Sign In

By signing in or creating an account, you agree with Associated Broadcasting Company's Terms & Conditions and Privacy Policy.

Sapodilla Benefits: ಸಪೋಟಾ ಹಣ್ಣಿನ ಆರೋಗ್ಯಕರ ಗುಣಗಳ ಬಗ್ಗೆ ತಿಳಿದರೆ ಒಂದು ಹಣ್ಣನ್ನೂ ನೀವು ಹಾಳು ಮಾಡುವುದಿಲ್ಲ

Sapota Fruit Benefits: ಸಾಮಾನ್ಯವಾಗಿ ಉತ್ತಮ ಆರೋಗ್ಯ ಪಡೆಯಲು ಹಣ್ಣುಗಳನ್ನು ತಿನ್ನಲು ತಜ್ಞರು ಸಲಹೆ ನೀಡುತ್ತಾರೆ. ಇವುಗಳಲ್ಲಿ ಸಪೋಟಾ ಅಥವಾ ಚಿಕ್ಕು ಹಣ್ಣು ಪ್ರಮುಖ ಪಾತ್ರ ವಹಿಸುತ್ತದೆ. ಹಾಗಿದ್ದರೆ ಸಪೋಟಾ ಹಣ್ಣಿನ ಸೇವನೆಯಿಂದ ಆಗುವ ಪ್ರಯೋಜನಗಳ ಬಗ್ಗೆ ತಿಳಿಯುವುದು ಅವಶ್ಯಕವಾಗಿದೆ.

Sapodilla Benefits: ಸಪೋಟಾ ಹಣ್ಣಿನ ಆರೋಗ್ಯಕರ ಗುಣಗಳ ಬಗ್ಗೆ ತಿಳಿದರೆ ಒಂದು ಹಣ್ಣನ್ನೂ ನೀವು ಹಾಳು ಮಾಡುವುದಿಲ್ಲ
ಸಪೋಟಾ ಹಣ್ಣು
Follow us
TV9 Web
| Updated By: shruti hegde

Updated on: Jun 24, 2021 | 9:43 AM

ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ನಾವು ಹೆಚ್ಚಾಗಿ ಹಣ್ಣುಗಳನ್ನು ತಿನ್ನುತ್ತೇವೆ. ಆದರೆ ಯಾವ ಹಣ್ಣನ್ನು ಸೇವಿಸಿದರೆ ಯಾವ ಪೋಷಕಾಂಶಗಳು ನಮ್ಮ ದೇಹಕ್ಕೆ ದೊರೆಯುತ್ತದೆ ಮತ್ತು ಯಾವೆಲ್ಲಾ ಜೀವಸತ್ವಗಳು ನಮ್ಮ ದೇಹವನ್ನು ಸೇರುತ್ತವೆ ಎನ್ನುವುದನ್ನು ತಿಳಿದುಕೊಳ್ಳುವುದು ಸೂಕ್ತ. ಸಾಮಾನ್ಯವಾಗಿ ಉತ್ತಮ ಆರೋಗ್ಯ ಪಡೆಯಲು ಹಣ್ಣುಗಳನ್ನು ತಿನ್ನಲು ತಜ್ಞರು ಸಲಹೆ ನೀಡುತ್ತಾರೆ. ಇವುಗಳಲ್ಲಿ ಸಪೋಟಾ ಅಥವಾ ಚಿಕ್ಕೂ ಹಣ್ಣು ಪ್ರಮುಖ ಪಾತ್ರ ವಹಿಸುತ್ತದೆ. ಹಾಗಿದ್ದರೆ ಸಪೋಟಾ ಹಣ್ಣಿನ ಸೇವನೆಯಿಂದ ಆಗುವ ಪ್ರಯೋಜನಗಳ ಬಗ್ಗೆ ತಿಳಿಯುವುದು ಅವಶ್ಯಕವಾಗಿದೆ.

