ಸೇವಿಸುವ ಕೆಲವು ಆಹಾರಗಳು ಒತ್ತಡ ಹೆಚ್ಚಾಗಲು ಕಾರಣವಾಗಬಹುದು: ಅವುಗಳು ಯಾವುವು ಎಂಬ ಮಾಹಿತಿ ಇಲ್ಲಿದೆ

ಸಮತೋಲಿತ ಆಹಾರವು ದೇಹದಾರೋಗ್ಯಕ್ಕೆ ಮಾತ್ರವಲ್ಲ, ಮಾನಸಿಕ ಆರೋಗ್ಯವನ್ನು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ. ಆದರೆ ಕೆಲವೊಂದು ಆಹಾರ ಸೇವನೆಯು ನಮ್ಮ ಮೆದುಳಿನ ಮೇಲೆ ಕೆಟ್ಟ ಪರಿಣಾಮವನ್ನು ಬೀರುತ್ತದೆ. ಇದು ಸಹಜವಾಗಿ ಒತ್ತಡ ಹೆಚ್ಚಾಗಲು ಕಾರಣವಾಗಬಹುದು. ಆ ಆಹಾರಗಳು ಯಾವುವು ಎಂಬುದನ್ನು ನೋಡೋಣ.

ಸೇವಿಸುವ ಕೆಲವು ಆಹಾರಗಳು ಒತ್ತಡ ಹೆಚ್ಚಾಗಲು ಕಾರಣವಾಗಬಹುದು: ಅವುಗಳು ಯಾವುವು ಎಂಬ ಮಾಹಿತಿ ಇಲ್ಲಿದೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಅಕ್ಷತಾ ವರ್ಕಾಡಿ

Updated on: Aug 04, 2023 | 6:08 AM

ಅತಿಯಾದ ಅಲೋಚನೆ ಮತ್ತು ಕೆಲಸದ ಕಾರಣದಿಂದಾಗಿ ಅನೇಕ ಜನರು ಒತ್ತಡಕ್ಕೆ ಒಳಗಾಗುತ್ತಾರೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಆದರೆ ನಮ್ಮ ಆಹಾರ ಪದ್ಧತಿಯೂ ಕೂಡಾ ನಮ್ಮ ಮಾನಸಿಕ ಒತ್ತಡವನ್ನು ಹೆಚ್ಚಿಸಲು ಕಾರಣವಾಗುತ್ತದೆ ಎಂಬುದರ ಬಗ್ಗೆ ನಿಮಗೆ ತಿಳಿದಿದೆಯೇ? ಹೌದು ಕೆಲವೊಂದು ಆಹಾರಗಳು ನಮ್ಮ ಮಾನಸಿಕ ಸ್ಥಿತಿಯ ಮೇಲೆ ವ್ಯತಿರಿಕ್ತ ಪರಿಣಾಮವನ್ನು ಬೀರುತ್ತದೆ. ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಒತ್ತಡ ಮತ್ತು ಖಿನ್ನತೆಯ ಪ್ರಕರಣಗಳು ಹೆಚ್ಚಾಗುತ್ತಿವೆ. ಇಂತಹ ಪರಿಸ್ಥಿತಿಯಲ್ಲಿ ನಾವು ಸೇವಿಸುವ ಆಹಾರದ ಬಗ್ಗೆ ಸ್ವಲ್ಪ ಜಾಗರೂಕರಾಗಿರಬೇಕು. ನೀವು ಪ್ರತಿದಿನ ಒತ್ತಡವನ್ನು ಅನುಭವಿಸುತ್ತಿದ್ದರೆ, ಇದಕ್ಕೆ ಕಾರಣ ನೀವು ಆಯ್ಕೆ ಮಾಡಿರುವ ಆಹಾರ ಪದ್ಧತಿಯಾಗಿರಬಹುದು. ಅಸಮತೋಲಿತ ಆಹಾರ ಪದಾರ್ಥಗಳನ್ನು ತಿನ್ನುವುದರಿಂದ ಮಾನಸಿಕ ಸ್ಥಿತಿಯ ಮೇಲೆ ಕೆಟ್ಟ ಪರಿಣಾಮ ಬೀರಬಹುದು. ಆದ್ದರಿಂದ ಮೆದುಳಿನ ಆರೋಗ್ಯವನ್ನು ಕಾಪಾಡಿಕೊಳ್ಳಲು ಬಯಸಿದರೆ, ಕೆಲವೊಂದು ಆಹಾರಗಳಿಂದ ನೀವು ಆದಷ್ಟು ದೂರವಿರಬೇಕು. ಏಕೆಂದರೆ ಇಂತಹ ಆಹಾರಗಳು ಮೆದುಳಿನಲ್ಲಿ ಒತ್ತಡವನ್ನು ಹೆಚ್ಚಿಸಲು ಕಾರಣವಾಗಬಹುದು. ಯಾವ ಪದಾರ್ಥಗಳನ್ನು ತಿನ್ನುವುದರಿಂದ ಒತ್ತಡ ಹೆಚ್ಚಾಗುತ್ತದೆ ಎಂಬುದನ್ನು ನೋಡೋಣ.

