Esophageal Cancer: ಆಗಾಗ ಶೀತವಾಗಿ, ಗಂಟಲು ನೋವು ಕಾಡುತ್ತಿದೆಯೇ? ಈ ಕ್ಯಾನ್ಸರ್ ಆಗಿರಬಹುದು ಎಚ್ಚರ

ಕ್ಯಾನ್ಸರ್ ಗುಣಪಡಿಸಲಾಗದ ಕಾಯಿಲೆಯಾಗಿದ್ದು, ಪ್ರಪಂಚದಾದ್ಯಂತ ಈ ರೋಗಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ, ನಮ್ಮ ದೇಶದಲ್ಲಿ ಕ್ಯಾನ್ಸರ್ ಸಾವಿನ ಸಂಖ್ಯೆಯೂ ಏರಿಕೆಯಾಗುತ್ತಿದೆ. ಅಲ್ಲದೆ ಭಾರತದಲ್ಲಿ ಸುಮಾರು 32 ರೀತಿಯ ಕ್ಯಾನ್ಸರ್ ಇದ್ದು ಲಕ್ಷಾಂತರ ಮಂದಿ ಈ ಕಾಯಿಲೆಯಿಂದ ಬಳಲುತ್ತಿದ್ದಾರೆ. ಅವುಗಳಲ್ಲಿ ಒಂದು ಅನ್ನನಾಳದ ಕ್ಯಾನ್ಸರ್. ಕೆಲವು ಅಂಕಿ ಅಂಶಗಳ ಪ್ರಕಾರ ನಮ್ಮ ದೇಶದಲ್ಲಿ 47 ಸಾವಿರ ಜನರು ಈ ರೋಗದಿಂದ ಬಳಲುತ್ತಿದ್ದು, ಪ್ರತಿವರ್ಷ 42 ಸಾವಿರಕ್ಕೂ ಹೆಚ್ಚು ಜನರು ಇದರಿಂದ ಸಾವಿಗೀಡಾಗುತ್ತಿದ್ದಾರೆ ಎಂದು ಹೇಳುತ್ತದೆ. ಹಾಗಾಗಿ ಈ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕಾಗಿದೆ.

Esophageal Cancer: ಆಗಾಗ  ಶೀತವಾಗಿ, ಗಂಟಲು ನೋವು ಕಾಡುತ್ತಿದೆಯೇ? ಈ ಕ್ಯಾನ್ಸರ್ ಆಗಿರಬಹುದು ಎಚ್ಚರ
Esophageal Cancer
Follow us
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷತಾ ವರ್ಕಾಡಿ

Updated on: Sep 03, 2024 | 12:10 PM

ಪ್ರಪಂಚದಾದ್ಯಂತ ಕ್ಯಾನ್ಸರ್ ಎಂಬ ಮಹಾಮಾರಿ ಹೆಚ್ಚಾಗುತ್ತಿದ್ದು ರೋಗಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ, ನಮ್ಮ ದೇಶದಲ್ಲಿ ಕ್ಯಾನ್ಸರ್ ನಿಂದ ಉಂಟಾಗುತ್ತಿರುವ ಸಾವಿನ ಸಂಖ್ಯೆಯೂ ಏರಿಕೆಯಾಗುತ್ತಿದೆ. 2019 ರಲ್ಲಿ ಭಾರತದಲ್ಲಿ ಸುಮಾರು 1.2 ಮಿಲಿಯನ್ ಜನರು ಕ್ಯಾನ್ಸರ್ ನಿಂದ ಬಳಲುತ್ತಿದ್ದರು, ಈ ಪೈಕಿ 9.3 ಲಕ್ಷ ಕ್ಯಾನ್ಸರ್ ರೋಗಿಗಳು ಸಾವನ್ನಪ್ಪಿದ್ದರು. ಅಲ್ಲದೆ ಆ ವರ್ಷ ಭಾರತದಲ್ಲಿ ಅತಿ ಹೆಚ್ಚು ಕ್ಯಾನ್ಸರ್ ನಿಂದ ಸಾವುಗಳು ಸಂಭವಿಸಿದ್ದು, ಎರಡನೇ ಸ್ಥಾನಕ್ಕೇರಿತ್ತು. ಅಲ್ಲದೆ ಈಗ ಭಾರತದಲ್ಲಿ ಸುಮಾರು 32 ರೀತಿಯ ಕ್ಯಾನ್ಸರ್ ಇದ್ದು ಲಕ್ಷಾಂತರ ಮಂದಿ ಈ ಕಾಯಿಲೆಯಿಂದ ಬಳಲುತ್ತಿದ್ದಾರೆ. ಅವುಗಳಲ್ಲಿ ಒಂದು ಅನ್ನನಾಳದ ಕ್ಯಾನ್ಸರ್. ಕೆಲವು ಅಂಕಿ ಅಂಶಗಳ ಪ್ರಕಾರ ನಮ್ಮ ದೇಶದಲ್ಲಿ 47 ಸಾವಿರ ಜನರು ಈ ರೋಗದಿಂದ ಬಳಲುತ್ತಿದ್ದು ಪ್ರತಿವರ್ಷ 42 ಸಾವಿರಕ್ಕೂ ಹೆಚ್ಚು ಜನರು ಇದರಿಂದ ಸಾವಿಗೀಡಾಗುತ್ತಿದ್ದಾರೆ ಎಂದು ಹೇಳುತ್ತದೆ. ಹಾಗಾಗಿ ಈ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕಾಗಿದೆ. ಜೊತೆಗೆ ಇದರ ರೋಗಲಕ್ಷಣಗಳನ್ನು ತಿಳಿಯಬೇಕಾಗಿದೆ.

