Sprouts Side Effects: ಈ ಆರೋಗ್ಯ ಸಮಸ್ಯೆ ಇರುವವರು ಮೊಳಕೆ ಕಾಳು ತಿನ್ನಬೇಡಿ, ಅಪಾಯಕಾರಿಯಾಗಬಹುದು

ಮೊಳಕೆ ಕಾಳು ಆರೋಗ್ಯಕ್ಕೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು, ಇದು ಅನೇಕ ರೀತಿಯ ಪೋಷಕಾಂಶಗಳನ್ನು ಒಳಗೊಂಡಿದೆ. ಅದಕ್ಕಾಗಿಯೇ ಅನೇಕ ಜನರು ಪ್ರತಿದಿನ ಬೆಳಿಗ್ಗೆ ಮೊಳಕೆ ಕಾಳುಗಳನ್ನು ತಿನ್ನುವ ಅಭ್ಯಾಸವನ್ನು ಹೊಂದಿರುತ್ತಾರೆ.

Sprouts Side Effects: ಈ ಆರೋಗ್ಯ ಸಮಸ್ಯೆ ಇರುವವರು ಮೊಳಕೆ ಕಾಳು ತಿನ್ನಬೇಡಿ, ಅಪಾಯಕಾರಿಯಾಗಬಹುದು
Sprouts
Follow us
TV9 Web
| Updated By: ನಯನಾ ರಾಜೀವ್

Updated on: Oct 12, 2022 | 11:00 AM

ಮೊಳಕೆ ಕಾಳು ಆರೋಗ್ಯಕ್ಕೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು, ಇದು ಅನೇಕ ರೀತಿಯ ಪೋಷಕಾಂಶಗಳನ್ನು ಒಳಗೊಂಡಿದೆ. ಅದಕ್ಕಾಗಿಯೇ ಅನೇಕ ಜನರು ಪ್ರತಿದಿನ ಬೆಳಿಗ್ಗೆ ಮೊಳಕೆ ಕಾಳುಗಳನ್ನು ತಿನ್ನುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಮೊಳಕೆಯೊಡೆದ ಕಾಳುಗಳನ್ನು ಸೇವಿಸುವುದರಿಂದ ಕೆಲವೊಮ್ಮೆ ಗ್ಯಾಸ್ ಮತ್ತು ಆ್ಯಸಿಡಿಟಿಯಂತಹ ಸಮಸ್ಯೆಗಳು ಎದುರಾಗಬಹುದು. ಇಂತಹ ಪರಿಸ್ಥಿತಿಯಲ್ಲಿ ಕೆಲವು ಆರೋಗ್ಯ ಸಮಸ್ಯೆ ಇರುವವರು ಮೊಳಕೆ ಕಾಳು ತಿನ್ನುವುದರಿಂದ ಆರೋಗ್ಯ ಕೆಡುವ ಸಾಧ್ಯತೆ ಇದೆ ಎನ್ನುತ್ತಾರೆ ಆರೋಗ್ಯ ತಜ್ಞರು. ಯಾವ ಆರೋಗ್ಯ ಸಮಸ್ಯೆ ಇರುವವರಿಗೆ ಮೊಳಕೆ ಕಾಳು ಒಳ್ಳೆಯದಲ್ಲ ಎಂಬ ವಿವರಗಳನ್ನು ಇಲ್ಲಿ ತಿಳಿಯೋಣ..

ಆರೋಗ್ಯ ಸಲಹೆಗಳು: ಮೊಳಕೆ ಕಾಳು ಆರೋಗ್ಯಕ್ಕೆ ತುಂಬಾ ಒಳ್ಳೆಯದು, ಅದರಲ್ಲಿ ಪ್ರೋಟೀನ್, ಫೈಬರ್, ಕ್ಯಾಲ್ಸಿಯಂ, ವಿಟಮಿನ್ ಎ ಮತ್ತು ವಿಟಮಿನ್ ಸಿ ಸಮೃದ್ಧವಾಗಿದೆ.

ಅದಕ್ಕಾಗಿಯೇ ಅನೇಕ ಜನರು ಇದನ್ನು ಉಪಹಾರವಾಗಿ ತೆಗೆದುಕೊಳ್ಳುತ್ತಾರೆ. ಮೊಳಕೆ ಕಾಳುಗಳು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂಬುದನ್ನು ಅಲ್ಲಗಳೆಯುವಂತಿಲ್ಲ. ಆದರೆ, ಯಾವುದನ್ನೂ ಅತಿಯಾಗಿ ತಿನ್ನುವುದು ಒಳ್ಳೆಯದಲ್ಲ.

