AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮಗೆ ಪದೇ ಪದೇ ಶೀತವಾಗುತ್ತಾ? ಹಾಗಿದ್ರೆ ಈ ತರಕಾರಿ ಸೇವನೆ ಮಾಡುವುದನ್ನು ತಪ್ಪಿಸಿ

ಸೌತೆಕಾಯಿ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಇದರಲ್ಲಿ ವಿಟಮಿನ್ ಕೆ, ವಿಟಮಿನ್ ಸಿ ಮತ್ತು ಪೊಟ್ಯಾಸಿಯಮ್‌ನಂತಹ ಪೋಷಕಾಂಶಗಳು ಸಮೃದ್ಧವಾಗಿದೆ. ಆದರೆ ಪೌಷ್ಟಿಕತಜ್ಞೆ ಶ್ವೇತಾ ಅವರ ಪ್ರಕಾರ, ಈ ಪೋಷಕಾಂಶಗಳು ಹೆಚ್ಚಿರುವುದು ಕೆಲವರ ದೇಹಕ್ಕೆ ಒಳ್ಳೆಯದಲ್ಲ. ಏಕೆಂದರೆ ಇದರ ಸೇವನೆಯಿಂದ ಆರೋಗ್ಯ ಸಮಸ್ಯೆಗಳು ಉಲ್ಬಣಗೊಳ್ಳುವ ಅಪಾಯ ಹೆಚ್ಚಾಗಿರುತ್ತದೆ ಎನ್ನುತ್ತಾರೆ. ಹಾಗಾದರೆ ಇದು ಯಾರಿಗೆ ಒಳ್ಳೆಯದಲ್ಲ, ಯಾವ ರೀತಿಯ ಸಮಸ್ಯೆಗಳು ಉಂಟಾಗುತ್ತದೆ ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ನಿಮಗೆ ಪದೇ ಪದೇ ಶೀತವಾಗುತ್ತಾ? ಹಾಗಿದ್ರೆ ಈ ತರಕಾರಿ ಸೇವನೆ ಮಾಡುವುದನ್ನು ತಪ್ಪಿಸಿ
Cucumber Side Effects
ಪ್ರೀತಿ ಭಟ್​, ಗುಣವಂತೆ
|

Updated on: Dec 15, 2025 | 7:45 PM

Share

ಸೌತೆಕಾಯಿ (Cucumber) ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂಬುದು ತಿಳಿದ ವಿಚಾರ. ಇದನ್ನು ಹೆಚ್ಚಾಗಿ ಸಲಾಡ್, ರೈತಾ ಅಥವಾ ಜ್ಯೂಸ್ ರೂಪದಲ್ಲಿ ಸೇವನೆ ಮಾಡಲಾಗುತ್ತದೆ. ಇದರಲ್ಲಿ 95% ನೀರು ಇರುವುದರಿಂದ, ಇದು ನಿರ್ಜಲೀಕರಣ, ತೂಕ ಇಳಿಕೆ ಮತ್ತು ಜೀರ್ಣಕ್ರಿಯೆಗೆ ಅದ್ಭುತವಾಗಿ ಕೆಲಸ ಮಾಡುತ್ತದೆ. ಜೊತೆಗೆ ಇವು ವಿಟಮಿನ್ ಕೆ (Vitamin K), ವಿಟಮಿನ್ ಸಿ ಮತ್ತು ಪೊಟ್ಯಾಸಿಯಮ್‌ನಂತಹ ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಆದರೆ ಪೌಷ್ಟಿಕತಜ್ಞೆ ಶ್ವೇತಾ ಅವರ ಪ್ರಕಾರ, ಈ ರೀತಿ ಪೋಷಕಾಂಶಗಳು ಹೆಚ್ಚಿರುವುದು ಕೆಲವರ ದೇಹಕ್ಕೆ ಒಳ್ಳೆಯದಲ್ಲ. ಏಕೆಂದರೆ ಇದರ ಸೇವನೆಯಿಂದ ಆರೋಗ್ಯ ಸಮಸ್ಯೆಗಳು ಉಲ್ಬಣಗೊಳ್ಳುವ ಅಪಾಯ ಹೆಚ್ಚಾಗಿರುತ್ತದೆ. ಆಯುರ್ವೇದದ ಪ್ರಕಾರ, ಸೌತೆಕಾಯಿ ದೇಹವನ್ನು ತಂಪಾಗಿಸುವ ಗುಣವನ್ನು ಹೊಂದಿದ್ದು ಕೆಲವರಿಗೆ ಇದು ಒಳ್ಳೆಯದಲ್ಲ. ಹಾಗಾದರೆ ಇದು ಯಾರಿಗೆ ಒಳ್ಳೆಯದಲ್ಲ, ಯಾವ ರೀತಿಯ ಸಮಸ್ಯೆಗಳು ಉಂಟಾಗುತ್ತದೆ ಎಂಬುದನ್ನು ತಿಳಿದುಕೊಳ್ಳಿ.

