AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರಳ ಮೂತ್ರ ಪರೀಕ್ಷೆಯಿಂದ ಶ್ವಾಸಕೋಶದ ಕ್ಯಾನ್ಸರ್ ಪತ್ತೆಹಚ್ಚಬಹುದು: ಸಂಶೋಧನೆ

ಶ್ವಾಸಕೋಶದ ಕ್ಯಾನ್ಸರ್ ಅನ್ನು ಅದರ ಆರಂಭಿಕ ಹಂತಗಳಲ್ಲಿ ಪತ್ತೆಹಚ್ಚಲು ವಿಜ್ಞಾನಿಗಳು ಮೂತ್ರ ಪರೀಕ್ಷೆಯನ್ನು ಅಭಿವೃದ್ಧಿಪಡಿಸಿದ್ದಾರೆ. ಇಲಿಗಳ ಮೇಲೆ ಯಶಸ್ವಿಯಾಗಿ ನಡೆದಿರುವ ಈ ಪರೀಕ್ಷೆಯು ಶ್ವಾಸಕೋಶದ ಅಂಗಾಂಶದಿಂದ ಬಿಡುಗಡೆಯಾದ ನಿರ್ಧಿಷ್ಟ ಪ್ರೋಟೀನ್ ಅನ್ನು ಗುರುತಿಸುತ್ತದೆ. ಮಾನವ ಪ್ರಯೋಗಗಳು ಶೀಘ್ರದಲ್ಲೇ ಪ್ರಾರಂಭವಾಗಲಿವೆ. ಈ ವಿಧಾನವು ದುಬಾರಿ ಸ್ಕ್ಯಾನ್ಗಳಿಗೆ ಸರಳವಾದ ಪರ್ಯಾಯವಾಗಿದ್ದು ಆರಂಭಿಕ ರೋಗನಿರ್ಣಯ ಮತ್ತು ಸಮಯೋಚಿತ ಚಿಕಿತ್ಸೆಯನ್ನು ನೀಡುವ ಭರವಸೆಯಾಗಿದೆ.

ಸರಳ ಮೂತ್ರ ಪರೀಕ್ಷೆಯಿಂದ ಶ್ವಾಸಕೋಶದ ಕ್ಯಾನ್ಸರ್ ಪತ್ತೆಹಚ್ಚಬಹುದು: ಸಂಶೋಧನೆ
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Dec 10, 2024 | 5:22 PM

Share

ಇತ್ತೀಚಿನ ವರ್ಷಗಳಲ್ಲಿ ಶ್ವಾಸಕೋಶದ ಕ್ಯಾನ್ಸರ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕಾಯಿಲೆಯನ್ನು ಪೂರ್ವದಲ್ಲಿಯೇ ಪತ್ತೆ ಹಚ್ಚದಿರುವುದು ಕೂಡ ಈ ರೋಗದ ಹೆಚ್ಚಳ ಮತ್ತು ಸಾವಿಗೆ ಕಾರಣವಾಗಿದೆ. ಆದರೆ ಕೇವಲ ಮೂತ್ರ ಪರೀಕ್ಷೆ ಮಾಡುವುದರ ಮೂಲಕ ಸುಲಭವಾಗಿ ಈ ರೋಗವನ್ನು ಪತ್ತೆ ಹಚ್ಚಬಹುದು ಎಂದರೆ ನಂಬುತ್ತೀರಾ? ಹೌದು. ತಜ್ಞರ ಪ್ರಕಾರ ಶ್ವಾಸಕೋಶದ ಕ್ಯಾನ್ಸರ್ ಜಾಗತಿಕವಾಗಿ ಹೆಚ್ಚಾಗುತ್ತಿದ್ದು, ಪ್ರಮುಖ ಕ್ಯಾನ್ಸರ್ ಸಂಬಂಧಿತ ಸಾವುಗಳಲ್ಲಿ ಒಂದಾಗಿದೆ ಜೊತೆಗೆ ಸುಮಾರು 85% ಪ್ರಕರಣಗಳಿಗೆ ಕಾರಣವಾಗಿದೆ. ಸಾಮಾನ್ಯವಾಗಿ ಇದರ ಆರಂಭಿಕ ರೋಗಲಕ್ಷಣಗಳೆಂದರೆ ನಿರಂತರ ಕೆಮ್ಮು, ಉಸಿರಾಟದ ತೊಂದರೆ ಮತ್ತು ಎದೆ ನೋವಿನಿಂದ ಪ್ರಾರಂಭವಾಗುತ್ತಿದ್ದರೆ, ಈಗ ವಿಶ್ವದಲ್ಲಿಯೇ ಮೊದಲು ನಮ್ಮ ವಿಜ್ಞಾನಿಗಳು ಶ್ವಾಸಕೋಶದ ಕ್ಯಾನ್ಸರ್ ಸಾಧ್ಯತೆಗಳನ್ನು ಸೂಚಿಸುವ ಮೂತ್ರ ಪರೀಕ್ಷೆಯನ್ನು ಕಂಡು ಹಿಡಿದಿದ್ದಾರೆ.