  • ಸಪೋಟಾದಲ್ಲಿ ಪೋಷಕಾಂಶಗಳು ಮತ್ತು ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿದ್ದು, ಸಪೋಟಾ ತಿನ್ನುವುದು ಗರ್ಭಿಣಿ ಮತ್ತು ಹಾಲುಣಿಸುವ ತಾಯಂದಿರಿಗೆ ಉತ್ತಮ. ಇದು ತ್ವರಿತವಾಗಿ ಪೋಷಕಾಂಶಗಳನ್ನು ಒದಗಿಸುತ್ತದೆ ಮತ್ತು ದೇಹಕ್ಕೆ ಹೆಚ್ಚು ಶಕ್ತಿಯನ್ನು ನೀಡುತ್ತದೆ.
  • ಬೊಜ್ಜಿನ ಸಮಸ್ಯೆಯಿಂದ ಬಳಲುತ್ತಿರುವವರು ಸಪೋಟಾ ತಿನ್ನುವುದು ಸೂಕ್ತ. ಇದು ದೇಹದ ಕೊಬ್ಬನ್ನು ಕರಗಿಸಲು ಸಹಾಯ ಮಾಡುತ್ತದೆ.
  • ಸಪೋಟಾ ಅಥವಾ ಸಪೋಟಾದ ರಸವನ್ನು ಆಗಾಗ್ಗೆ ಸೇವಿಸುವುದರಿಂದ ಕೂದಲಿನ ತೊಂದರೆಗಳು ಕಡಿಮೆಯಾಗುತ್ತವೆ. ಕೂದಲು ಉದುರುವುದು ಮತ್ತು ತಲೆಹೊಟ್ಟು ಸಮಸ್ಯೆಗಳನ್ನು ಕೂಡ ಇದರಿಂದ ಪರಿಹರಿಸಬಹುದು.
  • ಸಪೋಟಾ ಹಣ್ಣಿನಲ್ಲಿ ವಿಟಮಿನ್-ಎ ಸಮೃದ್ಧವಾಗಿದೆ. ಇದು ಕಣ್ಣಿನ ದೃಷ್ಟಿಯನ್ನು ಸುಧಾರಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಕಣ್ಣಿಗೆ ಸಂಬಂಧಿಸಿದ ಇನ್ನಿತರ ಕಾಯಿಲೆಯಿಂದಲೂ ದೂರವಾಗಿಸುತ್ತದೆ.
  • ಸಪೋಟಾ ತಿನ್ನುವುದರಿಂದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬಹುದು. ಸಪೋಟಾದಲ್ಲಿನ ಜೀವಸತ್ವಗಳು ಮತ್ತು ಪೋಷಕಾಂಶಗಳು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ. ವೃದ್ಧಾಪ್ಯದಲ್ಲಿ ಕುರುಡುತನ ತಡೆಗಟ್ಟಲು ಇದು ಸೂಕ್ತ.
  • ನಿಶ್ಯಕ್ತಿಯನ್ನು ದೂರ ಮಾಡುವಲ್ಲಿಯೂ ಸಪೋಟಾ ಹಣ್ಣು ಮುಖ್ಯವಾಗಿದ್ದು, ಇದರಲ್ಲಿ ಫ್ರಕಗಟೋಸ್ ಮತ್ತು ಸುಕ್ರೋಶ್ ಅಂಶವಿದೆ. ಇದು ದೇಹಕ್ಕೆ ಹೆಚ್ಚು ಶಕ್ತಿಯನ್ನು ನೀಡುತ್ತದೆ. ಬೆಳೆಯುತ್ತಿರುವ ಮಕ್ಕಳಿಗೆ ಈ ಹಣ್ಣು ತುಂಬಾ ಒಳ್ಳೆಯದು.
  • ಮಲಬದ್ಧತೆಯನ್ನು ನಿವಾರಿಸುವಲ್ಲಿಯೂ ಸಪೋಟಾ ಮುಖ್ಯವಾಗಿದ್ದು, ಇದರಲ್ಲಿನ ಫೈಬರ್ ಅಂಶ ದೇಹಕ್ಕೆ ಒಳ್ಳೆಯದು. ಅಲ್ಲದೆ ಕರುಳಿಗೆ ಸಂಬಂಧಿಸಿದ ಕಾಯಿಲೆಯಿಂದಲೂ ರಕ್ಷಣೆ ನೀಡುತ್ತದೆ.
  • ಗ್ಯಾಸ್ಟಿಕ್ ಸಮಸ್ಯೆ, ನಿದ್ರಾಹೀನತೆ, ಮೂಳೆಗೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿರುವವರು ಕೂಡ ಸಪೋಟಾ ಸೇವಿಸುವುದು ಉತ್ತಮ. ಇದು ಆರೋಗ್ಯಕ್ಕೆ ಹೆಚ್ಚು ಉಪಯುಕ್ತಕಾರಿಯಾದ ಹಣ್ಣಾಗಿದೆ.

