Stone Baby : 81ರ ಹರೆಯದ ವೃದ್ಧೆಯ ಗರ್ಭದಲ್ಲಿ ಕಲ್ಲಿನ ಮಗು, ಏನಿದು ಅಚ್ಚರಿಯ ಸಂಗತಿ!

ಸೃಷ್ಟಿಯಲ್ಲಿ ಕೆಲವು ಅಚ್ಚರಿಕಾರಿ ಘಟನೆಗಳು ನಡೆದು ಎಲ್ಲರನ್ನು ಬೆಚ್ಚಿ ಬೀಳಿಸುತ್ತದೆ. ಇಂತಹದ್ದೇ ವಿಸ್ಮಯಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ 81 ವರ್ಷದ ವೃದ್ಧೆಯ ಹೊಟ್ಟೆಯಲ್ಲಿ ಕಲ್ಲಿನ ಮಗುವೊಂದು ಪತ್ತೆಯಾಗಿದೆ. ಆದರೆ ಈ ವೃದ್ಧೆಯು ಕಳೆದ 56 ವರ್ಷಗಳಿಂದ ಈ ಮಗುವನ್ನು ತನ್ನ ಹೊಟ್ಟೆಯಲ್ಲಿ ಹೊತ್ತುಕೊಂಡಿದ್ದಾಳೆ ಎಂದರೆ ನೀವು ನಂಬಲೇಬೇಕು. ಕೊನೆಗೆ ಬ್ರೆಜಿಲ್ ನ ವೈದ್ಯರು ಶಸ್ತ್ರಚಿಕಿತ್ಸೆಯ ಮೂಲಕ ಈ ಮಗುವನ್ನು ತೆಗೆಯಲು ಮುಂದಾಗಿದ್ದಾರೆ. ವೃದ್ದೆಯು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ವೇಳೆಯಲ್ಲಿ ಐಸಿಯುನಲ್ಲಿ ಕೊನೆಯುಸಿರೆಳೆದ ಪ್ರಕರಣವು ಬೆಳಕಿಗೆ ಬಂದಿದೆ.

Stone Baby : 81ರ ಹರೆಯದ ವೃದ್ಧೆಯ ಗರ್ಭದಲ್ಲಿ ಕಲ್ಲಿನ ಮಗು, ಏನಿದು ಅಚ್ಚರಿಯ ಸಂಗತಿ!
ವೈರಲ್​​​ ಫೋಟೋ
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on:Mar 22, 2024 | 5:52 PM

ಪ್ರಕೃತಿಯಲ್ಲಿ ನಡೆಯುವ ಕೆಲವು ಘಟನೆಗಳನ್ನು ನಂಬುವುದಕ್ಕೂ ಸಾಧ್ಯವಾಗುವುದಿಲ್ಲ. ಜಗತ್ತಿನಲ್ಲಿ ಚಿತ್ರ ವಿಚಿತ್ರ ಎನಿಸುವಂತಹ ಘಟನೆಗಳು ನಡೆದು ಅಚ್ಚರಿ ಮೂಡಿಸುತ್ತದೆ. ಕೆಲ ಘಟನೆಗಳು ನಡೆದಾಗ ನಂಬಬೇಕೋ ಬೇಡವೋ ಗೊಂದಲದ ನಡುವೆ ಸತ್ಯವನ್ನು ಒಪ್ಪಿಕೊಂಡು ಸಹಜತೆ ಮರಳಬೇಕಾಗುತ್ತದೆ. ವೈದ್ಯಕೀಯ ಇತಿಹಾಸದಲ್ಲಿ ಮಗು ಕ್ಯಾಲ್ಸಿಫೈಡ್ ಆಗಿ ಕಲ್ಲಾಗಿ ಲಿಥೋಪೆಡಿಯನ್ ಸಮಸ್ಯೆಯು ವಿಶ್ವಾದ್ಯಂತ 300 ಘಟನೆಗಳು ಮಾತ್ರವೇ ಬೆಳಕಿಗೆ ಬಂದಿವೆ. ಇದೀಗ ಬ್ರೆಜಿಲ್ ನ 81 ವರ್ಷದ ವೃದ್ಧೆಯ ಹೊಟ್ಟೆಯಲ್ಲಿ ಕಲ್ಲಿನ ಮಗುವೊಂದು ಪತ್ತೆಯಾಗಿವೆ.

