Sleep deprivation: ಕಡಿಮೆ ನಿದ್ದೆ ಮಾಡುತ್ತೀರಾ? ಹಾದಾದರೆ ಅಪಾಯ ತಪ್ಪಿದ್ದಲ್ಲ!

ನಿದ್ರೆಯ ಕೊರತೆಯಿಂದಾಗಿ  ಏಕಾಗ್ರತೆ ಮತ್ತು ಇತರ ಅನೇಕ ಆರೋಗ್ಯ ಸಮಸ್ಯೆಗಳಿಗೆ ಸಂಬಂಧಿಸಿದೆ. ಆದರೆ ಇತ್ತೀಚಿನ ಅಧ್ಯಯನವು ಸಾಕಷ್ಟು ನಿದ್ರೆ ಮಾಡದಿದ್ದರೆ ಮಧುಮೇಹದ ಅಪಾಯವನ್ನು ಹೆಚ್ಚಿಸುತ್ತದೆ ಎಂದು ಹೇಳಲಾಗುತ್ತಿದೆ.

Sleep deprivation: ಕಡಿಮೆ ನಿದ್ದೆ ಮಾಡುತ್ತೀರಾ? ಹಾದಾದರೆ ಅಪಾಯ ತಪ್ಪಿದ್ದಲ್ಲ!
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Sep 02, 2022 | 7:00 AM

ಸಾಮಾನ್ಯವಾಗಿ ದಿನಕ್ಕೆ ಕನಿಷ್ಠ 8 ಗಂಟೆಗಳ ನಿದ್ದೆ ಮಾಡಬೇಕು ಎಂದು ಹೇಳಲಾಗುತ್ತದೆ. ಹೆಚ್ಚು ಹೊತ್ತು ಮಲಗಿದರೆ ನಿದ್ದೆಯ ಸೋಮಾರಿ ತನ ಆವರಿಸಬಹುದು. ಜೊತೆಗೆ ಅನೇಕ ಆರೋಗ್ಯ ಸಮಸ್ಯೆಗಳು ಉದ್ಭವಿಸುತ್ತವೆ ಎಂದು ಅವರು ಹೇಳುತ್ತಾರೆ. ಆದರೆ ಕನಿಷ್ಠ ಸಮಯ ನಿದ್ದೆ ಮಾಡದಿದ್ದರೂ ತೊಂದರೆಯಾಗುತ್ತದೆ ಎನ್ನುತ್ತಾರೆ ವೈದ್ಯಕೀಯ ಮತ್ತು ಆರೋಗ್ಯ ತಜ್ಞರು. ಕಡಿಮೆ ನಿದ್ದೆ ಬಂದರೂ ಹಲವು ರೋಗಗಳು ಬರಬಹುದು ಎಂದು ವೈದ್ಯಕೀಯ ತಜ್ಞರು ಸಲಹೆ ನೀಡುತ್ತಾರೆ. ನಿದ್ರೆಯ ಕೊರತೆಯಿಂದಾಗಿ  ಏಕಾಗ್ರತೆ ಮತ್ತು ಇತರ ಅನೇಕ ಆರೋಗ್ಯ ಸಮಸ್ಯೆಗಳಿಗೆ ಸಂಬಂಧಿಸಿದೆ. ಆದರೆ ಇತ್ತೀಚಿನ ಅಧ್ಯಯನವು ಸಾಕಷ್ಟು ನಿದ್ರೆ ಮಾಡದಿದ್ದರೆ ಮಧುಮೇಹದ ಅಪಾಯವನ್ನು ಹೆಚ್ಚಿಸುತ್ತದೆ ಎಂದು ಹೇಳಲಾಗುತ್ತಿದೆ. ಯಾವುದೇ ಆರೋಗ್ಯ ಸಮಸ್ಯೆಗಳಿಲ್ಲದೆ ಕನಿಷ್ಠ ಸಮಯ ನಿದ್ದೆ ಮಾಡಬೇಕಾದರೆ ಜೀವನಶೈಲಿಯಲ್ಲಿ ಸ್ವಲ್ಪ ಬದಲಾವಣೆ ಮಾಡಿಕೊಳ್ಳಬೇಕು ಎನ್ನುತ್ತಾರೆ ವೈದ್ಯಕೀಯ ತಜ್ಞರು.

ದಿನಕ್ಕೆ ಕನಿಷ್ಠ 7 ರಿಂದ 9 ಗಂಟೆಗಳ ನಿದ್ದೆ ಮಾಡಿ. ಆದರೆ ಒಂದು ಗಂಟೆ ಅಥವಾ ಅದಕ್ಕಿಂತ ಹೆಚ್ಚು ಸಮಯ ಸಮಸ್ಯೆಯಿಲ್ಲ, ಆದರೆ ನೀವು ತುಂಬಾ ಕಡಿಮೆ ಸಮಯ ಮಲಗಿದರೆ ಮಧುಮೇಹದ ಅಪಾಯ ಎದುರಿಸಬೇಕಾಗುತ್ತದೆ ಎಂದು ಇತ್ತೀಚಿನ ಅಧ್ಯಯನವು ಬಹಿರಂಗಪಡಿಸಿದೆ. ನಿದ್ರಾಹೀನತೆಯು ದೇಹದಲ್ಲಿ ಚಯಾಪಚಯ ಬದಲಾವಣೆಗಳಿಗೆ ಕಾರಣವಾಗುತ್ತದೆ ಎಂದು ತೋರಿಸಲಾಗಿದೆ, ಇದರ ಪರಿಣಾಮವಾಗಿ ಗ್ಲೂಕೋಸ್ ಮಟ್ಟವು ಹೆಚ್ಚಾಗುತ್ತದೆ. ಈ ಅಧ್ಯಯನದ ಪ್ರಕಾರ, ಮಧುಮೇಹದ ಅಪಾಯವಿದೆ.