ಬೇಳೆಕಾಳುಗಳ ಅತಿಯಾದ ಸೇವನೆಯು ಆ್ಯಸಿಡಿಟಿ, ಹೊಟ್ಟೆ ಉಬ್ಬರ, ಮಲಬದ್ಧತೆ, ಪೈಲ್ಸ್ ನಂತಹ ಹಲವು ಸಮಸ್ಯೆಗಳಿಗೆ ಕಾರಣವಾಗಬಹುದು. ಇಷ್ಟೇ ಅಲ್ಲ, ಪೌಷ್ಟಿಕತಜ್ಞರ ಪ್ರಕಾರ, ಕೆಲವು ಆರೋಗ್ಯ ಸಮಸ್ಯೆಗಳಿರುವವರು ಸಹ ಮೊಳಕೆ ತಿನ್ನಬಾರದು. ವಿಶೇಷವಾಗಿ ಇಂತಹ ಆರೋಗ್ಯ ಸಮಸ್ಯೆಗಳಿರುವವರು ಮೊಳಕೆಕಾಳುಗಳನ್ನು ತಿನ್ನಬಾರದು.

* ರೋಗನಿರೋಧಕ ಶಕ್ತಿ ಕಡಿಮೆ: ಯಾವುದೇ ಆಹಾರವು ಪೂರ್ಣವಾಗಿ ಜೀರ್ಣವಾಗದೆ ಇಡೀ ದೇಹವನ್ನು ತಲುಪಲು ಮತ್ತು ಜೀರ್ಣಿಸಿಕೊಳ್ಳಲು ಸಮಯ ತೆಗೆದುಕೊಳ್ಳುತ್ತದೆ. ಇದು ಗ್ಯಾಸ್ಟ್ರಿಕ್ ಕಿರಿಕಿರಿ ಮತ್ತು ಆಮ್ಲೀಯತೆಯನ್ನು ಉಂಟುಮಾಡುತ್ತದೆ. ದುರ್ಬಲ ರೋಗನಿರೋಧಕ ಶಕ್ತಿ ಹೊಂದಿರುವ ಜನರಿಗೆ ಮೊಳಕೆ ತಿನ್ನುವುದು ತುಂಬಾ ಹಾನಿಕಾರಕವಾಗಿದೆ. ದುರ್ಬಲ ಜೀರ್ಣಾಂಗ ವ್ಯವಸ್ಥೆ ಹೊಂದಿರುವ ಜನರು ಮೊಳಕೆ ತಿನ್ನಬಾರದು ಎಂದು ಹೇಳಲಾಗುತ್ತದೆ.

* ಜೀರ್ಣಕಾರಿ ಸಮಸ್ಯೆ ಇರುವವರು: ಕಡಿಮೆ ರೋಗನಿರೋಧಕ ಶಕ್ತಿ ಮತ್ತು ದುರ್ಬಲ ಜೀರ್ಣಾಂಗ ವ್ಯವಸ್ಥೆ ಹೊಂದಿರುವ ಜನರು ಮೊಳಕೆಗಳನ್ನು ಹಸಿಯಾಗಿ ತಿನ್ನದಂತೆ ಸಲಹೆ ನೀಡಲಾಗುತ್ತದೆ. ಆದರೆ ಮೊಳಕೆ ಕಾಳುಗಳನ್ನು ತಿನ್ನಬೇಕೆಂದಿದ್ದರೆ ಅದಕ್ಕೆ ಸ್ವಲ್ಪ ಎಣ್ಣೆ ಮತ್ತು ಧನಿಯಾ ಪುಡಿ ಹಾಕಿ ಬಿಸಿ ಮಾಡಬಹುದು.

* ಮೊಳಕೆ ಕಾಳು ಬೇಯಿಸುವುದರಿಂದ ಆಗುವ ಪ್ರಯೋಜನಗಳು: ಮೊಳಕೆಯಲ್ಲಿ ಪೋಷಕಾಂಶಗಳು ಸಮೃದ್ಧವಾಗಿವೆ. ಅನೇಕ ಬಾರಿ ದೇಹವು ಎಲ್ಲಾ ಪೋಷಕಾಂಶಗಳನ್ನು ಹೀರಿಕೊಳ್ಳುವುದಿಲ್ಲ. ಹಾಗಾಗಿ ಮೊಳಕೆ ಕಾಳುಗಳನ್ನು ಹಸಿಯಾಗಿ ತಿನ್ನುವ ಬದಲು ಸ್ವಲ್ಪ ಬೇಯಿಸಿ ನಂತರ ಸೇವಿಸುವುದು ಉತ್ತಮ. ಹೀಗೆ ಮಾಡುವುದರಿಂದ ದೇಹವು ಎಲ್ಲಾ ಪೋಷಕಾಂಶಗಳನ್ನು ಹೀರಿಕೊಳ್ಳುತ್ತದೆ ಎನ್ನುತ್ತಾರೆ ಆರೋಗ್ಯ ತಜ್ಞರು.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