ಶೀತ -ಅಸ್ತಮಾ: ಸೌತೆಕಾಯಿ ದೇಹದಲ್ಲಿ ಕಫವನ್ನು ಹೆಚ್ಚಿಸುತ್ತದೆ. ಶೀತ, ಕೆಮ್ಮು, ಕಫ, ಸೈನಸ್ ಅಥವಾ ಮೂಗಿನ ದಟ್ಟಣೆ ಇರುವವರು ಸೌತೆಕಾಯಿ ಸೇವನೆ ಮಾಡುವುದನ್ನು ತಪ್ಪಿಸಬೇಕು. ಅದರಲ್ಲಿಯೂ ಚಳಿಗಾಲದಲ್ಲಿ, ಸೌತೆಕಾಯಿ ಸೇವನೆ ಇಂತಹ ಸಮಸ್ಯೆಗಳನ್ನು ಮತ್ತಷ್ಟು ಉಲ್ಬಣಗೊಳಿಸಬಹುದು.

ಕೀಲು ನೋವು: ಸೌತೆಕಾಯಿ ದೇಹ ತಂಪಾಗಿಸುವುದರಿಂದ ವಾತ ದೋಷವನ್ನು ಉಲ್ಬಣಗೊಳಿಸುತ್ತದೆ. ಕೀಲು ನೋವು ಅಥವಾ ದೇಹದಲ್ಲಿ ಊತದಿಂದ ಈಗಾಗಲೇ ಬಳಲುತ್ತಿರುವವರಲ್ಲಿ, ಈ ಸ್ಥಿತಿ ಮತ್ತಷ್ಟು ಹದಗೆಡುವ ಸಾಧ್ಯತೆಯಿದೆ.

ಜೀರ್ಣಕ್ರಿಯೆ ಸಮಸ್ಯೆಗಳು: ಸೌತೆಕಾಯಿಯಲ್ಲಿ ನಾರಿನಂಶ ಹೆಚ್ಚಿದ್ದರೂ, ಸೂಕ್ಷ್ಮ ಜೀರ್ಣಾಂಗ ವ್ಯವಸ್ಥೆ ಇರುವವರಿಗೆ ಇದು ಸಮಸ್ಯೆಯಾಗಬಹುದು. ಇದರಲ್ಲಿರುವ ಕುಕುರ್ಬಿಟಾಸಿನ್ ಎಂಬ ಕಹಿ ಸಂಯುಕ್ತವು ಅನಿಲ, ಉಬ್ಬುವುದು ಅಥವಾ ಅಜೀರ್ಣದಂತಹ ಸಮಸ್ಯೆಗಳನ್ನು ಉಂಟುಮಾಡಬಹುದು.

ಮೂತ್ರ ಸಂಬಂಧಿ ಸಮಸ್ಯೆಗಳು: ಸೌತೆಕಾಯಿಯಲ್ಲಿ ಹೆಚ್ಚಿನ ನೀರಿನ ಅಂಶವಿದ್ದು, ಇದು ನೈಸರ್ಗಿಕವಾಗಿ ಮೂತ್ರದ ಉತ್ಪಾದನೆಯನ್ನು ಹೆಚ್ಚಿಸುತ್ತದೆ. ಆದರೆ ಮೂತ್ರದ ಸಮಸ್ಯೆಯಿಂದ ಬಳಲುತ್ತಿರುವವರು ಇದನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವಿಸುವುದು ಸಮಸ್ಯೆಯನ್ನು ಮತ್ತಷ್ಟು ಹದಗೆಡಿಸಬಹುದು.

