Heart Disease: ಟಿವಿ ವೀಕ್ಷಣೆ ಕಡಿಮೆ ಮಾಡಿ, ಹೃದಯ ಸಂಬಂಧಿ ಕಾಯಿಲೆಗಳಿಂದ ದೂರವಿರಿ

Heart Disease:ಗಂಟೆ ಗಟ್ಟಲೆ ಟಿವಿ ನೋಟುವುದು ಸಿಗರೇಟ್ ಸೇವನೆಗಿಂತಲೂ ಹೆಚ್ಚು ಅಪಾಯಕಾರಿ, ಹೆಚ್ಚು ಹೊತ್ತು ಟಿವಿ ನೋಡಿದರೆ ಹೃದ್ರೋಗ ಸಮಸ್ಯೆ ಹೆಚ್ಚಾಗಲಿದೆ. ಹೊಸ ಅಧ್ಯಯನದ ಪ್ರಕಾರ ಟಿವಿ ನೋಡುವುದನ್ನು ಕಡಿಮೆ ಮಾಡುವುದರಿಂದ ಶೇ.11ರಷ್ಟು ಹೃದಯ ಸಂಬಂಧಿ ಕಾಯಿಲೆಯನ್ನು ತಡೆಗಟ್ಟಬಹುದು.

Heart Disease: ಟಿವಿ ವೀಕ್ಷಣೆ ಕಡಿಮೆ ಮಾಡಿ, ಹೃದಯ ಸಂಬಂಧಿ ಕಾಯಿಲೆಗಳಿಂದ ದೂರವಿರಿ
Television
Follow us
TV9 Web
| Updated By: ನಯನಾ ರಾಜೀವ್

Updated on: May 26, 2022 | 3:17 PM

ಗಂಟೆ ಗಟ್ಟಲೆ ಟಿವಿ ನೋಟುವುದು ಸಿಗರೇಟ್ ಸೇವನೆಗಿಂತಲೂ ಹೆಚ್ಚು ಅಪಾಯಕಾರಿ, ಹೆಚ್ಚು ಹೊತ್ತು ಟಿವಿ ನೋಡಿದರೆ ಹೃದ್ರೋಗ ಸಮಸ್ಯೆ ಹೆಚ್ಚಾಗಲಿದೆ. ಹೊಸ ಅಧ್ಯಯನದ ಪ್ರಕಾರ ಟಿವಿ ನೋಡುವುದನ್ನು ಕಡಿಮೆ ಮಾಡುವುದರಿಂದ ಶೇ.11ರಷ್ಟು ಹೃದಯ ಸಂಬಂಧಿ ಕಾಯಿಲೆಯನ್ನು ತಡೆಗಟ್ಟಬಹುದು.

ಜನರು ಟಿವಿ ನೋಡುವ ಸಮಯವನ್ನು ಒಂದು ಗಂಟೆಗಿಂತಲೂ ಕಡಿಮೆ ಮಾಡುವ ಅಗತ್ಯವಿದೆ. ಯೂನಿವರ್ಸಿಟಿ ಆಫ್ ಹಾಂಕಾಂಗ್​ನ ಪ್ರೊ. ಕಿಮ್ ಎಂಬುವವರು ಈ ಅಧ್ಯಯನ ಮಾಡಿದ್ದು, ಹೆಚ್ಚು ಸಮಯದ ಕಾಲ ಟಿವಿ ನೋಡುವುದರಿಂದ ದೇಹದಲ್ಲಿ ಗ್ಲೂಕೋಸ್ ಹಾಗೂ ಕೊಲೆಸ್ಟ್ರಾಲ್ ಪ್ರಮಾಣ ಹೆಚ್ಚಾಗಲಿದೆ ಎಂದು ತಿಳಿಸಿದ್ದಾರೆ.

