ಲಿಚಿ ಹಣ್ಣು
Image Credit source: Getty Images
ಲಿಚಿ ಹಣ್ಣುಗಳು (lychee fruit) ಅದರ ಹೆಸರಿನಷ್ಟೇ ಚಿಕ್ಕದಾಗಿದ್ದರೂ ಕೂಡ ಇವುಗಳ ಸೇವನೆ ಮಾಡುವುದರಿಂದ ಅನೇಕ ರೀತಿಯ ಆರೋಗ್ಯ (Health) ಪ್ರಯೋಜನಗಳನ್ನು ಪಡೆಯಬಹುದು. ಈ ಹಣ್ಣುಗಳು ತಿನ್ನುವುದಕ್ಕೆ ರುಚಿಯಾಗಿ ಇರುವುದಲ್ಲದೆ ಆರೋಗ್ಯಕ್ಕೂ ಕೂಡ ಉತ್ತಮವಾದ ಪೋಷಕಾಂಶಗಳನ್ನು ನೀಡುತ್ತದೆ. ಹಾಗಾಗಿ ಪ್ರತಿದಿನ ಸ್ವಲ್ಪ ಪ್ರಮಾಣದಲ್ಲಿ ಲಿಚಿ ಹಣ್ಣುಗಳ ಸೇವನೆ ಮಾಡುವುದರಿಂದ ಆರೋಗ್ಯ ಸುಧಾರಿಸುತ್ತದೆ. ಜೊತೆಗೆ ಈ ಹಣ್ಣುಗಳು (fruit) ದೇಹಕ್ಕೆ ಅಗತ್ಯವಾದ ಅನೇಕ ಪೋಷಕಾಂಶಗಳನ್ನು ನೀಡುವುದರಿಂದ ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳು ಬರುವುದನ್ನು ತಪ್ಪಿಸಬಹುದು. ಚಿಕ್ಕ ಮಕ್ಕಳಿಂದ ಹಿಡಿದು ವಯಸ್ಕರ ವರೆಗೆ ಎಲ್ಲರೂ ಈ ಹಣ್ಣುಗಳ ಸೇವನೆ ಮಾಡಬಹುದು. ಹಾಗದರೆ ಇದರ ಸೇವನೆಯಿಂದ ಯಾವ ರೀತಿಯ ಪ್ರಯೋಜನಗಳಿವೆ? ಯಾವೆಲ್ಲಾ ಆರೋಗ್ಯ ಸಮಸ್ಯೆಗಳನ್ನು ನಿವಾರಿಸುತ್ತದೆ ಎಂಬುದನ್ನು ತಿಳಿದುಕೊಳ್ಳಿ.
- ಈ ಹಣ್ಣುಗಳಲ್ಲಿ ವಿಟಮಿನ್ ಸಿ ಹೆಚ್ಚಿನ ಪ್ರಮಾಣದಲ್ಲಿದ್ದು ಬಿಳಿ ರಕ್ತ ಕಣಗಳನ್ನು ಮತ್ತು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಇದರ ಪರಿಣಾಮವಾಗಿ, ವೈರಸ್‌ಗಳು ಮತ್ತು ಬ್ಯಾಕ್ಟೀರಿಯಾಗಳಿಂದ ಉಂಟಾಗುವ ಸೋಂಕುಗಳಿಂದ ದೂರವಿರಬಹುದು.
- ಲಿಚಿಯಲ್ಲಿರುವ ಉತ್ಕರ್ಷಣ ನಿರೋಧಕಗಳು ದೇಹದಲ್ಲಿನ ಜೀವಕೋಶಗಳನ್ನು ರಕ್ಷಿಸುತ್ತವೆ. ಅವು ಸ್ವತಂತ್ರ ರಾಡಿಕಲ್‌ಗಳಿಂದ ದಾಳಿಗೊಳಗಾದ ಜೀವಕೋಶಗಳು ದುರ್ಬಲಗೊಳ್ಳುವುದನ್ನು ತಡೆಯುತ್ತವೆ.
- ಈ ಹಣ್ಣುಆಕ್ಸಿಡೇಟಿವ್ ಒತ್ತಡವನ್ನು ಕಡಿಮೆ ಮಾಡುತ್ತವೆ. ಇದು ವಯಸ್ಸಾಗುವ ಲಕ್ಷಣಗಳನ್ನು ವಿಳಂಬಗೊಳಿಸಲು ಸಹಾಯ ಮಾಡುತ್ತದೆ
- ಲಿಚಿ ತಿನ್ನುವುದರಿಂದ ಜೀರ್ಣಕ್ರಿಯೆ ಸುಧಾರಿಸುತ್ತದೆ. ಅಜೀರ್ಣ ಮತ್ತು ಮಲಬದ್ಧತೆಯಂತಹ ಸಮಸ್ಯೆಗಳು ಕಡಿಮೆಯಾಗುತ್ತವೆ. ಚಯಾಪಚಯ ಕ್ರಿಯೆ ಸರಿಯಾಗಿ ಇರುತ್ತದೆ.
- ಲಿಚಿ ಹಣ್ಣುಗಳು ಹೃದಯದ ಆರೋಗ್ಯವನ್ನು ಸುಧಾರಿಸುತ್ತದೆ. ರಕ್ತದಲ್ಲಿರುವ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕರಗಿಸುತ್ತವೆ. ರಕ್ತದೊತ್ತಡದ ಮಟ್ಟವನ್ನು ನಿಯಂತ್ರಣದಲ್ಲಿಡುತ್ತವೆ.