ಒತ್ತಡ ಹೆಚ್ಚಾಗಲು ಕಾರಣ ಈ ಆಹಾರಗಳು:

ಸಿಹಿ ಪದಾರ್ಥಗಳು:

ಹೆಚ್ಚಿನ ಜನರು ಸಿಹಿ ಪದಾರ್ಥಗಳನ್ನು ತಿನ್ನಲು ಇಷ್ಟಪಡುತ್ತಾರೆ. ಪೇಸ್ಟ್ರಿ ಕೇಕ್, ಚಾಕೊಲೇಟ್ ಗಳಂತಹ ಸಿಹಿ ತಿನಿಸುಗಳನ್ನು ಸೇವಿಸಿದಾಗ ಅದು ನಿಮ್ಮ ಮನಸ್ಥಿತಿಯನ್ನು ಬದಲಾಯಿಸಿದರೂ ಸಹ, ಇವುಗಳು ರಕ್ತದಲ್ಲಿನ ಸಕ್ಕರೆಯ ಮಟ್ಟದ ಏರಿಳಿತಕ್ಕೆ ಕಾರಣವಾಗುತ್ತದೆ. ರಕ್ತದಲ್ಲಿ ಸಕ್ಕರೆಯ ಮಟ್ಟದಲ್ಲಿ ಅತಿಯಾದ ಇಳಿಕೆ ಅಥವಾ ಅತಿಯಾದ ಹೆಚ್ಚಳವು ಮೆದುಳಿನ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ. ಮತ್ತು ಇದರಿಂದ ಒತ್ತಡವು ಹೆಚ್ಚುತ್ತದೆ.

ಕಾಫಿ ಮತ್ತು ಚಹಾ:

ಜನರು ಸಾಮಾನ್ಯವಾಗಿ ತಾಜಾತನವನ್ನು ಅನುಭವಿಸಲು ಚಹಾ ಅಥವಾ ಕಾಫಿ ಕುಡಿಯಲು ಇಷ್ಟಪಡುತ್ತಾರೆ. ಆದರೆ ನೀವು ಎರಡರಿಂದ ಮೂರು ಕಪ್ ಗಳಿಗಿಂತ ಹೆಚ್ಚು ಕಾಫಿ ಕುಡಿದರೆ ಅದು ಹೃದಯದ ಬಡಿತ ಮತ್ತು ಬಿಪಿಯನ್ನು ಹೆಚ್ಚಿಸುತ್ತದೆ. ಅಲ್ಲದೆ ಕಾಫಿಯಲ್ಲಿನ ಕೆಫೀನ್ ಅಂಶ ವಾಸ್ತವವಾಗಿ ಒತ್ತಡವನ್ನು ಉಂಟುಮಾಡಲು ಕಾರಣವಾಗುತ್ತದೆ. ಹೆಚ್ಚಿನ ಪ್ರಮಾಣದ ಕೆಫೀನ್ ಸೇವನೆಯು ದೇಹದಲ್ಲಿನ ನಿರ್ಜಲೀಕರಣಕ್ಕೆ ಕಾರಣವಾಗಬಹುದು, ಇದು ನಿಮ್ಮ ಹೃದಯದ ಬಡಿತವನ್ನು ವೇಗಮಾಡುತ್ತದೆ. ಇದರಿಂದಾಗಿ ಸಹಜವಾಗಿ ಒತ್ತಡ ಮತ್ತು ಆತಂಕ ಹೆಚ್ಚಾಗಲು ಕಾರಣವಾಗುತ್ತದೆ.

