Sign In

By signing in or creating an account, you agree with Associated Broadcasting Company's Terms & Conditions and Privacy Policy.

Dry Lips: ತುಟಿಗಳು ಒಣಗುತ್ತಿವೆಯೇ? ಪದೇ ಪದೇ ಬಾಯಾರಿಕೆಯಾಗುತ್ತಿದೆಯೇ ಹಾಗಾದರೆ ಈ ಆರೋಗ್ಯ ಸಮಸ್ಯೆ ನಿಮಗಿರಬಹುದು

ತುಟಿಗಳು ಒಣಗುತ್ತಿವೆಯೇ, ಬಾಯಾರಿಕೆಯಾಗುತ್ತಿದೆಯೇ, ವಿಪರೀತ ಸುಸ್ತಿದೆಯೇ? ಹಾಗಾದರೆ ಇನ್ನು ನಿರ್ಲಕ್ಷ್ಯ ಬೇಡ. ಈ ಆಧುನಿಕ ಜೀವನಶೈಲಿ ಮತ್ತು ಕೆಟ್ಟ ಆಹಾರ ಪದ್ಧತಿಗಳ ನಡುವೆ, ನಮ್ಮ ದೇಹದಲ್ಲಿನ ಸಣ್ಣ ಸಣ್ಣ ಬದಲಾವಣೆಗಳನ್ನು ನಾವು ನಿರ್ಲಕ್ಷಿಸುತ್ತೇವೆ.

Dry Lips: ತುಟಿಗಳು ಒಣಗುತ್ತಿವೆಯೇ? ಪದೇ ಪದೇ ಬಾಯಾರಿಕೆಯಾಗುತ್ತಿದೆಯೇ ಹಾಗಾದರೆ ಈ ಆರೋಗ್ಯ ಸಮಸ್ಯೆ ನಿಮಗಿರಬಹುದು
ಒಣಗಿದ ತುಟಿಗಳು
Follow us
TV9 Web
| Updated By: ನಯನಾ ರಾಜೀವ್

Updated on:Jan 15, 2023 | 11:09 AM

ತುಟಿಗಳು ಒಣಗುತ್ತಿವೆಯೇ, ಬಾಯಾರಿಕೆಯಾಗುತ್ತಿದೆಯೇ, ವಿಪರೀತ ಸುಸ್ತಿದೆಯೇ? ಹಾಗಾದರೆ ಇನ್ನು ನಿರ್ಲಕ್ಷ್ಯ ಬೇಡ. ಈ ಆಧುನಿಕ ಜೀವನಶೈಲಿ ಮತ್ತು ಕೆಟ್ಟ ಆಹಾರ ಪದ್ಧತಿಗಳ ನಡುವೆ, ನಮ್ಮ ದೇಹದಲ್ಲಿನ ಸಣ್ಣ ಸಣ್ಣ ಬದಲಾವಣೆಗಳನ್ನು ನಾವು ನಿರ್ಲಕ್ಷಿಸುತ್ತೇವೆ. ನಾವು ಯಾವುದನ್ನು ಸಣ್ಣ ವಿಷಯವೆಂದು ಪರಿಗಣಿಸಿ ನಿರ್ಲಕ್ಷಿಸುತ್ತೇವೆಯೋ ಅವು ಮುಂದೆ ನಮಗೆ ದೊಡ್ಡ ಸಮಸ್ಯೆಯನ್ನು ಸೃಷ್ಟಿಸುತ್ತವೆ. ಈಗ ನೀವು ಹೇಳುತ್ತೀರಿ ಅದು ನಿಜವೇ? ಹೌದು, ಪದೇ ಪದೇ ತುಟಿ ಒಣಗುವುದು, ಬಾಯಾರಿಕೆ ಭಾವನೆ, ಇವುಗಳು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಹೆಚ್ಚಿಸುವ ಲಕ್ಷಣಗಳಾಗಿರಬಹುದು.