ಇದರಿಂದಾಗಿ ಅತಿಯಾದ ರಕ್ತದೊತ್ತಡ ಉಂಟಾಗಲಿದ್ದು ಅದು ಹೃದಯಾಘಾತ ಸೇರಿದಂತೆ ಹಲವು ಸಮಸ್ಯೆಗಳಿಗೆ ಕಾರಣವಾಗಲಿದೆ. ಸಂಶೋಧಕರು 40 ರಿಂದ 69 ವರ್ಷ ವಯಸ್ಸಿನ 373,026 ಮಂದಿಯನ್ನು ಅಧ್ಯಯನಕ್ಕೆ ಒಳಪಡಿಸಿದ್ದರು, ಇವರೆಲ್ಲರೂ ಯುಕೆ ಬಯೋಬ್ಯಾಂಕ್​ನವರಾಗಿದ್ದಾರೆ, ಬಯೋಬ್ಯಾಂಕ್​ಗೆ ಸೇರುವಾಗ ಇವರ್ಯಾರಿಗೂ ಹೃದಯ ಸಂಬಂಧಿ ಕಾಯಿಲೆಗಳಿರಲಿಲ್ಲ. ಬಳಿಕ 9185 ಮಂದಿಯಲ್ಲಿ ಕಾಯಿಲೆ ಕಾಣಿಸಿಕೊಂಡಿತ್ತು. ಇವರುಗಳಲ್ಲಿ ಎಲ್ಲರೂ ಅತಿ ಹೆಚ್ಚು ಸಮಯವನ್ನು ಟಿವಿ ನೋಡುವುದರಲ್ಲಿ ಕಳೆಯುತ್ತಿದ್ದರು.

ದಿನಕ್ಕೆ 4ಕ್ಕಿಂತ ಹೆಚ್ಚು ಹೊತ್ತು ಟಿವಿ ನೋಡುವವರಿಗಿಂತ ದಿನಕ್ಕೆ ಒಂದು ತಾಸು ಅಥವಾ ಅದಕ್ಕಿಂತ ಕಡಿಮೆ ಸಮಯ ಟಿವಿ ನೋಡುವವರಲ್ಲಿ ಹೃದಯ ಸಂಬಂಧಿ ಕಾಯಿಲೆಯ ಅಪಾಯ ಕಡಿಮೆ ಎಂದು ಹೇಳಲಾಗಿದೆ.

ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಸಾಯುವವರ ಸಂಖ್ಯೆ ಹೆಚ್ಚುತ್ತಿದೆ. ಹೀಗಾಗಿ ಮುನ್ನೆಚ್ಚರಿಕೆಯಿಂದ ಇರಬೇಕಾದ ಅಗತ್ಯ ಹಾಗೂ ಅನಿವಾರ್ಯತೆ ಎರಡು ಇದೆ. ?. ಹೃದಯಾಘಾತ ಎಂದರೆ ಎಲ್ಲರಲ್ಲೂ ಭಯ ಮೂಡುವುದು ಸಹಜ.

ಏಕೆಂದರೆ ಈ ಸಮಸ್ಯೆಯಿಂದ ಪ್ರತಿ ವರ್ಷ ಅನೇಕ ಜನರು ತಮ್ಮ ಪ್ರಾಣವನ್ನು ಕಳೆದುಕೊಳ್ಳುತ್ತಿದ್ದಾರೆ . ಕೆಲವರಿಗಂತೂ ಹಿಂದೆ ಯಾವುದೇ ಸಮಸ್ಯೆ ಇಲ್ಲದಿದ್ದರೂ ಸಹ ಇದ್ದಕ್ಕಿದ್ದಂತೆ ಇದು ಸಂಭವಿಸುವುದರಿಂದ ಇದರ ಬಗ್ಗೆ ಹೆಚ್ಚು ಭಯ ಇರುತ್ತದೆ .

ಸಾಮಾನ್ಯವಾಗಿ ನಡೆದರೆ ಅಥವಾ ಮೆಟ್ಟಿಲು ಹತ್ತಿದಾಗ ಎದೆ ಭಾರವಾಗುವುದು ಅಥವಾ ಎದೆ ಒತ್ತಿದಂಗೆ ಆಗುವುದು . ಇದು ಹೃದಯ ಸಂಬಂಧಿ ಸಮಸ್ಯೆ ಆಗುವುದರ ಮುನ್ಸೂಚನೆ ಆಗಿರಬಹುದು . ಹೃದಯಕ್ಕೆ ರಕ್ತನಾಳಗಳ ಮೂಲಕ ರಕ್ತ ಚಲನೆಯಾಗುವುದರ ಬಗ್ಗೆ ನಿಮಗೆಲ್ಲ ತಿಳಿದಿದೆ.

ಆರೋಗ್ಯ ಸಂಬಂಧಿ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