ಮೂತ್ರನಾಳದ ಸೋಂಕಿನ ಚಿಕಿತ್ಸೆಗಾಗಿ ಡೇನಿಯಲಾ ತನ್ನ ಮನೆಯ ಸಮೀಪವಿರುವ ಸಣ್ಣ ಆಸ್ಪತ್ರೆಯಲ್ಲಿ ಮೊದಲು ಪರೀಕ್ಷೆಗೆ ಒಳಗಾಗಿದ್ದಾಳೆ. ನಂತರದಲ್ಲಿ ವೈದ್ಯರು ವೃದ್ಧೆಯನ್ನು ಬೇರೆ ಬೇರೆ ಪರೀಕ್ಷೆಗೆ ಒಳಪಡಿಸಿದಾಗ ಹೊಟ್ಟೆಯಲ್ಲಿ ಕಲ್ಲಿನಂತಿರುವ ಮಗುವಿರುವುದು ವೈದ್ಯರ ಗಮನಕ್ಕೆ ಬಂದಿದೆ. ಏಳು ಮಕ್ಕಳ ತಾಯಿ 1968 ರಲ್ಲಿ ಕೊನೆಯ ಬಾರಿಗೆ ಗರ್ಭಿಣಿಯಾಗಿದ್ದರು. ಕಳೆದ 56 ವರ್ಷಗಳಿಂದ ಆಕೆಯ ದೇಹದಲ್ಲಿತ್ತು ಎಂದು ತಿಳಿದು ಬಂದಿದೆ. ಆ ಬಳಿಕ ವೃದ್ಧೆಯ ಹೊಟ್ಟೆಯಲ್ಲಿ ಕಲ್ಲಿನ ಮಗುವನ್ನು ಹೊರತೆಗೆಯಲು ಶಸ್ತ್ರಚಿಕಿತ್ಸೆಗೆ ಒಳಪಡಿಸಲಾಗಿದೆ. ಶಸ್ತ್ರಚಿಕಿತ್ಸೆಯ ಮರುದಿನ ವೃದ್ಧೆಯು ಐಸಿಯುನಲ್ಲಿ ಕೊನೆಯುಸಿರೆಳೆದಿದ್ದಾಳೆ. ವೃದ್ಧೆಯ ಗರ್ಭದಲ್ಲಿ ಹೊರ ತೆಗೆದ ಈ ಅಪರೂಪದ ‘ಕಲ್ಲಿನ ಶಿಶು’ವನ್ನು ಪರೀಕ್ಷೆಗೆ ಕಳುಹಿಸಲಾಗಿದೆ.

ಇದನ್ನೂ ಓದಿ; ಲೈಂಗಿಕ ಕ್ರಿಯೆಯಿಂದ ಕ್ಯಾನ್ಸರ್ ಬರಬಹುದು; ಈ ಬಗ್ಗೆ ಇರಲಿ ಎಚ್ಚರ!

ಲಿಥೊಪೆಡಿಯನ್ ಅಥವಾ ಸ್ಟೋನ್ ಬೇಬಿ ಎಂದರೇನು?

ಶರೀರಕ್ಕೆ ದೊಡ್ಡ ಗಾತ್ರದ ಮೃತ ಭ್ರೂಣವನ್ನು ಹೊರಹಾಕಲು ಸಾಧ್ಯವಾಗದೇ ಇದ್ದಾಗ ಸ್ವಾಭಾವಿಕವಾಗಿ ಅದರ ಮೃತ ಕೋಶಗಳ ಸುತ್ತ ಕ್ಯಾಲ್ಸಿಯಮ್ ಲೇಪನ ಸೃಷ್ಟಿಯಾಗಲು ಪ್ರಾರಂಭಿಸುತ್ತದೆ. ಕ್ರಮೇಣ ಆ ಮಗು ಕ್ಯಾಲ್ಸಿಫೈಡ್ ಆಗಿ ಕಲ್ಲಾಗಿ ಮಾರ್ಪಡಾಗುತ್ತದೆ. ಈ ವೈದ್ಯಕೀಯ ಸ್ಥಿತಿಯನ್ನು ಲಿಥೊಪೆಡಿಯನ್ ಅಥವಾ ಸ್ಟೋನ್ ಬೇಬಿ ಎಂದು ಕರೆಯಲಾಗುತ್ತದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:06 pm, Fri, 22 March 24

ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