AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳಿಗೆ ಮಾತು ತಡವಾಗಿ ಬರುವುದಕ್ಕೆ ಸ್ಕ್ರೀನ್ ಟೈಮ್ ಕಾರಣವೇ? ಸಂಶೋಧನೆಯಿಂದ ಆಘಾತಕಾರಿ ಅಂಶ ಬಹಿರಂಗ

ಈಗೆಲ್ಲಾ ಪೋಷಕರು ತಮ್ಮ ಕೆಲಸವನ್ನು ಸುಲಭವಾಗಿ ಮುಗಿಸಿಕೊಳ್ಳಲು ಚಿಕ್ಕ ಮಕ್ಕಳ ಕೈಗೆ ಫೋನ್ ಮತ್ತು ಲ್ಯಾಪ್‌ಟಾಪ್‌ ಕೊಡುತ್ತಾರೆ. ಇದರಿಂದಾಗಿ ಪರದೆಗಳು ಮಕ್ಕಳ ಜೀವನದ ಒಂದು ಭಾಗವಾಗುತ್ತಿವೆ, ಆದರೆ ಹೆಚ್ಚು ಪರದೆಯ ಸಮಯ ಅಥವಾ ಸ್ಕ್ರೀನ್ ಟೈಮ್ ಮಕ್ಕಳ ಬೆಳವಣಿಗೆಯ ಮೇಲೆ ಪರಿಣಾಮ ಬೀರುತ್ತದೆ ಎಂದರೆ ನಂಬುತ್ತೀರಾ? ಹೌದು, ಸಂಶೋಧನೆಯಿಂದ ತಿಳಿದುಬಂದ ಮಾಹಿತಿ ಪ್ರಕಾರ, ಸ್ಕ್ರೀನ್ ಟೈಮ್ ಅಗತ್ಯಕ್ಕಿಂತ ಹೆಚ್ಚಾಗಿದ್ದು ಈ ರೀತಿಯ ಅಭ್ಯಾಸವು ಮಕ್ಕಳ ಮಾತಿನ ಬೆಳವಣಿಗೆಗೆ ಹಾನಿ ಉಂಟುಮಾಡಬಹುದು. ಹಾಗಾದರೆ ಸ್ಕ್ರೀನ್ ಟೈಮ್ ಮತ್ತು ಮಕ್ಕಳಿಗೆ ಮಾತು ಬರುವುದಕ್ಕೆ ತಡವಾಗುವುದಕ್ಕೂ ಕಾರಣವೇನು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಮಕ್ಕಳಿಗೆ ಮಾತು ತಡವಾಗಿ ಬರುವುದಕ್ಕೆ ಸ್ಕ್ರೀನ್ ಟೈಮ್ ಕಾರಣವೇ? ಸಂಶೋಧನೆಯಿಂದ ಆಘಾತಕಾರಿ ಅಂಶ ಬಹಿರಂಗ
Screen Time Speech Delay ChildrenImage Credit source: Getty Images
ಪ್ರೀತಿ ಭಟ್​, ಗುಣವಂತೆ
|

