ಪ್ರತಿದಿನ 15 ನಿಮಿಷ ಬಿಡುವು ಮಾಡಿಕೊಂಡು ಸ್ಕಿಪ್ಪಿಂಗ್ ಮಾಡಿ, ದೇಹದಲ್ಲಿ ಎಷ್ಟೆಲ್ಲಾ ಬದಲಾವಣೆಗಳಾಗುತ್ತೆ ನೋಡಿ!

ಇತ್ತೀಚಿನ ದಿನಗಳಲ್ಲಿ ಹಲವರ ಜೀವನಶೈಲಿ ಬದಲಾಗಿದೆ, ಸಮಯಕ್ಕೆ ಸರಿಯಾಗಿ ಊಟ ಮಾಡದಿರುವುದು, ಸಾಕಷ್ಟು ನಿದ್ರೆ ಮಾಡದಿರುವುದು, ವ್ಯಾಯಾಮದ ಕೊರತೆ ಹೀಗೆ ಅನೇಕ ಅನಾರೋಗ್ಯಕರ ಅಭ್ಯಾಸಗಳು ಆರೋಗ್ಯ ಸಮಸ್ಯೆಗಳನ್ನು ಬರಮಾಡಿಕೊಳ್ಳುವಂತೆ ಮಾಡಿದೆ. ಹಾಗಾಗಿ ಆರೋಗ್ಯವಾಗಿರಲು ದೈಹಿಕ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವುದು ಬಹಳ ಮುಖ್ಯ. ಆದರೆ ಅದಕ್ಕೂ ಸಮಯ ಇಲ್ಲ ಎನ್ನುವವರು ಆರೋಗ್ಯ ತಜ್ಞರು ಹೇಳುವ ಪ್ರಕಾರ, ಪ್ರತಿದಿನ 15 ನಿಮಿಷಗಳ ಕಾಲ ಸ್ಕಿಪ್ಪಿಂಗ್ ಅಥವಾ ಹಗ್ಗದ ಸಹಾಯದಿಂದ ಜಿಗಿಯುವ ವ್ಯಾಯಾಮವನ್ನು ಮಾಡಬಹುದು. ಈ ಒಂದು ಅಭ್ಯಾಸದಿಂದ ಸಾಕಷ್ಟು ಪ್ರಯೋಜನಗಳನ್ನು ಪಡೆದುಕೊಳ್ಳಬಹುದಾಗಿದೆ.

ಪ್ರತಿದಿನ 15 ನಿಮಿಷ ಬಿಡುವು ಮಾಡಿಕೊಂಡು ಸ್ಕಿಪ್ಪಿಂಗ್ ಮಾಡಿ, ದೇಹದಲ್ಲಿ ಎಷ್ಟೆಲ್ಲಾ ಬದಲಾವಣೆಗಳಾಗುತ್ತೆ ನೋಡಿ!
Amazing Health Benefits Of Skipping Rope
Image Credit source: Getty Images

Updated on: Jan 15, 2026 | 3:45 PM

ಇಂದಿನ ಕಾರ್ಯನಿರತ ಜೀವನಶೈಲಿಯಲ್ಲಿ, ನಮ್ಮ ಆರೋಗ್ಯದ ಗುಣಮಟ್ಟ ದಿನದಿಂದ ದಿನಕ್ಕೆ ಹದಗೆಡುತ್ತಿದೆ. ಊಟ ಬಿಡುವುದು, ಸರಿಯಾಗಿ ನಿದ್ರೆ ಮಾಡದಿರುವುದು ಮತ್ತು ವ್ಯಾಯಾಮದ ಕೊರತೆ ಅನೇಕ ರೀತಿಯ ಆರೋಗ್ಯ ಸಮಸ್ಯೆಗಳನ್ನು ಬರಮಾಡಿಕೊಳ್ಳುವಂತೆ ಮಾಡಿದೆ. ಅಷ್ಟೇಅಲ್ಲ, ಈ ಎಲ್ಲಾ ಅಂಶಗಳು ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತವೆ. ಆದ್ದರಿಂದ, ಆರೋಗ್ಯವಾಗಿರಲು ದೈಹಿಕ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವುದು ಬಹಳ ಮುಖ್ಯ. ಆದರೆ ಅದಕ್ಕೂ ಸಮಯ ಇಲ್ಲ ಎನ್ನುವವರು ಆರೋಗ್ಯ ತಜ್ಞರು ಹೇಳುವ ಪ್ರಕಾರ, ಪ್ರತಿದಿನ 15 ನಿಮಿಷಗಳ ಕಾಲ ಸ್ಕಿಪ್ಪಿಂಗ್ (Skipping) ಅಥವಾ ಹಗ್ಗದ ಸಹಾಯದಿಂದ ಜಿಗಿಯುವ ವ್ಯಾಯಾಮವನ್ನು ಮಾಡಬಹುದು. ಈ ಒಂದು ಅಭ್ಯಾಸದಿಂದ ಸಾಕಷ್ಟು ಪ್ರಯೋಜನಗಳನ್ನು ಪಡೆದುಕೊಳ್ಳಬಹುದಾಗಿದೆ.

ಪ್ರತಿದಿನ 15 ನಿಮಿಷ ಸ್ಕಿಪ್ಪಿಂಗ್ ಮಾಡುವುದರಿಂದಾಗುವ ಪ್ರಯೋಜನಗಳೇನು?

