AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Benefits of Jamun: ಬೇಸಿಗೆಯಲ್ಲಿ ನೇರಳೆ ಹಣ್ಣು ಏಕೆ ತಿನ್ನಬೇಕು?

ನೇರಳೆ ಹಣ್ಣು ಪ್ರೋಟೀನ್, ಲಿಪಿಡ್‌ಗಳು (ಕೊಬ್ಬು), ಕ್ಯಾಲ್ಸಿಯಂ, ಕಬ್ಬಿಣ, ಮೆಗ್ನೀಸಿಯಮ್, ರಂಜಕ, ಪೊಟ್ಯಾಸಿಯಮ್, ಸೋಡಿಯಂ, ವಿಟಮಿನ್ ಸಿ, ಥಯಾಮಿನ್, ರೈಬೋಫ್ಲಾವಿನ್, ನಿಯಾಸಿನ್, ವಿಟಮಿನ್ ಬಿ-6, ವಿಟಮಿನ್ ಎ ಇತ್ಯಾದಿಗಳನ್ನು ಒಳಗೊಂಡಿದೆ.

Benefits of Jamun: ಬೇಸಿಗೆಯಲ್ಲಿ ನೇರಳೆ ಹಣ್ಣು ಏಕೆ ತಿನ್ನಬೇಕು?
Summer Health TipsImage Credit source: Swirlster
ಅಕ್ಷತಾ ವರ್ಕಾಡಿ
|

Updated on: Jun 09, 2023 | 5:43 PM

Share

ನೇರಳೆ ಹಣ್ಣು ಬೇಸಿಗೆಯಲ್ಲಿ ಭಾರತದಾದ್ಯಂತ ಲಭ್ಯವಿರುವ ಕಾಲೋಚಿತ ಹಣ್ಣು. ಹಣ್ಣು ಅತ್ಯಂತ ರುಚಿಕರವಾಗಿದೆ ಮತ್ತು ಸಿಹಿ ರುಚಿಯನ್ನು ಹೊಂದಿರುತ್ತದೆ. ನೇರಳೆ ಹಲವಾರು ಔಷಧೀಯ ಮತ್ತು ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ ಎಂದು ಅಧ್ಯಯನಗಳು ಸೂಚಿಸುತ್ತವೆ. ಇದನ್ನು ಜ್ಯೂಸ್, ವಿನೆಗರ್, ಮಾತ್ರೆಗಳು, ಕ್ಯಾಪ್ಸುಲ್ ಮತ್ತು ಚೂರ್ನಾದಲ್ಲಿ ಸೇವಿಸಬಹುದು, ಇವೆಲ್ಲವೂ ವಿವಿಧ ಔಷಧೀಯ ಗುಣಗಳನ್ನು ಹೊಂದಿವೆ. ನೇರಳೆ ಹಣ್ಣು ಪ್ರೋಟೀನ್, ಲಿಪಿಡ್‌ಗಳು (ಕೊಬ್ಬು), ಕ್ಯಾಲ್ಸಿಯಂ, ಕಬ್ಬಿಣ, ಮೆಗ್ನೀಸಿಯಮ್, ರಂಜಕ, ಪೊಟ್ಯಾಸಿಯಮ್, ಸೋಡಿಯಂ, ವಿಟಮಿನ್ ಸಿ, ಥಯಾಮಿನ್, ರೈಬೋಫ್ಲಾವಿನ್, ನಿಯಾಸಿನ್, ವಿಟಮಿನ್ ಬಿ-6, ವಿಟಮಿನ್ ಎ ಇತ್ಯಾದಿಗಳನ್ನು ಒಳಗೊಂಡಿದೆ.

ನೇರಳೆ ಹಣ್ಣು ತಿನ್ನುವುದರಿಂದಾಗುವ ಪ್ರಯೋಜನ:

  • ನೇರಳೆ ಹೆಚ್ಚಿನ ಮಟ್ಟದ ಪೊಟ್ಯಾಸಿಯಮ್ ಅಂಶವನ್ನು ಹೊಂದಿದ್ದು ಇದು ಪಾರ್ಶ್ವವಾಯು ಮತ್ತು ಅಧಿಕ ರಕ್ತದೊತ್ತಡವನ್ನು ತಡೆಯಲು ಸಹಾಯ ಮಾಡುತ್ತದೆ.
  • ನೇರಳೆ ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿದೆ, ಇದು ಸ್ವತಂತ್ರ ರಾಡಿಕಲ್ ಕೋಶಗಳ ವಿರುದ್ಧ ಕೆಲಸ ಮಾಡುತ್ತದೆ, ಇದು ಸಾಮಾನ್ಯವಾಗಿ ಕ್ಯಾನ್ಸರ್ ಕೋಶಗಳ ಬೆಳವಣಿಗೆಯನ್ನು ಪ್ರಚೋದಿಸುತ್ತದೆ.
  • ನೇರಳೆ ಹಣ್ಣಿನಲ್ಲಿ ಪೋಷಕಾಂಶಗಳು ಮತ್ತು ವಿಟಮಿನ್‌ಗಳು ಇದ್ದು ಅದು ನಿಮ್ಮ ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.
  • ನೇರಳೆ ಹಣ್ಣು ತಿನ್ನುವುದು ಚರ್ಮ ಆರೋಗ್ಯಕ್ಕೂ ಸಹಾಯ ಮಾಡುತ್ತದೆ ಎಂದು ಅಧ್ಯಯನಗಳು ಸೂಚಿಸುತ್ತವೆ.
  • ನೀವು ಆಗಾಗ್ಗೆ ತಲೆನೋವಿನಿಂದ ಬಳಲುತ್ತಿದ್ದರೆ ನೇರಳೆ ಸೇವನೆಯು ನಿಮಗೆ ಸಾಕಷ್ಟು ಪರಿಹಾರವನ್ನು ನೀಡುತ್ತದೆ.
  • ನೇರಳೆ ಹಣ್ಣಿನಲ್ಲಿ ಸತು ಮತ್ತು ವಿಟಮಿನ್ ಸಿ ಇದೆ, ಇದು ಕೆಮ್ಮು ಮತ್ತು ಇತರ ಉಸಿರಾಟದ ತೊಂದರೆಗಳನ್ನು ತಡೆಯಲು ಸಹಾಯ ಮಾಡುತ್ತದೆ.
  • ನೇರಳೆ ಪ್ಲಮ್ ಹಲ್ಲು ಮತ್ತು ಒಸಡುಗಳಿಗೆ ಪ್ರಯೋಜನಕಾರಿಯಾಗಿದೆ.

ಇದನ್ನೂ ಓದಿ: ದೃಷ್ಟಿಯಿಂದ ಜೀರ್ಣಕ್ರಿಯೆಯನ್ನು ಸುಧಾರಿಸುವವರೆಗೂ, ಕೊತ್ತಂಬರಿ ನೀರಿನ ಅದ್ಭುತ ಆರೋಗ್ಯ ಪ್ರಯೋಜನಗಳು

ನೇರಳೆ ಹಣ್ಣು ತಿನ್ನುವ ಸರಿಯಾದ ಸಮಯ?

ನೇರಳೆ ಅತ್ಯಂತ ಆರೋಗ್ಯಕರವಾಗಿದ್ದು, ಇದನ್ನು ದಿನದ ಯಾವುದೇ ಸಮಯದಲ್ಲಿ ತಿನ್ನಬಹುದು. ಆದಾಗ್ಯೂ, ನೀವು ಖಾಲಿ ಹೊಟ್ಟೆಯಲ್ಲಿ ನೇರಳೆ ತಿನ್ನುವುದನ್ನು ತಪ್ಪಿಸಬೇಕು. ಇದನ್ನು ತಿನ್ನಲು ಉತ್ತಮ ಸಮಯವೆಂದರೆ ಊಟದ ನಂತರ ಯಾಕೆಂದರೆ ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ.

ನೇರಳೆ ಹಣ್ಣನ್ನು ಅತಿಯಾಗಿ ಸೇವಿಸುವುದರಿಂದ ಉಂಟಾಗುವ ದುಷ್ಪರಿಣಾಮಗಳೇನು?

ನೇರಳೆ ಅತಿಯಾಗಿ ಸೇವಿಸುವುದರಿಂದ ಕಡಿಮೆ ರಕ್ತದೊತ್ತಡಕ್ಕೆ ಕಾರಣವಾಗಬಹುದು. ನೇರಳೆ ತಿನ್ನುವುದು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ, ಆದರೆ ಮಿತಿಮೀರಿದ ಸೇವನೆಯು ಮಲಬದ್ಧತೆಗೆ ಕಾರಣವಾಗಬಹುದು.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ಇಂದು ಈ ರಾಶಿಯವರು ವಿರೋಧಿಗಳೊಂದಿಗೆ ವಿವಾದಕ್ಕಿಳಿಯಬೇಡಿ
ಇಂದು ಈ ರಾಶಿಯವರು ವಿರೋಧಿಗಳೊಂದಿಗೆ ವಿವಾದಕ್ಕಿಳಿಯಬೇಡಿ
ಸರಸ್ವತಿ ದೇವಾಲಯದಲ್ಲಿ ಮಕ್ಕಳ ಕೈಹಿಡಿದು ವಿದ್ಯಾರಂಭ ಮಾಡಿಸಿದ ಶಶಿ ತರೂರ್
ಸರಸ್ವತಿ ದೇವಾಲಯದಲ್ಲಿ ಮಕ್ಕಳ ಕೈಹಿಡಿದು ವಿದ್ಯಾರಂಭ ಮಾಡಿಸಿದ ಶಶಿ ತರೂರ್
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