ಇದನ್ನೂ ಓದಿ: ಹೃದಯವನ್ನು ಆರೋಗ್ಯವಾಗಿಟ್ಟುಕೊಂಡು ತೂಕ ಕಡಿಮೆ ಮಾಡಿಕೊಳ್ಳಲು ಇದಕ್ಕಿಂತ ಸುಲಭ ಉಪಾಯ ಮತ್ತೊಂದಿಲ್ಲ!

ಮಧುಮೇಹ: ಸೌತೆಕಾಯಿ ಮಧುಮೇಹ ಇರುವವರಿಗೆ ಸುರಕ್ಷಿತ. ಆದರೆ ಇನ್ಸುಲಿನ್ ಅಥವಾ ಗ್ಲೂಕೋಸ್ ಕಡಿಮೆಗೊಳಿಸುವ ಔಷಧಿಗಳನ್ನು ತೆಗೆದುಕೊಳ್ಳುವವರಿಗೆ ಸೌತೆಕಾಯಿ ಸಮಸ್ಯೆಗಳನ್ನು ಉಂಟುಮಾಡಬಹುದು. ಕೆಲವರಲ್ಲಿ ನಡುಕ ಮತ್ತು ತಲೆತಿರುಗುವಿಕೆಗೆ ಕಾರಣವಾಗಬಹುದು.

ಅದರಲ್ಲಿಯೂ ಆರೋಗ್ಯ ತಜ್ಞರು ಸಾಮಾನ್ಯವಾಗಿ ಊಟ ಮಾಡಿದ ನಂತರ ಸೌತೆಕಾಯಿ ಸೇವನೆ ಮಾಡುವುದನ್ನು ತಪ್ಪಿಸಿ ಎನ್ನುತ್ತಾರೆ. ಏಕೆಂದರೆ ಇದು ಜೀರ್ಣವಾಗಲು ಸಮಯ ತೆಗೆದುಕೊಳ್ಳುತ್ತದೆ. ಅಷ್ಟು ಮಾತ್ರವಲ್ಲ, ಇದರಲ್ಲಿರುವ ಹೆಚ್ಚಿನ ನೀರಿನ ಅಂಶವು ನಿದ್ರೆಗೆ ಅಡ್ಡಿಪಡಿಸಬಹುದು. ಹಾಗಾಗಿ ಸೌತೆಕಾಯಿಯ ಸೇವನೆ ಮಾಡುವ ಮೊದಲು ತಜ್ಞರ ಸಲಹೆ ಪಡೆದುಕೊಳ್ಳುವುದು ಒಳ್ಳೆಯದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರೀತಿ ಭಟ್​, ಗುಣವಂತೆ
ಪ್ರೀತಿ ಭಟ್​, ಗುಣವಂತೆ

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ನಾನಾ ಪಾಟೇಕರ್ ಜೊತೆ ಕರಿ ಸುಬ್ಬು ಒಡನಾಟ ಶುರು ಆಗಿದ್ದು ಹೇಗೆ? ವಿವರಿಸಿದ ನಟ
ನಾನಾ ಪಾಟೇಕರ್ ಜೊತೆ ಕರಿ ಸುಬ್ಬು ಒಡನಾಟ ಶುರು ಆಗಿದ್ದು ಹೇಗೆ? ವಿವರಿಸಿದ ನಟ
ಮುಂಬೈನ ಮುಲುಂಡ್ ಕಾರ್ಮಿಕರ ಕ್ಯಾಂಪ್‌ನಲ್ಲಿ ಭೀಕರ ಬೆಂಕಿ ದುರಂತ
ಮುಂಬೈನ ಮುಲುಂಡ್ ಕಾರ್ಮಿಕರ ಕ್ಯಾಂಪ್‌ನಲ್ಲಿ ಭೀಕರ ಬೆಂಕಿ ದುರಂತ
ಚಿಕ್ಕಮಗಳೂರಲ್ಲಿ ಬಿರುಗಾಳಿ ಸಹಿತ ಅಬ್ಬರಿಸಿದ ವರುಣ
ಚಿಕ್ಕಮಗಳೂರಲ್ಲಿ ಬಿರುಗಾಳಿ ಸಹಿತ ಅಬ್ಬರಿಸಿದ ವರುಣ
ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ
ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ
ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ
ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ
ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ
ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ
ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