AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mental Health: ಚರ್ಮ ರೋಗಗಳು ಮಕ್ಕಳು, ಯುವಕರ ಮನಸ್ಸಿನ ಮೇಲೆ ದುಷ್ಪರಿಣಾಮ ಬೀರಬಹುದು

ಚರ್ಮ ರೋಗಗಳು ಮಕ್ಕಳು ಹಾಗೂ ಯುವಕರ ಮಾನಸಿಕ ಹಾಗೂ ದೈಹಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಬಹುದು ಎಂದು ಅಧ್ಯಯನವೊಂದು ಹೇಳಿದೆ. ಮೆಡಿಕಲ್ ರಿಸರ್ಚ್​ ಫೌಂಡೇಶನ್ ನಡೆಸ ಅಧ್ಯಯನದಲ್ಲಿ ಈ ವಿಷಯ ಬೆಳಕಿಗೆ ಬಂದಿದ್ದು, ಚರ್ಮ ರೋಗಗಳು ಯುವಕರು ಹಾಗೂ ಮಕ್ಕಳನ್ನು ಮಾನಸಿಕ ಅಸ್ವಸ್ಥತೆಯತ್ತ ದೂಡಬಹುದು ಎನ್ನಲಾಗಿದೆ.

Mental Health: ಚರ್ಮ ರೋಗಗಳು ಮಕ್ಕಳು, ಯುವಕರ ಮನಸ್ಸಿನ ಮೇಲೆ ದುಷ್ಪರಿಣಾಮ ಬೀರಬಹುದು
Skin Disorder
TV9 Web
| Edited By: |

Updated on: Jun 25, 2022 | 3:19 PM

Share

ಚರ್ಮ ರೋಗಗಳು ಮಕ್ಕಳು ಹಾಗೂ ಯುವಕರ ಮಾನಸಿಕ ಹಾಗೂ ದೈಹಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಬಹುದು ಎಂದು ಅಧ್ಯಯನವೊಂದು ಹೇಳಿದೆ. ಮೆಡಿಕಲ್ ರಿಸರ್ಚ್​ ಫೌಂಡೇಶನ್ ನಡೆಸ ಅಧ್ಯಯನದಲ್ಲಿ ಈ ವಿಷಯ ಬೆಳಕಿಗೆ ಬಂದಿದ್ದು, ಚರ್ಮ ರೋಗಗಳು ಯುವಕರು ಹಾಗೂ ಮಕ್ಕಳನ್ನು ಮಾನಸಿಕ ಅಸ್ವಸ್ಥತೆಯತ್ತ ದೂಡಬಹುದು ಎನ್ನಲಾಗಿದೆ.

ಚರ್ಮ ರೋಗದಿಂದ ಬಳಲುತ್ತಿರುವವರು ಮಾನಸಿಕವಾಗಿ ಕುಗ್ಗಿರುತ್ತಾರೆ, ಅಂತವರಲ್ಲಿ ಆತ್ಮಸ್ಥೈರ್ಯ ಕುಗ್ಗಿರುತ್ತದೆ. ಅದಕ್ಕೆ ಸೂಕ್ತ ವೈದ್ಯರನ್ನು ಭೇಟಿಯಾಗಿ ಕೌನ್ಸೆಲಿಂಗ್​ಗೆ ಒಳಗಾಗುವುದು ಉತ್ತಮ ವಿಧಾನವಾಗಿದೆ.ಚರ್ಮ ರೋಗಗಳು ಜೀವನದ ಎಲ್ಲಾ ಹಂತದಲ್ಲೂ ಪರಿಣಾಮವನ್ನು ಬೀರುತ್ತದೆ. ಶಾಲೆಯಿಂದ ಹಿಡಿದು ಸಂಬಂಧದವರೆಗೂ ಯಾವುದೂ ನಾವಂದುಕೊಂಡಂತೆ ನಡೆಯುವುದಿಲ್ಲ. ನಾವು ಸೆಲ್ಫ್​ ಕಾನ್ಶಿಯಸ್ ಆಗಿರುತ್ತೇವೆ.

2020ರಲ್ಲಿ ನಡೆಸಿದ ಸಮೀಕ್ಷೆಯಲ್ಲಿ ಚರ್ಮದ ಅಸ್ವಸ್ಥತೆಯಿಂದ ಬಳಲುತ್ತಿರುವವರಲ್ಲಿ ಶೇ. 98ರಷ್ಟು ಮಂದಿ ಮಾನಸಿಕ, ಭಾವನಾತ್ಮಕವಾಗಿ ಕುಗ್ಗಿರುವುದು ಕಂಡುಬಂದಿದೆ. ಅದರಲ್ಲಿ ಶೇ.18ರಷ್ಟು ಮಂದಿ ವೈದ್ಯರನ್ನು ಭೇಟಿಯಾಗಿದ್ದಾರೆ.

