬಹುದೇ? ವೈದ್ಯರು ಹೇಳುವುದೇನು?
ಪ್ರೀತಿ ಭಟ್​, ಗುಣವಂತೆ
| Edited By: |

Updated on: May 02, 2024 | 4:13 PM

Share

ವಯಸ್ಸಾದಂತೆ ಕೀಲು ನೋವಿನ ಸಮಸ್ಯೆ ಬರುವುದು ಸಾಮಾನ್ಯ, ಆದರೆ ಇದು ಚಿಕ್ಕ ವಯಸ್ಸಿನವರಲ್ಲಿಯೂ ಕಂಡುಬರುತ್ತದೆ. ಹೆಚ್ಚಾಗಿ 50 ವರ್ಷಕ್ಕಿಂತ ಮೇಲ್ಪಟ್ಟವರಲ್ಲಿ ಕಂಡುಬರುತ್ತದೆ. ಕೆಲವೊಮ್ಮೆ ನಮ್ಮ ದೇಹದ ರೋಗ ನಿರೋಧಕ ಶಕ್ತಿ ನಮ್ಮ ವಿರುದ್ಧವೇ ಹೋರಾಡುತ್ತದೆ. ಇದರಿಂದ ನಮ್ಮ ಕೀಲು ಹಾಗೂ ಮೂಳೆಗಳಲ್ಲಿ ನೋವು ಕಾಣಿಸುತ್ತವೆ ಅಥವಾ ಗಂಭೀರವಾಗಿ ಹಾನಿಯೂ ಆಗಬಹುದು. ಕೈ ಬೆರಳು ಮತ್ತು ಮೂಳೆಗಳ ಕೀಲುಗಳು ಊದಿ ಕೊಳ್ಳಬಹುದು. ಇದರಿಂದ ದೇಹದ ಅಂಗಾಂಗಗಳ ಆಕಾರ ಬದಲಾಗುತ್ತದೆ. ಇದನ್ನು ವೈದ್ಯಕೀಯ ಭಾಷೆಯಲ್ಲಿ ರುಮಟಾಯ್ಡ್‌ ಆರ್ಥ್ರೈಟಿಸ್ ಅಥವಾ ರುಮಟಾಯ್ಡ್ ಸಂಧಿವಾತ ಎಂದು ಕರೆಯುತ್ತಾರೆ. ಇದನ್ನು ಸಮಯಕ್ಕೆ ಸರಿಯಾಗಿ ನಿಯಂತ್ರಿಸದಿದ್ದರೆ, ರೋಗಿಯು ನಡೆಯಲು ಸಹ ಕಷ್ಟ ಪಡಬೇಕಾಗುತ್ತದೆ. ಹಾಗಾದರೆ ಧೂಮಪಾನ ರುಮಟಾಯ್ಡ್ ಸಂಧಿವಾತಕ್ಕೆ ಕಾರಣವಾಗುತ್ತದೆಯೇ? ವೈದ್ಯರು ಏನನ್ನುತ್ತಾರೆ? ಸಂಪೂರ್ಣ ಮಾಹಿತಿ ಇಲ್ಲಿದೆ.

ಈ ರೋಗದ ಬಗ್ಗೆ ಏಮ್ಸ್ ರುಮಟಾಲಜಿ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ರಂಜನ್ ಗುಪ್ತಾ ಅವರು ಕೆಲವು ಮಾಹಿತಿಯನ್ನು ಹಂಚಿಕೊಂಡಿದ್ದು, ಈ ಸಂಧಿವಾತವು, ಕೈಗಳು, ಮಣಿಕಟ್ಟು ಮತ್ತು ಮೊಣಕಾಲುಗಳಲ್ಲಿ ನಿರಂತರ ನೋವನ್ನು ಉಂಟು ಮಾಡುತ್ತದೆ. ಈ ರೋಗವನ್ನು ಸಮಯಕ್ಕೆ ಸರಿಯಾಗಿ ನಿಯಂತ್ರಿಸದಿದ್ದರೆ, ಅದು ಹೆಚ್ಚಾಗುತ್ತಲೇ ಇರುತ್ತದೆ. ಜೊತೆಗೆ ದೇಹದ ಇತರ ಭಾಗಗಳ ಮೇಲೂ ಪರಿಣಾಮ ಬೀರಬಹುದು. ಹೃದಯ, ಚರ್ಮ ಮತ್ತು ಶ್ವಾಸಕೋಶದ ಕಾಯಿಲೆಗಳ ಅಪಾಯವೂ ಇದೆ.

