AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಥಲಸ್ಸೆಮಿಯಾ ಅಪಾಯಕಾರಿಯೇ? ಮದುವೆ ಅಥವಾ ಗರ್ಭಧಾರಣೆಗೂ ಮುನ್ನ ತಪಾಸಣೆ ಮಾಡಿಸಿಕೊಳ್ಳುವುದು ಯಾಕೆ ಮುಖ್ಯ?

ಥಲಸ್ಸೆಮಿಯಾ ಎಂಬ ಗಂಭೀರ ಕಾಯಿಲೆ ಬಗ್ಗೆ ನಿಮಗೆ ತಿಳಿದಿರಬಹುದು. ಇದು ಮಕ್ಕಳಲ್ಲಿ ಕಂಡುಬರುವ ಗಂಭೀರ ಕಾಯಿಲೆಯಾಗಿದೆ. ಇದು ಪೋಷಕರಿಂದ ಮಕ್ಕಳಿಗೆ ಜೀನ್ಸ್ ಮೂಲಕ ಬರಬಹುದು. ಭಾರತದಲ್ಲಿ ಪ್ರತಿವರ್ಷ ಸಾವಿರಾರು ಮಕ್ಕಳು ಥಲಸ್ಸೆಮಿಯಾ ಮೇಜರ್ ಸಮಸ್ಯೆಯೊಂದಿಗೆ ಜನಿಸುತ್ತಿದ್ದಾರೆ. ಹಾಗಾದರೆ ಥಲಸ್ಸೆಮಿಯಾ ಎಂದರೇನು? ಇದರ ಲಕ್ಷಣಗಳು ಹೇಗಿರುತ್ತವೆ ಮತ್ತು ಇದು ಎಷ್ಟು ಅಪಾಯಕಾರಿ ಎಂಬುದರ ಬಗ್ಗೆ ತಿಳಿದುಕೊಳ್ಳಿ. ಈ ಬಗ್ಗೆ ಸ್ವಲ್ಪ ಮಟ್ಟಿನ ಅರಿವಿದ್ದಾಗ ಇಂತಹ ಆರೋಗ್ಯ ಸಮಸ್ಯೆಗಳನ್ನು ತಡೆಯಬಹುದು. ಈ ಬಗ್ಗೆ ಹೆಚ್ಚಿನ ಮಾಹಿತಿ ಸ್ಟೋರಿಯಲ್ಲಿದೆ.

ಥಲಸ್ಸೆಮಿಯಾ ಅಪಾಯಕಾರಿಯೇ? ಮದುವೆ ಅಥವಾ ಗರ್ಭಧಾರಣೆಗೂ ಮುನ್ನ ತಪಾಸಣೆ ಮಾಡಿಸಿಕೊಳ್ಳುವುದು ಯಾಕೆ ಮುಖ್ಯ?
ThalassemiaImage Credit source: Getty Images
ಪ್ರೀತಿ ಭಟ್​, ಗುಣವಂತೆ
|

