AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಟ್ಟೆ ನೋವನ್ನು ನಿರ್ಲಕ್ಷಿಸಬೇಡಿ; ಇದರ ಹಿಂದೆ ಬರಬಹುದು ನೀವು ಊಹಿಸಲೂ ಸಾಧ್ಯವಿಲ್ಲದ ಕಾಯಿಲೆಗಳು!

ಕೆಲವರಿಗೆ ಆಗಾಗ ಹೊಟ್ಟೆ ನೋವು ಬರುತ್ತದೆ. ಆದರೆ ಇದನ್ನು ಸಾಮಾನ್ಯ ಸಮಸ್ಯೆ ಎಂದು ನಿರ್ಲಕ್ಷ್ಯ ಮಾಡುತ್ತಾರೆ. ಆದರೆ ಇದು ಹಲವಾರು ಕಾಯಿಲೆಗಳು ಬರುವ ಮನ್ಸೂಚನೆ ಆಗಿರಬಹುದು ಅಥವಾ ದೇಹ ನೀಡುವ ಎಚ್ಚರಿಕೆಯಾಗಿರಬಹುದು. ಹಾಗಾಗಿ ಈ ಬಗ್ಗೆ ಸರಿಯಾಗಿ ತಿಳಿದುಕೊಂಡು ಸಮಸ್ಯೆಗಳಿಂದ ಮುಕ್ತಿ ಪಡೆಯುವುದು ಬಹಳ ಒಳ್ಳೆಯದು. ಹಾಗಾದರೆ ಪದೇ ಪದೇ ಹೊಟ್ಟೆ ನೋವು ಯಾವ ರೋಗವನ್ನು ಸೂಚಿಸುತ್ತದೆ, ಇದನ್ನು ತಡೆಗಟ್ಟಲು ಏನು ಮಾಡಬಹುದು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಹೊಟ್ಟೆ ನೋವನ್ನು ನಿರ್ಲಕ್ಷಿಸಬೇಡಿ; ಇದರ ಹಿಂದೆ ಬರಬಹುದು ನೀವು ಊಹಿಸಲೂ ಸಾಧ್ಯವಿಲ್ಲದ ಕಾಯಿಲೆಗಳು!
Stomach PainImage Credit source: Getty Images
ಪ್ರೀತಿ ಭಟ್​, ಗುಣವಂತೆ
|

