AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಸ್ಟ್ರಾಬೆರಿಯ ಅದ್ಭುತ ಆರೋಗ್ಯ ಪ್ರಯೋಜನಗಳು

ಸ್ಟ್ರಾಬೆರಿಗಳು ರುಚಿಕರವಾದ ಹಣ್ಣು ಮಾತ್ರವಲ್ಲ, ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿವೆ. ಇವುಗಳಲ್ಲಿ ವಿಟಮಿನ್ ಸಿ, ಫೈಬರ್ ಮತ್ತು ಆ್ಯಂಟಿಆಕ್ಸಿಡೆಂಟ್‌ಗಳು ಸಮೃದ್ಧವಾಗಿವೆ. ತೂಕ ನಷ್ಟ, ತ್ವಚೆಯ ಆರೋಗ್ಯ, ರೋಗನಿರೋಧಕ ಶಕ್ತಿ ಹೆಚ್ಚಳ ಮತ್ತು ಜೀರ್ಣಕ್ರಿಯೆ ಸುಧಾರಣೆಗೆ ಸಹಾಯ ಮಾಡುತ್ತವೆ. ಕ್ಯಾನ್ಸರ್ ಮತ್ತು ಹೃದಯದ ಕಾಯಿಲೆಗಳಿಂದ ರಕ್ಷಿಸುವ ಗುಣಗಳನ್ನು ಸಹ ಹೊಂದಿವೆ.

Health Tips: ಸ್ಟ್ರಾಬೆರಿಯ ಅದ್ಭುತ ಆರೋಗ್ಯ ಪ್ರಯೋಜನಗಳು
Strawberry
ಅಕ್ಷತಾ ವರ್ಕಾಡಿ
|

Updated on: Dec 14, 2024 | 9:01 PM

Share

ತಿನ್ನಲು ಇಷ್ಟಪಡುವ ಹಣ್ಣುಗಳಲ್ಲಿ ಸ್ಟ್ರಾಬೆರಿ ಕೂಡ ಒಂದು. ಸ್ಟ್ರಾಬೆರಿಗಳು ತುಂಬಾ ರುಚಿಯಾಗಿದ್ದು, ಅನೇಕರು ಇದರ ಪರಿಮಳವನ್ನು ಇಷ್ಟಪಡುತ್ತಾರೆ. ಈ ಹಣ್ಣಿನ ರುಚಿಯೊಂದಿಗೆ ವಿವಿಧ ಭಕ್ಷ್ಯಗಳನ್ನು ತಯಾರಿಸಲಾಗುತ್ತದೆ. ಸ್ಟ್ರಾಬೆರಿ ರುಚಿಗೆ ಮಾತ್ರವಲ್ಲ ಆರೋಗ್ಯಕ್ಕೂ ಒಳ್ಳೆಯದು. ಸ್ಟ್ರಾಬೆರಿಗಳು ಅನೇಕ ಪ್ರಯೋಜನಕಾರಿ ಪೋಷಕಾಂಶಗಳನ್ನು ಸಹ ಒಳಗೊಂಡಿರುತ್ತವೆ. ತ್ವಚೆಯ ಸೌಂದರ್ಯವನ್ನು ಸುಧಾರಿಸಲು ಜನರು ಸ್ಟ್ರಾಬೆರಿಯನ್ನು ಬಳಸುತ್ತಾರೆ. ಸ್ಟ್ರಾಬೆರಿಗಳನ್ನು ಅನೇಕ ಸೌಂದರ್ಯವರ್ಧಕ ಉತ್ಪನ್ನಗಳಲ್ಲಿಯೂ ಬಳಸಲಾಗುತ್ತದೆ.

ಸ್ಟ್ರಾಬೆರಿ ಬಳಸಿ ಫೇಸ್ ಪ್ಯಾಕ್ ಕೂಡ ತಯಾರಿಸಬಹುದು. ಇವುಗಳಲ್ಲಿ ಆ್ಯಂಟಿ ಆಕ್ಸಿಡೆಂಟ್ ಗಳು ಸಮೃದ್ಧವಾಗಿವೆ. ಇದು ಒತ್ತಡ ಮತ್ತು ಉರಿಯೂತದಿಂದ ರಕ್ಷಿಸುತ್ತದೆ. ಜೊತೆಗೆ ಕ್ಯಾನ್ಸರ್ ಮತ್ತು ಹೃದ್ರೋಗದಂತಹ ದೀರ್ಘಕಾಲದ ಕಾಯಿಲೆಗಳಿಂದ ರಕ್ಷಿಸುತ್ತದೆ.