ಪ್ರಸ್ತುತ ಈ ರೋಗದ ವಿರುದ್ಧ ಹೋರಾಡುತ್ತಿರುವವರು ನಮ್ಮ ಸುತ್ತಮುತ್ತಲಿನಲ್ಲಿ ಇದ್ದಾರೆ. ಎಲ್ಲಾ ರೀತಿಯ ಕ್ಯಾನ್ಸರ್ ಗಳಿಗೆ ಹೋಲಿಸಿದರೆ ಇದು ಅಪರೂಪವಾಗಿದ್ದರೂ ಕೂಡ ಅಪಾಯಕಾರಿಯಾಗಿದೆ. ಸಾಮಾನ್ಯವಾಗಿ ಬಾಯಿ, ಗಂಟಲು, ಅನ್ನನಾಳದಲ್ಲಿ ರೂಪುಗೊಳ್ಳುವ ಗಡ್ಡೆಗಳು ಈ ಕ್ಯಾನ್ಸರ್ ಆಗಿ ರೂಪಾಂತರಗೊಳ್ಳಬಹುದು. ಇದನ್ನು ಮುಂಚಿತವಾಗಿ ಅರ್ಥಮಾಡಿಕೊಳ್ಳಲು ಸಾಧ್ಯವಾಗದಿದ್ದರೂ ಗಮನಿಸಬೇಕಾದ ಕೆಲವು ಸಾಮಾನ್ಯ ಗುಣಲಕ್ಷಣಗಳಿವೆ. ಇವುಗಳನ್ನು ಸರಿಯಾಗಿ ತಿಳಿದುಕೊಂಡು ಮುನ್ನೆಚ್ಚರಿಕೆ ವಹಿಸಬೇಕಾಗಿದೆ.

ಅನ್ನನಾಳದ ಕ್ಯಾನ್ಸರ್​ನ ಲಕ್ಷಣಗಳೇನು?