ಅಂತಹ ಪರಿಸ್ಥಿತಿಯಲ್ಲಿ, ನಾವು ಹಲವಾರು ಬಾರಿ ಎಚ್ಚರವಾಗಿರಬೇಕಾಗುತ್ತದೆ. ಇದಕ್ಕೆ ಹೈಪರ್ಗ್ಲೈಸೀಮಿಯಾ ಎಂದೂ ಕರೆಯುತ್ತಾರೆ. ಹೈಪರ್ಗ್ಲೈಸೀಮಿಯಾ ಅಂದರೆ ರಕ್ತದಲ್ಲಿ ಸಕ್ಕರೆ ಅಂಶ ಹೆಚ್ಚಾಗಿದ್ದರೆ ತುಟಿ ಒಣಗುವುದು, ಬಾಯಾರಿಕೆ ಆಗಾಗ ಮೂತ್ರ ವಿಸರ್ಜನೆ ಲಕ್ಷಣಗಳು ಕಾಣಿಸಿಕೊಳ್ಳಬಹುದು.

ರಕ್ತದಲ್ಲಿ ಅಧಿಕ ಸಕ್ಕರೆ ಪ್ರಮಾಣವಿದ್ದರೆ ಈ ಲಕ್ಷಣಗಳು ಗೋಚರಿಸುವುದು ಮಧುಮೇಹ ಔಷಧದ ಉದ್ದೇಶವು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸುವುದು. ಆದರೆ ಅನೇಕ ಬಾರಿ ಮಧುಮೇಹದ ಹೊರತಾಗಿಯೂ ರಕ್ತದಲ್ಲಿ ಅಧಿಕ ಸಕ್ಕರೆ ಪ್ರಮಾಣವನ್ನು ಹೊಂದಿರುತ್ತಾರೆ, ಅದಕ್ಕಾಗಿಯೇ ನೀವು ಸರಿಯಾದ ಸಮಯದಲ್ಲಿ ಹೈಪರ್ಗ್ಲೈಸೀಮಿಯಾವನ್ನು ಗುರುತಿಸುವುದು ಮತ್ತು ಚಿಕಿತ್ಸೆ ಪಡೆಯುವುದು ಅತ್ಯಂತ ಮುಖ್ಯವಾಗಿದೆ. ಕೆಲವೊಮ್ಮೆ ರಕ್ತದಲ್ಲಿ ಸಕ್ಕರೆ ಅಂಶ ಹೆಚ್ಚಾಗುತ್ತದೆ ಅದು ಭಯ ಪಡುವ ವಿಚಾರವಲ್ಲ, ಆದರೆ ಅದು ನಿಮ್ಮ ದೇಹದಲ್ಲಿ ಸಮಸ್ಯೆಗಳನ್ನು ಉಂಟುಮಾಡಿದಾಗ, ಅದು ಆರೋಗ್ಯಕ್ಕೆ ಅಪಾಯಕಾರಿ.

ಮತ್ತಷ್ಟು ಓದಿ: ಹೆಚ್ಚು ಹೆಚ್ಚು ಬಾಯಾರಿಕೆ ಯಾಕೆ ಆಗುತ್ತೆ ಗೊತ್ತಾ?

ತುಂಬಾ ಸುಸ್ತು ಯಾವ ಕೆಲಸವನ್ನು ಮಾಡಲೂ ತೊಂದರೆ ತೂಕ ನಷ್ಟ. ಚರ್ಮದ ಸೋಂಕು

ಕೆಟ್ಟ ಜೀವನಶೈಲಿ ಮತ್ತು ಆಹಾರವು ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ಹೆಚ್ಚಿಸುವಲ್ಲಿ ಇದು ಪ್ರಮುಖ ಪಾತ್ರ ವಹಿಸುತ್ತದೆ. ಈ ಕಾರಣಗಳಿಂದಲೂ ಈ ಸಮಸ್ಯೆ ಉಂಟಾಗಬಹುದು.

ಉದ್ವೇಗ

ದೇಹದಲ್ಲಿ ರೋಗ

ಅತಿಯಾಗಿ ತಿನ್ನುವುದು

ವ್ಯಾಯಾಮದ ಕೊರತೆ

ಕಡಿಮೆ ನೀರು ಕುಡಿಯುವುದು

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:07 am, Sun, 15 January 23

ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