ಒಂದು ತಿಂಗಳು ತಪ್ಪದೆ ಒಣದ್ರಾಕ್ಷಿಯನ್ನು ಹಾಲಿನಲ್ಲಿ ನೆನೆಸಿ ತಿಂದ್ರೆ ದೇಹದಲ್ಲಿ ಏನೆಲ್ಲಾ ಆಗುತ್ತೆ ಗೊತ್ತಾ?
ಅಡುಗೆ ಮನೆಯಲ್ಲಿ ಲಭ್ಯವಿರುವ ಒಣ ಹಣ್ಣುಗಳಲ್ಲಿ, ಒಣದ್ರಾಕ್ಷಿ ಅತ್ಯಂತ ಮುಖ್ಯವಾದದ್ದು. ಸಾಮಾನ್ಯವಾಗಿ, ನಾವು ಪಾಯಸ ಮತ್ತು ಹಲ್ವಾದಂತಹ ವಿವಿಧ ಸಿಹಿ ತಿನಿಸುಗಳಲ್ಲಿ ಒಣದ್ರಾಕ್ಷಿಗಳನ್ನು ಬಳಸುತ್ತೇವೆ. ಇತ್ತೀಚೆಗೆ, ಅನೇಕರು ಒಣದ್ರಾಕ್ಷಿಗಳನ್ನು ರಾತ್ರಿಯಿಡೀ ನೀರಿನಲ್ಲಿ ನೆನೆಸಿ ಬೆಳಿಗ್ಗೆ ಸೇವಿಸುತ್ತಾರೆ. ಆದರೆ ಆರೋಗ್ಯ ತಜ್ಞರು ಅವುಗಳನ್ನು ನೀರಿನಲ್ಲಿ ಮಾತ್ರವಲ್ಲದೆ ಹಾಲಿನಲ್ಲಿಯೂ ನೆನೆಸಿ ತಿನ್ನುವುದರಿಂದ ಎರಡು ಪಟ್ಟು ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ ಎಂದು ಹೇಳುತ್ತಾರೆ. ಹಾಗಾದರೆ ಈ ಅಭ್ಯಾಸದಿಂದ ಯಾವ ರೀತಿಯ ಪ್ರಯೋಜನಗಳು ಸಿಗುತ್ತವೆ ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಅಡುಗೆ ಮನೆಯಲ್ಲಿ ಸುಲಭವಾಗಿ ದೊರೆಯುವ ಡ್ರೈ ಫ್ರೂಟ್ಸ್‌ಗಳಲ್ಲಿ ಒಣದ್ರಾಕ್ಷಿ (Raisin) ಪ್ರಮುಖ ಸ್ಥಾನ ಪಡೆದುಕೊಳ್ಳುತ್ತದೆ. ಸಾಮಾನ್ಯವಾಗಿ ಪಾಯಸ, ಹಲ್ವಾ ಮತ್ತು ಸಿಹಿ ಪದಾರ್ಥಗಳಲ್ಲಿ ಬಳಸುವ ಒಣದ್ರಾಕ್ಷಿಯನ್ನು ಇತ್ತೀಚಿನ ದಿನಗಳಲ್ಲಿ ಹಲವರು ನೀರಿನಲ್ಲಿ ನೆನೆಸಿ ಬೆಳಿಗ್ಗೆ ಸೇವಿಸುವ ಅಭ್ಯಾಸ ಮಾಡಿಕೊಂಡಿದ್ದಾರೆ. ಆದರೆ ಆರೋಗ್ಯ ತಜ್ಞರ ಪ್ರಕಾರ, ಒಣದ್ರಾಕ್ಷಿಯನ್ನು ಹಾಲಿನಲ್ಲಿ ನೆನೆಸಿ ಸೇವಿಸಿದರೆ ದೇಹಕ್ಕೆ ಇನ್ನಷ್ಟು ಪ್ರಯೋಜನಗಳು ದೊರೆಯುತ್ತವೆ. ಹೌದು, ಹಾಲು (Milk) ಮತ್ತು ಒಣದ್ರಾಕ್ಷಿಯ ಸಂಯೋಜನೆ ದೇಹಕ್ಕೆ ಕ್ಯಾಲ್ಸಿಯಂ, ಪ್ರೋಟೀನ್, ಐರನ್ ಹಾಗೂ ಫೈಬರ್‌ಗಳನ್ನು ಸಮೃದ್ಧವಾಗಿ ಒದಗಿಸುತ್ತದೆ. ಇದರಿಂದ ಎಲುಬುಗಳು ಬಲವಾಗುವುದರ ಜೊತೆಗೆ ದೇಹದ ಶಕ್ತಿ ಕೂಡ ಹೆಚ್ಚುತ್ತದೆ. ಹಾಗಾದರೆ ಈ ಅಭ್ಯಾಸದಿಂದ ಯಾವ ರೀತಿಯ ಪ್ರಯೋಜನಗಳು ಸಿಗುತ್ತವೆ ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.