ಈ ಪ್ರಯೋಗದಿಂದ ರೋಗಿಗಳಿಗೆ ಬೇಗನೆ ಚಿಕಿತ್ಸೆ ಕೊಡಿಸಬಹುದು. ಜೊತೆಗೆ ಆರಂಭಿಕ ಹಂತ ತಿಳಿದರೆ ಅದರ ಅಪಾಯವೂ ಕಡಿಮೆ ಎನ್ನುವುದು ತಜ್ಞರ ಅಭಿಪ್ರಾಯವಾಗಿದೆ. ಹಾಗಾಗಿ ಕೇಂಬ್ರಿಡ್ಜ್ ವಿಶ್ವವಿದ್ಯಾಲಯದ ರಾಸಾಯನಿಕ ಎಂಜಿನಿಯರಿಂಗ್ ಮತ್ತು ಜೈವಿಕ ತಂತ್ರಜ್ಞಾನ ವಿಭಾಗ ಮತ್ತು ಅರ್ಲಿ ಕ್ಯಾನ್ಸರ್ ಇನ್ಸ್ಟಿಟ್ಯೂಟ್ನ ವಿಜ್ಞಾನಿಗಳು ಈ ಪರೀಕ್ಷೆಯನ್ನು ಕಂಡುಹಿಡಿದಿದ್ದಾರೆ. ಇದನ್ನು ಇಲಿಗಳ ಮೇಲೆ ಯಶಸ್ವಿಯಾಗಿ ಪರೀಕ್ಷಿಸಲಾಗಿದೆ. ಮಾನವರ ಜೊತೆಗಿನ ಸಂಶೋಧನೆ ಮತ್ತು ಅಧ್ಯಯನ ಶೀಘ್ರದಲ್ಲೇ ಪ್ರಾರಂಭವಾಗಲಿದೆ. ಇದಾದ ನಂತರ, ಪರೀಕ್ಷೆಯನ್ನು ಪೂರ್ವಭಾವಿ ಹಂತಗಳಿಗಾಗಿ ಶೀಘ್ರದಲ್ಲೇ ಪ್ರಯೋಗಗಳಿಗೆ ಒಳಪಡಿಸಲಾಗುವುದು ಎಂದು ಸಂಶೋಧನಾ ತಂಡ ತಿಳಿಸಿದೆ.

ಪ್ರೊಫೆಸರ್ ಫ್ರುಕ್ ಎನ್ನುವವರು ಬಿಡುಗಡೆ ಮಾಡಿದ ಅಧಿಕೃತ ಹೇಳಿಕೆಯಲ್ಲಿ ಹೇಳಿರುವಂತೆ, “ಶ್ವಾಸಕೋಶದ ಅಂಗಾಂಶದಲ್ಲಿ ಈ ಜೀವಕೋಶಗಳು ಬಿಡುಗಡೆ ಮಾಡುವ ನಿರ್ದಿಷ್ಟ ಪ್ರೋಟೀನ್ ಅನ್ನು ನಾವು ಗುರುತಿಸಿದ್ದು, ಎರಡು ತುಂಡುಗಳಾಗಿ ಕತ್ತರಿಸುವ ಪ್ರೋಬ್ ಅನ್ನು ವಿನ್ಯಾಸಗೊಳಿಸಿದ್ದು, ಈ ಪ್ರೋಬ್ ಎರಡು ಭಾಗಗಳಿಂದ ಕೂಡಿದ್ದು ಸಣ್ಣ ಇರುವುದನ್ನು ಮೂತ್ರಪಿಂಡಗಳ ಮೂಲಕ ಮೂತ್ರಕ್ಕೆ ಬಿಡುಗಡೆ ಮಾಡಲಾಗುತ್ತದೆ. ಪ್ರೋಬ್ನ ಈ ಭಾಗವು ಪತ್ತೆಹಚ್ಚಲು ತುಂಬಾ ಚಿಕ್ಕದಾಗಿರುತ್ತದೆ ಆದರೆ ಅದಕ್ಕೆ ಸ್ವಲ್ಪ ಬೆಳ್ಳಿ ದ್ರಾವಣವನ್ನು ಸೇರಿಸುವ ಮೂಲಕ ಅದನ್ನು ಗೋಚರಿಸುವಂತೆ ಮಾಡಬಹುದು. ಚುಚ್ಚು ಮದ್ದಿನ ನಂತರ ಮೂತ್ರದ ಬಣ್ಣವನ್ನು ಮೇಲ್ವಿಚಾರಣೆ ಮಾಡುವುದರಿಂದ ಶ್ವಾಸಕೋಶದ ಕ್ಯಾನ್ಸರ್ ನ ಆರಂಭಿಕ ಲಕ್ಷಣಗಳನ್ನು ಅಥವಾ ಕ್ಯಾನ್ಸರ್ ಗೆ ಕಾರಣವಾಗಬಹುದಾದ ಬದಲಾವಣೆಗಳನ್ನು ಸೂಚಿಸಬಹುದು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಚಳಿಗಾಲದಲ್ಲಿ ಕಿತ್ತಳೆ ಹಣ್ಣು ಸೇವಿಸುವ ಮುನ್ನ, ಆರೋಗ್ಯ ಪ್ರಯೋಜನ ತಿಳಿಯಿರಿ

ವೆಚ್ಚ ಕಡಿತ ಪರೀಕ್ಷೆ

ಕ್ಯಾನ್ಸರ್ ರಿಸರ್ಚ್ ಗಳಿಗಾಗಿ ಯುಕೆಯಿಂದ ಧನಸಹಾಯ ಪಡೆದಿದ್ದು, ಈ ಮೂತ್ರ ಪರೀಕ್ಷೆಯು ದುಬಾರಿ ಸ್ಕ್ಯಾನ್ಗಳಿಗೆ ಅಗ್ಗದ ಪರ್ಯಾಯವಾಗಿದೆ ಎಂದು ಹೇಳಲಾಗುತ್ತದೆ ಅಲ್ಲದೆ ಕಾಯಿಲೆಯನ್ನು ಮುಂಚಿತವಾಗಿ ಪತ್ತೆಹಚ್ಚಲು ಸುಲಭ ಮತ್ತು ಸಮಯೋಚಿತ ವಿಧಾನ ಇದಾಗಿದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!