ಒತ್ತಡವು ನಿಮ್ಮನ್ನು ಮಾನಸಿಕವಾಗಿ ಕುಗ್ಗಿಸುವುದು ಮಾತ್ರವಲ್ಲ, ಹಲ್ಲಿನ ಆರೋಗ್ಯದ ಮೇಲೂ ಪರಿಣಾಮ ಬೀರುತ್ತದೆ

ಮಾನಸಿಕ ಒತ್ತಡವು ಇತರ ದೀರ್ಘಕಾಲದ ಕಾಯಿಲೆಗಳೊಂದಿಗೆ ಬಾಯಿಯ ಆರೋಗ್ಯದ ಮೇಲೂ ಕೆಟ್ಟ ಪರಿಣಾಮ ಬೀರುತ್ತದೆ ಎಂದು ಸಂಶೋಧನೆ ತಿಳಿಸಿದೆ.

ಒತ್ತಡವು ನಿಮ್ಮನ್ನು ಮಾನಸಿಕವಾಗಿ ಕುಗ್ಗಿಸುವುದು ಮಾತ್ರವಲ್ಲ, ಹಲ್ಲಿನ ಆರೋಗ್ಯದ ಮೇಲೂ ಪರಿಣಾಮ ಬೀರುತ್ತದೆ
ಸಾಂದರ್ಭಿಕ ಚಿತ್ರImage Credit source: The Healthy
Follow us
ಅಕ್ಷತಾ ವರ್ಕಾಡಿ
|

Updated on:Feb 17, 2023 | 2:26 PM

ಒಬ್ಬ ವ್ಯಕ್ತಿಯು ಒತ್ತಡದಲ್ಲಿದ್ದಾಗ, ಆತನ ದೇಹದಲ್ಲಿ ಕಾರ್ಟಿಸೋಲ್ ಎಂಬ ಹಾರ್ಮೋನ್ ಬಿಡುಗಡೆಯಾಗುತ್ತದೆ. ಇದು ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ಹೆಚ್ಚಿಸುತ್ತದೆ. ಇದಲ್ಲದೇ ಕಾರ್ಟಿಸೋಲ್ ಹಾರ್ಮೋನ್​​ ಬಿಡುಗಡೆಯಿಂದಾಗಿ ನಿಮ್ಮ ಹಲ್ಲಿನ ನೈರ್ಮಲ್ಯದ ಕಡೆಗಣನೆಗೆ ಕಾರಣವಾಗಬಹುದು. ಏಕೆಂದರೆ ಈ ಹಾರ್ಮೋನ್​​ ನಿಮ್ಮನ್ನು ಆಲಸ್ಯಕ್ಕೆ ಕಾರಣವಾಗಿಸುತ್ತದೆ ಎಂದು ದಂತ ತಜ್ಞರು ಸಲಹೆ ನೀಡುತ್ತಾರೆ.

ಸ್ವಯಂ ಕಾಳಜಿಯ ಕೊರತೆ:

ಒತ್ತಡದ ಸಮಯದಲ್ಲಿ, ಸ್ವಯಂ-ಆರೈಕೆ ಒಂದು ಸವಾಲಾಗುತ್ತದೆ. ಈ ಸಮಯದಲ್ಲಿ ಜನರು ಹೆಚ್ಚು ಸಕ್ಕರೆಯುಳ್ಳ ಆಹಾರಗಳಲ್ಲಿ ತೊಡಗಿಸಿಕೊಳ್ಳಲು ಪ್ರಾರಂಭಿಸುತ್ತಾರೆ. ಇದು ಹಲ್ಲಿನ ಕೊಳೆಯುವಿಕೆ, ಪಿರಿಯಾಂಟೈಟಿಸ್‌ನಂತಹ ಒಸಡು ಸಮಸ್ಯೆಗಳಿಗೆ ಕಾರಣವಾಗಬಹುದು.