ರಕ್ತಹೀನತೆ ಮತ್ತು ರಕ್ತದೊತ್ತಡ ನಿಯಂತ್ರಣಕ್ಕೆ ಸಹಕಾರಿ;
ಒಣದ್ರಾಕ್ಷಿಯಲ್ಲಿ ಐರನ್ ಮತ್ತು ಪೊಟ್ಯಾಸಿಯಂ ಪ್ರಮಾಣ ಹೆಚ್ಚು ಇರುತ್ತದೆ. ಹಾಲಿನಲ್ಲಿ ರಾತ್ರಿ ಪೂರ್ತಿ ನೆನೆಸಿದಾಗ ಅದರ ಪೋಷಕಾಂಶಗಳನ್ನು ದೇಹ ಸುಲಭವಾಗಿ ಜೀರ್ಣಿಸಿಕೊಳ್ಳುತ್ತದೆ. ಪ್ರತಿದಿನ ಬೆಳಗ್ಗೆ ಇದನ್ನು ಸೇವಿಸಿದರೆ ರಕ್ತಹೀನತೆ ಕಡಿಮೆಯಾಗಲು ಸಹಾಯವಾಗುತ್ತದೆ. ಜೊತೆಗೆ ಪೊಟ್ಯಾಸಿಯಂ ರಕ್ತದೊತ್ತಡ ನಿಯಂತ್ರಣದಲ್ಲಿರಲು ನೆರವಾಗುತ್ತದೆ.
ಜೀರ್ಣಕ್ರಿಯೆ ಸುಧಾರಿಸುತ್ತದೆ;
ಒಣದ್ರಾಕ್ಷಿಯಲ್ಲಿ ಇರುವ ಡೈಟರಿ ಫೈಬರ್ ಮಲಬದ್ಧತೆ ಸಮಸ್ಯೆಯನ್ನು ಕಡಿಮೆ ಮಾಡಲು ಸಹಕಾರಿ. ಹಾಲಿನಲ್ಲಿ ನೆನೆಸಿದ ನಂತರ ಇದು ಮೃದುವಾಗುವುದರಿಂದ ಜೀರ್ಣಕ್ರಿಯೆ ಸುಲಭವಾಗುತ್ತದೆ. ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ಹೊಟ್ಟೆಯ ಒಳಗಿನ ಉತ್ತಮ ಬ್ಯಾಕ್ಟೀರಿಯಾ ಬೆಳವಣಿಗೆಗೆ ಸಹಾಯವಾಗುತ್ತದೆ ಎಂದು ಆರೋಗ್ಯ ತಜ್ಞರು ಹೇಳಿದ್ದಾರೆ.
ಇದನ್ನೂ ಓದಿ: ಹಾಲು ಆರೋಗ್ಯಕ್ಕೆ ಒಳ್ಳೆಯದು ಆದ್ರೆ ಎಲ್ಲರಿಗೂ ಅಲ್ಲ! ಹಾಗಿದ್ರೆ ಯಾರು ಕುಡಿಯಬಾರದು?
ಹೃದಯ ಮತ್ತು ಚರ್ಮದ ಆರೋಗ್ಯಕ್ಕೂ ಒಳ್ಳೆಯದು;
ಒಣದ್ರಾಕ್ಷಿಯಲ್ಲಿರುವ ಆಂಟಿ ಆಕ್ಸಿಡೆಂಟ್ಸ್ ಮತ್ತು ಆರೋಗ್ಯಕರ ಕೊಬ್ಬುಗಳು ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತವೆ. ಇದರಿಂದ ಹೃದಯದ ಆರೋಗ್ಯ ಉತ್ತಮವಾಗಿರುತ್ತದೆ. ಜೊತೆಗೆ ಚರ್ಮ ಒಣಗುವುದು, ಮೊಡವೆ ಮತ್ತು ಕಲೆಗಳಂತಹ ಸಮಸ್ಯೆಗಳನ್ನು ಕಡಿಮೆ ಮಾಡಿ ಮುಖದ ಕಾಂತಿಯನ್ನೂ ಹೆಚ್ಚಿಸುತ್ತದೆ.
ತೂಕ ಇಳಿಕೆಗೆ ಸಹ ಉಪಯುಕ್ತ;
ಹೆಚ್ಚಿನ ಫೈಬರ್ ಇರುವುದರಿಂದ ಈ ಮಿಶ್ರಣ ಹೊಟ್ಟೆ ತುಂಬಿದ ಅನುಭವವನ್ನು ಹೆಚ್ಚು ಸಮಯ ನೀಡುತ್ತದೆ. ಇದರಿಂದ ಅತಿಯಾಗಿ ತಿನ್ನುವ ಅಭ್ಯಾಸ ಕಡಿಮೆಯಾಗಬಹುದು. ಹೀಗಾಗಿ ತೂಕ ಇಳಿಸಿಕೊಳ್ಳಲು ಪ್ರಯತ್ನಿಸುವವರಿಗೆ ಇದು ಸಹಕಾರಿಯಾಗಿದೆ.
ಆದರೆ ಯಾವುದೇ ಆಹಾರವಾಗಲಿ ಅತಿಯಾಗಿ ಸೇವಿಸುವುದು ಆರೋಗ್ಯಕ್ಕೆ ಹಾನಿಕಾರಕವಾಗಬಹುದು. ಆದ್ದರಿಂದ ಮಿತ ಪ್ರಮಾಣದಲ್ಲಿ ಹಾಗೂ ವೈದ್ಯರ ಸಲಹೆಯೊಂದಿಗೆ ಸೇವಿಸುವುದು ಉತ್ತಮ ಎಂದು ಆರೋಗ್ಯ ತಜ್ಞರು ಸಲಹೆ ನೀಡಿದ್ದಾರೆ.
ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

