ರಾತ್ರಿಯಲ್ಲಿ ಬಟ್ಟೆಯಿಲ್ಲದೆ ಮಲಗಿದರೆ ಎಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆ ನೋಡಿ

ಮಲಗುವಾಗ ಒಳ ಉಡುಪುಗಳನ್ನು ಧರಿಸುವುದನ್ನು ಸಾಮಾನ್ಯವಾಗಿ ಹೆಚ್ಚಿನವರು ಮಾಡುತ್ತಾರೆ. ಆದರೆ ಅದು ಆರೋಗ್ಯಕ್ಕೆ ಒಳ್ಳೆಯದಲ್ಲ. ಅದೂ ಅಲ್ಲದೆ ಕೆಲವರು ರಾತ್ರಿಯಲ್ಲಿ ದಿನವಿಡೀ ಧರಿಸುವ ಅದೇ ಬಟ್ಟೆಗಳನ್ನು ಧರಿಸುತ್ತಾರೆ. ಇದು ಕೂಡ ಒಳ್ಳೆಯ ಅಭ್ಯಾಸವಲ್ಲ ಎಂದು ತಜ್ಞರು ಹೇಳುತ್ತಾರೆ. ವಿಶೇಷವಾಗಿ ಬಿಗಿಯಾದ ಜೀನ್ಸ್ ಧರಿಸಿ ಮಲಗುವುದು ವಿವಿಧ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ಹೇಳಲಾಗುತ್ತದೆ. ಅಂತೆಯೇ, ಒಳ ಉಡುಪುಗಳ ವಿಷಯದಲ್ಲಿ ಅನೇಕ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವುದು ಅನಿವಾರ್ಯ. ರಾತ್ರಿ ಮಲಗುವಾಗ ಒಳ ಉಡುಪುಗಳನ್ನು ಧರಿಸುವುದರಿಂದ ಅನೇಕ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ತಜ್ಞರು ಎಚ್ಚರಿಸುತ್ತಾರೆ. ಹಾಗಾದರೆ ಇದರಿಂದ ಮಹಿಳೆಯರು ಮತ್ತು ಪುರುಷರು ಯಾವ ರೀತಿಯ ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಾರೆ? ಯಾವ ರೀತಿಯ ಸಲಹೆಗಳನ್ನು ಅನುಸರಿಸಬೇಕು? ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

ರಾತ್ರಿಯಲ್ಲಿ ಬಟ್ಟೆಯಿಲ್ಲದೆ ಮಲಗಿದರೆ ಎಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆ ನೋಡಿ
ಸಾಂದರ್ಭಿಕ ಚಿತ್ರ
Follow us
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​

Updated on: Nov 20, 2024 | 3:20 PM

ಆರೋಗ್ಯವಾಗಿರಲು ಆಹಾರ ಸೇವನೆಯಷ್ಟೇ ಅಲ್ಲ. ಉತ್ತಮ ನಿದ್ರೆ ಕೂಡ ಬಹಳ ಮುಖ್ಯ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ನಿದ್ರೆಯ ಕೊರತೆಯು ಅನೇಕ ರೀತಿಯ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ ಎಂದು ತಜ್ಞರು ಹೇಳುತ್ತಾರೆ. ಆದರೆ ಮಲಗುವ ಮೊದಲು ನಾವು ಮಾಡುವ ಕೆಲವು ತಪ್ಪುಗಳು ನಮ್ಮ ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರಬಹುದು. ಮಲಗುವಾಗ ಒಳ ಉಡುಪುಗಳನ್ನು ಧರಿಸುವುದನ್ನು ಸಾಮಾನ್ಯವಾಗಿ ಹೆಚ್ಚಿನವರು ಮಾಡುತ್ತಾರೆ. ಆದರೆ ಅದು ಆರೋಗ್ಯಕ್ಕೆ ಒಳ್ಳೆಯದಲ್ಲ. ಅದೂ ಅಲ್ಲದೆ ಕೆಲವರು ರಾತ್ರಿಯಲ್ಲಿ ದಿನವಿಡೀ ಧರಿಸುವ ಅದೇ ಬಟ್ಟೆಗಳನ್ನು ಧರಿಸುತ್ತಾರೆ. ಇದು ಕೂಡ ಒಳ್ಳೆಯ ಅಭ್ಯಾಸವಲ್ಲ ಎಂದು ತಜ್ಞರು ಹೇಳುತ್ತಾರೆ. ವಿಶೇಷವಾಗಿ ಬಿಗಿಯಾದ ಜೀನ್ಸ್ ಧರಿಸಿ ಮಲಗುವುದು ವಿವಿಧ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ಹೇಳಲಾಗುತ್ತದೆ. ಅಂತೆಯೇ, ಒಳ ಉಡುಪುಗಳ ವಿಷಯದಲ್ಲಿ ಅನೇಕ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವುದು ಅನಿವಾರ್ಯ. ರಾತ್ರಿ ಮಲಗುವಾಗ ಒಳ ಉಡುಪುಗಳನ್ನು ಧರಿಸುವುದರಿಂದ ಅನೇಕ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ತಜ್ಞರು ಎಚ್ಚರಿಸುತ್ತಾರೆ. ಹಾಗಾದರೆ ಇದರಿಂದ ಮಹಿಳೆಯರು ಮತ್ತು ಪುರುಷರು ಯಾವ ರೀತಿಯ ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಾರೆ? ಯಾವ ರೀತಿಯ ಸಲಹೆಗಳನ್ನು ಅನುಸರಿಸಬೇಕು? ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