Updated on: Jun 12, 2026 | 8:23 PM

Share

ಥಲಸ್ಸೆಮಿಯಾ (Thalassemia) ಒಂದು ಗಂಭೀರವಾದ ಜೆನೆಟಿಕ್ ರಕ್ತ ಸಂಬಂಧಿ ಕಾಯಿಲೆಯಾಗಿದೆ. ಇದು ಪೋಷಕರಿಂದ ಮಕ್ಕಳಿಗೆ ಜೀನ್ಸ್ ಮೂಲಕ ಬರಬಹುದು. ಭಾರತದಲ್ಲಿ ಪ್ರತಿವರ್ಷ ಸಾವಿರಾರು ಮಕ್ಕಳು ಥಲಸ್ಸೆಮಿಯಾ ಮೇಜರ್ ಸಮಸ್ಯೆಯೊಂದಿಗೆ ಜನಿಸುತ್ತಿದ್ದಾರೆ. ಆರಂಭಿಕ ಹಂತದಲ್ಲಿ ಲಕ್ಷಣಗಳು ಸ್ಪಷ್ಟವಾಗಿ ಕಾಣಿಸಿಕೊಳ್ಳದ ಕಾರಣ, ಹಲವರು ಇದನ್ನು ಸಾಮಾನ್ಯ ರಕ್ತಹೀನತೆ ಅಥವಾ ದೌರ್ಬಲ್ಯ ಎಂದು ನಿರ್ಲಕ್ಷ್ಯ ಮಾಡುತ್ತಾರೆ. ಹಾಗಾದರೆ ಥಲಸ್ಸೆಮಿಯಾ ಎಂದರೇನು? ಇದರ ಲಕ್ಷಣಗಳು ಹೇಗಿರುತ್ತವೆ ಮತ್ತು ಇದು ಎಷ್ಟು ಅಪಾಯಕಾರಿ ಎಂಬುದರ ಬಗ್ಗೆ ತಿಳಿದುಕೊಳ್ಳಿ. ಈ ಬಗ್ಗೆ ಸ್ವಲ್ಪ ಮಟ್ಟಿನ ಅರಿವಿದ್ದಾಗ ಇಂತಹ ಆರೋಗ್ಯ ಸಮಸ್ಯೆಗಳನ್ನು ತಡೆಯಬಹುದು. ಈ ಬಗ್ಗೆ ಹೆಚ್ಚಿನ ಮಾಹಿತಿ ಸ್ಟೋರಿಯಲ್ಲಿದೆ.

ಥಲಸ್ಸೆಮಿಯಾ ಎಂದರೇನು?

ಥಲಸೆಮಿಯಾ ಎನ್ನುವುದು ದೇಹದಲ್ಲಿ ಸರಿಯಾದ ಪ್ರಮಾಣದ ಹಿಮೋಗ್ಲೋಬಿನ್ ಉತ್ಪಾದನೆ ಆಗದಿರುವ ಸ್ಥಿತಿ. ಹಿಮೋಗ್ಲೋಬಿನ್ ಕಡಿಮೆಯಾದಾಗ ದೇಹಕ್ಕೆ ಆಮ್ಲಜನಕ ಸರಿಯಾಗಿ ತಲುಪುವುದಿಲ್ಲ. ಇದರ ಪರಿಣಾಮವಾಗಿ ಮಕ್ಕಳಲ್ಲಿ ದೌರ್ಬಲ್ಯ, ಬೆಳವಣಿಗೆ ಸಮಸ್ಯೆಗಳು ಮತ್ತು ಹಲವು ಆರೋಗ್ಯ ತೊಂದರೆಗಳು ಕಾಣಿಸಿಕೊಳ್ಳುತ್ತವೆ.

ಮಕ್ಕಳಲ್ಲಿ ಕಾಣಿಸಿಕೊಳ್ಳುವ ಲಕ್ಷಣಗಳು

  • ಸದಾ ದಣಿವು ಮತ್ತು ಶಕ್ತಿಹೀನತೆ
  • ಚರ್ಮ ಬಿಳಿಯಾಗುವುದು
  • ತೂಕ ಮತ್ತು ಎತ್ತರ ಸರಿಯಾಗಿ ಹೆಚ್ಚದಿರುವುದು
  • ಆಗಾಗ ಜ್ವರ ಅಥವಾ ಸೋಂಕು
  • ಆಹಾರ ಆಸಕ್ತಿ ಕಡಿಮೆಯಾಗುವುದು
  • ಮುಖದ ಎಲುಬುಗಳಲ್ಲಿ ಬದಲಾವಣೆಗಳು ಕಾಣಿಸಿಕೊಳ್ಳುವುದು

ಥಲಸ್ಸೆಮಿಯಾ ಅಪಾಯಕಾರಿಯೇ?

