ಆಹಾರದಲ್ಲಿ ಮಶ್ರೂಮ್ ಸೇರಿಸಬೇಕು ಎನ್ನುವುದಕ್ಕೆ ಇಲ್ಲಿದೆ ಕಾರಣ

ನೂಡಲ್ಸ್, ಸ್ಯಾಂಡ್ ವಿಚ್, ಫ್ರೈಡ್ ರೈಸ್ ಹೀಗೆ ನಾನಾ ರೀತಿಯ ಭಕ್ಷಗಳಲ್ಲಿ ಮಶ್ರೂಮ್ ಬಳಸುವುದನ್ನು ನೀವು ನೋಡಿರಬಹುದು. ಆದರೆ ಈ ಅಣಬೆಗಳು ಆಹಾರದ ರುಚಿ ಹೆಚ್ಚಿಸುವುದರ ಜೊತೆಗೆ ಅನೇಕ ರೀತಿಯ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಅದಕ್ಕಾಗಿಯೇ ತಜ್ಞರು ಇದನ್ನು ಪೋಷಕಾಂಶಗಳ ಶಕ್ತಿ ಕೇಂದ್ರ ಎನ್ನುತ್ತಾರೆ. ನಿಮ್ಮ ದೈನಂದಿನ ಆಹಾರದಲ್ಲಿ ಅಣಬೆಗಳನ್ನು ಸೇರಿಸಲು ಮುಖ್ಯ ಕಾರಣಗಳನ್ನು ಇಲ್ಲಿ ನೀಡಲಾಗಿದ್ದು, ಇದರ ಸೇವನೆ ಮಾಡುವುದರಿಂದ ಯಾವ ರೀತಿಯ ಆರೋಗ್ಯ ಪ್ರಯೋಜನಗಳು ಸಿಗುತ್ತವೆ ಎಂಬುದರ ಬಗೆಗಿನ ಸಂಪೂರ್ಣ ಮಾಹಿತಿ ಇಲ್ಲಿದೆ.

ಆಹಾರದಲ್ಲಿ ಮಶ್ರೂಮ್ ಸೇರಿಸಬೇಕು ಎನ್ನುವುದಕ್ಕೆ ಇಲ್ಲಿದೆ ಕಾರಣ
ಸಾಂದರ್ಭಿಕ ಚಿತ್ರ (ಮಶ್ರೂಮ್)
Follow us
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​

Updated on: Dec 13, 2024 | 4:24 PM

ಅಣಬೆ ಅಥವಾ ಮಶ್ರೂಮ್ ಬಗ್ಗೆ ನಿಮಗೆ ತಿಳಿದಿರಬಹುದು. ಆಹಾರಕ್ಕೆ ತನ್ನದೇ ಆದಂತಹ ರುಚಿ ನೀಡುವ ಸಾಮರ್ಥ್ಯ ಇದಕ್ಕಿದೆ. ಇದನ್ನು ನೂಡಲ್ಸ್, ಸ್ಯಾಂಡ್ ವಿಚ್, ಫ್ರೈಡ್ ರೈಸ್ ಹೀಗೆ ನಾನಾ ರೀತಿಯ ಭಕ್ಷಗಳಿಗೆ ಇದನ್ನು ಬಳಸಲಾಗುತ್ತದೆ. ಆದರೆ ನಿಮಗೆ ಗೊತ್ತಾ? ಅಣಬೆಗಳು ಆಹಾರದ ರುಚಿ ಹೆಚ್ಚಿಸುವುದರ ಜೊತೆಗೆ ಅನೇಕ ರೀತಿಯ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಅದಕ್ಕಾಗಿಯೇ ತಜ್ಞರು ಇದನ್ನು ಪೋಷಕಾಂಶಗಳ ಶಕ್ತಿ ಕೇಂದ್ರ ಎನ್ನುತ್ತಾರೆ. ನಿಮ್ಮ ದೈನಂದಿನ ಆಹಾರದಲ್ಲಿ ಅಣಬೆಗಳನ್ನು ಸೇರಿಸಲು ಮುಖ್ಯ ಕಾರಣಗಳನ್ನು ಇಲ್ಲಿ ನೀಡಲಾಗಿದ್ದು, ಇದರ ಸೇವನೆ ಮಾಡುವುದರಿಂದ ಯಾವ ರೀತಿಯ ಆರೋಗ್ಯ ಪ್ರಯೋಜನಗಳು ಸಿಗುತ್ತವೆ ಎಂಬುದರ ಬಗೆಗಿನ ಸಂಪೂರ್ಣ ಮಾಹಿತಿ ಇಲ್ಲಿದೆ.

ಪೋಷಕಾಂಶಗಳಿಂದ ಸಮೃದ್ಧವಾಗಿದೆ

ಅಣಬೆಗಳು ಅಗತ್ಯ ಜೀವಸತ್ವಗಳು, ವಿಟಮಿನ್ ಡಿ, ಬಿ- ಜೀವಸತ್ವಗಳು, ಸೆಲೆನಿಯಮ್ ಮತ್ತು ಪೊಟ್ಯಾಶಿಯಮ್ ನಂತಹ ಖನಿಜಗಳಿಂದ ಸಮೃದ್ಧವಾಗಿರುತ್ತದೆ.

ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ

ಅಣಬೆಗಳು ಬೀಟಾ- ಗ್ಲುಕನ್ ಗಳು ಮತ್ತು ಪ್ರತಿರಕ್ಷಣಾ ವ್ಯವಸ್ಥೆಯನ್ನು ಬೆಂಬಲಿಸುವ ಇತರ ಸಂಯುಕ್ತಗಳನ್ನು ಒಳಗೊಂಡಿರುತ್ತದೆ. ಹಾಗಾಗಿ ಇದರ ಸೇವನೆ ಮಾಡುವುದರಿಂದ ದೇಹವು ಕಾಯಿಲೆಗಳು ಮತ್ತು ಸೋಂಕುಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.

ಮೆದುಳಿನ ಆರೋಗ್ಯವನ್ನು ಕಾಪಾಡಲು ಸಹಾಯ ಮಾಡುತ್ತದೆ

ಎರ್ಗೋಥಿಯೋನಿನ್ ನಂತಹ ಅಣಬೆಗಳಲ್ಲಿನ ಉತ್ಕರ್ಷಣ ನಿರೋಧಕಗಳು ಮೆದುಳಿನ ಕೋಶಗಳನ್ನು ಆಕ್ಸಿಡೇಟಿವ್ ಒತ್ತಡದಿಂದ ರಕ್ಷಿಸುತ್ತದೆ. ಜೊತೆಗೆ ಮರೆವಿನ ಕಾಯಿಲೆಯನ್ನು ಕಡಿಮೆ ಮಾಡುತ್ತದೆ.

ಉತ್ಕರ್ಷಣ ನಿರೋಧಕಗಳ ಉತ್ತಮ ಮೂಲವಾಗಿದೆ

ಅಣಬೆಗಳು ಎರ್ಗೋಥಿಯೋನಿನ್ ಮತ್ತು ಗ್ಲುಟಾಥಿಯೋನ್ ನಂತಹ ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿದೆ. ಇದು ಆಕ್ಸಿಡೇಟಿವ್ ಒತ್ತಡದಿಂದ ರಕ್ಷಿಸುವುದರ ಜೊತೆಗೆ ಹೃದ್ರೋಗ ಮತ್ತು ಕ್ಯಾನ್ಸರ್ ನಂತಹ ದೀರ್ಘಕಾಲದ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ.

ಇದನ್ನೂ ಓದಿ: ಚಿಕ್ಕ ವಯಸ್ಸಿನಲ್ಲಿ ಸ್ತನ ಕ್ಯಾನ್ಸರ್ ಏಕೆ ಸಂಭವಿಸುತ್ತದೆ? ತಜ್ಞರು ಹೇಳುವುದೇನು?

ಹೃದಯಕ್ಕೆ ಒಳ್ಳೆಯದು

ಅಣಬೆಗಳಲ್ಲಿ ಕೊಲೆಸ್ಟ್ರಾಲ್ ಮುಕ್ತವಾಗಿದ್ದು ಸೋಡಿಯಂ ಅಂಶ ಕಡಿಮೆ ಇರುತ್ತದೆ. ಇದು ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಇದರಲ್ಲಿರುವ ಪೊಟ್ಯಾಶಿಯಮ್ ಅಂಶವು ಆರೋಗ್ಯಕರ ರಕ್ತದೊತ್ತಡದ ಮಟ್ಟವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ ಎಂದು ತಜ್ಞರು ಹೇಳುತ್ತಾರೆ.

ಕರುಳಿನ ಆರೋಗ್ಯಕ್ಕೆ ಒಳ್ಳೆಯದು

ಅಣಬೆಗಳು ಪ್ರಿಬಿಯೊಟಿಕ್ಸ್ ನ ನೈಸರ್ಗಿಕ ಮೂಲವಾಗಿದೆ. ಇದು ಮಾನವ ದೇಹದಲ್ಲಿನ ಉತ್ತಮ ಬ್ಯಾಕ್ಟೀರಿಯಾವನ್ನು ಪೋಷಿಸುತ್ತದೆ. ಇದು ಜೀರ್ಣಕ್ರಿಯೆ ಮತ್ತು ಒಟ್ಟಾರೆ ಕರುಳಿನ ಆರೋಗ್ಯವನ್ನು ಉತ್ತೇಜಿಸಲು ಸಹಾಯ ಮಾಡುತ್ತದೆ.