ಒಣ ಬಾಯಿ ಅಥವಾ ಜೆರೋಸ್ಟೊಮಿಯಾ:

ಒತ್ತಡದ ಸಮಯದಲ್ಲಿ ದೇಹದಲ್ಲಿ ಕಡಿಮೆ ಲಾಲಾರಸದ ಉತ್ಪಾದನೆಯಿಂದಾಗಿ ಒಣ ಬಾಯಿ ಅಥವಾ ಜೆರೋಸ್ಟೊಮಿಯಾಗೆ ಕಾರಣವಾಗಬಹುದು. ಹಲ್ಲಿನ ಆರೋಗ್ಯದಲ್ಲಿ ಲಾಲಾರಸವು ತುಂಬಾ ಮುಖ್ಯ. ಏಕೆಂದರೆ ಇದು ಹಲ್ಲಿನ ನಡುವೆ ಇರುವ ಆಹಾರ ಕಣಗಳನ್ನು ತೆಗೆದುಹಾಕುವಲ್ಲಿ ಸಹಾಯಕವಾಗಿದೆ ಎಂದು ತಜ್ಞರು ಹೇಳುತ್ತಾರೆ.

ಇದನ್ನೂ ಓದಿ: ಆರೋಗ್ಯ ಕ್ಷೇತ್ರಕ್ಕೆ ಈ ಬಾರಿಯ ಬಜೆಟ್​ನಲ್ಲಿ ಸಿಕ್ಕಿದ್ದೇನು? ಮಾಹಿತಿ ಇಲ್ಲಿದೆ

ಕೆಟ್ಟ ಚಟಗಳಲ್ಲಿ ತೊಡಗಿಸಿಕೊಳ್ಳುವುದು:

ಅಧಿಕ ಒತ್ತಡದ ಸಮಯದಲ್ಲಿ ಸಾಕಷ್ಟು ಜನರು ಆಲ್ಕೋಹಾಲ್ ಮತ್ತು ತಂಬಾಕಿನ ಅತಿಯಾದ ಸೇವನೆಯಲ್ಲಿ ತೊಡಗಿಸಿಕೊಳ್ಳುತ್ತಾರೆ. ಇದು ನಿಮ್ಮ ಬಾಯಿಯ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಇದಲ್ಲದೇ ಒತ್ತದ ಸಮಯದಲ್ಲಿ ದವಡೆಯನ್ನು ಬಿಗಿಗೊಳಿಸುವುದು ಸಾಮಾನ್ಯವಾಗಿದೆ. ಇದು ದವಡೆ ಮತ್ತು ಕಿವಿಗಳ ಸುತ್ತ ಒತ್ತಡ ಮತ್ತು ನೋವಿಗೆ ಕಾರಣವಾಗಬಹುದು” ಎಂದು ಡಾ ಡ್ಯಾಶ್ ಹೇಳಿದ್ದಾರೆ. ನೀವು ನಿಮ್ಮ ಬಾಯಿಯನ್ನು ತೆರೆಯುವಾಗ ಮತ್ತು ಮುಚ್ಚುವಾಗ ನೀವು ತೊಂದರೆಯನ್ನು ಅನುಭವಿಸಿದರೆ ಇದನ್ನು ಬ್ರಕ್ಸಿಸಮ್ ಎಂದು ಕರೆಯಲಾಗುತ್ತದೆ.

ಬಾಯಿಯಲ್ಲಿ ಹುಣ್ಣು:

ಒತ್ತಡವು ಬಾಯಿಯಲ್ಲಿ ಹುಣ್ಣುಗಳನ್ನು ಉಂಟುಮಾಡುತ್ತದೆ. ಇದು ಆಹಾರವನ್ನು ಸೇವಿಸುವಾಗ ಕಿರಿಕಿರಿಯನ್ನು ಉಂಟು ಮಾಡುವುದು ಮಾತ್ರವಲ್ಲದೇ, ಸಾಕಷ್ಟು ನೋವುಗಳಿಗೆ ಕಾರಣವಾಗುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 2:19 pm, Fri, 17 February 23

ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್