ಸರಿಯಾದ ಸಮಯದಲ್ಲಿ ಚಿಕಿತ್ಸೆ ಪಡೆಯದಿದ್ದರೆ ಥಲಸ್ಸೆಮಿಯಾ ಮೇಜರ್ ಸಮಸ್ಯೆಯಾಗಬಹುದು. ಇದರಿಂದ ಹೃದಯ, ಲಿವರ್ ಹಾಗೂ ಇತರ ಪ್ರಮುಖ ಅಂಗಾಂಗಗಳಿಗೆ ಹಾನಿಯಾಗುವ ಸಾಧ್ಯತೆ ಇದೆ. ಕೆಲವರಿಗೆ ಜೀವಪೂರ್ತಿ ರಕ್ತ ತುಂಬಿಸುವ (Blood Transfusion) ಅಗತ್ಯವೂ ಬರಬಹುದು. ತಜ್ಞರ ಪ್ರಕಾರ, ಮದುವೆಗೂ ಮೊದಲು ಅಥವಾ ಗರ್ಭಧಾರಣೆಗೆ ಮುನ್ನ ಸರಳ ರಕ್ತ ಪರೀಕ್ಷೆ ಮಾಡಿಸಿಕೊಳ್ಳುವುದು ಅತ್ಯಂತ ಮುಖ್ಯ. ತಾಯಿ ಮತ್ತು ತಂದೆ ಇಬ್ಬರೂ ಥಲಸ್ಸೆಮಿಯಾ ಕ್ಯಾರಿಯರ್ ಆಗಿದ್ದರೆ, ಮಗುವಿಗೆ ಈ ಕಾಯಿಲೆ ಬರುವ ಸಾಧ್ಯತೆ 25% ಇರುತ್ತದೆ. ಆದ್ದರಿಂದ ಪ್ರೀ-ಮ್ಯಾರಿಟಲ್ ಸ್ಕ್ರೀನಿಂಗ್, ಜೆನೆಟಿಕ್ ಕೌನ್ಸೆಲಿಂಗ್, ಗರ್ಭಧಾರಣೆಗೆ ಮುನ್ನ ತಪಾಸಣೆ ಮಾಡಿಸಿಕೊಳ್ಳುವುದು ಬಹಳ ಒಳ್ಳೆಯದು ಇವು ಥಲಸ್ಸೆಮಿಯಾ ತಡೆಗಟ್ಟಲು ಸಹಾಯಕವಾಗುತ್ತವೆ.

ಇಂದು ವೈದ್ಯಕೀಯ ಕ್ಷೇತ್ರದಲ್ಲಿ ಥಲಸೆಮಿಯಾ ಚಿಕಿತ್ಸೆಯಲ್ಲಿ ಸಾಕಷ್ಟು ಪ್ರಗತಿ ಕಂಡುಬಂದಿದೆ. ನಿಯಮಿತ ರಕ್ತ ತುಂಬಿಸುವುದು, ಐರನ್ ನಿಯಂತ್ರಣ ಔಷಧಿಗಳು ಮತ್ತು ಕೆಲವು ಸಂದರ್ಭಗಳಲ್ಲಿ ಬೋನ್ ಮ್ಯಾರೋ ಟ್ರಾನ್ಸ್‌ಪ್ಲಾಂಟ್ ಪರಿಣಾಮಕಾರಿ ಚಿಕಿತ್ಸೆ ಎಂದು ಪರಿಗಣಿಸಲಾಗುತ್ತಿದೆ. ಜೀನ್ ಥೆರಪಿ ಕುರಿತ ಸಂಶೋಧನೆಯೂ ಭವಿಷ್ಯದಲ್ಲಿ ಹೊಸ ಆಶಾಕಿರಣ ಮೂಡಿಸಿದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರೀತಿ ಭಟ್​, ಗುಣವಂತೆ
ಪ್ರೀತಿ ಭಟ್​, ಗುಣವಂತೆ

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ
ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್
ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್