 

ಹೃದಯದ ಆರೋಗ್ಯವನ್ನು ಸುಧಾರಿಸುತ್ತದೆ

ಸ್ಕಿಪ್ಪಿಂಗ್ ಹೃದಯವನ್ನು ಬಲಪಡಿಸುವ ಮತ್ತು ರಕ್ತ ಪರಿಚಲನೆ ಸುಧಾರಿಸುವ ಉತ್ತಮ ಕಾರ್ಡಿಯೋ ವ್ಯಾಯಾಮವಾಗಿದೆ. ಅಷ್ಟೇಅಲ್ಲ, ಹೃದಯಾಘಾತ ಮತ್ತು ಅಧಿಕ ರಕ್ತದೊತ್ತಡದಂತಹ ಸಮಸ್ಯೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ.

ತೂಕ ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ

ವೇಗವಾಗಿ ತೂಕ ಕಡಿಮೆ ಮಾಡಿಕೊಳ್ಳಲು ಹಂಬಲಿಸುತ್ತಿರುವವರು ಪ್ರತಿದಿನ 15 ನಿಮಿಷ ಸ್ಕಿಪ್ಪಿಂಗ್ ಮಾಡಿ. ಇದು ಕ್ಯಾಲೊರಿಗಳನ್ನು ತ್ವರಿತವಾಗಿ ಕಡಿಮೆ ಮಾಡುತ್ತದೆ. ಜೊತೆಗೆ ಚಯಾಪಚಯ ಕ್ರಿಯೆಯನ್ನು ಹೆಚ್ಚಿಸುತ್ತದೆ, ಹಾಗಾಗಿ ವೇಗವಾಗಿ ತೂಕ ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ.

ಮೂಳೆಗಳನ್ನು ಬಲಪಡಿಸುತ್ತೆ

ಪ್ರತಿದಿನ 15 ನಿಮಿಷಗಳ ಕಾಲ ಸ್ಕಿಪ್ಪಿಂಗ್ ಮಾಡುವುದರಿಂದ ಕಾಲು, ತೊಡೆ, ತೋಳು ಮತ್ತು ಭುಜಗಳಲ್ಲಿನ ಸ್ನಾಯುಗಳು ಉತ್ತೇಜನಗೊಳ್ಳುತ್ತವೆ. ಇದು ಆಸ್ಟಿಯೊಪೊರೋಸಿಸ್ ಮತ್ತು ಮೂಳೆ ಮುರಿತದ ಅಪಾಯವನ್ನು ಕಡಿಮೆ ಮಾಡುತ್ತದೆ. ದುರ್ಬಲ ಸ್ನಾಯುಗಳನ್ನು ಹೊಂದಿರುವವರಿಗೆ ಸ್ಕಿಪ್ಪಿಂಗ್ ಪ್ರಯೋಜನಕಾರಿಯಾಗಿದೆ.

ಇದನ್ನೂ ಓದಿ: ಪ್ರತಿದಿನ ವಾಕಿಂಗ್, ಜಾಗಿಂಗ್ ಬದಲು ಕೇವಲ 15 ನಿಮಿಷ ಸ್ಕಿಪ್ಪಿಂಗ್ ಮಾಡಿ ಆರೋಗ್ಯ ಕಾಪಾಡಿಕೊಳ್ಳಿ

ಮಧುಮೇಹ ನಿಯಂತ್ರಣ

ಸ್ಕಿಪ್ಪಿಂಗ್ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಇದು ಟೈಪ್ 2 ಮಧುಮೇಹದ ಅಪಾಯವನ್ನು ಕಡಿಮೆ ಮಾಡುತ್ತದೆ. ಮಾತ್ರವಲ್ಲ, ನಿದ್ರಾಹೀನತೆಯಿಂದ ಬಳಲುತ್ತಿರುವವರು ಪ್ರತಿದಿನ 15 ನಿಮಿಷಗಳ ಕಾಲ ಸ್ಕಿಪ್ ಮಾಡಬೇಕು. ಇದು ದೇಹವನ್ನು ದಣಿಸಿ ನಿದ್ರೆ ಚೆನ್ನಾಗಿ ಬರಲು ಸಹಾಯ ಮಾಡುತ್ತದೆ.

ಒತ್ತಡ, ಆತಂಕವನ್ನು ನಿವಾರಿಸುತ್ತದೆ

ನೀವು ಕೂಡ ಸಣ್ಣ ಸಣ್ಣ ವಿಷಯಗಳಿಗೆ ಒತ್ತಡಕ್ಕೊಳಗಾಗುತ್ತಿದ್ದರೆ, ಪ್ರತಿದಿನ 15 ನಿಮಿಷ ಸ್ಕಿಪ್ಪಿಂಗ್ ಮಾಡಲು ಪ್ರಯತ್ನಿಸಿ. ಈ ವ್ಯಾಯಾಮವು ಎಂಡಾರ್ಫಿನ್‌ಗಳನ್ನು ಬಿಡುಗಡೆ ಮಾಡುತ್ತದೆ. ಅಷ್ಟೇ ಅಲ್ಲ ಮಾನಸಿಕ ಆರೋಗ್ಯವನ್ನು ಸುಧಾರಿಸುತ್ತದೆ ಮತ್ತು ಮನಸ್ಸನ್ನು ಶಾಂತಗೊಳಿಸಿ ಒತ್ತಡ ಮತ್ತು ಆತಂಕವನ್ನು ಕಡಿಮೆ ಮಾಡುತ್ತದೆ. ಹೆಚ್ಚುವರಿಯಾಗಿ, ಈ ವ್ಯಾಯಾಮವು ಸಹಿಷ್ಣುತೆಯನ್ನು ಹೆಚ್ಚಿಸುತ್ತದೆ. ದಿನವಿಡೀ ಶಕ್ತಿಯನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ ಮತ್ತು ಆಯಾಸವನ್ನು ಕಡಿಮೆ ಮಾಡುತ್ತದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