AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಊಟ ಮಾಡಿದ ತಕ್ಷಣ ಚಹಾ ಕುಡಿಯುವ ಅಭ್ಯಾಸ ನಿಮಗಿದ್ಯಾ? ಇದು ಆರೋಗ್ಯಕ್ಕೆ ಒಳ್ಳೆಯದಾ, ಕೆಟ್ಟದಾ?

ಕೆಲವರಿಗೆ ಚಹಾ ಕುಡಿಯುವುದಕ್ಕೆ ಸಮಯವಿರುವುದಿಲ್ಲ. ಮನಸ್ಸಿಗೆ ಬಂದರೆ ಸಾಕು ಟೀ ಮಾಡಿಕೊಂಡು ಕುಡಿಯುತ್ತಾರೆ. ಇನ್ನು ಕೆಲವರು ಊಟವಾದ ಕೂಡಲೇ ಒಂದು ಕಪ್ ಚಹಾ ಕುಡಿಯುತ್ತಾರೆ. ಹಾಗಾದರೆ ಈ ಒಂದು ಅಭ್ಯಾಸ ಆರೋಗ್ಯದ ಮೇಲೆ ಯಾವ ರೀತಿ ಪರಿಣಾಮ ಬೀರಬಹುದು ಅಥವಾ ಇದು ಒಳ್ಳೆಯ ಅಭ್ಯಾಸವೋ, ಅಲ್ಲವೋ ಎಂಬುದನ್ನು ತಿಳಿದುಕೊಳ್ಳುವುದು ಒಳ್ಳೆಯದು. ಇಲ್ಲವಾದಲ್ಲಿ ಈ ಅಭ್ಯಾಸ ಮುಂದುವರೆಯುತ್ತದೆ. ಇದೆಲ್ಲದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳಲು ಚಹಾ ಯಾವಾಗ ಕುಡಿಯುವುದು ಒಳ್ಳೆಯದು ಎಂಬುದನ್ನು ಕೂಡ ತಿಳಿಯಬೇಕಾಗುತ್ತದೆ.

ಊಟ ಮಾಡಿದ ತಕ್ಷಣ ಚಹಾ ಕುಡಿಯುವ ಅಭ್ಯಾಸ ನಿಮಗಿದ್ಯಾ? ಇದು ಆರೋಗ್ಯಕ್ಕೆ ಒಳ್ಳೆಯದಾ, ಕೆಟ್ಟದಾ?
Tea After MealsImage Credit source: Getty Images
ಪ್ರೀತಿ ಭಟ್​, ಗುಣವಂತೆ
|

Updated on: Jun 25, 2026 | 8:29 PM

Share

ಮುಖ್ಯಾಂಶಗಳು

  • ಊಟವಾದ ಬಳಿಕ ತಕ್ಷಣ ಚಹಾ ಕುಡಿದರೆ ದೇಹದಲ್ಲಿ ಏನಾಗುತ್ತದೆ?
  • ಚಹಾ ಮತ್ತು ಜೀರ್ಣಕ್ರಿಯೆ: ತಿಳಿಯಲೇಬೇಕಾದ ಸತ್ಯಗಳು
  • ಚಹಾ ಕುಡಿಯಲು ಸರಿಯಾದ ಸಮಯ

ಭಾರತದಲ್ಲಿ ಅನೇಕರ ದಿನ ಚಹಾದಿಂದಲೇ ಆರಂಭವಾಗುತ್ತದೆ. ಚಹಾ (Tea) ಕೇವಲ ಒಂದು ಪಾನೀಯವಲ್ಲ ಅದೊಂದು ರೀತಿಯ ದಿನವನ್ನು ಆರಂಭಿಸುವ ಕೀಲಿ ಕೈ. ಆದರೆ ಕೆಲರು ಮಾತ್ರ ಇದನ್ನು ಯಾವಾಗ ಮನಸ್ಸಿಗೆ ಬರುತ್ತದೆಯೋ ಆಗ ಮಾಡಿ ಕುಡಿಯುತ್ತಾರೆ. ಇನ್ನು ಕೆಲವರು ಊಟವಾದ ಕೂಡಲೇ ಒಂದು ಕಪ್ ಚಹಾ ಕುಡಿಯುತ್ತಾರೆ. ಹಾಗಾದರೆ ಈ ಒಂದು ಅಭ್ಯಾಸ ಆರೋಗ್ಯದ ಮೇಲೆ ಯಾವ ರೀತಿ ಪರಿಣಾಮ ಬೀರಬಹುದು ಅಥವಾ ಇದು ಒಳ್ಳೆಯ ಅಭ್ಯಾಸವೋ, ಅಲ್ಲವೋ ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಊಟದ ಬಳಿಕ ಚಹಾ ಕುಡಿದರೆ ಏನಾಗುತ್ತದೆ?

