AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Teachers’ Day 2025: ಶಿಕ್ಷಕರೇ… ಒತ್ತಡ ಹೆಚ್ಚಾಗಿ ವೃತ್ತಿ ಜೀವನ ದುಸ್ತರವಾಗಿದ್ಯಾ? ಹಾಗಿದ್ರೆ ಈ ಸಿಂಪಲ್ ಟಿಪ್ಸ್ ಫಾಲೋ ಮಾಡಿ

ಶಿಕ್ಷಕರ ದಿನಾಚರಣೆ: ಪ್ರತಿವರ್ಷ ಸೆಪ್ಟೆಂಬರ್‌ 5ರಂದು ಡಾ. ಸರ್ವಪಲ್ಲಿ ರಾಧಾಕೃಷ್ಣನ್‌ರವರ ಜನ್ಮದಿನದ ನೆನಪಿಗಾಗಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಈ ದಿನ ಪ್ರತಿಯೊಬ್ಬ ಶಿಕ್ಷಕರನ್ನು ಗೌರವಿಸಲಾಗುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ಮಕ್ಕಳಂತೆಯೇ ಶಿಕ್ಷಕರಲ್ಲಿಯೂ ಒತ್ತಡ ಹೆಚ್ಚುತ್ತಿದ್ದು, ಅವರ ಮಾನಸಿಕ ನೆಮ್ಮದಿಯನ್ನು ಹೆಚ್ಚಿಸಲು ಕೆಲವು ಸಲಹೆಗಳನ್ನು ಈ ಸ್ಟೋರಿ ಮೂಲಕ ನೀಡಲಾಗಿದ್ದು, ಇದನ್ನು ಪಾಲನೆ ಮಾಡಿ ಒತ್ತಡ, ಆತಂಕವನ್ನು ನಿವಾರಣೆ ಮಾಡಿಕೊಳ್ಳಬಹುದು. ಹಾಗಾದರೆ ಏನು ಮಾಡಬೇಕು? ಯಾಕೆ ಒತ್ತಡ ಕಡಿಮೆ ಮಾಡಿಕೊಳ್ಳುವುದು ಅನಿವಾರ್ಯ ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

Teachers’ Day 2025: ಶಿಕ್ಷಕರೇ... ಒತ್ತಡ ಹೆಚ್ಚಾಗಿ ವೃತ್ತಿ ಜೀವನ ದುಸ್ತರವಾಗಿದ್ಯಾ? ಹಾಗಿದ್ರೆ ಈ ಸಿಂಪಲ್ ಟಿಪ್ಸ್ ಫಾಲೋ ಮಾಡಿ
Teacher Self Care
ಪ್ರೀತಿ ಭಟ್​, ಗುಣವಂತೆ
|

