AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕ ವಯಸ್ಸಿನವರಲ್ಲಿ ಹೆಚ್ಚುತ್ತಿದೆ ಬ್ರೇನ್ ಸ್ಟ್ರೋಕ್: ವೈದ್ಯರಿಂದ 3 ಪ್ರಮುಖ ಕಾರಣಗಳು ಬಹಿರಂಗ

ಇತ್ತೀಚಿನ ದಿನಗಳಲ್ಲಿ ಬ್ರೈನ್ ಸ್ಟ್ರೋಕ್ ಪ್ರಕರಣಗಳು ಹಿಂದಿಗಿಂತಲೂ ಹೆಚ್ಚಾಗಿ ಕಂಡುಬರುತ್ತಿದೆ. ಅಷ್ಟು ಮಾತ್ರವಲ್ಲ ಇದು 40 ವರ್ಷಕ್ಕಿಂತ ಕಡಿಮೆ ವಯಸ್ಸಿನವರಲ್ಲಿ ಹೆಚ್ಚುತ್ತಿರುವುದು ವೈದ್ಯ ಲೋಕಕ್ಕೆ ಹೊಸ ಸವಾಲಾಗಿ ಪರಿಣಮಿಸಿದೆ. ಯುವಕರಲ್ಲಿ ಧೂಮಪಾನ, ಒತ್ತಡ ಮತ್ತು ಜೀವನಶೈಲಿಯಲ್ಲಿ ಮಾಡಿಕೊಳ್ಳುತ್ತಿರುವ ಅನಾರೋಗ್ಯಕರ ಬದಲಾವಣೆಗಳು ಹೆಚ್ಚುತ್ತಿರುವುದರಿಂದ ಬ್ರೇನ್ ಸ್ಟ್ರೋಕ್ ಅಪಾಯದಲ್ಲಿ ಏರಿಕೆ ಕಂಡುಬಂದಿರಬಹುದು. ಹಾಗಾಗಿ ಪ್ರತಿಯೊಬ್ಬರೂ ಕೂಡ ಇವುಗಳ ಲಕ್ಷಣಗಳ ಬಗ್ಗೆ ತಿಳಿದುಕೊಂಡಿರುವುದು ಬಹಳ ಒಳ್ಳೆಯದು ಏಕೆಂದರೆ ಅವುಗಳನ್ನು ತಕ್ಷಣ ಗುರುತಿಸುವುದರಿಂದ ಅಪಾಯವನ್ನು ತಡೆಯಬಹುದಾಗಿದೆ.

ಚಿಕ್ಕ ವಯಸ್ಸಿನವರಲ್ಲಿ ಹೆಚ್ಚುತ್ತಿದೆ ಬ್ರೇನ್ ಸ್ಟ್ರೋಕ್: ವೈದ್ಯರಿಂದ 3 ಪ್ರಮುಖ ಕಾರಣಗಳು ಬಹಿರಂಗ
Stroke In People Under 40Image Credit source: Getty Images
ಪ್ರೀತಿ ಭಟ್​, ಗುಣವಂತೆ
|