ನಾವು ಸೇವಿಸುವ ಆಹಾರದಲ್ಲಿ ಕಬ್ಬಿಣ (Iron), ಕ್ಯಾಲ್ಸಿಯಂ, ಜಿಂಕ್ ಸೇರಿದಂತೆ ಹಲವು ಪ್ರಮುಖ ಖನಿಜಾಂಶಗಳು ಇರುತ್ತವೆ. ಚಹಾದಲ್ಲಿ ಕಂಡುಬರುವ ಟ್ಯಾನಿನ್‌ಗಳು (Tannins) ಮತ್ತು ಪಾಲಿಫಿನಾಲ್‌ಗಳು (Polyphenols) ಈ ಖನಿಜಗಳ ಹೀರಿಕೊಳ್ಳುವಿಕೆಯನ್ನು ಕಡಿಮೆ ಮಾಡಬಹುದು. ವಿಶೇಷವಾಗಿ ಟ್ಯಾನಿನ್‌ಗಳು ಕಬ್ಬಿಣ ಅಂಶದೊಂದಿಗೆ ಸೇರಿಕೊಂಡು ಅದರ ಪೋಷಣೆಯನ್ನು ತಡೆಯುತ್ತವೆ. ಇದರಿಂದ ದೀರ್ಘಾವಧಿಯಲ್ಲಿ ಕಬ್ಬಿಣದ ಕೊರತೆ ಮತ್ತು ರಕ್ತಹೀನತೆಯ ಅಪಾಯ ಹೆಚ್ಚಾಗಬಹುದು. ಜೊತೆಗೆ ಜಿಂಕ್ ಹಾಗೂ ಕ್ಯಾಲ್ಸಿಯಂ ಹೀರಿಕೊಳ್ಳುವಿಕೆಗೆ ಸಹ ಅಡ್ಡಿಯಾಗಬಹುದು.

ಇದನ್ನೂ ಓದಿ:ಪ್ರತಿದಿನ ತಪ್ಪದೆ ಬೀಟ್ರೂಟ್ ಜ್ಯೂಸ್ ಕುಡಿದರೆ ಎಷ್ಟೆಲ್ಲಾ ಲಾಭವಿದೆ ಗೊತ್ತಾ?

ಜೀರ್ಣಕ್ರಿಯೆಯ ಮೇಲೂ ಪರಿಣಾಮ ಬೀರಬಹುದು:

ಊಟ ಮಾಡಿದ ತಕ್ಷಣ ಚಹಾ ಕುಡಿಯುವುದರಿಂದ ಕೆಲವರಿಗೆ ಹೊಟ್ಟೆ ಉಬ್ಬರ (Bloating), ಎದೆ ಉರಿ ಹಾಗೂ ಆಸಿಡ್ ರಿಫ್ಲಕ್ಸ್ ಸಮಸ್ಯೆಗಳು ಹೆಚ್ಚಾಗಬಹುದು. ಚಹಾದಲ್ಲಿರುವ ಕ್ಯಾಫಿನ್ ಕೂಡ ಕೆಲವರಲ್ಲಿ ಜೀರ್ಣಕ್ರಿಯೆಯ ಅಸಮತೋಲನಕ್ಕೆ ಕಾರಣವಾಗಬಹುದು. ಅದರ ಜೊತೆಗೆ ಹೆಚ್ಚು ಚಹಾ ಸೇವನೆ ನಿದ್ರೆಯ ಗುಣಮಟ್ಟದ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ.

ಚಹಾ ಕುಡಿಯಲು ಸರಿಯಾದ ಸಮಯ ಯಾವುದು?

ತಜ್ಞರ ಪ್ರಕಾರ, ಊಟ ಮಾಡಿದ ತಕ್ಷಣ ಚಹಾ ಕುಡಿಯುವುದನ್ನು ತಪ್ಪಿಸುವುದು ಉತ್ತಮ. ಕನಿಷ್ಠ ಒಂದು ಗಂಟೆಯ ಬಳಿಕ ಚಹಾ ಸೇವಿಸಿದರೆ ದೇಹಕ್ಕೆ ಅಗತ್ಯ ಪೋಷಕಾಂಶಗಳ ಹೀರಿಕೊಳ್ಳುವಿಕೆಗೆ ತೊಂದರೆ ಆಗುವುದಿಲ್ಲ. ಅಷ್ಟೇಅಲ್ಲ, ಚಹಾದ ಜೊತೆಗೆ ಎಣ್ಣೆ ಅಥವಾ ಹೆಚ್ಚು ಮಸಾಲೆಯುಕ್ತ ಆಹಾರಗಳನ್ನು ಸೇವಿಸುವುದು ಆಸಿಡಿಟಿ ಮತ್ತು ಹೊಟ್ಟೆ ಉಬ್ಬರದ ಸಮಸ್ಯೆಯನ್ನು ಹೆಚ್ಚಿಸಬಹುದು. ಚಹಾ ಕುಡಿಯುವ ಮೊದಲು ಸ್ವಲ್ಪ ನೀರು ಕುಡಿಯುವುದು ಕೆಲವರಿಗೆ ಈ ಸಮಸ್ಯೆಗಳನ್ನು ಕಡಿಮೆ ಮಾಡಲು ಸಹಾಯ ಮಾಡಬಹುದು.