ಇದೆಲ್ಲದರ ಜೊತೆಗೆ ಅಣಬೆಗಳು ಸಸ್ಯಾಹಾರಿ ಆಹಾರ ಕ್ರಮಗಳಿಗೆ ಅತ್ಯುತ್ತಮ ಸೇರ್ಪಡೆಯಾಗಿದ್ದು, ಪ್ರೊಟೀನ್ ನ ಉತ್ತಮ ಮೂಲವಾಗಿದೆ. ಹಾಗಾಗಿ ಇದನ್ನು ನಿಯಮಿತವಾಗಿ ಸೇವನೆ ಮಾಡಬಹುದು ಎಂದು ತಜ್ಞರು ಹೇಳುತ್ತಾರೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದರ್ಶನ್ ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೆ ಪೊಲೀಸರ ಬಿಗಿ ಭದ್ರತೆ
ದರ್ಶನ್ ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೆ ಪೊಲೀಸರ ಬಿಗಿ ಭದ್ರತೆ
ಆಸ್ಪತ್ರೆಯೊಳಗೆ ಜೋರಾಗಿ ಹಾಡು ಹಾಕಿ ನರ್ಸ್​ಗಳ ಡ್ಯಾನ್ಸ್
ಆಸ್ಪತ್ರೆಯೊಳಗೆ ಜೋರಾಗಿ ಹಾಡು ಹಾಕಿ ನರ್ಸ್​ಗಳ ಡ್ಯಾನ್ಸ್
ಗುಲ್ಮಾರ್ಗ್​ನಲ್ಲಿ ತಾಜಾ ಹಿಮಪಾತ; ಕುಣಿದು ಕುಪ್ಪಳಿಸಿದ ಪ್ರವಾಸಿಗರು
ಗುಲ್ಮಾರ್ಗ್​ನಲ್ಲಿ ತಾಜಾ ಹಿಮಪಾತ; ಕುಣಿದು ಕುಪ್ಪಳಿಸಿದ ಪ್ರವಾಸಿಗರು
ದತ್ತಜಯಂತಿ: ಶೋಭಾಯಾತ್ರೆಯ ಮನಮೋಹಕ ದೃಶ್ಯ ಡ್ರೋನ್​ನಲ್ಲಿ ಕಂಡಿದ್ದು ಹೀಗೆ
ದತ್ತಜಯಂತಿ: ಶೋಭಾಯಾತ್ರೆಯ ಮನಮೋಹಕ ದೃಶ್ಯ ಡ್ರೋನ್​ನಲ್ಲಿ ಕಂಡಿದ್ದು ಹೀಗೆ
ಬಿಜೆಪಿ ಅಧಿಕಾರದಲ್ಲಿದ್ದಾಗ ಯತ್ನಾಳ್ ಯಾಕೆ ವಕ್ಫ್ ವಿಷಯ ಮಾತಾಡಲಿಲ್ಲ: ಸಚಿವ
ಬಿಜೆಪಿ ಅಧಿಕಾರದಲ್ಲಿದ್ದಾಗ ಯತ್ನಾಳ್ ಯಾಕೆ ವಕ್ಫ್ ವಿಷಯ ಮಾತಾಡಲಿಲ್ಲ: ಸಚಿವ
ಕ್ಲಾಸ್​ ರೂಂನಲ್ಲೇ ಶಿಕ್ಷಕನಿಗೆ ಚಾಕುವಿನಿಂದ ಇರಿದ ವಿದ್ಯಾರ್ಥಿಗಳು
ಕ್ಲಾಸ್​ ರೂಂನಲ್ಲೇ ಶಿಕ್ಷಕನಿಗೆ ಚಾಕುವಿನಿಂದ ಇರಿದ ವಿದ್ಯಾರ್ಥಿಗಳು
ದರ್ಶನ್ ನಂಬಿಕೊಂಡು ಹಲವು ಕುಟುಂಬಗಳು ಇವೆ: ತರುಣ್ ಸುಧೀರ್​
ದರ್ಶನ್ ನಂಬಿಕೊಂಡು ಹಲವು ಕುಟುಂಬಗಳು ಇವೆ: ತರುಣ್ ಸುಧೀರ್​
ಧಾರವಾಡ ಸಭೆಯಲ್ಲಿ ಭಾಗಿಯಾಗಿದ್ದ ಬೆಲ್ಲದ್ ಸತ್ಯ ಸಭೆಗೆ ತಿಳಿಸಲಿ: ಜಮೀರ್
ಧಾರವಾಡ ಸಭೆಯಲ್ಲಿ ಭಾಗಿಯಾಗಿದ್ದ ಬೆಲ್ಲದ್ ಸತ್ಯ ಸಭೆಗೆ ತಿಳಿಸಲಿ: ಜಮೀರ್
ದರ್ಶನ್​ಗೆ ಜಾಮೀನು: ತೂಗುದೀಪ ನಿಲಯದ ಬಳಿ ಅಭಿಮಾನಿಗಳ ಸಂಭ್ರಮ
ದರ್ಶನ್​ಗೆ ಜಾಮೀನು: ತೂಗುದೀಪ ನಿಲಯದ ಬಳಿ ಅಭಿಮಾನಿಗಳ ಸಂಭ್ರಮ
ಸುಮ್ಮನೆ ಮಾತಾಡಿದರೂ ಅನುಕುಮಾರ್ ತಾಯಿ ಜಯಮ್ಮಗೆ ಎದೆನೋವು ಬರುತ್ತದೆ
ಸುಮ್ಮನೆ ಮಾತಾಡಿದರೂ ಅನುಕುಮಾರ್ ತಾಯಿ ಜಯಮ್ಮಗೆ ಎದೆನೋವು ಬರುತ್ತದೆ