Home remedies: ಹೊಕ್ಕಳಿಗೆ ಇದರಿಂದ ಮಸಾಜ್ ಮಾಡಿದರೆ ಸರ್ವರೋಗಗಳು ಮಾಯ

ನಾಭಿ ಅಥವಾ ಹೊಕ್ಕಳನ್ನು ಸರಿಯಾದ ರೀತಿಯಲ್ಲಿ ಆರೈಕೆ ಮಾಡುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಬಹುದು. ಆಯುರ್ವೇದದ ಪ್ರಕಾರ, ನಾಭಿಗೆ ನಿಯಮಿತವಾಗಿ ತುಪ್ಪ ಅಥವಾ ಕೊಬ್ಬರಿ ಎಣ್ಣೆಯನ್ನು ಹಚ್ಚಿಕೊಳ್ಳುವುದರಿಂದ ನಾನಾ ರೀತಿಯ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದಾಗಿದೆ. ಆದರೆ ನಾಭಿಗೆ ತುಪ್ಪ ಹಚ್ಚಿಕೊಳ್ಳುವುದರಿಂದ ಸಿಗುವ ಉಪಯೋಗಗಳೇನು? ಯಾವ ರೀತಿ ಹಚ್ಚಿಕೊಳ್ಳಬೇಕು? ಇಲ್ಲಿದೆ ಸಂಪೂರ್ಣ ಮಾಹಿತಿ.

Home remedies: ಹೊಕ್ಕಳಿಗೆ ಇದರಿಂದ ಮಸಾಜ್ ಮಾಡಿದರೆ ಸರ್ವರೋಗಗಳು ಮಾಯ
ಸಾಂದರ್ಭಿಕ ಚಿತ್ರ
Follow us
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​

Updated on: Aug 05, 2024 | 4:08 PM

ಕೆಲವೊಮ್ಮೆ ನಾಭಿ ಅಥವಾ ಹೊಕ್ಕಳಿಂದ, ಯಾವ ರೀತಿಯ ಆರೋಗ್ಯ ಪ್ರಯೋಜನಗಳಿವೆ ಎಂಬ ಕುತೂಹಲ ಕಾಡಬಹುದು. ಆದರೆ ಇದನ್ನು ಸರಿಯಾದ ರೀತಿಯಲ್ಲಿ ಆರೈಕೆ ಮಾಡುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಬಹುದು. ಆಯುರ್ವೇದದ ಪ್ರಕಾರ, ನಾಭಿಗೆ ನಿಯಮಿತವಾಗಿ ತುಪ್ಪ ಅಥವಾ ಕೊಬ್ಬರಿ ಎಣ್ಣೆಯನ್ನು ಹಚ್ಚಿಕೊಳ್ಳುವುದರಿಂದ ನಾನಾ ರೀತಿಯ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದಾಗಿದೆ. ಆದರೆ ನಾಭಿಗೆ ತುಪ್ಪ ಹಚ್ಚಿಕೊಳ್ಳುವುದರಿಂದ ಸಿಗುವ ಉಪಯೋಗಗಳೇನು? ಯಾವ ರೀತಿ ಹಚ್ಚಿಕೊಳ್ಳಬೇಕು? ಇಲ್ಲಿದೆ ಸಂಪೂರ್ಣ ಮಾಹಿತಿ.

ಯಾವ ರೀತಿಯ ಸಮಸ್ಯೆಗೆ ಒಳ್ಳೆಯದು?

*ಕೀಲು ನೋವು, ಹೊಟ್ಟೆಯ ಬೊಜ್ಜು, ಮೊಡವೆ ಸಮಸ್ಯೆ, ಕೂದಲು ಉದುರುವಿಕೆ, ಚರ್ಮದ ಕಾಂತಿ ಹೆಚ್ಚಿಸುವುದಕ್ಕಾಗಿ ಇದು ತುಂಬಾ ಪ್ರಯೋಜನಕಾರಿ ಅಲ್ಲದೆ ಇದು ದೇಹವನ್ನು ಸದೃಢವಾಗಿಸಲು ಸಹಾಯ ಮಾಡುತ್ತದೆ. ಜೊತೆಗೆ ಫಲವತ್ತತೆಯನ್ನು ಹೆಚ್ಚಿಸುತ್ತದೆ.

