Diabetes : ಕುಳ್ಳಗಿರುವವರು ಮಧುಮೇಹದಿಂದ ಬಳಲುವ ಸಾಧ್ಯತೆ ಹೆಚ್ಚು: ಸಂಶೋಧನೆ

ಕಡಿಮೆ ಎತ್ತರ ಅಂದರೆ ಕುಳ್ಳಗೆ ಇರುವ ಜನರಲ್ಲಿ, ಯಕೃತ್ತು ಹೆಚ್ಚು ಕೊಬ್ಬನ್ನು ಸಂಗ್ರಹಿಸುತ್ತದೆ. ಇದರಿಂದ ಹೃದ್ರೋಗ, ಅಧಿಕ ರಕ್ತದೊತ್ತಡ, ಕೊಲೆಸ್ಟ್ರಾಲ್, ದೇಹದಲ್ಲಿ ಊತ ಮತ್ತು ಚಯಾಪಚಯ ಕಾಯಿಲೆಗಳು ಬರುವ ಸಾಧ್ಯತೆ ಹೆಚ್ಚು. ಇವೆಲ್ಲವೂ ಮಧುಮೇಹಕ್ಕೆ ಸಂಬಂಧಿಸಿದೆ ಎನ್ನುತ್ತಾರೆ ಆರೋಗ್ಯ ತಜ್ಞರು.

Diabetes : ಕುಳ್ಳಗಿರುವವರು ಮಧುಮೇಹದಿಂದ ಬಳಲುವ ಸಾಧ್ಯತೆ ಹೆಚ್ಚು: ಸಂಶೋಧನೆ
Follow us
|

Updated on: Jun 27, 2024 | 8:29 PM

ಜಗತ್ತನ್ನು ಕಾಡುತ್ತಿರುವ ಕಾಯಿಲೆಗಳಲ್ಲಿ ಮಧುಮೇಹವು ಕೂಡ ಒಂದು. ಈ ಕಾಯಿಲೆಗೆ ತುತ್ತಾಗುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಒಂದು ಕಾಲದಲ್ಲಿ ವಯಸ್ಸಾದವರಲ್ಲಿ ಮಾತ್ರ ಕಂಡು ಬರುತ್ತಿದ್ದ ಮಧುಮೇಹ, ಈಗ 30ರ ಹರೆಯದವರಲ್ಲಿ ಕಾಣಿಸಿಕೊಳ್ಳುತ್ತಿರುವುದು ಆತಂಕಕಾರಿ ಸಂಗತಿ. ಸಂಶೋಧಕರು ಮಧುಮೇಹವನ್ನು ನಿರಂತರವಾಗಿ ಅಧ್ಯಯನ ಮಾಡುತ್ತಿದ್ದಾರೆ. ಇದರೊಂದಿಗೆ ಈ ಕಾಯಿಲೆಗೆ ಸಂಬಂಧಿಸಿದಂತೆ ಹಲವು ಕುತೂಹಲಕಾರಿ ಸಂಗತಿಗಳು ಬೆಳಕಿಗೆ ಬರುತ್ತಿವೆ.

ಈ ಹಿನ್ನೆಲೆಯಲ್ಲಿ ಜರ್ಮನಿಯ ಸಂಶೋಧಕರು ಇತ್ತೀಚೆಗೆ ನಡೆಸಿದ ಅಧ್ಯಯನವೊಂದು ಹಲವು ಕುತೂಹಲಕಾರಿ ಸಂಗತಿಗಳನ್ನು ಬಹಿರಂಗಪಡಿಸಿದೆ. ಈ ಅಧ್ಯಯನವು ಕಡಿಮೆ ಎತ್ತರ ಇರುವವರಿಗೆ ಮಧುಮೇಹ ಬರುವ ಸಾಧ್ಯತೆ ಹೆಚ್ಚು ಎಂದು ತೋರಿಸಿದೆ. ಹೆಚ್ಚು ಎತ್ತರದವರಿಗೆ ಹೋಲಿಸಿದರೆ ಕುಳ್ಳಗಿರುವವರು ಮಧುಮೇಹದಿಂದ ಬಳಲುವ ಸಾಧ್ಯತೆ ಹೆಚ್ಚು ಎಂದು ಸಂಶೋಧನೆಯಲ್ಲಿ ತೊಡಗಿರುವ ವಿಜ್ಞಾನಿಗಳು ಹೇಳಿದ್ದಾರೆ. ಕಡಿಮೆ ವಯಸ್ಸಿನ ಪುರುಷರಲ್ಲಿ ಮಧುಮೇಹ ಬರುವ ಅಪಾಯವು 41 ಪ್ರತಿಶತದಷ್ಟು ಹೆಚ್ಚಿದೆ ಎಂದು ಅಧ್ಯಯನ ಬಹಿರಂಗಪಡಿಸಿದೆ.