ಇದನ್ನೂ ಓದಿ: ಬೇಸಿಗೆಯಲ್ಲಿ ಪದೇ ಪದೇ ಸ್ನಾನ ಮಾಡ್ತೀರಾ? ಈ ಲಾಭಗಳು ಅಧಿಕ

ಧೂಮಪಾನ ಒಂದು ಕಾರಣವೇ?

ಅನೇಕ ಸಂದರ್ಭಗಳಲ್ಲಿ ಧೂಮಪಾನವು ರುಮಟಾಯ್ಡ್ ಸಂಧಿವಾತಕ್ಕೆ ಕಾರಣವಾಗಬಹುದು. ಅತಿಯಾಗಿ ಧೂಮಪಾನ ಮಾಡುವವರು ಇತರರಿಗಿಂತ ಹೆಚ್ಚಿನ ಅಪಾಯವನ್ನು ಎದುರಿಸುತ್ತಾರೆ, ಆದರೆ ಧೂಮಪಾನ ಮಾಡುವುದು ಈ ರೋಗಕ್ಕೆ ಕಾರಣವಲ್ಲ. ಇದು ಈ ರೋಗದ ಅಪಾಯದ ಅಂಶಗಳಲ್ಲಿ ಒಂದಾಗಿದೆ ಎಂದು ಡಾ. ರಂಜನ್ ಹೇಳುತ್ತಾರೆ.

ರುಮಟಾಯ್ಡ್ ಸಂಧಿವಾತದ ಲಕ್ಷಣಗಳು ಯಾವುವು?

ನಿರಂತರ ಕೀಲು ನೋವು

ಕೀಲು ಊತ

ಕೀಲುಗಳಲ್ಲಿ ಬಿಗಿತ

ಚರ್ಮದ ಮೇಲೆ ದದ್ದುಗಳು ಕಾಣಿಸುವುದು

ಇದ್ದಕ್ಕಿದ್ದಂತೆ ದೇಹದ ತೂಕ ಹೆಚ್ಚಾಗುವುದು

ಸೇವಿಸಿದ ಆಹಾರ ಜೀರ್ಣವಾಗದೇ ಇರುವುದು

ಕಣ್ಣುಗಳಲ್ಲಿ ಕೆರೆತ ಅಥವಾ ಕಿರಿಕಿರಿ ಕಾಣಿಸುವುದು

ಚಿಕಿತ್ಸೆ ಏನು?

ರುಮಟಾಯ್ಡ್ ಸಂಧಿವಾತವನ್ನು ನಿಯಂತ್ರಿಸಲು, ನಿಮ್ಮ ವೈದ್ಯರು ನಿಮಗೆ ಕೆಲವೊಂದು ಜೀವನ ಶೈಲಿಯಲ್ಲಿ ಬದಲಾವಣೆಗಳನ್ನು ಸೂಚಿಸಬಹುದು ಮತ್ತು ಇದಕ್ಕೆ ಸಂಬಂಧಪಟ್ಟಂತೆ ಔಷಧಿಗಳನ್ನು ಕೊಡಬಹುದು. ನಿಮ್ಮ ಮೂಳೆಗಳು ಮತ್ತು ಕೀಲುಗಳಿಗೆ ಅನುಕೂಲವಾಗುವಂತೆ ವ್ಯಾಯಾಮಗಳನ್ನು ಹೇಳಿಕೊಡಬಹುದು.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!