AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಪವಾಸದ ಸಮಯದಲ್ಲಿ ಎಳನೀರು ಕುಡಿಯಬಹುದೇ?

ಎಳನೀರು ಪೊಟ್ಯಾಸಿಯಮ್, ಮೆಗ್ನೀಸಿಯಮ್ ಮತ್ತು ಕ್ಯಾಲ್ಸಿಯಂನಂತಹ ಪ್ರಮುಖ ಅಂಶಗಳನ್ನು ಒಳಗೊಂಡಿದೆ. ಇದು ಆರೋಗ್ಯಕ್ಕೆ ಬಹಳ ಅತ್ಯುತ್ತಮವಾದ ಪಾನೀಯ. ಆದರೆ, ಎಳನೀರು ಉಪವಾಸವಿದ್ದಾಗ ಅಥವಾ ಖಾಲಿ ಹೊಟ್ಟೆಯಲ್ಲಿ ಎಳನೀರು ಸೇವಿಸಿದರೆ ಆರೋಗ್ಯಕ್ಕೆ ಒಳ್ಳೆಯದಾ?

ಉಪವಾಸದ ಸಮಯದಲ್ಲಿ ಎಳನೀರು ಕುಡಿಯಬಹುದೇ?
ಎಳನೀರು
ಸುಷ್ಮಾ ಚಕ್ರೆ
|

Updated on: Jan 20, 2024 | 12:43 PM

Share

ಎಳನೀರು ನೈಸರ್ಗಿಕ ಗ್ಲುಕೋಸ್ ಅಂಶವನ್ನು ಒಳಗೊಂಡಿರುವುದರಿಂದ ಇದನ್ನು ಸೇವಿಸಿದರೆ ತಕ್ಷಣ ಎನರ್ಜಿ ಸಿಗುತ್ತದೆ. ಹೀಗಾಗಿ, ನಮಗೆ ತೀರಾ ಬಾಯಾರಿಕೆಯಾದಾಗ ಅಥವಾ ಹಸಿವಾದಾಗ ಎಳನೀರು ಕುಡಿಯುವುದು ಉತ್ತಮ. ಕೆಲವರು ಉಪವಾಸದ ಸಂದರ್ಭದಲ್ಲೂ ದೇಹ ನಿರ್ಜಲೀಕರಣಗೊಳ್ಳುವುದನ್ನು ತಡೆಯಲು ಮತ್ತು ವೀಕ್​ನೆಸ್ ಕಡಿಮೆ ಮಾಡಲು ಎಳನೀರು ಸೇವಿಸುತ್ತಾರೆ. ಎಳನೀರು ಉತ್ಕರ್ಷಣ ನಿರೋಧಕ ಗುಣಗಳನ್ನು ಹೊಂದಿದ್ದು, ದೇಹವನ್ನು ಹೈಡ್ರೇಟ್ ಮಾಡಿ, ದೇಹದ ಎಲೆಕ್ಟ್ರೋಲೈಟ್ ಸಮತೋಲನವನ್ನು ಮರುಸ್ಥಾಪಿಸುತ್ತದೆ. ಆದರೆ, ಮಧ್ಯಂತರ ಅಥವಾ ದೀರ್ಘಾವಧಿಯ ಉಪವಾಸದ ಸಂದರ್ಭದಲ್ಲಿ ಎಳನೀರೊಂದನ್ನೇ ಅವಲಂಬಿಸುವುದು ಆರೋಗ್ಯಕರವಲ್ಲ. ಏಕೆಂದರೆ, ಇದು ದೇಹದಲ್ಲಿ ಸಕ್ಕರೆಯ ಅಂಶದ ಹೆಚ್ಚಳಕ್ಕೆ ಕಾರಣವಾಗುತ್ತದೆ.

ಎಲ್ಲಾ ದೇಹಗಳು ಒಂದೇ ರೀತಿ ಇರುವುದಿಲ್ಲ. ಮಧುಮೇಹದಿಂದ ಬಳಲುತ್ತಿರುವವರು ಎಳನೀರನ್ನು ಮಿತವಾಗಿ ಬಳಸುವುದು ಉತ್ತಮ. ಹಾಗೇ, ಮೂತ್ರಪಿಂಡದ ಕಾಯಿಲೆ ಇರುವವರಿಗೆ ಕೂಡ ಎಳನೀರು ಸೂಕ್ತವಲ್ಲ. ಎಳನೀರು ಪೊಟ್ಯಾಸಿಯಮ್, ಮೆಗ್ನೀಸಿಯಮ್ ಮತ್ತು ಕ್ಯಾಲ್ಸಿಯಂನಂತಹ ಪ್ರಮುಖ ಅಂಶಗಳನ್ನು ಒಳಗೊಂಡಿದೆ. ಇದರ ನಿಯಮಿತ ಸೇವನೆಯು ದೇಹದಲ್ಲಿ ಆರೋಗ್ಯಕರ ಎಲೆಕ್ಟ್ರೋಲೈಟ್ ಸಮತೋಲನವನ್ನು ಕಾಪಾಡಿಕೊಳ್ಳಲು ಸಹಾಯಕವಾಗಿದೆ.