Updated on:Mar 13, 2026 | 8:45 PM

Share

ಇತ್ತೀಚಿನ ವರ್ಷಗಳಲ್ಲಿ ಬ್ರೈನ್ ಸ್ಟ್ರೋಕ್ (Stroke) ಸಮಸ್ಯೆ ಕೇವಲ ವೃದ್ಧರಲ್ಲಿ ಮಾತ್ರವಲ್ಲದೆ, 40 ವರ್ಷಕ್ಕಿಂತ ಕಡಿಮೆ ವಯಸ್ಸಿನವರಲ್ಲಿಯೂ ಹೆಚ್ಚುತ್ತಿರುವುದು ವೈದ್ಯ ಲೋಕಕ್ಕೆ ಹೊಸ ಸವಾಲಾಗಿ ಪರಿಣಮಿಸಿದೆ. ಮೆದುಳಿಗೆ ರಕ್ತದ ಹರಿವು ನಿಂತಾಗ ಅಥವಾ ರಕ್ತನಾಳ ಒಡೆದಾಗ ಸಂಭವಿಸುವ ತುರ್ತು ವೈದ್ಯಕೀಯ ಸ್ಥಿತಿಯಾಗಿದೆ, ಇದು ಮೆದುಳಿನ ಕೋಶಗಳನ್ನು ನಿಮಿಷಗಳಲ್ಲಿ ಸಾಯಿಸುತ್ತದೆ. ಇದಕ್ಕೆ ಕಾರಣಗಳು ಸ್ಪಷ್ಟವಾಗಿ ತಿಳಿಯದಿದ್ದರೂ ಕೂಡ ಯುವಕರಲ್ಲಿ ಧೂಮಪಾನ, ಒತ್ತಡ ಮತ್ತು ಜೀವನಶೈಲಿಯಲ್ಲಿ ಮಾಡಿಕೊಳ್ಳುತ್ತಿರುವ ಅನಾರೋಗ್ಯಕರ ಬದಲಾವಣೆಗಳು ಹೆಚ್ಚುತ್ತಿರುವುದರಿಂದ ಬ್ರೇನ್ ಸ್ಟ್ರೋಕ್ ಅಪಾಯದಲ್ಲಿ ಏರಿಕೆ ಕಂಡುಬಂದಿರಬಹುದು. ಹಾಗಾಗಿ ಪ್ರತಿಯೊಬ್ಬರೂ ಕೂಡ ಇವುಗಳ ಲಕ್ಷಣಗಳ ಬಗ್ಗೆ ತಿಳಿದುಕೊಂಡಿರುವುದು ಬಹಳ ಒಳ್ಳೆಯದು ಏಕೆಂದರೆ ಅವುಗಳನ್ನು ತಕ್ಷಣ ಗುರುತಿಸುವುದರಿಂದ ಅಪಾಯವನ್ನು ತಡೆಯಬಹುದಾಗಿದೆ.

ಅಚಾನಕ್ ಆಗಿ ಕಂಡುಬರುವ ಲಕ್ಷಣಗಳು:

ವೈದ್ಯರ ಪ್ರಕಾರ, ಬ್ರೇನ್ ಸ್ಟ್ರೋಕ್‌ನ ಲಕ್ಷಣಗಳು ಸಾಮಾನ್ಯವಾಗಿ ಅಚಾನಕ್ ಆಗಿ ಕಾಣಿಸಿಕೊಳ್ಳುತ್ತವೆ. ಮಾತನಾಡಲು ಕಷ್ಟವಾಗುವುದು, ಮುಖದ ಒಂದು ಭಾಗ ಅಥವಾ ದೇಹದ ಒಂದು ಭಾಗದಲ್ಲಿ ದುರ್ಬಲತೆ ಅಥವಾ ಸುಣ್ಣವಾಗುವುದು, ತೀವ್ರ ತಲೆನೋವು, ತಲೆ ಸುತ್ತುವುದು, ನಡೆಯಲು ಅಥವಾ ನೋಡಲು ಕಷ್ಟವಾಗುವುದು ಮುಂತಾದವು ಸ್ಟ್ರೋಕ್‌ನ ಪ್ರಮುಖ ಲಕ್ಷಣಗಳಾಗಿವೆ. ಇಂತಹ ಲಕ್ಷಣಗಳನ್ನು ನಿರ್ಲಕ್ಷಿಸದೆ ತಕ್ಷಣ ವೈದ್ಯರನ್ನು ಸಂಪರ್ಕಿಸುವುದು ಬಹಳ ಅಗತ್ಯ.

