AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Almonds Benefits: ನೆನೆಸಿದ ಬಾದಾಮಿ ಏಕೆ ಆರೋಗ್ಯಕ್ಕೆ ಉತ್ತಮ? ಇಲ್ಲಿವೆ ಕಾರಣಗಳು

Health Tips: ಪ್ರತಿನಿತ್ಯ ನೆನೆಸಿದ ಬಾದಾಮಿಯನ್ನು ಸೇವಿಸುವ ಅಭ್ಯಾಸ ಮಾಡಿಕೊಳ್ಳಿ. ನಿಯಮಿತವಾಗಿ ಸೇವಿಸುವ ಮೂಲಕ ಅನೇಕ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದಾಗಿದೆ.

Almonds Benefits: ನೆನೆಸಿದ ಬಾದಾಮಿ ಏಕೆ ಆರೋಗ್ಯಕ್ಕೆ ಉತ್ತಮ? ಇಲ್ಲಿವೆ ಕಾರಣಗಳು
ಸಂಗ್ರಹ ಚಿತ್ರ
TV9 Web
| Edited By: |

Updated on: Oct 19, 2021 | 9:41 AM

Share

ಬಾದಾಮಿಯನ್ನು ಹಾಗೆಯೇ ಸೇವಿಸಿದರೆ ಯಾವುದೇ ಹಾನಿಯಿಲ್ಲ. ಆದರೆ ಸಿಪ್ಪೆ ತೆಗೆದ ಬಾದಾಮಿ ಹಾಗೂ ನೆನೆಸಿದ ಬಾದಾಮಿ ಸೇವನೆಯಿಂದ ಆರೋಗ್ಯಕ್ಕೆ ಹೆಚ್ಚಿನ ಪ್ರಯೋಜನಗಳಿವೆ. ಹಾಗಿರುವಾಗ ಪ್ರತಿನಿತ್ಯ ನೆನೆಸಿದ ಬಾದಾಮಿಯನ್ನು ಸೇವಿಸುವ ಅಭ್ಯಾಸ ಮಾಡಿಕೊಳ್ಳಿ. ನಿಯಮಿತವಾಗಿ ಸೇವಿಸುವ ಮೂಲಕ ಅನೇಕ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದಾಗಿದೆ. ಬಾದಾಮಿ ಅನೇಕ ಪೋಷಕಾಂಶಗಳಿಂದ ತುಂಬಿರುತ್ತದೆ. ಫೈಬರ್, ಪ್ರೋಟೀನ್, ವಿಟಮಿನ್ ಇ, ಮೆಗ್ನೀಶಿಯಂ, ಮ್ಯಾಂಗನೀಸ್, ತಾಮ್ರ, ರಂಜಕ ಜತೆಗೆ ಇನ್ನೂ ಹೆಚ್ಚಿನ ಅಗತ್ಯ ಪೋಷಕಾಂಶಗಳನ್ನು ನಿಮಗೆ ನೀಡುತ್ತದೆ.

ಬಾದಾಮಿ ಸೇವನೆಯು ಮನಸ್ಥಿತಿ ಸುಧಾರಣೆಗೆ, ಹೃದ್ರೋಗ ಕ್ಯಾನ್ಸರ್ ಮತ್ತು ಮಧುಮೇಹದ ಅಪಾಯವನ್ನು ಕಡಿಮೆ ಮಾಡಲು ಸಹಾಯಕ. ಬಾದಾಮಿ ದೇಹದಲ್ಲಿ ಉತ್ಕರ್ಷಣ ನಿರೋಧಕ ಮಟ್ಟವನ್ನು ಹೆಚ್ಚಿಸುತ್ತದೆ. ಇದರಿಂದ ರಕ್ತದೊತ್ತಡ ಸಮಸ್ಯೆಯಿಂದ ಪರಿಹಾರ ಕಂಡುಕೊಳ್ಳಬಹುದಾಗಿದೆ.