ಇದನ್ನೂ ಓದಿ: ಹೆರಿಗೆ ಬಳಿಕ ಆಲಿಯಾ ಭಟ್ ತೂಕ ಇಳಿಸಿದ್ದು ಹೇಗೆ?

ಇದರಾಚೆಗೆ, ಎಳನೀರು ಜೀರ್ಣಕಾರಿ ಆರೋಗ್ಯಕ್ಕೆ ಉಪಯುಕ್ತವಾಗಿದೆ. ಇದು ಜಠರಗರುಳಿನ ಸಮಸ್ಯೆಯನ್ನು ನಿವಾರಿಸಲು ಸಹಾಯ ಮಾಡುತ್ತದೆ. ಇದು ಚರ್ಮದ ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ. ಇದಲ್ಲದೆ, ರಕ್ತದೊತ್ತಡದ ವಿಷಯದಲ್ಲಿ ಎಳನೀರು ನಮ್ಮ ದೇಹಕ್ಕೆ ಗಣನೀಯ ಪ್ರಮಾಣದ ಪೊಟ್ಯಾಸಿಯಮ್ ಅನ್ನು ಒದಗಿಸುತ್ತದೆ, ರಕ್ತದೊತ್ತಡವನ್ನು ನೈಸರ್ಗಿಕವಾಗಿ ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಬಾಳೆಹಣ್ಣಿನ 420 ಮಿಲಿ ಗ್ರಾಂಗೆ ಹೋಲಿಸಿದರೆ ಒಂದು ಕಪ್ ಎಳನೀರು ಸುಮಾರು 600 ಮಿಲಿ ಗ್ರಾಂ ಪೊಟ್ಯಾಸಿಯಮ್ ಅನ್ನು ಹೊಂದಿರುತ್ತದೆ. ಎಳನೀರಲ್ಲಿ ಸಮೃದ್ಧವಾಗಿರುವ ಉತ್ಕರ್ಷಣ ನಿರೋಧಕ ಅಂಶ ಆಕ್ಸಿಡೇಟಿವ್ ಒತ್ತಡ ಮತ್ತು ಜೀವಕೋಶದ ಹಾನಿಯನ್ನು ಕಡಿಮೆ ಮಾಡಲು ಸಹಾಯಕವಾಗಿದೆ.

ಇದನ್ನೂ ಓದಿ: ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿದರೆ ಏನಾಗುತ್ತೆ?

ಎಳನೀರು ಕಿಡ್ನಿ ಸ್ಟೋನ್ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದು ಮೂತ್ರದ ಪೊಟ್ಯಾಸಿಯಮ್, ಕ್ಲೋರೈಡ್ ಮತ್ತು ಸಿಟ್ರೇಟ್ ಉತ್ಪಾದನೆಯನ್ನು ಹೆಚ್ಚಿಸುತ್ತದೆ. ವ್ಯಾಯಾಮ ಅಥವಾ ವರ್ಕ್​ಔಟ್ ಮಾಡಿದ ನಂತರ ಎಳನೀರು ಕುಡಿಯುವುದರಿಂದ ನಮ್ಮ ದೇಹ ಹೈಡ್ರೇಟ್ ಆಗುತ್ತದೆ. ಬೇರೆ ಎನರ್ಜಿ ಡ್ರಿಂಕ್​ಗಳನ್ನು ಸೇವಿಸುವುದಕ್ಕಿಂತ ಎಳನೀರು ಕುಡಿಯವುದು ಹೆಚ್ಚು ಆರೋಗ್ಯಕರ.

ಆದರೆ, ನೀವು ವೈದ್ಯಕೀಯ ಸಮಸ್ಯೆಗಳನ್ನು ಹೊಂದಿದ್ದರೆ ದಯವಿಟ್ಟು ನಿಮ್ಮ ವೈದ್ಯರ ಬಳಿ ಅನುಮತಿ ಪಡೆದು ದಿನಕ್ಕೆ ಒಂದು ಕಪ್ ಎಳನೀರು ಸೇವಿಸಿ. ಎಳನೀರಿಗೆ ಹಣ್ಣುಗಳನ್ನು ಹಾಕಿ ಕೂಡ ಸೇವಿಸಬಹುದು.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್