ಇದನ್ನೂ ಓದಿ: ಊಟದ ಬಳಿಕ ಹೊಟ್ಟೆ ಉಬ್ಬರದ ಸಮಸ್ಯೆ ನಿಮ್ಮನ್ನು ಕಾಡುತ್ತಿದೆಯೇ? ಈ ಸಮಸ್ಯೆಗೆ ಇಂದೇ ವಿದಾಯ ಹೇಳಿ

ಮೈದಾ:

ಮೈದಾ ಒಂದು ರೀತಿಯ ಸಂಸ್ಕರಿಸಿದ ಕಾರ್ಬೋಹೈಡ್ರೇಟ್ ಆಹಾರವಾಗಿದೆ. ಮೈದಾ ಹಿಟ್ಟಿನಲ್ಲಿ ತಯಾರಿಸಿದ ಆಹಾರಗಳನ್ನು ಅತಿಯಾಗಿ ತಿನ್ನುವುದರಿಂದ ದೇಹದಲ್ಲಿ ಊತ ಕಾಣಿಸಿಕೊಳ್ಳುತ್ತದೆ. ಇದರಿಂದಾಗಿ ದೇಹದಲ್ಲಿ ಒತ್ತಡದ ಮಟ್ಟ ಹೆಚ್ಚಾಗುತ್ತದೆ.

ಎಣ್ಣೆಯುಕ್ತ ಆಹಾರಗಳು:

ಎಣ್ಣೆಯಲ್ಲಿ ಕರಿದ ಆಹಾರಗಳು ಒತ್ತಡ ಮತ್ತು ಖಿನ್ನತೆಯ ಮಟ್ಟವನ್ನು ಹೆಚ್ಚಿಸುತ್ತದೆ. ಎಣ್ಣೆಯಲ್ಲಿ ಕರಿದ ಚಿಪ್ಸ್, ಪಿಜ್ಜಾ, ಬರ್ಗರ್ ಇತ್ಯಾದಿಗಳನ್ನು ಸೇವಿಸಬಾರದು. ಏಕೆಂದರೆ ಅವು ಹೆಚ್ಚಿನ ಪ್ರಮಾಣದ ಟ್ರಾನ್ಸ್ ಫ್ಯಾಟ್ ನ್ನು ಹೊಂದಿರುತ್ತದೆ. ಈ ಕೊಬ್ಬು ದೇಹದಲ್ಲಿ ಉರಿಯೂತಕ್ಕೆ ಕಾರಣವಾಗುತ್ತದೆ. ಇದರಿಂದಾಗಿ ನೀವು ಒತ್ತಡ ಮತ್ತು ಆತಂಕವನ್ನು ಎದುರಿಸಬೇಕಾಗುತ್ತದೆ.

ಕೃತಕ ಸಿಹಿಕಾರಕಗಳು:

ಇತ್ತೀಚಿನ ದಿನಗಳಲ್ಲಿ ಜನರು ಹೆಚ್ಚಾಗಿ ಸಕ್ಕರೆಯ ಬದಲು ಕೃತಕ ಸಿಹಿಕಾರಕಗಳನ್ನು ಬಳಸುತ್ತಿದ್ದಾರೆ. ಆದರೆ ಇದು ಯಾವುದೇ ರೀತಿಯ ಆರೋಗ್ಯ ಪ್ರಯೋಜನಗಳನ್ನು ನೀಡುವುದಿಲ್ಲ ಬದಲಾಗಿ ಕೃತಕ ಸಿಹಿಕಾರಕಗಳು ದೇಹದಲ್ಲಿ ಒತ್ತಡ ಮತ್ತು ಉರಿಯೂತದ ಹೆಚ್ಚಳಕ್ಕೆ ಕಾರಣವಾಗುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ:

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