Updated on: May 01, 2026 | 5:12 PM

Share

ಇಂದಿನ ಡಿಜಿಟಲ್ ಯುಗದಲ್ಲಿ ಚಿಕ್ಕ ಮಕ್ಕಳ ಕೈಯಲ್ಲಿ ಮೊಬೈಲ್, ಟ್ಯಾಬ್ ಮತ್ತು ಲ್ಯಾಪ್‌ಟಾಪ್ ಎಲ್ಲವನ್ನೂ ನೋಡಬಹುದು. ಅವುಗಳಲ್ಲಿ ದೊಡ್ಡವರಿಗೆ ತಿಳಿಯದ ಎಷ್ಟೋ ವಿಷಯಗಳು ಮಕ್ಕಳಿಗೆ ತಿಳಿದಿರುತ್ತದೆ. ಅದರಲ್ಲಿಯೂ ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಉಪಕರಣಗಳನ್ನು ಬಳಕೆ ಮಾಡುವುದು ಬಹಳ ಸಾಮಾನ್ಯವಾಗಿಬಿಟ್ಟಿವೆ. ಇನ್ನು ಕೆಲವು ಪೋಷಕರು ಮಕ್ಕಳನ್ನು ಜೊತೆಗೆ ಕೂರಿಸಿಕೊಂಡು ಮೊಬೈಲ್ ಬಳಸುತ್ತಾರೆ. ಇವೆಲ್ಲಾ ನೋಡುವುದಕ್ಕೆ ಬಹಳ ಸಾಮಾನ್ಯ ಎನಿಸಬಹುದು. ಆದರೆ ಇತ್ತೀಚಿನ ಸಂಶೋಧನೆಯೊಂದು ಈ ಈ ಅಚ್ಚರಿಯ ಹೇಳಿಕೆ ನೀಡಿದೆ. ಹೌದು, ಮಕ್ಕಳಲ್ಲಿ ಸ್ಕ್ರೀನ್ ಟೈಮ್ (Screen Time) ಅಗತ್ಯಕ್ಕಿಂತ ಹೆಚ್ಚಾಗಿದ್ದು ಈ ರೀತಿಯ ಅಭ್ಯಾಸವು ಮಕ್ಕಳ ಮಾತಿನ ಬೆಳವಣಿಗೆಗೆ ಹಾನಿ ಉಂಟುಮಾಡಬಹುದು ಎಂದಿದೆ. ಹಾಗಾದರೆ ಸ್ಕ್ರೀನ್ ಟೈಮ್ ಮತ್ತು ಮಕ್ಕಳಿಗೆ ಮಾತು ಬರುವುದಕ್ಕೆ ತಡವಾಗುವುದಕ್ಕೂ ಕಾರಣವೇನು, ಪೋಷಕರು ಇದನ್ನು ತಡೆಯಲು ಏನು ಮಾಡಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಚಂಡೀಗಢದ ಪೋಸ್ಟ್ ಗ್ರಾಜುವೇಟ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಎಜುಕೇಶನ್ ಅಂಡ್ ರಿಸರ್ಚ್ (PGIMER) ನಡೆಸಿದ ಅಧ್ಯಯನದ ಪ್ರಕಾರ, ದಿನಕ್ಕೆ ಒಂದು ಗಂಟೆಗೂ ಹೆಚ್ಚು ಸ್ಕ್ರೀನ್ ಬಳಸುವ ಮಕ್ಕಳಲ್ಲಿ “ಸ್ಪೀಚ್ ಡಿಲೇ” ಅಂದರೆ ಮಾತನಾಡಲು ವಿಳಂಬವಾಗುವ ಸಾಧ್ಯತೆ ಹೆಚ್ಚಾಗಿದೆ. ಈ ಅಧ್ಯಯನವನ್ನು 18 ರಿಂದ 24 ತಿಂಗಳೊಳಗಿನ 140 ಆರೋಗ್ಯಕರ ಮಕ್ಕಳ ಮೇಲೆ ಈ ಸಂಶೋಧನೆಯನ್ನು ನಡೆಸಲಾಗಿದೆ.

18 ತಿಂಗಳಿಗಿಂತ ಮುಂಚೆ ಸ್ಕ್ರೀನ್ ಏಕೆ ಅಪಾಯಕಾರಿ?

