ಊಟದ ಮಧ್ಯೆ ಆಗಾಗ ನೀರು ಕುಡಿಯಬೇಕಾ ಅಥವಾ ಬೇಡವಾ? ತಜ್ಞರ ಅಭಿಪ್ರಾಯ ಏನು?

ಆಹಾರ ಸೇವಿಸುವಾಗ ಅಥವಾ ತಿಂದ ತಕ್ಷಣ ನೀರು ಕುಡಿಯುವುದು ಒಳ್ಳೆಯದಲ್ಲ ಎಂದು ಹಲವರು ಭಾವಿಸುತ್ತಾರೆ. ಆಹಾರವನ್ನು ಸೇವಿಸುವಾಗ ನೀರು ಕುಡಿಯುವುದು ಜೀರ್ಣಕ್ರಿಯೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಲಾಗುತ್ತದೆ.

ಊಟದ ಮಧ್ಯೆ ಆಗಾಗ ನೀರು ಕುಡಿಯಬೇಕಾ ಅಥವಾ ಬೇಡವಾ? ತಜ್ಞರ ಅಭಿಪ್ರಾಯ ಏನು?
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Sep 17, 2022 | 7:00 AM

ಊಟ ಮಾಡುವಾಗ ನೀರು ಕುಡಿಯಬೇಕಾ ಅಥವಾ ಬೇಡವೇ ಎಂಬುದು ಯಕ್ಷ ಪ್ರಶ್ನೆ ನಮ್ಮನ್ನು ಊಟ ಮಾಡುವಾಗಲೆಲ್ಲ ಕಾಡುತ್ತಡೆ. ಸಾಮಾನ್ಯವಾಗಿ ನಾವು ಅವಸರದಲ್ಲಿ ನೀರು ಕುಡಿಯುತ್ತೇವೆ. ಆದರೆ ಸಾಮಾನ್ಯವಾಗಿ, ಅನೇಕರು ತಿನ್ನುವಾಗ ನೀರು ಕುಡಿಯಬಾರದು ಮತ್ತು ತಿಂದ ನಂತರ ಕುಡಿಯಲು ಸಲಹೆ ನೀಡುತ್ತಾರೆ. ಆದರೆ ಈ ವಿಷಯದಲ್ಲಿ ಹಲವು ಭಿನ್ನಾಭಿಪ್ರಾಯಗಳಿವೆ. ಆಹಾರ ಸೇವಿಸುವಾಗ ಅಥವಾ ತಿಂದ ತಕ್ಷಣ ನೀರು ಕುಡಿಯುವುದು ಒಳ್ಳೆಯದಲ್ಲ ಎಂದು ಹಲವರು ಭಾವಿಸುತ್ತಾರೆ. ಆಹಾರವನ್ನು ಸೇವಿಸುವಾಗ ನೀರು ಕುಡಿಯುವುದು ಜೀರ್ಣಕ್ರಿಯೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಲಾಗುತ್ತದೆ. ಕೆಲವು ಆಯುರ್ವೇದ ತಜ್ಞರು ಊಟಕ್ಕೆ ಮೊದಲು ಮತ್ತು ನಂತರ ಕನಿಷ್ಠ ಅರ್ಧ ಗಂಟೆಯ ನಂತರ ನೀರು ಕುಡಿಯಲು ಸಲಹೆ ನೀಡುತ್ತಾರೆ. ಊಟ ಮಾಡುವಾಗ ನೀರು ಕುಡಿಯಬೇಕಾ ಅಥವಾ ಬೇಡವಾ? ಎಂಬ ಬಗ್ಗೆ ಈ ಲೇಖನದಲ್ಲಿ ನಾವು ತಿಳಿಯೋಣ.

ಊಟ ಮಾಡುವಾಗ ನೀರು ಕುಡಿಯಬಹುದು. ವಾಸ್ತವವಾಗಿ, ಪೌಷ್ಟಿಕತಜ್ಞರು ಯಾವುದೇ ಸಮಯದಲ್ಲಿ ನೀರು ಕುಡಿಯುವುದು ಒಳ್ಳೆಯದು ಎಂದು ಸೂಚಿಸುತ್ತಾರೆ. ಊಟದ ಮೊದಲು ಅಥವಾ ನಂತರ ನೀರು ಕುಡಿಯುವುದು ಜೀರ್ಣಕಾರಿ ಕಿಣ್ವಗಳನ್ನು ದುರ್ಬಲಗೊಳಿಸುತ್ತದೆ. ಜೀರ್ಣಕ್ರಿಯೆ ನಿಧಾನವಾಗುತ್ತದೆ ಎಂಬ ಅಭಿಪ್ರಾಯಕ್ಕೆ ಯಾವುದೇ ವೈಜ್ಞಾನಿಕ ಪುರಾವೆಗಳಿಲ್ಲ ಎಂದು ತಜ್ಞರು ಹೇಳುತ್ತಾರೆ. ಊಟದ ಸಮಯದಲ್ಲಿ ನೀರು ಕುಡಿಯಬಹುದು ಎಂಬುದು ಸ್ಪಷ್ಟವಾಗಿದೆ.

