Sleep with Lights: ರಾತ್ರಿ ದೀಪ ಆರಿಸದೆಯೇ ಮಲಗುತ್ತೀರಾ? ಈ ಅಪಾಯ ತಪ್ಪಿದ್ದಲ್ಲ

ತಡರಾತ್ರಿ ಮಲಗುವಾಗ ದೀಪ ಆರಿಸದೆಯೇ ನಿದ್ರೆ ಮಾಡುವ ಅಭ್ಯಾಸ ನಿಮಗೂ ಇದೆಯೇ? ಸಾಮಾನ್ಯವಾಗಿ ಈ ಅಭ್ಯಾಸ ಸಹಜ ಎನಿಸಬಹುದು. ಆದರೆ ಹೊಸ ಅಧ್ಯಯನದ ಪ್ರಕಾರ ರಾತ್ರಿಯಲ್ಲಿ ದೀಪವನ್ನು ಆರಿಸದೆಯೇ, ಅಂದರೆ ಆನ್ ಮಾಡಿ ಮಲಗುವುದು ನಿಮ್ಮ ಆರೋಗ್ಯಕ್ಕೆ ಅಪಾಯಕಾರಿ ಎಂದಿದೆ. ಅದರಲ್ಲಿಯೂ ಈ ಅಭ್ಯಾಸ ಟೈಪ್ 2 ಮಧುಮೇಹದ ಅಪಾಯವನ್ನು ಹೆಚ್ಚಿಸುತ್ತದೆ. ಜೂನ್ 2024 ರಲ್ಲಿ ಪ್ರಕಟವಾದ ಈ ಅಧ್ಯಯನವು ನಿಮ್ಮ ನಿದ್ರೆಯ ಸಮಯದಲ್ಲಿ ಉರಿಯುವ ಲೈಟ್ ಆರೋಗ್ಯದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನು ಬಹಿರಂಗಪಡಿಸಿದೆ.

Sleep with Lights: ರಾತ್ರಿ ದೀಪ ಆರಿಸದೆಯೇ ಮಲಗುತ್ತೀರಾ? ಈ ಅಪಾಯ ತಪ್ಪಿದ್ದಲ್ಲ
ಸಾಂದರ್ಭಿಕ ಚಿತ್ರ
Follow us
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​

Updated on: Aug 06, 2024 | 9:48 AM

ತಡರಾತ್ರಿಯವರೆಗೆ ಅಧ್ಯಯನ ಅಥವಾ ಇನ್ನಿತರ ಕೆಲಸಗಳನ್ನು ಮಾಡುವವರು ತಮ್ಮ ಕೋಣೆಯಲ್ಲಿ ದೀಪಗಳನ್ನು ಯಾವಾಗಲೂ ಉರಿಸುತ್ತಾರೆ. ಇನ್ನು ಕೆಲವರು ರಾತ್ರಿ ಮಲಗುವಾಗಲೂ ಈ ದೀಪವನ್ನು ಆರಿಸದೆಯೇ ಮಲಗುತ್ತಾರೆ. ಸಾಮಾನ್ಯವಾಗಿ ಈ ಅಭ್ಯಾಸ ಸಹಜ ಎನಿಸಬಹುದು. ಆದರೆ ಹೊಸ ಅಧ್ಯಯನದ ಪ್ರಕಾರ ರಾತ್ರಿಯಲ್ಲಿ ದೀಪವನ್ನು ಆರಿಸದೆಯೇ, ಅಂದರೆ ಆನ್ ಮಾಡಿ ಮಲಗುವುದು ನಿಮ್ಮ ಆರೋಗ್ಯಕ್ಕೆ ಅಪಾಯಕಾರಿ ಎಂದಿದೆ. ಅದರಲ್ಲಿಯೂ ಈ ಅಭ್ಯಾಸ ಟೈಪ್ 2 ಮಧುಮೇಹದ ಅಪಾಯವನ್ನು ಹೆಚ್ಚಿಸುತ್ತದೆ. ಜೂನ್ 2024 ರಲ್ಲಿ ಪ್ರಕಟವಾದ ಈ ಅಧ್ಯಯನವು ನಿಮ್ಮ ನಿದ್ರೆಯ ಸಮಯದಲ್ಲಿ ಉರಿಯುವ ಲೈಟ್ ಮಧುಮೇಹದ ಅಪಾಯದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನು ಬಹಿರಂಗಪಡಿಸಿದೆ.