ತಜ್ಞರ ಪ್ರಕಾರ, ಮಕ್ಕಳ ಮೊದಲ ಎರಡು ವರ್ಷಗಳು ಮೆದುಳಿನ ಬೆಳವಣಿಗೆಗೆ ಅತ್ಯಂತ ಮಹತ್ವದ್ದಾಗಿದೆ. ಈ ಅವಧಿಯಲ್ಲಿ ಮಕ್ಕಳು ಸುತ್ತಮುತ್ತಲಿನವರ ಜೊತೆ ಮಾತನಾಡುವ ಮೂಲಕ ಭಾಷೆಯನ್ನು ಕಲಿಯುತ್ತಾರೆ. ಆದರೆ ಸ್ಕ್ರೀನ್ ಬಳಕೆ ಹೆಚ್ಚಾದರೆ, ಮಕ್ಕಳಿಗೆ ನೇರ ಸಂವಹನದ ಅವಕಾಶ ಕಡಿಮೆಯಾಗುತ್ತದೆ. ಇದರ ಪರಿಣಾಮವಾಗಿ ಮಾತನಾಡುವ ಕೌಶಲ್ಯ ನಿಧಾನಗೊಳ್ಳಬಹುದು. ಅಧ್ಯಯನದಲ್ಲಿ ಕಂಡುಬಂದಂತೆ, 18 ತಿಂಗಳಿಗಿಂತ ಮುಂಚೆ ಸ್ಕ್ರೀನ್ ಬಳಕೆ ಮಾಡಿರುವಂತಹ ಮಕ್ಕಳಲ್ಲಿ ಮಾತಿನ ವಿಳಂಬ ಸಮಸ್ಯೆ ಹೆಚ್ಚು ಕಂಡುಬಂದಿದೆ. ಇದರಿಂದ, ಈ ವಯಸ್ಸಿನ ಮಕ್ಕಳಿಗೆ ಸ್ಕ್ರೀನ್ ಬಳಕೆಯನ್ನು ತಪ್ಪಿಸುವುದು ಅತ್ಯಂತ ಮುಖ್ಯವಾಗಿದೆ.

ಇದನ್ನೂ ಓದಿ: ಮಕ್ಕಳಲ್ಲಿ ಡಿಹೈಡ್ರೇಶನ್ ಆಗಿದೆ ಎಂದು ತಿಳಿದುಕೊಳ್ಳುವುದು ಹೇಗೆ? ಇದನ್ನು ತಡೆಗಟ್ಟಲು ಇಲ್ಲಿದೆ ಸಲಹೆ

ಎಷ್ಟು ಸ್ಕ್ರೀನ್ ಟೈಮ್ ಸುರಕ್ಷಿತ?

