ಗಂಟೆಗಳ ಕಾಲ ಕುಳಿತು ಕೆಲಸ ಮಾಡ್ತೀರಾ? ಹಾಗಿದ್ರೆ ಇನ್ನಾದರೂ ತಪ್ಪದೆ ಈ ವಿಷಯಗಳನ್ನು ತಿಳಿದುಕೊಳ್ಳಿ

ಇತ್ತೀಚಿನ ದಿನಗಳಲ್ಲಿ ಅನೇಕರು ದೀರ್ಘಕಾಲ ಕುಳಿತು ಕೆಲಸ ಮಾಡುತ್ತಾರೆ. ಆದರೆ ಇದನ್ನು ಸಾಮಾನ್ಯ ಅಭ್ಯಾಸವೆಂದು ಪರಿಗಣಿಸಬಾರದು.ಏಕೆಂದರೆ ಇದು ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ ಈ ರೀತಿಯ ಸಮಸ್ಯೆಗಳನ್ನು ತಡೆಯಲು ಕೆಲವು ಸಲಹೆಗಳನ್ನು ಅನುಸರಿಸುವುದು ಬಹಳ ಮುಖ್ಯವಾಗುತ್ತದೆ. ಇಲ್ಲವಾದಲ್ಲಿ ಇದು ನಾನಾ ರೀತಿಯ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಈ ಬಗ್ಗೆ ಮತ್ತಷ್ಟು ಮಾಹಿತಿಯನ್ನು ಡಾ. ಅಜಯ್ ಕುಮಾರ್ ನೀಡಿದ್ದು, ಯಾವ ರೀತಿಯ ಲಕ್ಷಣಗಳು ಕಂಡುಬಂದಾಗ ನಿರ್ಲಕ್ಷ್ಯ ಮಾಡಬಾರದು, ಜೊತೆಗೆ ಈ ರೀತಿಯ ಸಮಸ್ಯೆ ತಡೆಯಲು ಏನು ಮಾಡಬಹುದು ಎಂಬುದರ ಬಗ್ಗೆ ಮಾಹಿತಿ ನೀಡಿದ್ದಾರೆ.

ಗಂಟೆಗಳ ಕಾಲ ಕುಳಿತು ಕೆಲಸ ಮಾಡ್ತೀರಾ? ಹಾಗಿದ್ರೆ ಇನ್ನಾದರೂ ತಪ್ಪದೆ ಈ ವಿಷಯಗಳನ್ನು ತಿಳಿದುಕೊಳ್ಳಿ
From Back Pain to Weight Gain: The Hidden Risks of Sitting Jobs
Image Credit source: Getty Images

Updated on: Mar 19, 2026 | 5:55 PM

ಇಂದಿನ ಜೀವನಶೈಲಿಯಲ್ಲಿ, ಆಫೀಸ್, ಮನೆ ಕೆಲಸ ಅಥವಾ ಆನ್‌ಲೈನ್ ಅಧ್ಯಯನಕ್ಕಾಗಿ ಹಲವು ಗಂಟೆಗಳ ಕಾಲ ಕುಳಿತುಕೊಂಡು ಕೆಲಸ ಮಾಡುವುದು ಬಹಳ ಸಾಮಾನ್ಯವಾಗಿದೆ. ಜನರು ಕಂಪ್ಯೂಟರ್, ಲ್ಯಾಪ್‌ಟಾಪ್ ಅಥವಾ ಮೊಬೈಲ್ ಮುಂದೆ ನಿರಂತರವಾಗಿ ಕುಳಿತುಕೊಂಡಿರುತ್ತಾರೆ. ಆದರೆ ತಜ್ಞರ ಪ್ರಕಾರ, ಈ ಅಭ್ಯಾಸವನ್ನು ನಿರ್ಲಕ್ಷ್ಯ ಮಾಡುವುದು ಆರೋಗ್ಯಕ್ಕೆ ಹಾನಿಕಾರಕವಾಗಬಹುದು. ಹೌದು, ಡಾ. ಅಜಯ್ ಕುಮಾರ್ ಹೇಳುವ ಪ್ರಕಾರ, ದೀರ್ಘಕಾಲ ಕುಳಿತುಕೊಳ್ಳುವುದರಿಂದ ಸ್ನಾಯುಗಳು ದುರ್ಬಲವಾಗುತ್ತವೆ ಮತ್ತು ಬೆನ್ನುಹುರಿಯ ಮೇಲೆ ಒತ್ತಡ ಹೆಚ್ಚುತ್ತದೆ. ಇದರಿಂದ ಬೆನ್ನು ನೋವು (Back Pain) ಸಾಮಾನ್ಯವಾಗುತ್ತದೆ. ರಕ್ತ ಸಂಚಾರ ನಿಧಾನಗೊಳ್ಳುವುದರಿಂದ ಕೈ- ಕಾಲುಗಳಲ್ಲಿ ಊತ ಕಾಣಿಸಬಹುದು. ಹಾಗಾಗಿ ಈ ರೀತಿಯ ಸಮಸ್ಯೆಗಳನ್ನು ತಡೆಯಲು ಕೆಲವು ಸಲಹೆಗಳನ್ನು ಅನುಸರಿಸುವುದು ಬಹಳ ಮುಖ್ಯವಾಗುತ್ತದೆ. ಇಲ್ಲವಾದಲ್ಲಿ ಇದು ನಾನಾ ರೀತಿಯ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ ಎಂದು ಹೇಳಿದ್ದಾರೆ.