ಇದನ್ನೂ ಓದಿ: ಆಹಾರದಲ್ಲಿ ಮಶ್ರೂಮ್ ಸೇರಿಸಬೇಕು ಎನ್ನುವುದಕ್ಕೆ ಇಲ್ಲಿದೆ ಕಾರಣ

ಸ್ಟ್ರಾಬೆರಿಗಳನ್ನು ತಿನ್ನುವುದರಿಂದ ತೂಕವನ್ನು ಕಳೆದುಕೊಳ್ಳಬಹುದು. ಇದರಲ್ಲಿರುವ ಫೈಬರ್ ಮತ್ತು ಪೋಷಕಾಂಶಗಳು ಹಸಿವನ್ನು ನಿಯಂತ್ರಿಸುತ್ತದೆ. ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸ್ಟ್ರಾಬೆರಿಗಳು ತುಂಬಾ ಉಪಯುಕ್ತವಾಗಿವೆ. ಇದರಲ್ಲಿರುವ ವಿಟಮಿನ್ ಸಿ ಕಾಲಜನ್ ಉತ್ಪಾದನೆಗೆ ಸಹಾಯ ಮಾಡುತ್ತದೆ. ಜೀರ್ಣಕ್ರಿಯೆಯ ಆರೋಗ್ಯವನ್ನು ಸುಧಾರಿಸಲು ಸ್ಟ್ರಾಬೆರಿ ಸಹ ಉತ್ತಮವಾಗಿದೆ. ಕರುಳನ್ನು ಆರೋಗ್ಯವಾಗಿಡುತ್ತದೆ. ದೇಹದಿಂದ ಕಲ್ಮಶಗಳು ಮತ್ತು ಬ್ಯಾಕ್ಟೀರಿಯಾವನ್ನು ತೆಗೆದುಹಾಕುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಹಾಸನದವರಿಗೆ ವಿಶೇಷ ಶಕ್ತಿ ಎಂದ ನಟ ರಂಗಾಯಣ ರಘು: ವಿಡಿಯೋ ನೋಡಿ
ಹಾಸನದವರಿಗೆ ವಿಶೇಷ ಶಕ್ತಿ ಎಂದ ನಟ ರಂಗಾಯಣ ರಘು: ವಿಡಿಯೋ ನೋಡಿ
ರಚಿತಾರಾಮ್ ಹುಟ್ಟುಹಬ್ಬ: ಕೊರಗಜ್ಜನ ಹರಕೆ ಬಗ್ಗೆ ರಚಿತಾರಾಮ್ ಏನಂದ್ರು ನೋಡಿ
ರಚಿತಾರಾಮ್ ಹುಟ್ಟುಹಬ್ಬ: ಕೊರಗಜ್ಜನ ಹರಕೆ ಬಗ್ಗೆ ರಚಿತಾರಾಮ್ ಏನಂದ್ರು ನೋಡಿ
ಬಿಗ್​​ಬಾಸ್: ಸ್ಪರ್ಧಿಗಳ ವರ್ತನೆಗೆ ಬೇಸತ್ತು ಸ್ಟೇಜ್ ಬಿಟ್ಟು ತೆರಳಿದ ಕಿಚ್ಚ
ಬಿಗ್​​ಬಾಸ್: ಸ್ಪರ್ಧಿಗಳ ವರ್ತನೆಗೆ ಬೇಸತ್ತು ಸ್ಟೇಜ್ ಬಿಟ್ಟು ತೆರಳಿದ ಕಿಚ್ಚ
ಬಣ್ಣದ ಬದುಕಿನ ಅನುಭವ ಬಿಚ್ಚಿಟ್ಟ ರಂಗಾಯಣ ರಘು!
ಬಣ್ಣದ ಬದುಕಿನ ಅನುಭವ ಬಿಚ್ಚಿಟ್ಟ ರಂಗಾಯಣ ರಘು!
ಮೈಸೂರಿನಲ್ಲಿ ಟಿಟಿ ವಾಹನದ ಮೇಲೆ ಬಿದ್ದ ದೀಪಾಲಂಕಾರದ ಕಟೌಟ್
ಮೈಸೂರಿನಲ್ಲಿ ಟಿಟಿ ವಾಹನದ ಮೇಲೆ ಬಿದ್ದ ದೀಪಾಲಂಕಾರದ ಕಟೌಟ್