ಆಸ್ಟ್ರೇಲಿಯಾದ ಫ್ಲಿಂಡರ್ಸ್ ವಿಶ್ವವಿದ್ಯಾಲಯದ ಸಂಶೋಧಕರು ಈ ಅಧ್ಯಯನವನ್ನು ನಡೆಸಿದ್ದು ಇದರ ಪ್ರಮುಖ ಲೇಖಕ, ಡಾ. ಆಂಡ್ರ್ಯೂ ಫಿಲಿಪ್ಸ್, ರಾತ್ರಿಯಲ್ಲಿ ಪ್ರಕಾಶಮಾನವಾದ ಬೆಳಕಿಗೆ ಒಡ್ಡಿಕೊಳ್ಳುವುದು ಟೈಪ್ 2 ಮಧುಮೇಹದ ಅಪಾಯವನ್ನು ಹೆಚ್ಚಿಸುತ್ತದೆ ಎಂದು ಹೇಳಿದ್ದಾರೆ. ರಾತ್ರಿಯಲ್ಲಿ ಬೆಳಕಿಗೆ ಅತಿಯಾಗಿ ಒಡ್ಡಿಕೊಳ್ಳುವುದು ನಮ್ಮ ಸಿರ್ಕಾಡಿಯನ್ ಲಯವನ್ನು ಅಡ್ಡಿಪಡಿಸುತ್ತದೆ, ಇದರಿಂದ ಇನ್ಸುಲಿನ್ ಸ್ರವಿಸುವಿಕೆ ಮತ್ತು ಚಯಾಪಚಯ ಕ್ರಿಯೆಯ ಬದಲಾವಣೆಗಳಿಗೆ ಕಾರಣವಾಗುತ್ತದೆ ಎಂದು ಡಾ. ಆಂಡ್ರ್ಯೂ ಫಿಲಿಪ್ಸ್ ಹೇಳಿದ್ದಾರೆ. ಈ ಬದಲಾವಣೆಗಳು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುವ ದೇಹದ ಸಾಮರ್ಥ್ಯದ ಮೇಲೆ ಪರಿಣಾಮ ಬೀರುತ್ತವೆ, ಇದು ಅಂತಿಮವಾಗಿ ಟೈಪ್ 2 ಮಧುಮೇಹಕ್ಕೆ ಕಾರಣವಾಗುತ್ತದೆ.

ಇದನ್ನೂ ಓದಿ: ವಯಸ್ಸಿಗೆ ತಕ್ಕಂತೆ ಮಕ್ಕಳು ಬೆಳೆಯುತ್ತಿಲ್ಲವೇ, ಆಹಾರದಲ್ಲಿ ಈ ಸಣ್ಣ ಬದಲಾವಣೆ ಮಾಡಿ

ಅಧ್ಯಯನದಿಂದ ಇದು ಬಹಿರಂಗಗೊಂಡಿದ್ದು ನಿದ್ರೆ ಮಾಡುವಾಗ ಸಾಧ್ಯವಾದಷ್ಟು ಸುತ್ತ ಮುತ್ತ ಕತ್ತಲು ಇರುವಂತೆ ನೋಡಿಕೊಳ್ಳಿ. ಇದರಿಂದ ಮಧುಮೇಹವನ್ನು ತಡೆಯಬಹುದು. ನಿಮ್ಮ ಹಾಸಿಗೆಯ ಬಳಿ ಅಥವಾ ಕೋಣೆಯ ಸುತ್ತಮುತ್ತ ಯಾವುದೇ ರೀತಿಯ ಬೆಳಕು ಇರದಂತೆ ನೋಡಿಕೊಳ್ಳಿ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