ತಜ್ಞರು ಹೇಳುವಂತೆ, 2 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಸ್ಕ್ರೀನ್ ಟೈಮ್ ಸಂಪೂರ್ಣವಾಗಿ ತಪ್ಪಿಸಬೇಕು. ಅಪರೂಪವಾಗಿ ವಿಡಿಯೋ ಕಾಲ್‌ಗಳಿಗೆ ಮಾತ್ರ ಬಳಸಬಹುದು. ಮಕ್ಕಳನ್ನು ಮನರಂಜಿಸಲು ಕಾರ್ಟೂನ್ ಅಥವಾ ವಿಡಿಯೋಗಳ ಮೇಲೆ ಅವಲಂಬಿಸುವುದು ದೀರ್ಘಕಾಲದಲ್ಲಿ ಸಮಸ್ಯೆಗಳನ್ನು ಉಂಟುಮಾಡಬಹುದು. ಹಾಗಾಗಿ ಪೋಷಕರು ಮಕ್ಕಳೊಂದಿಗೆ ಹೆಚ್ಚು ಸಮಯ ಕಳೆಯುವುದು, ಮಾತನಾಡುವುದು, ಕಥೆಗಳನ್ನು ಹೇಳುವುದು ಮತ್ತು ಆಟಗಳಲ್ಲಿ ತೊಡಗಿಸಿಕೊಳ್ಳುವುದು ಭಾಷಾ ಬೆಳವಣಿಗೆಗೆ ಸಹಾಯಕವಾಗುತ್ತದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಎಕ್ಸಿಟ್ ಪೋಲ್ ಬೆನ್ನಲ್ಲೇ ಬಾಂಗ್ಲಾದೇಶಕ್ಕೆ ನಡುಕ
ಎಕ್ಸಿಟ್ ಪೋಲ್ ಬೆನ್ನಲ್ಲೇ ಬಾಂಗ್ಲಾದೇಶಕ್ಕೆ ನಡುಕ
ಮಳೆ ಬಂದು ನಿಂತರೂ 2 ದಿನದಿಂದ ನಡೆಯುತ್ತಲೇ ಇದೆ ಅಂಡರ್ ಪಾಸ್ ಕ್ಲೀನ್ ಕಾರ್ಯ
ಮಳೆ ಬಂದು ನಿಂತರೂ 2 ದಿನದಿಂದ ನಡೆಯುತ್ತಲೇ ಇದೆ ಅಂಡರ್ ಪಾಸ್ ಕ್ಲೀನ್ ಕಾರ್ಯ
‘ವಸುದೇವ ಕುಟುಂಬ’ ಧಾರಾವಾಹಿ ಸಂಭಾವನೆ ವಿವಾದ: ವಿವರಿಸಿದ ನಟಿ ಚೈತ್ರಾ
‘ವಸುದೇವ ಕುಟುಂಬ’ ಧಾರಾವಾಹಿ ಸಂಭಾವನೆ ವಿವಾದ: ವಿವರಿಸಿದ ನಟಿ ಚೈತ್ರಾ
ಬೆಂಗಳೂರಿನ ಈ ಆಟೋ ಚಾಲಕನಿಗೆ ಆಟೋವೇ ಮನೆ, ಮೆಟ್ರೋ ನಿಲ್ದಾಣವೇ ಆಸರೆ
ಬೆಂಗಳೂರಿನ ಈ ಆಟೋ ಚಾಲಕನಿಗೆ ಆಟೋವೇ ಮನೆ, ಮೆಟ್ರೋ ನಿಲ್ದಾಣವೇ ಆಸರೆ
ಲೋಡ್ ಆಗಿದ್ದ ಬಂದೂಕು ಹಿಡಿದು ಯುವಕರ ಹುಚ್ಚಾಟ! ವಿಡಿಯೋ ವೈರಲ್
ಲೋಡ್ ಆಗಿದ್ದ ಬಂದೂಕು ಹಿಡಿದು ಯುವಕರ ಹುಚ್ಚಾಟ! ವಿಡಿಯೋ ವೈರಲ್
ಇನ್ಫೋಸಿಸ್ ನಾರಾಯಣ ಮೂರ್ತಿ ಹೇಳಿಕೆಗೆ ಹರಿಪ್ರಸಾದ್ ಕೆಂಡಾಮಂಡಲ
ಇನ್ಫೋಸಿಸ್ ನಾರಾಯಣ ಮೂರ್ತಿ ಹೇಳಿಕೆಗೆ ಹರಿಪ್ರಸಾದ್ ಕೆಂಡಾಮಂಡಲ
ಲಾಂಗ್ ವೀಕೆಂಡ್: ಬೆಂಗಳೂರು-ನೆಲಮಂಗಲ ಹೈವೇಯಲ್ಲಿ ಭಾರೀ ಟ್ರಾಫಿಕ್ ಜಾಮ್!
ಲಾಂಗ್ ವೀಕೆಂಡ್: ಬೆಂಗಳೂರು-ನೆಲಮಂಗಲ ಹೈವೇಯಲ್ಲಿ ಭಾರೀ ಟ್ರಾಫಿಕ್ ಜಾಮ್!
ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಯುವತಿ ಬಾಳಲ್ಲಿ 'ಕೈ' ನಾಯಕನ ಚೆಲ್ಲಾಟ?: ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ
ಯುವತಿ ಬಾಳಲ್ಲಿ 'ಕೈ' ನಾಯಕನ ಚೆಲ್ಲಾಟ?: ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ
ಬೆಸ್ಕಾಂ ವಿದ್ಯತ್ ದರ ಇಂದಿನಿಂದ ಏರಿಕೆ, ಲಕ್ಷಾಂತರ ಗ್ರಾಹಕರಿಗೆ ಶಾಕ್
ಬೆಸ್ಕಾಂ ವಿದ್ಯತ್ ದರ ಇಂದಿನಿಂದ ಏರಿಕೆ, ಲಕ್ಷಾಂತರ ಗ್ರಾಹಕರಿಗೆ ಶಾಕ್