AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳಿಂದ ದೊಡ್ಡವರವರೆಗೆ ಕಾಡುತ್ತಿದೆ ಥಲಸ್ಸೆಮಿಯಾ; ಮದುವೆಗೆ ಮುನ್ನ ಪರೀಕ್ಷೆ ಮಾಡಿಸುವುದಕ್ಕೆ ಕಾರಣ ಏನ್ ಗೊತ್ತಾ?

ಥಲಸ್ಸೆಮಿಯಾ ಎಂಬ ಆರೋಗ್ಯ ಸಮಸ್ಯೆಗೆ ಬಗ್ಗೆ ನೀವು ಕೇಳಿರಬಹುದು. ಕೆಲವರಿಗೆ ಈ ಬಗ್ಗೆ ಅಷ್ಟಾಗಿ ಮಾಹಿತಿ ಇಲ್ಲದಿರಬಹುದು. ಆದರೆ ಈ ಬಗ್ಗೆ ಸರಿಯಾಗಿ ತಿಳಿದುಕೊಳ್ಳುವುದು ಬಹಳ ಅನಿವಾರ್ಯ. ಏಕೆಂದರೆ ಇದು ಸಣ್ಣ ಪುಟ್ಟ ಸಮಸ್ಯೆಯಲ್ಲ. ಅದರಲ್ಲಿಯೂ ಮದುವೆಗೆ ಮೊದಲು ಪ್ರತಿಯೊಬ್ಬ ಹುಡುಗ, ಹುಡುಗಿ ಈ ಥಲಸ್ಸೆಮಿಯಾ ಸ್ಕ್ರೀನಿಂಗ್ ಮಾಡಿಸುವುದು ಬಹಳ ಮುಖ್ಯವಾಗುತ್ತದೆ. ಹಾಗಾದರೆ ಥಲಸ್ಸೆಮಿಯಾ ಇದ್ದಾಗ ಯಾವ ರೀತಿ ಲಕ್ಷಣಗಳು ಕಂಡುಬರುತ್ತದೆ, ಯಾವ ರೀತಿ ಮುನ್ನೆಚ್ಚರಿಕೆ ವಹಿಸಬೇಕು, ಯಾಕೆ ಈ ಬಗ್ಗೆ ಮೊದಲೇ ತಿಳಿದಿರಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಮಕ್ಕಳಿಂದ ದೊಡ್ಡವರವರೆಗೆ ಕಾಡುತ್ತಿದೆ ಥಲಸ್ಸೆಮಿಯಾ; ಮದುವೆಗೆ ಮುನ್ನ ಪರೀಕ್ಷೆ ಮಾಡಿಸುವುದಕ್ಕೆ ಕಾರಣ ಏನ್ ಗೊತ್ತಾ?
ThalassemiaImage Credit source: Getty Images
ಪ್ರೀತಿ ಭಟ್​, ಗುಣವಂತೆ
|

Updated on: May 08, 2026 | 8:41 PM

Share

ಇತ್ತೀಚಿನ ದಿನಗಳಲ್ಲಿ ಭಾರತದಲ್ಲಿ ಥಲಸ್ಸೆಮಿಯಾ (Thalassemia) ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಥಲಸ್ಸೆಮಿಯಾ ಒಂದು ಆನುವಂಶಿಕ (inherited) ರಕ್ತದ ಕಾಯಿಲೆಯಾಗಿದ್ದು, ದೇಹವು ಸಾಕಷ್ಟು ಆರೋಗ್ಯಕರ ಹಿಮೋಗ್ಲೋಬಿನ್ ಅಥವಾ ಕೆಂಪು ರಕ್ತ ಕಣಗಳನ್ನು ಉತ್ಪಾದಿಸದ ಸ್ಥಿತಿಯಾಗಿದೆ ಅಂದರೆ ದೇಹದಲ್ಲಿ ಸಮರ್ಪಕ ಪ್ರಮಾಣದ ಹೀಮೋಗ್ಲೋಬಿನ್ ಉತ್ಪತ್ತಿಯಾಗುವುದಿಲ್ಲ. ಈ ರೀತಿ ಹೀಮೋಗ್ಲೋಬಿನ್ ಕಡಿಮೆಯಾಗುವುದರಿಂದ ದೇಹದ ಅಂಗಾಂಗಗಳಿಗೆ ಬೇಕಾದಷ್ಟು ಆಮ್ಲಜನಕ ತಲುಪದೇ ಹಲವು ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ. ವೈದ್ಯರ ಪ್ರಕಾರ, ಈ ಕಾಯಿಲೆ ಪೋಷಕರಿಂದ ಮಕ್ಕಳಿಗೆ ಹರಡುತ್ತದೆ. ತಂದೆ- ತಾಯಿ ಇಬ್ಬರೂ ಥಲಸ್ಸೆಮಿಯಾ ಟ್ರೈಟ್ ಹೊಂದಿದ್ದರೆ, ಮಗುವಿಗೆ ಗಂಭೀರ ಥಲಸ್ಸೆಮಿಯಾ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿರುತ್ತದೆ. ಈ ಕಾರಣದಿಂದ ವಿವಾಹಕ್ಕೂ ಮೊದಲು ರಕ್ತ ಪರೀಕ್ಷೆ ಮಾಡಿಸಿಕೊಳ್ಳುವುದು ಅತ್ಯಂತ ಮುಖ್ಯ ಎಂದು ತಜ್ಞರು ಸಲಹೆ ನೀಡುತ್ತಾರೆ. ಹಾಗಾದರೆ ಥಲಸ್ಸೆಮಿಯಾ ಇದ್ದಾಗ ಯಾವ ರೀತಿ ಲಕ್ಷಣಗಳು ಕಂಡುಬರುತ್ತದೆ, ಯಾವ ರೀತಿ ಮುನ್ನೆಚ್ಚರಿಕೆ ವಹಿಸಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಥಲಸ್ಸೆಮಿಯಾದ ಪ್ರಮುಖ ಲಕ್ಷಣಗಳು:

ಸಾಮಾನ್ಯವಾಗಿ ಥಲಸ್ಸೆಮಿಯಾ ಇರುವ ಮಕ್ಕಳಲ್ಲಿ ಚಿಕ್ಕ ವಯಸ್ಸಿನಿಂದಲೇ ರಕ್ತಹೀನತೆ, ದೌರ್ಬಲ್ಯ, ಬೇಗ ದಣಿವು, ತೂಕ ಮತ್ತು ಎತ್ತರ ಸರಿಯಾಗಿ ಬೆಳೆಯದಿರುವುದು, ಚರ್ಮ ಬಿಳಿಯಾಗುವುದು ಹಾಗೂ ಉಸಿರಾಟದ ತೊಂದರೆ ಕಾಣಿಸಬಹುದು. ಕೆಲವು ಮಕ್ಕಳಲ್ಲಿ ಮುಖದ ಎಲುಬುಗಳ ಆಕಾರದಲ್ಲೂ ಬದಲಾವಣೆ ಕಂಡುಬರುವ ಸಾಧ್ಯತೆ ಇದೆ. ಗಂಭೀರ ಥಲಸ್ಸೆಮಿಯಾ ಹೊಂದಿರುವವರಿಗೆ ನಿಯಮಿತವಾಗಿ ರಕ್ತ ಹೇರಿಕೆ (Blood Transfusion) ಮಾಡಬೇಕಾಗುತ್ತದೆ. ಚಿಕಿತ್ಸೆ ವಿಳಂಬವಾದರೆ ಹೃದಯ, ಯಕೃತ್ತು ಮತ್ತು ಇತರ ಅಂಗಾಂಗಗಳ ಮೇಲೆ ಪರಿಣಾಮ ಬೀಳಬಹುದು.

ಚಿಕಿತ್ಸೆ ಮತ್ತು ಮುನ್ನೆಚ್ಚರಿಕೆ:

ವೈದ್ಯರ ಪ್ರಕಾರ, ಥಲಸ್ಸೆಮಿಯಾಗೆ ಸಂಪೂರ್ಣ ಚಿಕಿತ್ಸೆ ಕೆಲವು ಸಂದರ್ಭಗಳಲ್ಲಿ ಮಾತ್ರ ಸಾಧ್ಯ. ಬೋನ್ ಮ್ಯಾರೋ ಟ್ರಾನ್ಸ್ ಪ್ಲಾಂಟ್ ಮೂಲಕ ಕೆಲವರಿಗೆ ಶಾಶ್ವತ ಪರಿಹಾರ ದೊರೆಯಬಹುದು. ಆದರೆ ಹೆಚ್ಚಿನ ರೋಗಿಗಳಿಗೆ ನಿಯಮಿತ ಚಿಕಿತ್ಸೆ ಮತ್ತು ವೈದ್ಯಕೀಯ ಮೇಲ್ವಿಚಾರಣೆ ಅಗತ್ಯವಾಗುತ್ತದೆ. ಸಮತೋಲನ ಆಹಾರ, ಐರನ್ ಮಟ್ಟದ ಮೇಲ್ವಿಚಾರಣೆ ಮತ್ತು ಸಮಯಕ್ಕೆ ಸರಿಯಾದ ವೈದ್ಯಕೀಯ ಪರೀಕ್ಷೆಗಳು ರೋಗ ನಿಯಂತ್ರಣದಲ್ಲಿ ಸಹಾಯ ಮಾಡುತ್ತವೆ. ಮುಖ್ಯವಾಗಿ, ಮದುವೆಗೆ ಮೊದಲು ಥಲಸ್ಸೆಮಿಯಾ ಸ್ಕ್ರೀನಿಂಗ್ ಮಾಡಿಸುವುದು ಈ ಕಾಯಿಲೆ ತಡೆಯಲು ಪರಿಣಾಮಕಾರಿ ಮಾರ್ಗವೆಂದು ಆರೋಗ್ಯ ತಜ್ಞರು ತಿಳಿಸಿದ್ದಾರೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರೀತಿ ಭಟ್​, ಗುಣವಂತೆ
ಪ್ರೀತಿ ಭಟ್​, ಗುಣವಂತೆ

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