ಇದನ್ನೂ ಓದಿ: ಮಲಗಿದ್ದಲೇ ನಿಮಗೆ ಗೊತ್ತಿಲ್ಲದೆ ಮೂತ್ರ ವಿಸರ್ಜನೆ ಮಾಡುವ ಅಭ್ಯಾಸ ಇದ್ಯಾ? ಈ ಸಮಸ್ಯೆಯಾಗಿರಬಹುದು

ಕಡಿಮೆ ಎತ್ತರ ಅಂದರೆ ಕುಳ್ಳಗೆ ಇರುವ ಜನರಲ್ಲಿ, ಯಕೃತ್ತು ಹೆಚ್ಚು ಕೊಬ್ಬನ್ನು ಸಂಗ್ರಹಿಸುತ್ತದೆ. ಇದರಿಂದ ಹೃದ್ರೋಗ, ಅಧಿಕ ರಕ್ತದೊತ್ತಡ, ಕೊಲೆಸ್ಟ್ರಾಲ್, ದೇಹದಲ್ಲಿ ಊತ ಮತ್ತು ಚಯಾಪಚಯ ಕಾಯಿಲೆಗಳು ಬರುವ ಸಾಧ್ಯತೆ ಹೆಚ್ಚುತ್ತದೆ ಎನ್ನುತ್ತಾರೆ ತಜ್ಞರು. ಇವೆಲ್ಲವೂ ಮಧುಮೇಹಕ್ಕೆ ಸಂಬಂಧಿಸಿದೆ. ಪಿತ್ತಜನಕಾಂಗದಲ್ಲಿ ಕೊಬ್ಬು ಹೆಚ್ಚಾದಂತೆ, ಮಧುಮೇಹದ ಅಪಾಯವು ಹೆಚ್ಚಾಗುತ್ತದೆ. ಈ ಕಾರಣದಿಂದಲೇ ಎತ್ತರ ಕಡಿಮೆ ಇರುವವರಿಗೆ ಮಧುಮೇಹ ಬರುವ ಸಾಧ್ಯತೆ ಹೆಚ್ಚು ಎನ್ನುತ್ತಾರೆ ಸಂಶೋಧಕರು.

ಇದೇ ವೇಳೆ ಮಧುಮೇಹ ವಂಶಪಾರಂಪರ್ಯವಾಗಿ ಬರುತ್ತದೆ ಎಂದು ಹೇಳಲಾಗುತ್ತಿದೆ. ಆದರೆ ಉತ್ತಮ ಜೀವನಶೈಲಿಯನ್ನು ಅಳವಡಿಸಿಕೊಂಡು ಆಹಾರ ಸೇವನೆಯಲ್ಲಿ ಎಚ್ಚರಿಕೆ ವಹಿಸಿದರೆ ಮಧುಮೇಹವನ್ನು ನಿಯಂತ್ರಿಸಬಹುದು. ಎಲ್ಲಕ್ಕಿಂತ ಮುಖ್ಯವಾಗಿ ಪ್ರತಿದಿನ ವಾಕಿಂಗ್ ಅಭ್ಯಾಸ ಮಾಡಿಕೊಳ್ಳುವಂತೆ ತಜ್ಞರು ಸಲಹೆ ನೀಡುತ್ತಾರೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