Soya Chunks: ನಿಮಗೆ ಸೋಯಾಬೀನ್ ಇಷ್ಟನಾ? ಇದರ ಪ್ರಯೋಜನಗಳು ಇಲ್ಲಿವೆ

ಸೋಯಾ ತುಂಡುಗಳು ಖನಿಜಗಳು, ಕ್ಯಾಲ್ಸಿಯಂ, ತಾಮ್ರ, ಸತು, ಜೀವಸತ್ವಗಳು ಮತ್ತು ಸೆಲೆನಿಯಂನಲ್ಲಿ ಸಮೃದ್ಧವಾಗಿವೆ. ಹೀಗಾಗಿ ಇದನ್ನು ಸೇವಿಸುವುದರಿಂದ ಮೂಳೆಗಳಿಗೆ ತುಂಬಾ ಒಳ್ಳೆಯದು.

Soya Chunks: ನಿಮಗೆ ಸೋಯಾಬೀನ್ ಇಷ್ಟನಾ? ಇದರ ಪ್ರಯೋಜನಗಳು ಇಲ್ಲಿವೆ
ಸೋಯಾಬೀನ್
Follow us
TV9 Web
| Updated By: preethi shettigar

Updated on: Aug 03, 2021 | 7:58 AM

ಸಹಜವಾಗಿ ಸೋಯಾಬೀನ್ ಎಲ್ಲರಿಗೂ ಇಷ್ಟವಾಗುತ್ತೆ. ತಿನ್ನಲು ಸ್ವಲ್ಪ ಮಟ್ಟಿಗೆ ಚಿಕನ್ ರೀತಿ ಅನಿಸುತ್ತೆ. ಇದರಿಂದ ಮಾಡುವ ಫ್ರೈ, ಪಲಾವ್, ಗ್ರೇವಿ ಎಲ್ಲವೂ ರುಚಿಯಾಗಿರುತ್ತದೆ. ನಾಲಿಗೆಗೂ ಹೆಚ್ಚು ರುಚಿ ಕೊಡುವ ಸೋಯಾ ಬೀನ್ ಆರೋಗ್ಯಕ್ಕೂ ತುಂಬಾ ಒಳ್ಳೆಯದು. ಸೋಯಾ ಹಿಟ್ಟಿನಿಂದ ಚಿಕ್ಕ ಚಿಕ್ಕ ತುಂಡುಗಳಾಗಿ ಸೋಯಾಬೀನ್ ರೆಡಿಮಾಡಲಾಗುತ್ತದೆ. ಸೋಯಾಬಿನ್ ಹೆಚ್ಚು ಪೌಷ್ಟಿಕಾಂಶದಿಂದ ಕೂಡಿದೆ.

* ಮೂಳೆಗಳಿಗೆ ಒಳ್ಳೆಯದು ಸೋಯಾ ತುಂಡುಗಳು ಖನಿಜಗಳು, ಕ್ಯಾಲ್ಸಿಯಂ, ತಾಮ್ರ, ಸತು, ಜೀವಸತ್ವಗಳು ಮತ್ತು ಸೆಲೆನಿಯಂನಲ್ಲಿ ಸಮೃದ್ಧವಾಗಿವೆ. ಹೀಗಾಗಿ ಇದನ್ನು ಸೇವಿಸುವುದರಿಂದ ಮೂಳೆಗಳಿಗೆ ತುಂಬಾ ಒಳ್ಳೆಯದು. ಇದು ಮೂಳೆಗಳ ಬೆಳವಣಿಗೆಗೆ ಸಹಾಯ ಮಾಡುತ್ತದೆ. ಮೂಳೆಗಳನ್ನು ಗಟ್ಟಿಗೊಳಿಸುವ ಜೊತೆಗೆ, ಗುಣಪಡಿಸುವ ಪ್ರಕ್ರಿಯೆಯನ್ನು ವೇಗಗೊಳಿಸುತ್ತವೆ.

* ಹೃದಯದ ಆರೋಗ್ಯವನ್ನು ಸುಧಾರಿಸುತ್ತದೆ ಹೆಚ್ಚಿನ ಎಲ್ಡಿಎಲ್ ಕೊಲೆಸ್ಟ್ರಾಲ್ ಹೊಂದಿರುವ ಜನರು ಪಾರ್ಶ್ವವಾಯು ಮತ್ತು ಹೃದಯಾಘಾತದಂತಹ ಹೃದಯ ಸಂಬಂಧಿ ರೋಗಗಳನ್ನು ಹೊಂದಿರುತ್ತಾರೆ. ಸೋಯಾಬೀನ್ ತಿನ್ನುವುದರಿಂದ ದೇಹದಲ್ಲಿರುವ ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಮಾಡಬಹುದು. ಇದರಿಂದ ಹೃದಯ ಸಂಬಂಧಿ ರೋಗಗಳನ್ನು ತಡೆಯಬಹುದು.