ಶೇ.20ರಷ್ಟು ಮಂದಿ ಯುವಕರು ಹಾಗೂ ಮಕ್ಕಳು ಇಸುಬು ರೋಗದಿಂದ ಬಳಲುತ್ತಿದ್ದಾರೆ. ಮನುಷ್ಯನ ದೇಹದಲ್ಲಿ ಅತೀದೊಡ್ಡ ಅಂಗ ಚರ್ಮ. ಇದು ದೇಹದ ಹೊರ ಭಾಗಗಳನ್ನು ಕಾಪಾಡುವ ರಕ್ಷಣಾ ಕವಚವಾಗಿದ್ದು, ಈ ರಕ್ಷಣಾ ಕವಚವನ್ನು ಕಾಪಾಡಿಕೊಳ್ಳುವುದು ಅತ್ಯಂತ ಮುಖ್ಯವಾಗಿರುತ್ತದೆ.

ಇಸುಬು ಎಂದರೆ, ಚರ್ಮವು ಉರಿಯೂತಕ್ಕೆ ಗುರಿಯಾಗುವುದರಿಂದ ಆ ಭಾಗದ ಚರ್ಮವು ಕೆಂಪು ಬಣ್ಣಕ್ಕೆ ತಿರುಗಿ ನವೆ ಆರಂಭವಾಗುತ್ತದೆ. ಈ ರಕ್ಷಣಾ ಕವಚಕ್ಕೆ ಸಾಕಷ್ಟು ಬಾರಿ ಸೋಂಕು, ಸಮಸ್ಯೆಗಳು ಎದುರಾಗುವುದು ಸಹಜ. ಇವುಗಳ ಪೈಕಿ ಎಸ್ಜಿಮಾ (ಇಸುಬು)ಕೂಡ ಒಂದಾಗಿದೆ.

ಒಣಗಿದ ಚರ್ಮ ಇರುವವವರಲ್ಲಿ ಬಹುತೇಕವಾಗಿ ಈ ಇಸುಬು ಕಾಣಿಸಿಕೊಳ್ಳುತ್ತದೆ. ಇಸುಬುವಿನ ಪ್ರಧಾನ ಲಕ್ಷಣವೆಂದರೆ ನವೆ. ನಂತರ ಚರ್ಮ ಕೆಂಪಗಾಗುತ್ತದೆ. ಬಳಿಕ ಆ ಭಾಗ ಊದಿಕೊಳ್ಳುತ್ತದೆ. ಕ್ರಮೇಣವಾಗಿ ಇದು ನೀರಿನ ಗುಳ್ಳೆಗಳಾಗಿ ಮಾರ್ಪಟ್ಟು ಅವುಗಳಿಂದ ದ್ರವ ಸೋರುತ್ತದೆ. ಸ್ವಲ್ಪ ಸಮಯದ ಬಳಿಕ ಚರ್ಮ ಕಪ್ಪಾಗುತ್ತವೆ.

ಇಸುಬು ಸಾಮಾನ್ಯವಾಗಿ ಮನುಷ್ಯನ ಮುಖ, ತಲೆ, ಮೊಣಕಾಲು, ಕತ್ತಿನ ಭಾಗ, ಮೊಣಕೈ, ಮಣಿಕಟ್ಟು, ಪಾದದ ಹಿಂಬದಿ ಹಾಗೂ ಕಿವಿಯ ಹಿಂಭಾಗದಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ.

ಇದು ಕ್ರಮೇಣ ನೀರಿನ ಗುಳ್ಳೆಗಳಾಗಿ ಮಾರ್ಪಾಡಾಗಿ ಅವುಗಳಿಂದ ದ್ರವ ಪದಾರ್ಥ ಸೋರುತ್ತದೆ. ಬಳಿಕ ಆ ಭಾಗವೆಲ್ಲವೂ ಮಚ್ಚೆಯಾಗಿ ಕಾಣಿಸಿಕೊಳ್ಳುತ್ತದೆ ಇದನ್ನು ಇಸುಬು ಎಂದು ಕರೆಯಲಾಗುತ್ತದೆ. ಇದು ಬಹುತೇಕವಾಗಿ ಮಕ್ಕಳಲ್ಲಿ ಹೆಚ್ಚು ಕಾಣಿಸಿಕೊಳ್ಳುತ್ತದೆ.

ಇಸುಬು ಬರುವುದಕ್ಕೆ ಪ್ರಮುಖ ಕಾರಣಗಳು ತಿಳಿದುಬಂದಿಲ್ಲ. ಆದರೂ, ವಂಶಪರಂಪರೆಯಿಂದ ಹಾಗೂ ವಾತಾವರಣದಲ್ಲಿರುವ ಕೆಲವು ಅಂಶಗಳಿಂದ ಬರುತ್ತದೆ ಎಂದು ಹೇಳಲಾಗುತ್ತಿದೆ.

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