Updated on: Feb 07, 2026 | 10:25 PM

Share

ಕೆಲವರಿಗೆ ಪದೇ ಪದೇ ಹೊಟ್ಟೆ ನೋವು (Stomach Pain) ಕಾಣಿಸಿಕೊಳ್ಳುತ್ತದೆ. ಆದರೆ ಇದನ್ನು ಸಾಮಾನ್ಯ ಆರೋಗ್ಯ ಸಮಸ್ಯೆ ಎಂದು ನಿರ್ಲಕ್ಷಿಸುತ್ತಾರೆ, ಇದು ಅನಿಲ, ಆಯಾಸ ಅಥವಾ ಆಹಾರ ಪದ್ಧತಿಯಲ್ಲಿ ಆದಂತಹ ಬದಲಾವಣೆಯಿಂದ ಉಂಟಾಗುತ್ತದೆ ಎಂದು ಅಂದುಕೊಳ್ಳುತ್ತಾರೆ. ಆದರೆ ಹೊಟ್ಟೆ ನೋವು ಆಗಾಗ ಕಂಡುಬಂದರೆ, ಅದು ದೇಹದಲ್ಲಿನ ಆಂತರಿಕ ಸಮಸ್ಯೆಯ ಸಂಕೇತವೂ ಆಗಿರಬಹುದು ಎಂಬುದನ್ನು ಮರೆಯಬಾರದು. ಅಂತಹ ನೋವಿನ ಜೊತೆಗೆ, ಹೊಟ್ಟೆಯಲ್ಲಿ ಉರಿ, ಭಾರ, ವಾಕರಿಕೆ, ಹಸಿವಿನ ಕೊರತೆ, ಆಗಾಗ ಅತಿಸಾರ ಅಥವಾ ಮಲಬದ್ಧತೆ, ಉಬ್ಬುವುದು ಅಥವಾ ಆಯಾಸದಂತಹ ಇತರ ಲಕ್ಷಣಗಳು ಸಹ ಕಾಣಿಸಿಕೊಳ್ಳಬಹುದು. ಇದಲ್ಲದೆ, ಕೆಲವರಿಗೆ ತಲೆನೋವು ಅಥವಾ ತಲೆತಿರುಗುವಿಕೆ ಅನುಭವಕ್ಕೆ ಬರಬಹುದು. ಈ ರೀತಿ ನೋವು ದೀರ್ಘಕಾಲದವರೆಗೆ ಮುಂದುವರಿದರೆ ಅಥವಾ ದೈನಂದಿನ ಚಟುವಟಿಕೆಗಳನ್ನು ಸರಿಯಾಗಿ ಮಾಡಲು ಸಾಧ್ಯವಾಗದಿದ್ದರೆ, ಅದನ್ನು ನಿರ್ಲಕ್ಷಿಸಬೇಡಿ. ಇಂತಹ ರೋಗಲಕ್ಷಣಗಳ ಮೂಲಕ ದೇಹವು ನಮಗೆ ಎಚ್ಚರಿಕೆ ನೀಡುತ್ತದೆ. ಹಾಗಾದರೆ ಪದೇ ಪದೇ ಹೊಟ್ಟೆ ನೋವು ಯಾವ ರೋಗವನ್ನು ಸೂಚಿಸುತ್ತದೆ, ಇದನ್ನು ತಡೆಗಟ್ಟಲು ಏನು ಮಾಡಬಹುದು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಪದೇ ಪದೇ ಮರುಕಳಿಸುವ ಹೊಟ್ಟೆ ನೋವು ಯಾವ ಕಾಯಿಲೆಯ ಲಕ್ಷಣ?

ಆರ್‌ಎಂಎಲ್ ಆಸ್ಪತ್ರೆಯ ವೈದ್ಯಕೀಯ ವಿಭಾಗದ ನಿರ್ದೇಶಕರಾದ ಪ್ರೊಫೆಸರ್ ಡಾ. ಸುಭಾಷ್ ಗಿರಿ ಅವರು ಹೇಳುವ ಪ್ರಕಾರ, ಮರುಕಳಿಸುವ ಹೊಟ್ಟೆ ನೋವು ವಿವಿಧ ರೀತಿಯ ಕಾಯಿಲೆಗಳ ಲಕ್ಷಣವಾಗಿರಬಹುದು. ಇವುಗಳಲ್ಲಿ ಐಬಿಎಸ್, ಉರಿಯೂತದ ಕರುಳಿನ ಕಾಯಿಲೆ (ಐಬಿಡಿ), ಗ್ಯಾಸ್ಟ್ರೋಸೊಫೇಜಿಯಲ್ ರಿಫ್ಲಕ್ಸ್ ಕಾಯಿಲೆ (ಜಿಇಆರ್‌ಡಿ), ಸೆಲಿಯಾಕ್ ಕಾಯಿಲೆ, ಗ್ಯಾಸ್ಟ್ರೋಎಂಟರೈಟಿಸ್, ಬ್ಯಾಕ್ಟೀರಿಯಾದ ಸೋಂಕುಗಳು, ಪಿತ್ತಗಲ್ಲುಗಳು, ಅಪೆಂಡಿಸೈಟಿಸ್, ಪ್ಯಾಂಕ್ರಿಯಾಟೈಟಿಸ್ ಮತ್ತು ಮೂತ್ರಪಿಂಡದ ಕಲ್ಲುಗಳು ಸೇರಿವೆ. ಹೆಚ್ಚುವರಿಯಾಗಿ, ಪೆಪ್ಟಿಕ್ ಹುಣ್ಣು, ಒತ್ತಡ, ಹರ್ನಿಯಾ ಅಥವಾ ಲ್ಯಾಕ್ಟೋಸ್ ಅಸಹಿಷ್ಣುತೆಯಂತಹ ಆಹಾರ ಅಲರ್ಜಿ ಸಹ ನೋವನ್ನು ಉಂಟುಮಾಡಬಹುದು. ಕೆಲವೊಮ್ಮೆ, ಅನಾರೋಗ್ಯಕರ ಆಹಾರ ಪದ್ಧತಿ, ಅನಿಯಮಿತ ದಿನಚರಿ ಅಥವಾ ದೀರ್ಘಕಾಲದ ಒತ್ತಡ ಮತ್ತು ಆತಂಕದಿಂದಾಗಿ ಈ ನೋವು ಹೆಚ್ಚಾಗಬಹುದು. ನೋವು ನಿರಂತರವಾಗಿದ್ದರೆ ಮತ್ತು ತೂಕ ನಷ್ಟ, ದೌರ್ಬಲ್ಯ ಅಥವಾ ಇತರ ಗಂಭೀರ ಲಕ್ಷಣ ಕಂಡುಬಂದರೆ ಅದನ್ನು ನಿರ್ಲಕ್ಷಿಸಬಾರದು. ಸರಿಯಾದ ಕಾರಣವನ್ನು ಗುರುತಿಸಲು ಮತ್ತು ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಪ್ರಾರಂಭಿಸಲು ವೈದ್ಯರನ್ನು ಸಂಪರ್ಕಿಸಿ.