ಯುವಕರಲ್ಲಿ ಸ್ಟ್ರೋಕ್ ಹೆಚ್ಚಾಗಲು ಕಾರಣಗಳು:

ದೆಹಲಿ ನಗರದ ಜಿ.ಬಿ. ಪಂತ್ ಆಸ್ಪತ್ರೆಯ ನ್ಯೂರೋಸರ್ಜರಿ ವಿಭಾಗದ ಮಾಜಿ ನಿರ್ದೇಶಕ ಡಾ. ದಲ್ಜೀತ್ ಸಿಂಗ್ ಅವರು ಹೇಳುವ ಪ್ರಕಾರ, ಯುವಕರಲ್ಲಿ ಬ್ರೇನ್ ಸ್ಟ್ರೋಕ್ ಪ್ರಕರಣಗಳು ಹೆಚ್ಚಲು ಪ್ರಮುಖ ಕಾರಣ ಧೂಮಪಾನ ಮತ್ತು ಸಿಗರೆಟ್ ಮತ್ತು ತಂಬಾಕಿನ ಸೇವನೆ. ಇವುಗಳಲ್ಲಿರುವ ಹಾನಿಕರ ರಾಸಾಯನಿಕಗಳು ರಕ್ತನಾಳಗಳಿಗೆ ಹಾನಿ ಉಂಟುಮಾಡಿ ರಕ್ತದ ಗಡ್ಡೆಗಳು ರೂಪುಗೊಳ್ಳುವ ಸಾಧ್ಯತೆಯನ್ನು ಹೆಚ್ಚಿಸುತ್ತವೆ. ಇದರ ಜೊತೆಗೆ ಹೆಚ್ಚು ಒತ್ತಡ, ಹೈ ಬ್ಲಡ್ ಪ್ರೆಷರ್, ಅಸ್ವಸ್ಥ ಆಹಾರ ಪದ್ಧತಿ ಮತ್ತು ಶಾರೀರಿಕ ಚಟುವಟಿಕೆಗಳ ಕೊರತೆ ಕೂಡ ಅಪಾಯವನ್ನು ಹೆಚ್ಚಿಸುತ್ತವೆ.

ಇದನ್ನೂ ಓದಿ: ಈ ಅಭ್ಯಾಸಗಳಿರುವವರು ಪಾರ್ಶ್ವವಾಯುವಿಗೆ ತುತ್ತಾಗುವ ಸಾಧ್ಯತೆ ಹೆಚ್ಚು; ಈ ಬಗ್ಗೆ ಜಾಗೃತೆ ವಹಿಸಬೇಕು ಎನ್ನುತ್ತಾರೆ ಡಾ. ಸಂತೋಷ್

ಸ್ಟ್ರೋಕ್ ತಡೆಯಲು ಏನು ಮಾಡಬೇಕು?

ವೈದ್ಯರ ಪ್ರಕಾರ, ಬ್ರೇನ್ ಸ್ಟ್ರೋಕ್‌ ಬರದಂತೆ ತಡೆಯಲು ಆರೋಗ್ಯಕರ ಜೀವನಶೈಲಿ ಅನುಸರಿಸುವುದು ಮುಖ್ಯ. ಧೂಮಪಾನದಿಂದ ದೂರವಿರುವುದು, ನಿಯಮಿತವಾಗಿ ವ್ಯಾಯಾಮ ಮಾಡುವುದು, ಸಮತೋಲನಯುತ ಆಹಾರ ಸೇವಿಸುವುದು ಮತ್ತು ಬ್ಲಡ್ ಪ್ರೆಷರ್, ಶುಗರ್ ಹಾಗೂ ಕೊಲೆಸ್ಟ್ರಾಲ್ ಮಟ್ಟಗಳನ್ನು ನಿಯಮಿತವಾಗಿ ಪರೀಕ್ಷಿಸಿಕೊಳ್ಳುವುದು ಅಗತ್ಯ. ಯಾವುದೇ ಲಕ್ಷಣಗಳು ಕಂಡುಬಂದರೆ ತಕ್ಷಣ ವೈದ್ಯರನ್ನು ಸಂಪರ್ಕಿಸುವುದು ಜೀವ ಉಳಿಸಲು ಸಹಾಯಕವಾಗಬಹುದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:44 pm, Fri, 13 March 26

Follow Us
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