ಸಡಿಲವಾದ ಒಳ ಉಡುಪು ಧರಿಸಿ

ಮಹಿಳೆಯರು ಬ್ರಾ ಧರಿಸಿ ಮಲಗುವುದು ಸೂಕ್ತವಲ್ಲ ಎಂದು ತಜ್ಞರು ಹೇಳುತ್ತಾರೆ. ವಿಶೇಷವಾಗಿ ರಾತ್ರಿಯಲ್ಲಿ. ಬಿಗಿಯಾದ ಬ್ರಾಗಳನ್ನು ತೆಗೆಯದೆಯೇ ಮಲಗುವುದರಿಂದ ಸರಿಯಾದ ರಕ್ತ ಪರಿಚಲನೆ ಉಂಟಾಗುವುದಿಲ್ಲ. ಇದು ಹೈಪರ್ ಪಿಗ್ಮೆಂಟೇಶನ್ ಗೆ ಕಾರಣವಾಗುವ ಸಾಧ್ಯತೆಗಳಿವೆ. ಮೆಲನಿನ್ ಅಧಿಕವಾಗಿರುವುದರಿಂದ ಇದು ಸಂಭವಿಸುತ್ತದೆ. ಅದಕ್ಕಾಗಿಯೇ ಸಡಿಲವಾದ ಒಳ ಉಡುಪುಗಳನ್ನು ಸಾಧ್ಯವಾದಷ್ಟು ಬಳಸುವುದು ಅಥವಾ ಬಟ್ಟೆ ಧರಿಸದೆಯೇ ಮಲಗುವುದು ಸೂಕ್ತ.

ಇದನ್ನೂ ಓದಿ: ಶುಂಠಿ ರಸದಲ್ಲಿ ಈ ಎರಡನ್ನು ಬೆರೆಸಿ ಸೇವಿಸಿದರೆ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ

ಪುರುಷರಿಗೆ ಆಗುವ ಸಮಸ್ಯೆಯೇನು?

ಬಿಗಿಯಾದ ಒಳ ಉಡುಪುಗಳನ್ನು ಧರಿಸುವುದರಿಂದ ಪುರುಷರು ಅನೇಕ ರೀತಿಯ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ವಿಶೇಷವಾಗಿ ಅತಿಯಾದ ಶಾಖದಿಂದಾಗಿ, ವೀರ್ಯಾಣು ಕೋಶಗಳಲ್ಲಿ ಸಮಸ್ಯೆಗಳಾಗುವ ಸಾಧ್ಯತೆಗಳಿವೆ. ಈ ಸಂದರ್ಭದಲ್ಲಿ ಬೆವರುವುದರಿಂದ ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ಹೇಳಲಾಗುತ್ತದೆ. ಅದಕ್ಕಾಗಿಯೇ ಒಳ ಉಡುಪುಗಳಿಲ್ಲದೆ ಮಲಗುವ ಅಭ್ಯಾಸವನ್ನು ಮಾಡಿಕೊಳ್ಳುವಂತೆ ಸೂಚಿಸಲಾಗುತ್ತದೆ.

ತಜ್ಞರ ಪ್ರಕಾರ, ರಾತ್ರಿ ಸಮಯದಲ್ಲಿ ಬಟ್ಟೆಗಳಿಲ್ಲದೆ ಮಲಗುವುದು ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಮಾತ್ರವಲ್ಲದೆ ಮಾನಸಿಕ ಸಮಸ್ಯೆಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಒಳ ಉಡುಪುಗಳಿಲ್ಲದೆ ಮಲಗುವುದು ದೇಹದಲ್ಲಿ ಕಾರ್ಟಿಸೋಲ್ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ. ಇದು ಮಾನಸಿಕ ಆರೋಗ್ಯವನ್ನು ಸುಧಾರಿಸುತ್ತದೆ. ರಕ್ತದೊತ್ತಡ ನಿಯಂತ್ರಣದಲ್ಲಿರುತ್ತದೆ. ನಿದ್ರಾಹೀನತೆಯ ಸಮಸ್ಯೆಯನ್ನು ದೂರವಿಡಲು ಇದು ತುಂಬಾ ಉಪಯುಕ್ತವಾಗಿದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