AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಳೆಹಣ್ಣು ಸೇವಿಸುವುದರಿಂದ ಆರೋಗ್ಯದ ಮೇಲೆ ಆಗುವ ದುಷ್ಪರಿಣಾಮಗಳು

ಒಂದು ಬಾಳೆಹಣ್ಣು ಸುಮಾರು 100 ಕ್ಯಾಲೋರಿಗಳನ್ನು ಹೊಂದಿರುತ್ತದೆ. ದಿನಕ್ಕೆ ಎರಡಕ್ಕಿಂತ ಹೆಚ್ಚು ಬಾಳೆಹಣ್ಣು ತಿಂದರೆ ತೂಕ ಬೇಗ ಹೆಚ್ಚುತ್ತದೆ. ಬಾಳೆಹಣ್ಣು ತಿನ್ನುವುದರಿಂದ ದೇಹಕ್ಕೆ ತ್ವರಿತ ಶಕ್ತಿ ದೊರೆಯುವುದಲ್ಲದೆ ರೋಗ ನಿರೋಧಕ ಶಕ್ತಿಯೂ ಹೆಚ್ಚುತ್ತದೆ. ಅದಾಗ್ಯೂ, ಬಾಳೆ ಹಣ್ಣು ಆರೋಗ್ಯದ ಮೇಲೆ ದುಷ್ಪರಿಣಾಮವನ್ನೂ ಉಂಟುಮಾಡಬಹುದು ಎಂಬುದು ನಿಮಗೆ ಗೊತ್ತಿದೆಯೇ?

ಬಾಳೆಹಣ್ಣು ಸೇವಿಸುವುದರಿಂದ ಆರೋಗ್ಯದ ಮೇಲೆ ಆಗುವ ದುಷ್ಪರಿಣಾಮಗಳು
ಬಾಳೆಹಣ್ಣುImage Credit source: Shutterstock
Rakesh Nayak Manchi
|

Updated on:Feb 18, 2023 | 7:23 PM

Share

ಎಲ್ಲಾ ಕಾಲದಲ್ಲೂ ಸಿಗುವ ಹಣ್ಣುಗಳಲ್ಲಿ ಬಾಳೆಹಣ್ಣು (Banana) ಕೂಡ ಒಂದು. ಬಾಳೆಹಣ್ಣು ಕೂಡ ಆರೋಗ್ಯಕ್ಕೆ ಅಗತ್ಯವಾದ ಪೋಷಕಾಂಶಗಳನ್ನು ಒದಗಿಸುವ ಸೂಪರ್ ಫುಡ್ ಆಗಿದೆ. ಬಾಳೆಹಣ್ಣು ತಿನ್ನುವುದರಿಂದ ದೇಹಕ್ಕೆ ತ್ವರಿತ ಶಕ್ತಿ ದೊರೆಯುವುದಲ್ಲದೆ ರೋಗ ನಿರೋಧಕ ಶಕ್ತಿಯೂ ಹೆಚ್ಚುತ್ತದೆ. ಅದಕ್ಕೆ ಕಾರಣವೆಂದರೆ ಬಾಳೆಹಣ್ಣಿನಲ್ಲಿ ಫೈಬರ್, ಜೀವಸತ್ವಗಳು, ಖನಿಜಗಳು, ಸಕ್ಕರೆ, ಮೆಗ್ನೀಸಿಯಮ್, ಪೊಟ್ಯಾಸಿಯಮ್ ಮತ್ತು ಕಾರ್ಬೋಹೈಡ್ರೇಟ್‌ಗಳಂತಹ ಪೋಷಕಾಂಶಗಳು ಸಮೃದ್ಧವಾಗಿರುವುದು. ಜೀರ್ಣಕ್ರಿಯೆಯಲ್ಲಿ ಪ್ರಮುಖ ಪಾತ್ರ ವಹಿಸುವ ಬಾಳೆಹಣ್ಣು ಕರುಳಿನ ಚಲನೆಯನ್ನು ಸಹ ನಿಯಂತ್ರಿಸುತ್ತದೆ. ಹಲವಾರು ಪೌಷ್ಟಿಕಾಂಶದ ಗುಣಗಳನ್ನು ಹೊಂದಿರುವ ಬಾಳೆ ಹಣ್ಣು ಸೇವಿಸುವುದರಿಂದ ಆರೋಗ್ಯಕ್ಕೆ ಅನೇಕ ರೀತಿಯಲ್ಲಿ ಪ್ರಯೋಜನಗಳಿವೆ (Benefits of Banana). ಅದೇ ರೀತಿ ದುಷ್ಪರಿಣಾಮವೂ (Side effects of bananas) ಇದೆ ಎಂಬುದು ನಿಮಗೆ ಗೊತ್ತೇ?

ಅತಿಯಾದರೆ ಅಮೃತವೂ ವಿಷ ಎಂಬಂತೆ ಬಾಳೆ ಹಣ್ಣು ಕೂಡ ಹೆಚ್ಚು ತಿಂದರೆ ಅದು ಇತರ ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡುತ್ತದೆ. ಹೌದು, ಬಾಳೆಹಣ್ಣಿನಲ್ಲಿ ಸುಮಾರು 100 ಕ್ಯಾಲೋರಿಗಳಿವೆ. ದಿನಕ್ಕೆ ಎರಡಕ್ಕಿಂತ ಹೆಚ್ಚು ಬಾಳೆಹಣ್ಣು ತಿಂದರೆ ತೂಕ ಬೇಗ ಹೆಚ್ಚುತ್ತದೆ. ಅಷ್ಟೇ ಅಲ್ಲ, ಇದರಲ್ಲಿ ದೊರೆಯುವ ಪೊಟ್ಯಾಶಿಯಂ ಪ್ರಮಾಣವೂ ಹೆಚ್ಚು. ದೇಹಕ್ಕೆ ಅಗತ್ಯಕ್ಕಿಂತ ಹೆಚ್ಚು ಪೊಟ್ಯಾಸಿಯಮ್ ಸೇವಿಸುವುದರಿಂದ ತಲೆತಿರುಗುವಿಕೆ, ವಾಂತಿ ಮತ್ತು ನಾಡಿ ಬಡಿತ ಹೆಚ್ಚಾಗುತ್ತದೆ. ಇದು ಹೈಪರ್‌ಕೆಲೆಮಿಯಾದ ಲಕ್ಷಣವಾಗಿದೆ. ಕೆಲವೊಮ್ಮೆ ಇದು ಹೃದಯಾಘಾತಕ್ಕೂ ಕಾರಣವಾಗುತ್ತದೆ.