ಈ ಕೆಳಗಿನಂತಿದೆ ನೆನೆಸಿದ ಬಾದಾಮಿಯ ಆರೊಗ್ಯ ಪ್ರಯೋಜನಗಳು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ ನೆನೆಸಿದ ಬಾದಾಮಿ ಜೀರ್ಣಕ್ರಿಯೆಯನ್ನು ಸುಧಾರಿಸಲು ಸಹಾಯಕವಾಗಿದೆ. ಬಾದಾಮಿಯನ್ನು ಹಾಗೆಯೇ ಸೇವಿಸುವುದಕ್ಕಿಂತ ನೆನೆಸಿದ ಬಾದಾಮಿಯನ್ನು ಸೇವಿಸುವ ಮೂಲಕ ಅತಿಹೆಚ್ಚು ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದಾಗಿದೆ. ಜತೆಗೆ ವಯಸ್ಕರಿಗೂ ಸಹ ಆರೋಗ್ಯ ಸುಧಾರಿಸಿಕೊಳ್ಳಲು ಸಹಾಯಕವಾಗಿದೆ.

ಹೆಚ್ಚಿನ ಪೋಷಕಾಂಶ ನೀಡುತ್ತದೆ ಬಾದಾಮಿಯನ್ನು ನೆನೆಸಿದ ಬಳಿಕ ಸೇವಿಸುವುದರಿಂದ ಹೆಚ್ಚಿನ ಪೋಷಕಾಂಶ ಸಿಗಲು ಸಹಾಯಕ. ಇದು ಉತ್ಮರ್ಷಣ ನಿರೋಧಕ ಮತ್ತು ಫೈಬರ್ ಅಂಶವನ್ನು ನೀಡುತ್ತದೆ. ಫೈಬರ್, ಪ್ರೋಟೀನ್, ವಿಟಮಿನ್ ಇ, ಮೆಗ್ನೀಶಿಯಂ, ಮ್ಯಾಂಗನೀಸ್, ತಾಮ್ರ, ರಂಜಕ ಪೋಷಕಾಂಶಗಳಿಂದ ಸಮೃದ್ಧವಾಗಿರುತ್ತದೆ.

ತೂಕ ನಷ್ಟಕ್ಕೆ ಸಹಾಯಕಾರಿ ನೆನೆಸಿದ ಬಾದಾಮಿ ಲಿಪೇಸ್ ಕಿಣ್ವವನ್ನು ಬಿಡುಗಡೆ ಮಾಡುತ್ತದೆ. ಇದು ಚಯಾಪಚಯವನ್ನು ಹೆಚ್ಚಿಸುತ್ತದೆ. ಜತೆಗೆ ದೇಹದಲ್ಲಿ ಹೆಚ್ಚುವರಿ ಕೊಬ್ಬು ಕರಗುವಿಕೆಯಿಂದ ತೂಕ ನಷ್ಟಕ್ಕೆ ಸಹಾಯಕ. ನಿಯಮಿತವಾಗಿ ಪ್ರತಿನಿತ್ಯ ನೆನೆಸಿಟ್ಟ ಬಾದಾಮಿಯನ್ನು ಸೇವಿಸುವ ಮೂಲಕ ಆರೋಗ್ಯವನ್ನು ಸುಧಾರಿಸಿಕೊಳ್ಳಿ.

ಇದನ್ನೂ ಓದಿ:

Health Tips: ಚೀನಿಕಾಯಿ ಬೀಜ ಸೇವಿಸುವ ಅಭ್ಯಾಸ ಇದೆಯೇ? ಅಡ್ಡಪರಿಣಾಮದ ಬಗ್ಗೆಯೂ ಗಮನ ಇರಲಿ

Health Tips: ತಲೆ ಕೂದಲು ನಿಮ್ಮ ಆರೋಗ್ಯದ ಬಗ್ಗೆ ಬಹಳಷ್ಟು ಹೇಳುತ್ತದೆ; ನಿರ್ಲಕ್ಷ್ಯ ವಹಿಸದಿರುವುದು ಒಳಿತು

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