ಇದನ್ನೂ ಓದಿ: Anjeer Benefits: ಅಂಜೂರದ ಹಣ್ಣು ರುಚಿಗಾಗಿ ಮಾತ್ರ ಸೇವಿಸಬೇಡಿ, ಆರೋಗ್ಯಕರ ಗುಣಲಕ್ಷಣದ ಬಗ್ಗೆಯೂ ಗಮನಹರಿಸಿ

ಬಿಳಿ ಜಂಬೂ ಅಥವಾ ಪನ್ನೇರಳೆ ಹಣ್ಣು ರುಚಿಯಷ್ಟೇ ಆರೋಗ್ಯಕರ; ರೋಗನಿರೋಧಕ ಶಕ್ತಿ ಹೆಚ್ಚಿಸುವ ಈ ಹಣ್ಣನ್ನು ಒಮ್ಮೆ ತಿಂದು ನೋಡಿ

‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ
ಸಿದ್ದರಾಮಯ್ಯ ಸರ್ಕಾರ ಭ್ರಷ್ಟವೆಂದು ನಾನು ಹೇಳಿಲ್ಲ: ಬಸವರಾಜ ರಾಯರೆಡ್ಡಿ
ಸಿದ್ದರಾಮಯ್ಯ ಸರ್ಕಾರ ಭ್ರಷ್ಟವೆಂದು ನಾನು ಹೇಳಿಲ್ಲ: ಬಸವರಾಜ ರಾಯರೆಡ್ಡಿ
ತಮಿಳುನಾಡುನಲ್ಲಿ ಮುಂದೊಂದು ದಿನ ಬಿಜೆಪಿ ಅಧಿಕಾರಕ್ಕೆ ಬರಲಿದೆ: ಅಣ್ಣಾಮಲೈ
ತಮಿಳುನಾಡುನಲ್ಲಿ ಮುಂದೊಂದು ದಿನ ಬಿಜೆಪಿ ಅಧಿಕಾರಕ್ಕೆ ಬರಲಿದೆ: ಅಣ್ಣಾಮಲೈ
ಕುಟುಂಬ, ಮಕ್ಕಳು, ಸಿನಿಮಾ ಇತ್ಯಾದಿ.. ಮಗಳೊಟ್ಟಿಗೆ ಮಾತಿಗೆ ಕೂತ ಶಿವಣ್ಣ
ಕುಟುಂಬ, ಮಕ್ಕಳು, ಸಿನಿಮಾ ಇತ್ಯಾದಿ.. ಮಗಳೊಟ್ಟಿಗೆ ಮಾತಿಗೆ ಕೂತ ಶಿವಣ್ಣ
ಜೆಡಿಎಸ್ ಈಗಲೂ ಕರ್ನಾಟಕದಲ್ಲಿ ಸಾಕಷ್ಟು ಬಲಾಢ್ಯ: ನಿಖಿಲ್ ಕುಮಾರಸ್ವಾಮಿ
ಜೆಡಿಎಸ್ ಈಗಲೂ ಕರ್ನಾಟಕದಲ್ಲಿ ಸಾಕಷ್ಟು ಬಲಾಢ್ಯ: ನಿಖಿಲ್ ಕುಮಾರಸ್ವಾಮಿ