ಇದನ್ನೂ ಓದಿ: ತೂಕ ನಷ್ಟಕ್ಕೆ ಸೇಬು ಪರಿಣಾಮಕಾರಿ; 5 ದಿನದ ಆ್ಯಪಲ್ ಡಯಟ್​ನಲ್ಲಿ ಈ ಆಹಾರಗಳು ಒಳಗೊಂಡಿರಲಿ

ಹೆಚ್ಚು ಬಾಳೆಹಣ್ಣು ತಿನ್ನುವುದರಿಂದ ಆಗುವ ದುಷ್ಪರಿಣಾಮಗಳು

  • ಹೆಚ್ಚು ಬಾಳೆಹಣ್ಣುಗಳನ್ನು ತಿನ್ನುವುದರಿಂದ ಹಲ್ಲು ಕೊಳೆಯಬಹುದು ಎಂದು ಅನೇಕ ಅಧ್ಯಯನಗಳು ತೋರಿಸಿವೆ. ಇದು ಪಿಷ್ಟವನ್ನು ಹೊಂದಿರುತ್ತದೆ. ಇದು ಸುಲಭವಾಗಿ ಹಲ್ಲುಗಳ ನಡುವೆ ಅಂಟಿಕೊಳ್ಳುತ್ತದೆ. ಅದಕ್ಕಾಗಿಯೇ ಬಾಳೆಹಣ್ಣು ತಿಂದ ಎರಡು ಗಂಟೆಯೊಳಗೆ ಹಲ್ಲುಜ್ಜಬೇಕು.
  • ಬಾಳೆಹಣ್ಣಿನಲ್ಲಿ ವಿಟಮಿನ್ ಬಿ6 ಸಮೃದ್ಧವಾಗಿದೆ. ಹೆಚ್ಚಿನ ಪ್ರಮಾಣದಲ್ಲಿ ಸೇವಿಸಿದರೆ ನರಗಳಿಗೆ ಹಾನಿಯಾಗುತ್ತದೆ. ಬಾಡಿ ಬಿಲ್ಡಿಂಗ್‌ಗಾಗಿ ಬಾಳೆಹಣ್ಣುಗಳನ್ನು ಹೆಚ್ಚು ತಿನ್ನುವವರಿಗೆ ಈ ಸಮಸ್ಯೆ ಎದುರಾಗಬಹುದು.
  • ಹಸಿ ಬಾಳೆಹಣ್ಣಿನಲ್ಲಿ ಪಿಷ್ಟ ಹೆಚ್ಚಾಗಿರುತ್ತದೆ. ಪ್ರತಿನಿತ್ಯ ಇದನ್ನು ಸೇವಿಸುವುದರಿಂದ ಗ್ಯಾಸ್, ಹೊಟ್ಟೆನೋವು ಮತ್ತು ಮಲಬದ್ಧತೆಯಂತಹ ಸಮಸ್ಯೆಗಳು ಉಂಟಾಗುತ್ತವೆ.
  • ಮಾಗಿದ ಬಾಳೆಹಣ್ಣು ಫೈಬರ್​ನಲ್ಲಿ ಸಮೃದ್ಧವಾಗಿದೆ. ಇದು ಜೀರ್ಣಕ್ರಿಯೆಗೆ ಒಳ್ಳೆಯದು. ಕಡಿಮೆ ನೀರನ್ನು ಹೊಂದಿರುತ್ತದೆ. ಆದರೆ ಅತಿಯಾಗಿ ತಿನ್ನುವುದರಿಂದ ಮಲಬದ್ಧತೆ ಉಂಟಾಗುತ್ತದೆ.

ಬಾಳೆಹಣ್ಣನ್ನು ಹೆಚ್ಚು ಸೇವಿಸುವುದರಿಂದ ಫ್ರಕ್ಟೋಸ್‌ನಿಂದ ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ಹೆಚ್ಚಿಸಬಹುದು. ಅದಕ್ಕಾಗಿಯೇ ಮಧುಮೇಹ ಇರುವವರು ವೈದ್ಯರನ್ನು ಸಂಪರ್ಕಿಸಿದ ನಂತರವೇ ಅವುಗಳನ್ನು ತೆಗೆದುಕೊಳ್ಳಬೇಕು. ಕಿಡ್ನಿ ಸಂಬಂಧಿ ಸಮಸ್ಯೆಗಳಿದ್ದಲ್ಲಿ ಪೊಟ್ಯಾಶಿಯಂ ಅಧಿಕವಾಗಿರುವ ಆಹಾರವನ್ನು ಸೇವಿಸದಂತೆ ವೈದ್ಯರು ಸಲಹೆ ನೀಡುತ್ತಾರೆ. ಹಾಗಾಗಿ ಅಂತಹವರು ಬಾಳೆಹಣ್ಣಿನಿಂದ ದೂರವಿರಬೇಕು.

ಆರೋಗ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:01 am, Sat, 18 February 23