Sprouted Ragi Benefits: ಮೊಳಕೆಯೊಡೆದ ರಾಗಿ ಸೇವನೆ ಮಾಡುವುದರಿಂದ ಹೃದಯ ಬಲಗೊಳ್ಳುತ್ತದೆ
Sprouted Ragi Benefits: ಮೊಳಕೆಯೊಡೆದ ರಾಗಿ ತಿನ್ನುವುದರಿಂದ ಅನೇಕ ರೀತಿಯ ಆರೋಗ್ಯ ಪ್ರಯೋಜನಗಳಿವೆ ಎಂದು ತಜ್ಞರು ಹೇಳುತ್ತಾರೆ. ಇದರಲ್ಲಿ ಪೋಷಕಾಂಶಗಳು ಸಮೃದ್ಧವಾಗಿದ್ದು ಕಾರ್ಬೋಹೈಡ್ರೇಟ್ ಗಳು, ಕ್ಯಾಲ್ಸಿಯಂ, ಫೈಬರ್ ಮತ್ತು ಜೀವಸತ್ವಗಳು ಇರುತ್ತವೆ. ಹಾಗಾದರೆ ಯಾರು ಇದನ್ನು ಸೇವನೆ ಮಾಡಬೇಕು ಎಂಬುದನ್ನು ತಿಳಿದುಕೊಳ್ಳಬೇಕಾಗುತ್ತದೆ. ಸಾಮಾನ್ಯವಾಗಿ ಇದನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ಹಲವು ರೀತಿಯ ಆರೋಗ್ಯ ಸಮಸ್ಯೆಗಳನ್ನು ನಿವಾರಣೆ ಮಾಡುತ್ತದೆ.
ಮೊಳಕೆಯೊಡೆದ ರಾಗಿ
ರಾಗಿ ಸೇವನೆ ಮಾಡುವುದರಿಂದ ಎಷ್ಟೆಲ್ಲಾ ಆರೋಗ್ಯ ಪ್ರಯೋಜನಗಳು ಸಿಗುತ್ತದೆ ಎಂಬುದು ನಿಮಗೆ ತಿಳಿದಿರಬಹುದು. ಆದರೆ ರಾಗಿಯನ್ನು ಮೊಳಕೆಯೊಡೆಸಿ ಸೇವನೆ ಮಾಡುವುದರಿಂದ ಎಷ್ಟೆಲ್ಲಾ ಲಾಭಗಳಿವೆ ಎಂಬುದು ನಿಮಗೆ ತಿಳಿದಿದೆಯೇ? ಹೌದು, ಮೊಳಕೆ ಬಂದ ರಾಗಿ ನಮ್ಮ ಆರೋಗ್ಯವನ್ನು ಕಾಪಾಡುತ್ತದೆ. ಹಾಗಾದರೆ ಯಾರು ಇದನ್ನು ಸೇವನೆ ಮಾಡಬೇಕು ಎಂಬುದನ್ನು ತಿಳಿದುಕೊಳ್ಳಬೇಕಾಗುತ್ತದೆ. ಸಾಮಾನ್ಯವಾಗಿ ಇದನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ಹಲವು ರೀತಿಯ ಆರೋಗ್ಯ ಸಮಸ್ಯೆಗಳನ್ನು ನಿವಾರಣೆ ಮಾಡುತ್ತದೆ. ಮೊಳಕೆಯೊಡೆದ ರಾಗಿಯಲ್ಲಿ ಜೀವಸತ್ವಗಳು, ಖನಿಜಗಳು ಮತ್ತು ಪ್ರೋಟೀನ್ ಗಳ ಪ್ರಮಾಣ ಹೆಚ್ಚಾಗಿರುತ್ತವೆ. ವಿಶೇಷವಾಗಿ ವಿಟಮಿನ್ ಬಿ ಕಾಂಪ್ಲೆಕ್ಸ್, ವಿಟಮಿನ್ ಇ, ಕಬ್ಬಿಣ ಮತ್ತು ಸತುವಿನಂತಹ ಪೋಷಕಾಂಶಗಳು ಸಮೃದ್ಧವಾಗಿದೆ. ಹಾಗಾಗಿ ಇದನ್ನು ಸೇವನೆ ಮಾಡುವುದರಿಂದ ಯಾವುದೇ ರೀತಿಯ ಅಡ್ಡಪರಿಣಾಮಗಳು ಇರುವುದಿಲ್ಲ.
ಮೊಳಕೆಯೊಡೆದ ರಾಗಿ ಸೇವನೆ ಮಾಡುವುದರಿಂದ ಸಿಗುವ ಪ್ರಯೋಜನಗಳೇನು?
- ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ. ರಕ್ತಹೀನತೆಯ ಸಮಸ್ಯೆ ಇದ್ದರೆ ಕಡಿಮೆ ಮಾಡುತ್ತದೆ.
- ಇದರಲ್ಲಿ ಪ್ರೋಟೀನ್ ಪ್ರಮಾಣವೂ ಹೆಚ್ಚಾಗಿದ್ದು, ಇದು ಸ್ನಾಯುಗಳ ಬೆಳವಣಿಗೆಗೆ ಮುಖ್ಯವಾಗಿದೆ. ಜೊತೆಗೆ ಮೂಳೆಗಳನ್ನು ಆರೋಗ್ಯವಾಗಿರಿಸುತ್ತದೆ. ಜೊತೆಗೆ ಇದು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ.
- ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ ಮತ್ತು ಹೃದಯವನ್ನು ಆರೋಗ್ಯಕರವಾಗಿರಿಸುತ್ತದೆ.
- ಮೊಳಕೆಯೊಡೆದ ರಾಗಿಯಲ್ಲಿ ಜೀವಸತ್ವಗಳು ಮತ್ತು ಖನಿಜಗಳ ಪ್ರಮಾಣ ಹೆಚ್ಚಾಗಿದೆ. ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಮೆದುಳಿನ ಕಾರ್ಯನಿರ್ವಹಣೆಯನ್ನು ಸುಧಾರಿಸುತ್ತದೆ.
- ಮೊಳಕೆಯೊಡೆದ ರಾಗಿಯಲ್ಲಿ ಫೈಬರ್ ಪ್ರಮಾಣ ಹೆಚ್ಚಾಗಿರುತ್ತದೆ. ಇದು ಮಲಬದ್ಧತೆಯನ್ನು ತಡೆಗಟ್ಟಿ, ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ.
- ರಾಗಿಯಲ್ಲಿ ಉತ್ಕರ್ಷಣ ನಿರೋಧಕ ಮಟ್ಟವು ಹೆಚ್ಚಾಗಿರುತ್ತದೆ. ಇದು ಫ್ರೀ ರಾಡಿಕಲ್ ಗಳಿಂದ ಉಂಟಾಗುವ ಹಾನಿಯಿಂದ ದೇಹವನ್ನು ರಕ್ಷಿಸಲು ಸಹಾಯ ಮಾಡುತ್ತವೆ.
- ಮೊಳಕೆಯೊಡೆದ ರಾಗಿಯಲ್ಲಿ ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿವೆ. ಇವು ಚರ್ಮದ ಆರೈಕೆಗೆ ಒಳ್ಳೆಯದು. ಚರ್ಮವನ್ನು ಹಾನಿಗೊಳಿಸುವ ಫ್ರೀ ರಾಡಿಕಲ್ ಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಚರ್ಮದ ಸುಕ್ಕುಗಳನ್ನು ಕಡಿಮೆ ಮಾಡಲು ಸಹಕಾರಿಯಾಗಿದೆ.
ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