Updated on: Sep 04, 2025 | 9:55 AM

Share

ಮಕ್ಕಳ ತಿದ್ದಿ ಬುದ್ದಿ ಹೇಳುವ ಶಿಕ್ಷಕರು ದೇವರಿದ್ದಂತೆ. ಸರಿಯಾದ ಗುರುವಿದ್ದರೆ ಎಷ್ಟೇ ದುರ್ಗಮದ ಹಾದಿಯಾದರೂ ಅದು ಸುಗಮವಾಗಬಲ್ಲದು ಎಂಬ ಮಾತಿನಂತೆ, ಒಬ್ಬ ಒಳ್ಳೆಯ ಶಿಕ್ಷಕ ಮಗುವಿನ ಭವಿಷ್ಯವನ್ನೇ ಬದಲಿಸುತ್ತಾನೆ. ನಮಗಾಗಿ ಇಷ್ಟೆಲ್ಲಾ ಮಾಡುವ ಗುರುವಿಗೆ ಮಾನಸಿಕ ನೆಮ್ಮದಿಯ ಅವಶ್ಯಕತೆ ಇರುತ್ತದೆ. ಪಠ್ಯಕ್ರಮ ಬದಲಾವಣೆ, ಹೊಸ ಹೊಸ ಚಟುವಟಿಕೆಗಳಿಗೆ ಮಕ್ಕಳನ್ನು ಸಿದ್ದಪಡಿಸುವುದು, ಅದರ ಜೊತೆ ಮನೆ ಜವಾಬ್ದಾರಿ ಹೀಗೆ ನಾನಾ ರೀತಿಯ ಸಮಸ್ಯೆಗಳಿದ್ದರೂ ಅದನ್ನು ಮರೆಮಾಚಿ ನಗು ನಗುತ್ತಾ ಪಾಠ ಮಾಡುತ್ತಾರೆ. ಇಂತಹ ಗುರುಗಳ ಒತ್ತಡ (Stress) ಕಡಿಮೆ ಮಾಡಲು, ಅವರ ಮಾನಸಿಕ ನೆಮ್ಮದಿಯನ್ನು ಹೆಚ್ಚಿಸಲು ಕೆಲವು ಸಲಹೆಗಳನ್ನು ಈ ಸ್ಟೋರಿ ಮೂಲಕ ನೀಡಲಾಗಿದ್ದು, ಇದನ್ನು ಪಾಲನೆ ಮಾಡಿ ಒತ್ತಡ, ಆತಂಕವನ್ನು ನಿವಾರಣೆ ಮಾಡಿಕೊಳ್ಳಬಹುದು. ಹಾಗಾದರೆ ಏನು ಮಾಡಬೇಕು? ಯಾಕೆ ಒತ್ತಡ ಕಡಿಮೆ ಮಾಡಿಕೊಳ್ಳುವುದು ಅನಿವಾರ್ಯ ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಈ ಟ್ರಿಕ್ ಒತ್ತಡ ಕಡಿಮೆ ಮಾಡುತ್ತೆ!

ಒತ್ತಡವನ್ನು ಕಡಿಮೆ ಮಾಡಲು ನಾನಾ ರೀತಿಯ ಟ್ರಿಕ್ ಗಳನ್ನು ಪಾಲನೆ ಮಾಡಬಹುದು ಆ ಮೂಲಕ ಮಾನಸಿಕ ನೆಮ್ಮದಿಯನ್ನು ಪಡೆಯಬಹುದು. ವೈಯಕ್ತಿಕವಾಗಿ ಅಳವಡಿಸಿಕೊಳ್ಳುವ ತಂತ್ರಗಳು ನೀವು ನಿವಾಗಿರಲು ಸಹಾಯ ಮಾಡುತ್ತದೆ. ದೈನಂದಿನ ಧ್ಯಾನವು ಒತ್ತಡವನ್ನು ಕಡಿಮೆ ಮಾಡುತ್ತದೆ ಮತ್ತು ಗಮನವನ್ನು ಸುಧಾರಿಸಲು ಸಹಕಾರಿಯಾಗಿದೆ. ಇನ್ನು ಒತ್ತಡ ಹೆಚ್ಚಾದಾಗ ಆಳವಾದ ಉಸಿರಾಟ ಅದರಲ್ಲಿಯೂ ಡಯಾಫ್ರಾಗ್ಮ್ಯಾಟಿಕ್ ಉಸಿರಾಟದಂತಹ ವ್ಯಾಯಾಮಗಳು ತಕ್ಷಣದ ಪರಿಹಾರವನ್ನು ನೀಡುತ್ತವೆ ಮತ್ತು ನಿಮ್ಮ ನರಮಂಡಲವನ್ನು ಶಾಂತಗೊಳಿಸುತ್ತವೆ. ವ್ಯಾಯಾಮ ಅಥವಾ ದೈಹಿಕ ಚಟುವಟಿಕೆಯು ಎಂಡಾರ್ಫಿನ್‌ಗಳನ್ನು ಉತ್ಪಾದಿಸುತ್ತದೆ, ಇದು ಒತ್ತಡ ನಿವಾರಕ ಮತ್ತು ಶಕ್ತಿಯ ಮಟ್ಟವನ್ನು ಹೆಚ್ಚಿಸುತ್ತದೆ. ಅದರ ಜೊತೆ ಜೊತೆಗೆ ನಿಮ್ಮ ಮನಸ್ಥಿತಿಯನ್ನು ದಿನಕ್ಕೆ ಒಮ್ಮೆಯಾದರೂ ಪರಿಶೀಲಿಸಿ, ನಂತರ ನಕಾರಾತ್ಮಕ ಅಥವಾ ಸಕಾರಾತ್ಮಕ ಪ್ರವೃತ್ತಿಗಳನ್ನು ಟಿಪ್ಪಣಿ ಮಾಡಿ, ಇದು ನಿಮ್ಮ ಭಾವನೆಗಳನ್ನು ಉತ್ತಮವಾಗಿ ನಿರ್ವಹಿಸಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: Teachers’ Day 2025: ಶಿಕ್ಷಕರ ದಿನಾಚರಣೆಯಂದು ನಿಮ್ಮ ನೆಚ್ಚಿನ ಗುರುಗಳಿಗೆ ಈ ಗಿಫ್ಟ್‌ ನೀಡಿ