ಡಾ. ಅಜಯ್ ಕುಮಾರ್ ಪ್ರಕಾರ, ಇದರ ಜೊತೆಗೆ, ಈ ರೀತಿಯ ಅಭ್ಯಾಸದಿಂದ ತೂಕ ಹೆಚ್ಚಳ, ಹೃದಯಕ್ಕೆ ಸಂಬಂಧ ಪಟ್ಟ ರೋಗ ಮತ್ತು ಮಧುಮೇಹದಂತಹ ಅಪಾಯ ಹೆಚ್ಚಾಗಬಹುದು. ಅಷ್ಟು ಮಾತ್ರವಲ್ಲ, ಮೆಟಾಬಾಲಿಸಮ್ ನಿಧಾನಗೊಳ್ಳುವುದರಿಂದ ಕ್ಯಾಲೊರಿಗಳು ಸರಿಯಾಗಿ ಕಾಲಿಯಾಗದಿರಬಹುದು. ಜೊತೆಗೆ ನಿರಂತರವಾಗಿ ಕಂಪ್ಯೂಟರ್, ಲ್ಯಾಪ್‌ಟಾಪ್ ಅಥವಾ ಮೊಬೈಲ್ ನೋಡುವುದರಿಂದ ಕಣ್ಣುಗಳ ಮೇಲೂ ಒತ್ತಡ ಹೆಚ್ಚಾಗುವುದರಿಂದ ದೃಷ್ಟಿಗೆ ಸಂಬಂಧಿಸಿದ ಸಮಸ್ಯೆಗಳು ಕಾಣಿಸಬಹುದು. ಮಾನಸಿಕ ಆರೋಗ್ಯದ ಮೇಲೂ ಪರಿಣಾಮ ಬೀರಬಹುದು, ಚಡಪಡಿಕೆ ಮತ್ತು ಕೆಲಸದ ಕಡೆ ಕೊಡುವಂತಹ ಗಮನ ಕಡಿಮೆಯಾಗಬಹುದು ಎಂದು ಹೇಳಿದ್ದಾರೆ.

ಇದನ್ನೂ ಓದಿ: ನೀವು ಕೆಲಸ ಮಾಡುವಾಗ ಕುಳಿತುಕೊಳ್ಳುವಂತಹ ಭಂಗಿಯಿಂದಲೂ ಬರಬಹುದು ಬೆನ್ನು ನೋವು ಎಚ್ಚರಿಕೆ ನೀಡಿದ ಡಾ ಅಜಯ್‌ ಹೆಗ್ಡೆ

ಈ ರೀತಿಯ ಲಕ್ಷಣ ಕಂಡುಬಂದಾಗ ನಿರ್ಲಕ್ಷಿಸಬಾರದು!

  • ಬೆನ್ನು ನೋವು
  • ಕಣ್ಣುಗಳಲ್ಲಿ ಉರಿ, ದಣಿವು
  • ಕೈ-ಕಾಲುಗಳಲ್ಲಿ ಊತ, ನೋವು
  • ಶಕ್ತಿ ಕೊರತೆ, ಚಡಪಡಿಕೆ, ನಿದ್ರೆ ಸರಿಯಾಗಿ ಬಾರದಿರುವುದು
  • ತೂಕ ಹೆಚ್ಚಳ, ಸ್ನಾಯು ದುರ್ಬಲತೆ

ತಡೆಗಟ್ಟುವುದು ಹೇಗೆ?

  • ಪ್ರತೀ ಗಂಟೆಗೊಮ್ಮೆ ಬ್ರೇಕ್ ತೆಗೆದುಕೊಳ್ಳಿ
  • ಎದ್ದು ಸ್ಟ್ರೆಚಿಂಗ್ ಅಥವಾ ಸಣ್ಣ ವಾಕ್ ಮಾಡಿ ಬನ್ನಿ
  • ಸರಿಯಾದ ಸ್ಥಿತಿಯಲ್ಲಿ ಕುಳಿತುಕೊಳ್ಳಿ, ಕಂಪ್ಯೂಟರ್ ಪರದೆ ಕಣ್ಣು ಮಟ್ಟದಲ್ಲಿ ಇರಲಿ
  • ಸಮತೋಲನ ಆಹಾರ ಸೇವಿಸಿ, ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಿರಿ
  • ಸ್ಟ್ಯಾಂಡಿಂಗ್ ಡೆಸ್ಕ್ ಅಥವಾ ಯೋಗ, ನಿಯಮಿತ ವ್ಯಾಯಾಮ ಮಾಡುವುದನ್ನು ಮರೆಯಬೇಡಿ

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us