- ಈ ಹಣ್ಣುಗಳ ಸೇವನೆಯಿಂದ ಹೃದಯದ ಮೇಲಿನ ಒತ್ತಡ ಕಡಿಮೆಯಾಗುತ್ತದೆ, ಹೃದಯಕ್ಕೆ ಸಂಬಂಧಿಸಿದ ಕಾಯಿಲೆಗಳು ಬರುವ ಸಾಧ್ಯತೆಯನ್ನು ಕಡಿಮೆ ಮಾಡುತ್ತದೆ.
- ಈ ಹಣ್ಣುಗಳು ಕಡಿಮೆ ಕ್ಯಾಲೋರಿಗಳನ್ನು ಹೊಂದಿರುವುದರಿಂದ ತೂಕ ಕಡಿಮೆ ಮಾಡಿಕೊಳ್ಳಲು ಬಯಸುವವರಿಗೆ ಇವು ಉತ್ತಮ ಆಯ್ಕೆಯಾಗಿದೆ. ಅಲ್ಲದೆ ಈ ಹಣ್ಣುಗಳು ಹಸಿವನ್ನು ನಿಯಂತ್ರಣದಲ್ಲಿಡಲು ಮತ್ತು ಶಕ್ತಿಯ ಮಟ್ಟವನ್ನು ಕಾಪಾಡಿಕೊಳ್ಳಲು ಅವು ಸಹಾಯ ಮಾಡುತ್ತವೆ.
- ಬೇಸಿಗೆಯಲ್ಲಿ ಉಂಟಾಗುವ ನಿರ್ಜಲೀಕರಣ ಸಮಸ್ಯೆಗಳಿಗೆ ಲಿಚಿ ಉತ್ತಮ ಪರಿಹಾರವಾಗಿದೆ. ಇದರಲ್ಲಿ ಬಹಳಷ್ಟು ನೀರು ಮತ್ತು ಎಲೆಕ್ಟ್ರೋಲೈಟ್‌ಗಳಿವೆ, ಇದು ದೇಹವನ್ನು ಹೈಡ್ರೀಕರಿಸುತ್ತದೆ ಮತ್ತು ಆಯಾಸವನ್ನು ತಡೆಯುತ್ತದೆ.
- ಲಿಚಿಯಲ್ಲಿ ವಿಟಮಿನ್ ಸಿ ಮತ್ತು ಉತ್ಕರ್ಷಣ ನಿರೋಧಕಗಳು ಇರುವುದರಿಂದ, ಚರ್ಮ ಆರೋಗ್ಯವಾಗಿರುತ್ತದೆ. ಇದು ಚರ್ಮದ ಮೇಲೆ ಸಂಗ್ರಹವಾದ ಕೊಳೆಯನ್ನು ತೆಗೆದು ಹಾಕುತ್ತದೆ ಮತ್ತು ಅದರ ಹೊಳಪನ್ನು ಹೆಚ್ಚಿಸುತ್ತದೆ. ಹೆಚ್ಚುವರಿಯಾಗಿ, ಮೊಡವೆಗಳು ಮತ್ತು ಇತರ ಚರ್ಮದ ಸಮಸ್ಯೆಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಲಿಚಿ ಹಣ್ಣುಗಳನ್ನು ತಿನ್ನುವುದು ನಮ್ಮ ದೇಹಕ್ಕೆ ತುಂಬಾ ಪ್ರಯೋಜನಕಾರಿ. ಅವುಗಳಲ್ಲಿ ಪೋಷಕಾಂಶಗಳು, ಉತ್ಕರ್ಷಣ ನಿರೋಧಕಗಳು ಮತ್ತು ಖನಿಜಗಳು ಸರಿಯಾದ ಪ್ರಮಾಣದಲ್ಲಿ ಇರುವುದರಿಂದ ಈ ಹಣ್ಣುಗಳನ್ನು ಪ್ರತಿದಿನವೂ ಸೇವನೆ ಮಾಡಬಹುದು. ಅದಲ್ಲದೆ ಲಿಚಿ ಹಣ್ಣುಗಳು ಕಡಿಮೆ ಕ್ಯಾಲೋರಿಗಳನ್ನು ಹೊಂದಿರುವುದರಿಂದ ಮತ್ತು ಹೆಚ್ಚಿನ ಆರೋಗ್ಯ ಪ್ರಯೋಜನಗಳನ್ನು ಒದಗಿಸುವುದರಿಂದ ಪ್ರತಿಯೊಬ್ಬರೂ ಕೂಡ ಈ ಹಣ್ಣುಗಳ ಸೇವನೆ ಮಾಡಬಹುದು.
ಸೂಚನೆ: ಸಲಹೆ ಸೇರಿದಂತೆ ಈ ವಿಷಯವು ಸಾಮಾನ್ಯ ಮಾಹಿತಿಯನ್ನು ಮಾತ್ರ ಒದಗಿಸುತ್ತದೆ. ಇದು ಯಾವುದೇ ರೀತಿಯಲ್ಲಿ ಅರ್ಹ ವೈದ್ಯಕೀಯ ಸಲಹೆಗೆ ಪರ್ಯಾಯವಲ್ಲ. ಹೆಚ್ಚಿನ ಮಾಹಿತಿಗಾಗಿ ಯಾವಾಗಲೂ ತಜ್ಞರನ್ನು ಅಥವಾ ನಿಮ್ಮ ವೈದ್ಯರನ್ನು ಸಂಪರ್ಕಿಸುವುದನ್ನು ಮರೆಯಬೇಡಿ.
ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