ಇದನ್ನೂ ಓದಿ
Image
ವಿಚಿತ್ರ ಕನಸುಗಳು ಬೀಳುವುದಕ್ಕೆ ರಾತ್ರಿ ಸೇವನೆ ಮಾಡುವ ಆಹಾರವೇ ಕಾರಣ!
Image
ಮಲಬದ್ಧತೆ ಸಮಸ್ಯೆ ಇದ್ಯಾ? ತಪ್ಪದೆ ಈ ಆಹಾರಗಳ ಸೇವನೆ ಮಾಡಿ
Image
ಚಿಕ್ಕ ವಯಸ್ಸಿನಲ್ಲಿಯೇ ಬಿಳಿ ಕೂದಲು ಬರುವುದಕ್ಕೆ ಈ ಆಹಾರಗಳ ಸೇವನೆಯೇ ಕಾರಣ
Image
ಐವಿಎಫ್ ಮಾಡುವ ಮೊದಲು ಈ ಬಗ್ಗೆ ಗಮನ ನೀಡಿ, ಇದರ ವೆಚ್ಚ, ವಿಧಗಳು ಯಾವುವು?

ನಿಮ್ಮ ಅನಿಸಿಕೆ, ಅಭಿಪ್ರಾಯಗಳನ್ನು ವ್ಯಕ್ತಪಡಿಸಿ. ನಂಬಿಕೆಗೆ ಅರ್ಹರಾಗಿರುವ ಮತ್ತು ಮಾತನಾಡಲು ವಿಶ್ವಾಸಾರ್ಹ ಸಹೋದ್ಯೋಗಿ ಅಥವಾ ಸಲಹೆಗಾರರೊಂದಿಗೆ ಮುಕ್ತವಾಗಿ ಮಾತನಾಡಿ. ನೀವು ಎಂದಿಗೂ ಒಬ್ಬಂಟಿಯಲ್ಲ. ಬೇಕಾದಲ್ಲಿ ನೀವು ಸಲಹೆಗಾರರು ಅಥವಾ ಚಿಕಿತ್ಸಕರಂತಹ ವೃತ್ತಿಪರರ ಸಹಾಯವನ್ನು ಪಡೆಯಬಹುದು. ಕೆಲಸದ ಹೊರೆಯನ್ನು ನಿರ್ವಹಿಸಲು ಮತ್ತು ಒತ್ತಡವನ್ನು ಕಡಿಮೆ ಮಾಡಲು ಶಾಲೆಯ ಬೆಂಬಲವನ್ನು ಕೋರಿ. ಇವುಗಳಿಂದ ನಿಮ್ಮ ಮನಸ್ಸು ಹಗುರವಾಗುತ್ತದೆ ಒತ್ತಡ ಕೆಡಿಮೆಯಾಗುತ್ತದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