* ದೇಹದ ತೂಕ ನಿಯಂತ್ರಿಸಲು  ಸೋಯಾಬೀನ್ ದೇಹದ ತೂಕವನ್ನು ಕಡಿಮೆ ಮಾಡುತ್ತದೆ. ಅಧ್ಯಯನದ ಪ್ರಕಾರ, ಸೋಯಾ ತುಂಡುಗಳು ಅಂಗಗಳ ಸುತ್ತ ಸಂಗ್ರಹವಾಗುವ ಅಧಿಕ ಕೊಬ್ಬನ್ನು ಕಡಿಮೆ ಮಾಡುತ್ತದೆ. ಹೀಗಾಗಿ ದೇಹದ ತೂಕವನ್ನು ಇಳಿಸುವವರು ಸೋಯಾಬೀನ್ ಸೇವಿಸಬಹುದು. ಅಲ್ಲದೆ, ಸೋಯಾ ತುಂಡುಗಳಲ್ಲಿ ಪ್ರೋಟೀನ್ ಸಮೃದ್ಧವಾಗಿದೆ. ಸ್ನಾಯುಗಳ ಬೆಳವಣಿಗೆಗೆ ಪ್ರಯೋಜನಕಾರಿಯಾಗಿದೆ.

* ಜೀರ್ಣಕ್ರಿಯೆಗೆ ಸಹಾಯಕ ಸೋಯಾ ತುಂಡುಗಳಲ್ಲಿ ಫೈಬರ್ ಸಮೃದ್ಧವಾಗಿದ್ದು, ಜೀರ್ಣಾಂಗ ವ್ಯವಸ್ಥೆಯಲ್ಲಿ ಫೈಬರ್ ಪ್ರಮುಖ ಪಾತ್ರ ವಹಿಸುತ್ತದೆ. ಇದು ಮಲಬದ್ಧತೆಯ ಸಮಸ್ಯೆಯನ್ನು ನಿವಾರಿಸುತ್ತದೆ. ಇದರ ಜೊತೆಗೆ ಸೋಯಾ ತುಂಡುಗಳಲ್ಲಿ ಒಲಿಗೊಸ್ಯಾಕರೈಡ್ ಎಂಬ ಕಾರ್ಬೋಹೈಡ್ರೇಟ್ ಇದ್ದು, ಜೀರ್ಣಕ್ರಿಯೆಗೆ ಹೆಚ್ಚು ಪ್ರಯೋಜನವಾಗಿದೆ.

* ಚರ್ಮ ಮತ್ತು ಕೂದಲಿಗೆ ಒಳ್ಳೆಯದು  ಸೋಯಾ ತುಂಡುಗಳನ್ನು ಸೇವಿಸುವುದರಿಂದ ಚರ್ಮ ಮತ್ತು ಕೂದಲಿಗೆ ಹೆಚ್ಚು ಪ್ರಯೋಜನಕಾರಿ. ಚರ್ಮವನ್ನು ಬಲಪಡಿಸುವ ಜೊತೆಗೆ ಚರ್ಮದ ಮೇಲೆ ಮೂಡುವ ಸುಕ್ಕನ್ನು ಕಡಿಮೆ ಮಾಡುತ್ತದೆ. ಅಲ್ಲದೇ ಇದು ಒಣ ಕೂದಲಿನ ಸಮಸ್ಯೆಯನ್ನು ನಿವಾರಿಸುತ್ತದೆ. ಮತ್ತು ಬಲಪಡಿಸುತ್ತದೆ. ಕೂದಲು ಹೆಚ್ಚು ಉದುರುತ್ತಿದ್ದರೆ, ಇದನ್ನೂ ತಡೆಯುವ ಸಾಮರ್ಥ್ಯ ಸೋಯಾಬೀನ್ ಹೊಂದಿದೆ.

ಇದನ್ನೂ ಓದಿ

Health Tips: ಅರಿಶಿಣ ನೀರು ಸೇವಿಸುವುದರಿಂದ ಆರೋಗ್ಯ ಪ್ರಯೋಜನಗಳು ಎಷ್ಟಿವೆ ತಿಳಿಯಿರಿ

Health Tips: ತಲೆಕೂದಲು ಬಿಳಿಯಾಗಿದೆ ಎಂದು ಚಿಂತಿಸುವ ಬದಲು ಈ 5 ಕ್ರಮಗಳನ್ನು ಅನುಸರಿಸಿ

(Soya Chunks benefits for good health)

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