ನಮ್ಮ ಆಹಾರದಲ್ಲಿ ಸಾಕಷ್ಟು ನೀರಿನ ಅಂಶ ಇರುತ್ತದೆ. ಭಾರತೀಯರು ನೀರನ್ನು ಹೊಂದಿರುವ ಸೂಪ್ ಮತ್ತು ಜ್ಯೂಸ್‌ಗಳಂತಹ ತೆಳುವಾದ ಆಹಾರವನ್ನು ಸೇವಿಸುತ್ತಾರೆ. ಸಲಾಡ್‌ಗಳನ್ನು ಸಹ ತಿನ್ನುತ್ತಾರೆ, ಇದರಲ್ಲಿ ನೀರಿನ ಅಂಶ ಕೂಡ ಇರುತ್ತದೆ. ತರಕಾರಿಗಳಲ್ಲಿ ನೀರು, ಮೊಸರು ಮತ್ತು ಮಜ್ಜಿಗೆಯಲ್ಲಿ ನೀರು ಇರುತ್ತದೆ. ಇದಲ್ಲದೆ, ಆಹಾರವನ್ನು ಜಗಿಯುವ ಮೂಲಕ ಉತ್ಪತ್ತಿಯಾಗುವ ಲಾಲಾರಸವು ನೀರನ್ನು ಹೊಂದಿರುತ್ತದೆ. ನಾವು ಸೇವಿಸುವ ಹೆಚ್ಚಿನ ಸಾಂಪ್ರದಾಯಿಕ ಆಹಾರವು ನೀರನ್ನು ಒಳಗೊಂಡಿರುತ್ತದೆ, ಇದು ಯಾವುದೇ ರೀತಿಯಲ್ಲಿ ಜೀರ್ಣಕ್ರಿಯೆಯ ಮೇಲೆ ಪರಿಣಾಮ ಬೀರುವುದಿಲ್ಲ. ಹಾಗಾಗಿ ನೀರು ಕುಡಿಯದೇ ಇರುವುದರಲ್ಲಿ ಅರ್ಥವಿಲ್ಲ ಎನ್ನುತ್ತಾರೆ ಪೌಷ್ಟಿಕತಜ್ಞರು.

ಊಟದ ಜೊತೆ ನೀರು ಕುಡಿಯಬಾರದು ಎಂಬ ನಿಯಮವನ್ನು ಅನೇಕರು ಅನುಸರಿಸುತ್ತಾರೆ. ಕೆಲವರು ಒಂದು ಗಂಟೆ ಅಥವಾ 2 ಗಂಟೆಗಳ ಕಾಲ ಒಂದು ಹನಿ ನೀರು ಸಹ ಕುಡಿಯುವುದಿಲ್ಲ. ಆದರೆ ನಿರ್ಜಲೀಕರಣದ ಅಪಾಯ ಸಂಭವಿಸಬಹುದು ಎಂದು ತಜ್ಞರು ಹೇಳುತ್ತಾರೆ. ನಿರ್ಜಲೀಕರಣವು ದೀರ್ಘಕಾಲದ ಮಲಬದ್ಧತೆ ಮತ್ತು ಮೂತ್ರಪಿಂಡದ ಕಲ್ಲುಗಳಂತಹ ಅಪಾಯಕಾರಿ ಪರಿಣಾಮಗಳಿಗೆ ಕಾರಣವಾಗಬಹುದು ಎಂದು ಈಗಾಗಲೇ ಸಾಬೀತಾಗಿದೆ. ಒಬ್ಬ ವ್ಯಕ್ತಿಯು ದಿನಕ್ಕೆ 3 ಅಥವಾ 4 ಲೀಟರ್ ನೀರನ್ನು ಕುಡಿಯಬೇಕು ಎಂದು ಪೌಷ್ಟಿಕತಜ್ಞರು ಹೇಳುತ್ತಾರೆ.

ಮತ್ತಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