*ಅಜೀರ್ಣತೆ ಅಥವಾ ವಿಷಯುಕ್ತ ಆಹಾರ ಸೇವನೆಯಿಂದ ಜಠರದ ಆರೋಗ್ಯವನ್ನು ಕಾಪಾಡಲು ಸಹಕಾರಿಯಾಗಿದೆ. ಅಲ್ಲದೇ ಅತಿಸಾರವನ್ನ್ಜು ನಿಲ್ಲಿಸಲೂ ಈ ವಿಧಾನ ಉತ್ತಮವಾಗಿದೆ. ಕೆಲವರಲ್ಲಿ ಹೊಟ್ಟೆಯುಬ್ಬರಿಕೆ, ವಾಕರಿಕೆ ಮೊದಲಾದವುಗಳನ್ನೂ ಕಡಿಮೆ ಮಾಡುತ್ತದೆ.

*ಮಹಿಳೆಯರು ತಮ್ಮ ಮಾಸಿಕ ದಿನಗಳಲ್ಲಿ ಕೆಳಹೊಟ್ಟೆಯ ನೋವು ಮತ್ತು ಸೆಳೆತವನ್ನು ಅನುಭವಿಸುತ್ತಾರೆ. ಕೆಲವೊಮ್ಮೆ ಈ ನೋವು ಅತಿಯಾಗಿ ಕಾಡಬಹುದು ಆ ಸಮಯದಲ್ಲಿ ಈ ವಿಧಾನ ಅನುಸರಿಸುವುದು ತುಂಬಾ ಒಳ್ಳೆಯದು.

ಇದನ್ನೂ ಓದಿ: ಕಾಂಡೋಮ್‌ ಬಳಸುವುದರಿಂದ ಕ್ಯಾನ್ಸರ್ ಬರುವ ಅಪಾಯವಿದೆ; ಸಂಶೋಧನೆ

ಯಾರಿಗೆ ಒಳ್ಳೆಯದು? ನಿಯಮಗಳೇನು?

ಮಕ್ಕಳಿಂದ ದೊಡ್ಡವರ ವರೆಗೆ ಯಾರು ಬೇಕಾದರೂ ಇದನ್ನು ಪ್ರಯತ್ನಿಸಬಹುದು ಇದರಿಂದ ಯಾವುದೇ ರೀತಿಯ ಅಡ್ಡಪರಿಣಾಮಗಳು ಇರುವುದಿಲ್ಲ. ಆದರೆ ಈ ಪ್ರಯೋಗ ಮಾಡುವ ಮುನ್ನ ಕೆಲವು ನಿಯಮಗಳನ್ನು ಅನುಸರಿಸುವುದು ಒಳ್ಳೆಯದು. ನಿಂತಭಂಗಿ ಅಥವಾ ಕುಳಿತ ಭಂಗಿಯಲ್ಲಿ ಮಾಡಬಾರದು. ಇದನ್ನು ಮಾಡುವಾಗ ನೇರವಾಗಿ ಅಂದರೆ ಬೆನ್ನಿನ ಭಾಗ ನೆಲಕ್ಕೆ ತಾಗುವಂತೆ ಮಲಗಿ ಬಳಿಕ, ನಿಮ್ಮ ನಾಭಿಗೆ 2 ರಿಂದ 3 ಹನಿ ತುಪ್ಪ ಅಥವಾ ಕೊಬ್ಬರಿ ಎಣ್ಣೆ ಹಾಕಿ ಚೆನ್ನಾಗಿ ಮತ್ತು ನಿಧಾನವಾಗಿ ಮಸಾಜ್ ಮಾಡಿ. ಇದನ್ನು ವಾರದಲ್ಲಿ 2 ರಿಂದ 3 ಬಾರಿ ಮಾಡುವುದು ತುಂಬಾ ಸೂಕ್ತ. ಶುದ್ಧ ತುಪ್ಪ ಸಿಗದಿದ್ದಲ್ಲಿ ಕೊಬ್ಬರಿ ಎಣ್ಣೆಯ ಬಳಕೆ ಮಾಡಬಹುದು. ಈ ರೀತಿ ಮಾಡುವುದರಿಂದ ಹಲವಾರು ರೀತಿಯ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಹೆಚ್ಚು ಹೆಚ್ಚು ಆರೋಗ್ಯ ಸಮಸ್ಯೆಗಳು ಇದ್ದಲ್ಲಿ ಇದನ್ನು ಪ್ರಯತ್ನಿಸುವ ಮುನ್ನ ನಿಮ್ಮ ವೈದ್ಯರ ಸಲಹೆ ಪಡೆಯಿರಿ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