ಇದನ್ನೂ ಓದಿ: ಮಧುಮೇಹ, ಅಧಿಕ ರಕ್ತದೊತ್ತಡ ಇರುವವರಿಗೆ ಶ್ರವಣದೋಷ ಉಂಟಾಗುತ್ತದೆಯೇ? ವೈದ್ಯರು ಹೇಳುವುದೇನು?

ಹೊಟ್ಟೆ ನೋವನ್ನು ತಡೆಗಟ್ಟುವುದು ಹೇಗೆ?

ಹೊಟ್ಟೆ ನೋವನ್ನು ತಡೆಗಟ್ಟಲು ಮೊದಲು, ದೈನಂದಿನ ಅಭ್ಯಾಸಗಳನ್ನು ಸುಧಾರಿಸಿಕೊಳ್ಳುವುದು ಬಹಳ ಮುಖ್ಯ. ಸಮಯಕ್ಕೆ ಸರಿಯಾಗಿ ಸಮತೋಲಿತ ಆಹಾರ ಸೇವಿಸುವುದು, ಹುರಿದ ಮತ್ತು ಮಸಾಲೆಯುಕ್ತ ಆಹಾರ ಸೇವನೆಯನ್ನು ಕಡಿಮೆ ಮಾಡುವುದು. ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯುವುದು ಮತ್ತು ಪ್ರತಿದಿನ ಲಘು ವ್ಯಾಯಾಮ ಅಥವಾ ನಡಿಗೆ ಮಾಡುವುದು. ಒತ್ತಡ ಕಡಿಮೆ ಮಾಡಲು ಯೋಗ ಮತ್ತು ಧ್ಯಾನ ಮಾಡುವುದು ಸೇರಿದಂತೆ ಆರೋಗ್ಯಕರ ಅಭ್ಯಾಸಗಳನ್ನು ರೂಢಿಸಿಕೊಳ್ಳಿ. ಇದೆಲ್ಲದರ ಜೊತೆಗೆ ಊಟದ ನಂತರ ತಕ್ಷಣ ಮಲಗುವುದನ್ನು ತಪ್ಪಿಸಿ ಮತ್ತು ಬೇಗನೆ ಊಟ ಮಾಡಿ. ಶುಚಿತ್ವ ಮತ್ತು ನೈರ್ಮಲ್ಯವನ್ನು ಕಾಪಾಡಿಕೊಳ್ಳಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?