ಇದನ್ನೂ ಓದಿ: Vitamin B12:ನೀವು ಸದಾ ಆಲಸ್ಯದಿಂದಿರುತ್ತೀರಾ? ನಿಮ್ಮ ದೇಹದಲ್ಲಿ ವಿಟಮಿನ್ ಬಿ12 ಪ್ರಮಾಣ ಹೆಚ್ಚಿಸಿ

ವೇಳಾಪಟ್ಟಿ:

ನೀವು ಒಂದು ದಿನದಲ್ಲಿ ಎಷ್ಟು ಸಮಯವನ್ನು ನಿದ್ರಿಸುತ್ತೀರಿ ಎಂದು ನಿಗದಿಪಡಿಸಿ. ನಾವು ಏಳುವ ಸಮಯವನ್ನು ಸಹ ನಿರ್ಧರಿಸಬೇಕು. ಅದೂ ಅಲ್ಲದೆ ನಿಗದಿತ ಸಮಯಕ್ಕೆ ಮಲಗಬೇಕು ಹಾಗಾಗಿ ಕೆಲವು ದಿನ ಪ್ರಯತ್ನಿಸಿದರೆ ತಡವಾಗಿ ಮಲಗುವ ಅಭ್ಯಾಸ ಬರುತ್ತದೆ.

ಶಾಂತ ವಾತಾವರಣ:

ಮಲಗುವಾಗ ನೀವು ಎಷ್ಟು ಆರಾಮದಾಯಕವಾಗಿದ್ದೀರಿ ಎಂಬುದನ್ನು ಪರಿಗಣಿಸಿ. ಆರಾಮದಾಯಕ ಹಾಸಿಗೆಗಳು ಮತ್ತು ದಿಂಬುಗಳನ್ನು ಆರಿಸಿ. ಕೋಣೆಯ ಉಷ್ಣತೆಯು ಸಮವಾಗಿರುವಂತೆ ಖಚಿತಪಡಿಸಿಕೊಳ್ಳಿ. ಅವಶ್ಯವಿದ್ದರೆ ಮಲಗುವ ಮುನ್ನ ಸ್ವಲ್ಪ ಹೊತ್ತು ಒಳ್ಳೆಯ ಮಧುರ ಹಾಡುಗಳನ್ನು ಕೇಳುವುದು ಉತ್ತಮ.

ಕಾಫಿ ಮತ್ತು ಟೀ ಕುಡಿಯುವುದನ್ನು ಕಡಿಮೆ ಮಾಡಿ:

ನಿದ್ರಾಹೀನತೆಯಿಂದ ಬಳಲುತ್ತಿರುವವರು ಕಾಫಿ ಮತ್ತು ಟೀ ಸೇವನೆಯನ್ನು ಕಡಿಮೆ ಮಾಡಬೇಕು. ಇದನ್ನು ಮಾಡುವುದರಿಂದ ನಿದ್ರೆಯ ಗುಣಮಟ್ಟವನ್ನು ಸುಧಾರಿಸಲು ಸಹಾಯ ಮಾಡುತ್ತದೆ.

ಒತ್ತಡವನ್ನು ಕಡಿಮೆ ಮಾಡಿ:

ವೈಯಕ್ತಿಕ ಅಥವಾ ಕೆಲಸಕ್ಕೆ ಸಂಬಂಧಿಸಿದ ಒತ್ತಡವು ನಿದ್ರಾಹೀನತೆಗೆ ಕಾರಣವಾಗಬಹುದು. ಮಾನಸಿಕ ಆರೋಗ್ಯ ವೃತ್ತಿಪರರನ್ನು ಸಂಪರ್ಕಿಸುವುದು ನಿಮ್ಮ ಮನಸ್ಸಿನ ಒತ್ತಡವನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ. ನಿದ್ರೆಯ ಮೊದಲು ಒತ್ತಡವನ್ನು ಹೇಗೆ ಕಡಿಮೆ ಮಾಡುವುದು ಎಂಬುದರ ಕುರಿತು ಹಲವು ಸಲಹೆಗಳಿವೆ. ವೈದ್ಯರು ಸಲಹೆಗಳ ಮೂಲಕ ಮಾನಸಿಕ ಒತ್ತಡವನ್ನು ಕಡಿಮೆ ಮಾಡಬಹುದು.

ಮತ್ತಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ಕ್ಷಣಾರ್ಧದಲ್ಲಿ ಅತ್ಯಾದ್ಭುತ ಕ್ಯಾಚ್ ಹಿಡಿದ ಮ್ಯಾಕ್ಸ್​ವೆಲ್
ಕ್ಷಣಾರ್ಧದಲ್ಲಿ ಅತ್ಯಾದ್ಭುತ ಕ್ಯಾಚ್ ಹಿಡಿದ ಮ್ಯಾಕ್ಸ್​ವೆಲ್
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