ಆರೋಗ್ಯಕರ ಜೀವನಶೈಲಿಗಾಗಿ ಊಟ ಮತ್ತು ಚಹಾ ನಡುವೆ ಸ್ವಲ್ಪ ಅಂತರವನ್ನು ಕಾಯ್ದುಕೊಳ್ಳುವುದು ಉತ್ತಮ ಅಭ್ಯಾಸವಾಗಿದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮಂಗಳೂರಿಗೆ ಬಂದ ಶಾರುಖ್ ಖಾನ್, ಬಾದ್​​ಶಾನ ನೋಡಲು ಮುಗಿಬಿದ್ದ ಜನ
ಮಂಗಳೂರಿಗೆ ಬಂದ ಶಾರುಖ್ ಖಾನ್, ಬಾದ್​​ಶಾನ ನೋಡಲು ಮುಗಿಬಿದ್ದ ಜನ
ಅಂಗಡಿ ಗೋಡೆ ಕೊರೆದು 10 ಕೆಜಿ ಬೆಳ್ಳಿ ಕಳ್ಳತನ ಕೇಸ್​​: ಯುವಕ ಅರೆಸ್ಟ್
ಅಂಗಡಿ ಗೋಡೆ ಕೊರೆದು 10 ಕೆಜಿ ಬೆಳ್ಳಿ ಕಳ್ಳತನ ಕೇಸ್​​: ಯುವಕ ಅರೆಸ್ಟ್
33 ಕ್ರಸ್ಟ್ ಗೇಟ್ ಚೇಂಜ್ ಮಾಡಿ ಉದ್ಘಾಟಿಸಿದ್ದು ನನ್ನ ಭಾಗ್ಯ: ಡಿಕೆಶಿ
33 ಕ್ರಸ್ಟ್ ಗೇಟ್ ಚೇಂಜ್ ಮಾಡಿ ಉದ್ಘಾಟಿಸಿದ್ದು ನನ್ನ ಭಾಗ್ಯ: ಡಿಕೆಶಿ
ಕೃಷಿ ತಾಪಂಡ ಮನೆಯಲ್ಲಿ ಉದ್ಯಮಿ ವೈಶಾಖ್ ಸಾವು, ಆಪ್ತ ಗೆಳೆಯ ಹೇಳಿದ್ದೇನು?
ಕೃಷಿ ತಾಪಂಡ ಮನೆಯಲ್ಲಿ ಉದ್ಯಮಿ ವೈಶಾಖ್ ಸಾವು, ಆಪ್ತ ಗೆಳೆಯ ಹೇಳಿದ್ದೇನು?
ಜೂ 28ರಂದು ರಾಷ್ಟ್ರೀಯ ಲಸಿಕಾ ದಿನ: ಚಿಕ್ಕ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ
ಜೂ 28ರಂದು ರಾಷ್ಟ್ರೀಯ ಲಸಿಕಾ ದಿನ: ಚಿಕ್ಕ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ
ಮುತ್ತತ್ತಿ ದುರಂತ: ಕೊನೇ ಕ್ಷಣದ ವಿಡಿಯೋ ವೈರಲ್
ಮುತ್ತತ್ತಿ ದುರಂತ: ಕೊನೇ ಕ್ಷಣದ ವಿಡಿಯೋ ವೈರಲ್
ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಂದ ಕ್ರಸ್ಟ್ ಗೇಟ್‌ಗಳು ಲೋಕಾರ್ಪಣೆ
ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಂದ ಕ್ರಸ್ಟ್ ಗೇಟ್‌ಗಳು ಲೋಕಾರ್ಪಣೆ
ಸಾಯುವುದಕ್ಕೂ ಮೊದಲು ಕೃಷಿ ತಾಪಂಡಗೆ ವೈಶಾಕ್ ಕಳುಹಿಸಿದ ಸಂದೇಶ ಏನು?
ಸಾಯುವುದಕ್ಕೂ ಮೊದಲು ಕೃಷಿ ತಾಪಂಡಗೆ ವೈಶಾಕ್ ಕಳುಹಿಸಿದ ಸಂದೇಶ ಏನು?
ಪಠ್ಯದಲ್ಲಿ ಕೇಸರೀಕರಣ ವಿವಾದ: ಬಿಜೆಪಿ ವಿರುದ್ಧ ಮಧು ಬಂಗಾರಪ್ಪ ಕಿಡಿ
ಪಠ್ಯದಲ್ಲಿ ಕೇಸರೀಕರಣ ವಿವಾದ: ಬಿಜೆಪಿ ವಿರುದ್ಧ ಮಧು ಬಂಗಾರಪ್ಪ ಕಿಡಿ
ಕಲ್ಲಯ್ಯಜ್ಜ ಶ್ರೀಗಳಿಗೆ ಮಠದ ಟ್ರಸ್ಟಿಗಳಿಂದಲೇ ಜೀವ ಬೆದರಿಕೆ ಆರೋಪ
ಕಲ್ಲಯ್ಯಜ್ಜ ಶ್ರೀಗಳಿಗೆ ಮಠದ ಟ್ರಸ್ಟಿಗಳಿಂದಲೇ ಜೀವ ಬೆದರಿಕೆ ಆರೋಪ