ಈ ರೋಗದ ಆರಂಭಿಕ ಹಂತಗಳಲ್ಲಿ, ಆಹಾರವನ್ನು ನುಂಗುವುದು ಕಷ್ಟ. ದ್ರವ ರೂಪದ ಆಹಾರವನ್ನು ತಿನ್ನುವುದು ಕೂಡ ಕಷ್ಟವಾಗುತ್ತದೆ. ಶೀತವು ಕೂಡ ಗಂಟಲು ನೋವಿಗೆ ಕಾರಣವಾಗುತ್ತದೆ. ಹಾಗಾಗಿ ಹೆಚ್ಚಿನ ಜನರು ಈ ರೋಗಲಕ್ಷಣಗಳನ್ನು ನಿರ್ಲಕ್ಷಿಸುತ್ತಾರೆ, ಅವು ಸಾಮಾನ್ಯ ಶೀತ ಎಂದು ತಪ್ಪಾಗಿ ಭಾವಿಸುತ್ತಾರೆ. ಆದರೆ ಇದು ಕ್ಯಾನ್ಸರ್ ರೋಗದ ಒಂದು ಸಂಕೇತವೂ ಆಗಿರಬಹುದು. ಈ ರೋಗವು ನಿಧಾನವಾಗಿ ದೇಹದಲ್ಲಿ ಬೇರೂರಿದಾಗ, ಅದು ಜೀರ್ಣಕಾರಿ ಸಮಸ್ಯೆಗಳನ್ನು ಉಂಟುಮಾಡುತ್ತದೆ. ಎದೆಯಲ್ಲಿ ಉರಿ, ಕಿಬ್ಬೊಟ್ಟೆ ನೋವು ಮುಂತಾದ ರೋಗಲಕ್ಷಣಗಳಿಗೆ ಕಾರಣವಾಗಬಹುದು. ಜೊತೆಗೆ ಹಠಾತ್ ತೂಕ ನಷ್ಟವಾಗುವುದು, ದೀರ್ಘಕಾಲದ ಕೆಮ್ಮು, ರಾತ್ರಿ ನಿದ್ರೆಯಲ್ಲಿ ಉಸಿರಾಟದ ತೊಂದರೆ, ಗಂಟಲಿನಲ್ಲಿ ನೋವು ಕೂಡ ಈ ರೋಗದ ಲಕ್ಷಣವಾಗಿರಬಹುದು. ಹಾಗಾಗಿ ಆದಷ್ಟು ಜಾಗರೂಕರಾಗಿರಬೇಕು. ಇಂತಹ ಲಕ್ಷಣ ಕಂಡು ಬಂದರೆ ತಕ್ಷಣ ವೈದ್ಯಕೀಯ ಸಲಹೆ ಪಡೆಯಿರಿ.

ಇದನ್ನೂ ಓದಿ: ಮೆದುಳಿನ ಕ್ಯಾನ್ಸರ್ ಗೆ ಚಿಕಿತ್ಸೆ ಈಗ ಸುಲಭ; ರಕ್ತ ಪರೀಕ್ಷೆ ಮೂಲಕ ಗಂಟೆಯೊಳಗೆ ಪತ್ತೆ

ವಾಕರಿಕೆ, ಆಯಾಸ, ದೌರ್ಬಲ್ಯ, ತಿನ್ನುವಾಗ ಉಸಿರುಗಟ್ಟುವಿಕೆ ಕೂಡ ಈ ರೋಗದ ಲಕ್ಷಣಗಳಾಗಿವೆ. ಈ ರೀತಿ ಸಮಸ್ಯೆ ಹೆಚ್ಚಾಗಿ ಮಲಬದ್ಧತೆ ಅಥವಾ ಅತಿಸಾರಕ್ಕೆ ಕಾರಣವಾಗಬಹುದು. ನಿಮ್ಮ ಧ್ವನಿಯಲ್ಲಿ ಕೂಡ ವ್ಯತ್ಯಾಸ ಉಂಟಾಗಬಹುದು. ಈ ಅಪಾಯಕಾರಿ ಕಾಯಿಲೆಗೆ ಇನ್ನೂ ಯಾವುದೇ ಲಸಿಕೆ ಕಂಡುಹಿಡಿಯಲಾಗಿಲ್ಲ. ಆದ್ದರಿಂದ ಆರೋಗ್ಯವಾಗಿರಲು ಕೆಲವು ಅಭ್ಯಾಸಗಳಿಂದ ದೂರವಿರುವುದು ಉತ್ತಮ. ಧೂಮಪಾನ, ಮದ್ಯಪಾನ ಮತ್ತು ತಂಬಾಕಿನಂತಹ ಕೆಟ್ಟ ಅಭ್ಯಾಸಗಳನ್ನು ಆದಷ್ಟು ತಪ್ಪಿಸಬೇಕು. ಬೊಜ್ಜು ಕೂಡ ಈ ಕ್ಯಾನ್ಸರ್ ಗೆ ಕಾರಣವಾಗುತ್ತದೆ. ತುಂಬಾ ಬಿಸಿ ಚಹಾ ಮತ್ತು ಕಾಫಿ ಕುಡಿಯುವುದು ಸಹ ಒಳ್ಳೆಯದಲ್ಲ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